ಅಮೃತ ಮಹೋತ್ಸವದ ಸಂಭ್ರಮದಲ್ಲಿ ಬಳಂಜ ಸರಕಾರಿ ಉನ್ನತೀಕರಿಸಿದ ಶಾಲೆ

ಸರಕಾರೀ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜ ಅಮೃತ ಮಹೋತ್ಸವದ ಪರ್ವಕಾಲದಲ್ಲಿದೆ. 1948ರಲ್ಲಿ ಊರ ಪಟೇಲರಾಗಿದ್ದ ಕಿನ್ನಿ ಯಾನೆ ಕೋಟಿ ಪಡಿವಾಳರ ವಿಶೇಷ ಮುತುವರ್ಜಿಯಿಂದ ಊರ ಮಹನೀಯರ ದಾನ ಮತ್ತು ಶ್ರಮದಾನದ ಫಲವಾಗಿ ಬಳಂಜ ಪ್ರಾಥಮಿಕ ಶಾಲೆ ರೂಪುಗೊಂಡಿತು. ಕಳೆದ 75ವರ್ಷಗಳಲ್ಲಿ ಅಸಂಖ್ಯಾತ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿದ ಹೆಮ್ಮೆ ಬಳಂಜ ಶಾಲೆಯದು. ಅಮೃತ ಮಹೋತ್ಸವದ ಪ್ರಯುಕ್ತ ಈಗಾಗಲೇ ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಸುಮಾರು ರೂಪಾಯಿ 15 ಲಕ್ಷಕ್ಕೂ ಮಿಕ್ಕಿದ ಶಾಶ್ವತ ಕಾಮಗಾರಿಗಳನ್ನು […]
ವೇಣೂರು ಸೊಸೈಟಿ ಮಹಾಸಭೆ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ವೇಣೂರು ಇದರ 2024 -25ನೇ ಸಾಲಿನ ವಾರ್ಷಿಕ ಮಹಾಸಭೆಯು ವೇಣೂರು ಬಾಹುಬಲಿ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 2024-25ನೇ ಸಾಲಿನಲ್ಲಿ ರೂಪಾಯಿ 380 ಕೋಟಿ ವ್ಯವಹಾರ ನಡೆಸಿ ರೂಪಾಯಿ 1,86,50,423.61 ಲಾಭ ಗಳಿಸಿ ಶೇಕಡ 20% ಡಿವಿಡೆಂಡ್ ಘೋಷಿಸಲಾಯಿತು.ಸಂಘದ ಉಪಾಧ್ಯಕ್ಷ ರತ್ನಾಕರ ಬಿ., ನಿರ್ದೇಶಕರಾದ ರಾಮದಾಸ್ ನಾಯಕ್, ಸಂದೀಪ್ ಹೆಗ್ಡೆ ಎಂ.ಆರ್., ಸಂತೋಷ, ನಾಗಪ್ಪ, ಆಶಾ, ರೋಹಿಣಿ, ಕೃಷ್ಣಪ್ಪ ಮೂಲ್ಯ, […]
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ಬೆಳ್ತಂಗಡಿ:: ದೊಡ್ಡ ಮಟ್ಟದಲ್ಲಿ ಇತರರಿಗೆ ಪ್ರೇರಣೆಯಾಗಬೇಕು ಎಂಬ ಉದ್ಧೇಶದಿಂದ ದಾನಿಗಳ ಮೂಲಕ ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಸೆಪ್ಟೆಂಬರ್ 14ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು,ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು,ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ, ವಿಜಯ ಕ್ರೆಡಿಟ್ […]
ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಎನ್. ಸುಧಾಕರ್ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 14ರಂದು ಸಂಘದ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ ಮಾತನಾಡಿ; ಸಂಘವು ವರದಿ ವರ್ಷದ ಅಂತ್ಯಕ್ಕೆ ರೂಪಾಯಿ 28.76 ಕೋಟಿ ಠೇವಣಿ ಹೊಂದಿರುತ್ತದೆ. ವರದಿ ಸಾಲಿನಲ್ಲಿ ರೂಪಾಯಿ 50.81 ಕೋಟಿ ಸಾಲವನ್ನು ವಿವಿಧ ಉದ್ದೇಶಗಳಿಗೆ ವಿತರಿಸಿದ್ದು; ಸದಸ್ಯರ ಸಾಲದ ಹೊರಬಾಕಿ ರೂಪಾಯಿ 43.89 ಕೋಟಿ ಇದ್ದು; ವಿತರಿಸಿದ ಸಾಲದ ಪೈಕಿ 100% ಸಾಲ ಮರುಪಾವತಿ ಯಾಗಿರುತ್ತದೆ. ಸಂಘವು […]
ಗುರುವಾಯನಕೆರೆ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ಮಹಾಸಭೆಯು ಸೆಪ್ಟೆಂಬರ್ 12ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಮುಗುಳಿ ನಾರಾಯಣ ರಾವ್‌ರ ಅಧ್ಯಕ್ಷತೆಯಲ್ಲಿ ಜರುಗಿತು. ಸಹಕಾರಿ ಸಂಘವು ಪ್ರಾರಂಭಗೊಂಡು 100ವರ್ಷ ಪೂರೈಸಿದ ಹಿನ್ನಲೆ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ನಾರಾಯಣ ರಾವ್ ಎಂ. ಅವರು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು; ಸಂಘವು 2024-25ರ ಸಾಲಿನಲ್ಲಿ ಒಟ್ಟು 2,602 ಸದಸ್ಯರನ್ನು ಹೊಂದಿದ್ದು ರೂಪಾಯಿ 2,39,34,710/- […]
ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟಕ್ಕೆ ಚಾಲನೆ.

ಬೆಳ್ತಂಗಡಿ: ಮನುಷ್ಯನಿಗೆ ಸಂಸ್ಕಾರ ದೊರೆಯಬೇಕಾದರೆ ಗುರು ಇರಬೇಕು. ಶುದ್ಧ ಮನಸ್ಸು ಹಾಗೂ ಭಕ್ತಿಯಿಂದ ದೇವರನ್ನು ಭಜಿಸುವ ಮೂಲಕ ದೇವರನ್ನು ಒಲಿಸಿಕೊಳ್ಳಬಹುದು. ಭಜನೆಯಿಂದ ಸಂಸ್ಕಾರಯುತ ನಾಗರಿಗ ಸಮಾಜ ನಿರ್ಮಾಣ ಸಾಧ್ಯ ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.ಅವರು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸೆಪ್ಟೆಂಬರ್ 14ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ಕಮ್ಮಟವನ್ನು ಸೆಪ್ಟೆಂಬರ್ 14ರಂದು ಉದ್ಘಾಟಸಿ ಮಾತನಾಡುತ್ತಿದ್ದರು.ಮಾನವನಿಗೆ ಉತ್ತಮ ಸಂಸ್ಕಾರ ನೀಡಿ ಭವಿಷ್ಯದ ನಾಗರಿಕನನ್ನಾಗಿಸಲು ಧರ್ಮಸ್ಥಳ ಧರ್ಮಾಧಿಕಾರಿಗಳ ಕೊಡುಗೆ […]
ಮುಂಡಾಜೆ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ರೂಪಾಯಿ 1,439 ಕೋಟಿ ವ್ಯವಹಾರ ನಡೆಸಿ, ರೂಪಾಯಿ 2.39 ಕೋಟಿ ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ 16% ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ತಿಳಿಸಿದರು.ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಸೆಪ್ಟೆಂಬರ್ 13ರಂದು ಜರಗಿದ ಸಂಘದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಸಂಘವು 6,071 ಮಂದಿ ಸದಸ್ಯರನ್ನು ಹೊಂದಿದ್ದು , 7.96 ಕೋಟಿ ರೂಪಾಯಿ […]
ಸಿರಿಯನ್ ಕ್ಯಾಥೋಲಿಕ್ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ಸಿರಿಯನ್ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ 16ನೇ ವಾರ್ಷಿಕ ಮಹಾಸಭೆ ಆಗಸ್ಟ್ 23ರಂದು ಲಾಯ್ಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಅನಿಲ್ ಎ.ಜೆ.ರವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25 ನೇ ಸಾಲಿನಲ್ಲಿ ರೂಪಾಯಿ 164 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂಪಾಯಿ 72.70ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ 16% ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ. ರವರು ತಿಳಿಸಿದರು.ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್.ವಿ. ರವರು ಸ್ವಾಗತಿಸಿದರು. […]
ವಿಜಯಾ ಕ್ರೆಡಿಟ್ ಕೋ . ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ‘ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,104 ಕೋಟಿ ರೂಪಾಯಿಗಳಿಗಿಂತ ಅಧಿಕ ವ್ಯವಹಾರ ನಡೆಸಿದ್ದು, 3 ಕೋಟಿ ರೂಪಾಯಿಗಳಿಗಿಂತ ಅಧಿಕ ಲಾಭವನ್ನು ಗಳಿಸಿದೆ. ಸದಸ್ಯರಿಗೆ 18% ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಹೇಳಿದರು. ಅವರು ಸಂಘದ ಗುರುವಾಯನಕೆರೆಯ ಕೇಂದ್ರ ಕಚೇರಿಯ ಸಮೀಪದ ಬಂಟರ ಭವನದಲ್ಲಿ ಸೆಪ್ಟೆಂಬರ್ 5ರಂದು ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು 33,245 ಸದಸ್ಯರನ್ನು ಹೊಂದಿರುವ ಸಂಘವು 4 ಕೋಟಿ […]
ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆಗಸ್ಟ್ 24ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಮಹಸಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿರಾಜ್ ಸಂಘದ ಗತವರ್ಷದ ವರದಿಯನ್ನು ಸಭೆಗೆ ಮಂಡಿಸಿ 2025-26 ನೇ ಸಾಲಿನ ಬಜೆಟ್ ಮಂಡಿಸಿದರು. ಕ್ಲಪ್ತ ಸಮಯದಲ್ಲಿ ದಂಡನೆ ಬಡ್ಡಿ ಇಲ್ಲದೆ ಸಾಲ ಮರುಪಾವತಿ ಮಾಡಿದ ಗ್ರಾಹಕರನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷ ನಡೆದ […]