ವೇಣೂರಿನಲ್ಲಿ ನಡೆದ ಪೂರ್ವಭಾವಿ ಸಭೆ-2024ರ ಫೆ 22ರಿಂದ ಮಾರ್ಚ್ 1ರವರೆಗೆ ವೇಣೂರು ಬಾಹುಬಲಿಗೆ ಮಹಾಮಜ್ಜನ

ಬೆಳ್ತಂಗಡಿ: ಈ ಬಾರಿ 2024ರ ಫೆಬ್ರವರಿ 22ರಿಂದ ಮಾರ್ಚ್ 1ರವರೆಗೆ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ಶ್ರಾವಕರ ಮನಸ್ಸಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಸಂಭ್ರಮದಿಂದ ನೆರವೇರಿಸುವೆವು ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಅಧ್ಯಕ್ಷರು ಆದ ಡಾ. ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.ಅವರು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಜೂನ್ 24ರಂದು ನಡೆದ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಪೂರ್ವಭಾವಿ ಶ್ರಾವಕರ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.9ದಿನಗಳ […]

ದಕ್ಷಿಣ ಕನ್ನಡದ ಎಲ್ಲ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ-ಕಟೀಲ್

ಬೆಳ್ತಂಗಡಿ: ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಲೆಯಿದ್ದು, ರಾಜ್ಯದಲ್ಲಿ ಬಿಜೆಪಿ 120ಕ್ಕೂ ಮಿಕ್ಕಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಜಯಭೇರಿ ಭಾರಿಸಲಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್‌ಕುಮಾರ್ ಕಟೀಲ್ ಹೇಳಿದರು.ಅವರು ಮೇ 8ರಂದು ಸಂಜೆ ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ನಡೆದ […]

ರಕ್ಷಿತ್ ಶಿವರಾಮ್ ಇಳಂತಿಲಕ್ಕೆ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮೇ 8ರಂದು ಇಳಂತಿಲ ಗ್ರಾಮದ ಪಾಡೆಂಕಿ ಕೋಟ್ಯಾನ್ ಕುಟುಂಬಸ್ಥರ ದೈವದ ಚಾವಡಿಗೆ ಭೇಟಿ ನೀಡಿದರು.ಈ ಸಂಧರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಈಶ್ವರ ಭಟ್ ಮಯಿಲ್ತೋಡಿ, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಉಮಾವತಿ ದೇಜಪ್ಪ ಗೌಡ, ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಮನೋಹರ ಕುಮಾರ್ ಹಾಗೂ ಯು.ಕೆ. ಇಸುಬು, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವರದರಾಜ್ ಎಂ., ಆಟಾಲು ಜಿನ್ನಪ್ಪ […]

ಕಾಂಗ್ರೆಸ್ ಪಕ್ಷದ ಗ್ಯಾರಂಟಿಗೆ ವಾರಂಟಿ ಇಲ್ಲ-ಅಣ್ಣಾಮಲೈ

ಬೆಳ್ತಂಗಡಿ: ಕಾಂಗ್ರೇಸ್‌ ಪಕ್ಷದ ಎಕ್ಸಪೈರೀ ದಿನಾಂಕ ದಾಟಿದೆ. ಅವರು ನೀಡುವ ಗ್ಯಾರಂಟಿಗೆ ವಾರಂಟಿ ಇಲ್ಲದೆ ಇರುವುದರಿಂದ ಅದಕ್ಕೆ ಯಾವುದೇ ಮರ್ಯಾದೆ ಇರುವುದಿಲ್ಲ. ಹೀಗಾಗಿ ಭವಿಷ್ಯದ ಸುಭದ್ರ ಚಿಂತನೆ ಇಲ್ಲದ ಕಾಂಗ್ರೇಸ್‌ಗೆ ಯಾವುದೇ ಬೂತ್‌ನಲ್ಲಿ ಲೀಡ್‌ ಸಿಗದಂತೆ ಮಾಡುವುದು ನಮ್ಮ ಗುರಿಯಾಗಿರಬೇಕು ಎಂದು ರಾಜ್ಯದ ಚುನಾವಣಾ ಸಹ ಪ್ರಭಾರಿ ಅಣ್ಣಾಮಲೈ ಹೇಳಿದರು.ಅವರು ಮೇ 7ರ ಸಂಜೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ಭಾರತೀಯ ಜನತಾ ಪಕ್ಷ ಆಯೋಜಿಸಿದ ಬೃಹತ್‌ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಪ್ರಚಾರ ಭಾಷಣ ಮಾಡುತ್ತಿದ್ದರು. ಈ ಬಾರಿ […]

ಕಣಿಯೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್‌ಗೆ ಸೇರ್ಪಡೆ

ಬೆಳ್ತಂಗಡಿ; ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಪ್ರಿಯಾಂಕ ರಾಧಾಕೃಷ್ಣ ಗೌಡ ತನ್ನ ವಾರ್ಡ್‌ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅನುದಾನ ಕೊಡಿಸುವುದಾಗಿ ಭರವಸೆ ನೀಡಿ, ನಂತರ ಯಾವುದೇ ಅನುದಾನ ನೀಡದೆ ಕಡೆಗಣಿಸಿರುತ್ತಾರೆ. ಅಲ್ಲದೆ ನಾವು ಗ್ರಾಮದ ಯಾವುದೇ ಕೆಲಸ ಕಾರ್ಯಕ್ಕೂ ನೇರವಾಗಿ ಶಾಸಕರನ್ನು ಸಂಪರ್ಕಿಸಿದರೆ ನಮ್ಮ ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ನಮಗೆ ಗದರಿಸಿ ಏನೇ ಮಾತನಾಡುವುದಿದ್ದರೂ ನನ್ನ ಮೂಲಕವೇ ಮಾತನಾಡಬೇಕು ಎಂದು ಹೇಳುತ್ತಿದ್ದು, ಈ ಎಲ್ಲಾ ಕಾರಣದಿಂದಾಗಿ ನನ್ನ ವಾರ್ಡ್‌ನ ಬಿಜೆಪಿ ಪಕ್ಷದ ಕಾರ್ಯಕರ್ತರ […]

ಉಜಿರೆಯಲ್ಲಿ ಬೋರ್ಗರೆದ ಬಿಜೆಪಿ ಪಡೆ

ಬೆಳ್ತಂಗಡಿ: ಕರ್ನಾಟಕದಲ್ಲಿ ಪೂರ್ಣ ಬಹುಮತ ಬರಬೇಕು. ಇದರಿಂದ ಸುಸ್ಥಿರ ಆಡಳಿತ ಮೂಲಕ ಕೋಮುವಾದವನ್ನು ಮಟ್ಟ ಹಾಕಿ ವಿಕಾಸ ಕಾರ್ಯ ಮುಂದುವರಿಸಲು ಸಾಧ್ಯ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಾಂತ್ ಬಿಸ್ವಾಸ್ ಶರ್ಮಾ ಹೇಳಿದರು.ಅವರು ಮೇ 6ರಂದು ಉಜಿರೆಯಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಅಸ್ಸಾಂ ಮತ್ತು ಕರ್ನಾಟಕ ಮಧ್ಯೆ ಸರಿಸುಮಾರು 3000 ಕಿ.ಮೀ. ಅಂತರವಿದೆ. ನೀವು ಅಸ್ಸಾಂಗೆ ಬಂದರೂ ಉತ್ತರ ಪ್ರದೇಶಕ್ಕೆ ಹೋದರೂ ಮೋದಿ ಇದ್ದಾರೆ. ಹಾಗೆ ಕರ್ನಾಟಕದಲ್ಲೂ ಇದ್ದಾರೆ. ಇಂದು ಉಜಿರೆ ಬಂದು ನಿಮ್ಮ ಉತ್ಸಾಹ […]

ಕಥೋಲಿಕ್ ಸೊಸೈಟಿ ಬೆಳ್ಳಿ ಹಬ್ಬದ ಸಮಾರೋಪ

ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಬೆಳ್ತಂಗಡಿ ಪೇಟೆಯ ಹೃದಯಭಾಗದಲ್ಲಿ ಅತ್ಯಂತ ಯಶಸ್ವಿಯಾಗಿ ಆರ್ಥಿಕ ವ್ಯವಹಾರ ನಡೆಸುತ್ತಾ; ಗ್ರಾಹಕರ ಪ್ರೀತಿ ವಿಶ್ವಾಸಗಳಿಗೆ ಪಾತ್ರವಾಗಿ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಿದ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವು ಎಪ್ರಿಲ್ 15ರ ಶನಿವಾರ ಬೆಳ್ತಂಗಡಿಯ ಸಿ.ವಿ.ಸಿ. ಹಾಲ್‌ನಲ್ಲಿ ಸಂಘದ ಅಧ್ಯಕ್ಷ ಹೆನ್ರಿ ಲೋಬೊರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಜೋಸೆಫ್ ಕಾರ್ಡೋಜಾ ಕಾರ್ಯಕ್ರಮ ಉದ್ಘಾಟಿಸಿ, ಸಂಘದ ಮುಂದಿನ ಬೆಳವಣಿಗೆಗೆ ಶುಭ ಹಾರೈಸಿದರು. ಬ್ರಹ್ಮಾವರ […]

ಸ್ವರ್ಗೀಯ ಶ್ರವಣಬೆಳಗೊಳಶ್ರೀಗಳಿಗೆ ವಿನಯಾಂಜಲಿ

ಬೆಳ್ತಂಗಡಿ: ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಮಾರ್ಚ್ 29ರಂದು ಸ್ವರ್ಗೀಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಯಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳದ ಸುರೇಂದ್ರ ಕುಮಾರ್ ಕೋಟ್ಯಾನ ಬಂಟ್ರು, ವಿಜಯಕುಮಾರ್ ಹಣೆರಾಜ ಜೈನ್, ಯಶೋಧರ ಶೆಟ್ಟಿ ರವಿರಾಜ್ ಶೆಟ್ಟಿ, ಡಾ. ಜಯ ಕೀರ್ತಿ ಜೈನ್, ಜಿನರಾಜ ಪೂವಣಿ, ಅತಿಶಯ ಜೈನ್, ಅರಹಂತ ಇಂದ್ರ, ಪದ್ಮಲತಾ, ನಾಗಕನ್ನಿಕ, ಜಯಶ್ರೀ, ಸುರಭಿ ಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಭರತನಾಟ್ಯದಲ್ಲಿ ಉನ್ನತಶ್ರೇಣಿ

ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ಇವರು 92% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿದುಷಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿಗಳ ಪುತ್ರಿ.

ಉಜಿರೆ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ

ಬೆಳ್ತಂಗಡಿ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆಯೋಜಿಸಿದ್ದ ಮಹಾತ್ಮಾ  ಗಾಂಧಿ ಗ್ರಾಮ ಪುರಸ್ಕಾರ  ಮತ್ತು ಮಹಾತ್ಮಾ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ  ಸಮಾರಂಭ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಮಾರ್ಚ್ 24ರಂದು ರಾಜ್ಯದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.5 ಲಕ್ಷ ರೂಪಾಯಿ ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, […]