ಉಜಿರೆಯಲ್ಲಿ ಮ್ಯಾರಥಾನ್ ಓಟ

ಬೆಳ್ತಂಗಡಿ: ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ| ರಮೇಶ್ ಹೇಳಿದರು.ಅವರು ಅಕ್ಟೋಬರ್ 10ರಂದು ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಸಂದರ್ಭ ಆಯೋಜಿಸಲಾದ ಮ್ಯಾರಥಾನ್ ಓಟವನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸುತ್ತಿದ್ದರು.ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. […]

‘ವಾರ್ಷಿಕೋತ್ಸವ ವಿದ್ಯಾರ್ಥಿಗಳ ಸಾಧನೆ ಗುರುತಿಸಲಿರುವ ವೇದಿಕೆ’

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಅಕ್ಟೋಬರ್ 8ರಂದು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ; ವಾರ್ಷಿಕೋತ್ಸವ ವಿದ್ಯಾರ್ಥಿಗಳು ಮಾಡಿದ ಸಾಧನೆಯನ್ನು ಗುರುತಿಸುವುದಕ್ಕೆ ಇರುವ ವೇದಿಕೆ. ಈ ಸಾಲಿನ ವಿದ್ಯಾರ್ಥಿಗಳು ಅದ್ಭುತವಾದ ಸಾಧನೆಯನ್ನು ಮಾಡಿ ಕಾಲೇಜಿಗೆ ಹೆಸರು ಹಾಗೂ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಅನುಕೂಲತೆ ದೃಷ್ಟಿಯಿಂದ ಕಾಲೇಜಿಗೆ ಬೇಕಾಗುವ ಅಗತ್ಯ ವ್ಯವಸ್ಥೆಗಳನ್ನು ಆಡಳಿತ ಮಂಡಳಿಯಿಂದ ಕಲ್ಪಿಸಿದ್ದೇವೆ. […]

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌‌ನ ಅಧ್ಯಕ್ಷರಿಗೆ ಅಭಿನಂದನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಬೆಳ್ತಂಗಡಿ ಮತ್ತು ಗುರುವಾಯನಕೆರೆ ತಾಲೂಕಿನ ಭಜನಾ ಪರಿಷತ್ ವತಿಯಿಂದ ಅಭಿನಂದನೆಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ,ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ, ಭಜನಾ ಪರಿಷತ್ತಿನ ಸಮನ್ವಯಾಧಿಕಾರಿ ರಾಘವೇಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಸದಸ್ಯರು ಹಾಗೂ […]

ಉಜಿರೆ‌ ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

ಬೆಳ್ತಂಗಡಿ: ಅವಘಡ ಅಥವಾ ಅಪಘಾತಗಳಿಗೆ ಒಳಗಾದ ಗಾಯಾಳುಗಳು ಹಾಗೂ ದಿಢೀರ್ ಅನಾರೋಗ್ಯಕ್ಕೆ ತುತ್ತಾದ ರೋಗಿಗಳಿಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ. ತುರ್ತು ಚಿಕಿತ್ಸೆ ಅಥವಾ ಎಮರ್ಜೆನ್ಸಿ ಮೆಡಿಸಿನ್‌ ಕ್ಷೇತ್ರದ ಪರಿಣಿತರು ಇಂತಹ ಚಿಕಿತ್ಸೆ ನೀಡುತ್ತಾರೆ. ಈ ವಿಶೇಷ ಸೇವೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಇದೀಗ ಲಭ್ಯವಿದೆ ಎಂದು ಉಜಿರೆಯ ಬೆನಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ|ಗೋಪಾಲಕೃಷ್ಣ ತಿಳಿಸಿದರು.ಅವರು ಉಜಿರೆಯ ಬೆನಕ ಆಸ್ಪತ್ರೆಯಲ್ಲಿ‌ ನಡೆದ ಸರಳ ಕಾರ್ಯಕ್ರಮದಲ್ಲಿ ತುರ್ತು ಚಿಕಿತ್ಸಾ ತಜ್ಞ ಡಾ| ಆದಿತ್ಯ ರಾವ್ ಅವರನ್ನು ಸ್ವಾಗತಿಸುತ್ತಾ […]

ಉಜಿರೆಯಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಶುಭಾರಂಭ

ಬೆಳ್ತಂಗಡಿ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ 44ನೇ ವರ್ಷದ 4 ದಿನಗಳ ಶ್ರೀ ಶಾರದಾ ಪೂಜೋತ್ಸವ ಹಾಗೂ ತದಂಗವಾಗಿ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಅಕ್ಟೋಬರ್ 9ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಬೆಳಿಗ್ಗೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ ಬಳಿಕ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಗಣಪತಿ ಹವನ ಹಾಗೂ ಶ್ರೀ ಶಾರದಾ ಮೂರ್ತಿ ಪ್ರತಿಷ್ಠಾ ಕಾರ್ಯ ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳರ ಪೌರೋಹಿತ್ಯದಲ್ಲಿ […]

ಮಕ್ಕಳಿಗೆ ಧಾರ್ಮಿಕ ಚಿಂತನೆಯ ಸಂಸ್ಕಾರ ನೀಡೋಣಾ-ವಜ್ರದೇಹಿಶ್ರೀಗಳು

ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳಾದ ದೇವಸ್ಥಾನ ಹಾಗೂ ಮಂದಿರಗಳಲ್ಲಿ ನಡೆಯುವ ಧಾರ್ಮಿಕ ಆಚರಣೆಗಳಲ್ಲಿ ನಾವು ನಮ್ಮ ಮಕ್ಕಳೊಂದಿಗೆ ಬಾಗವಹಿಸುವುದರ ಮೂಲಕ ಮಕ್ಕಳಿಗೆ ಧಾರ್ಮಿಕ ಚಿಂತನೆ ಸಂಸ್ಕಾರವನ್ನು ಕಲಿಸುವುದರೊಂದಿಗೆ ಸದ್ರಢ ರಾಷ್ಠ್ರ ನಿರ್ಮಾಣ ಮಾಡೋಣ ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಜಿ ಹೇಳಿದರು. ಅವರು ಅಕ್ಟೋಬರ್ 9ರಂದು ಓಡಿಲ್ನಾಳ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ನಡೆದ 2ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾದ ಧಾರ್ಮಿಕ […]

“ಆಚಾರ-ವಿಚಾರ ಹಾಗೂ ಆಹಾರ-ವಿಹಾರ ಮುಖ್ಯ’

ಬೆಳ್ತಂಗಡಿ: ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೇಲೆ ನಮ್ಮ ಯಶಸ್ಸು ಇರುತ್ತದೆ. ಸ್ವಯಂ ಶಿಸ್ತು ಅಳವಡಿಸಿಕೊಂಡು ಉತ್ತಮ ಆಚಾರ-ವಿಚಾರಗಳನ್ನು ಅನುಸರಿಸಿ, ಜೊತೆಗೆ ಉತ್ತಮವಾದ ಆಹಾರ ಪದ್ಧತಿ ಅಳವಡಿಸಿಕೊಂಡು ಅದಕ್ಕೆ ಸರಿಯಾದ ವಿಹಾರ ಮಾಡಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾಗಿ ನಿಮಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌‌ಸೆಟ್‌ […]

ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ

Pಬೆಳ್ತಂಗಡಿ: ನವರಾತ್ರಿ ಸಂದರ್ಭದಲ್ಲಿ ಅಕ್ಟೋಬರ್ 7ರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ರಕ್ಷಣ್ ಜಿ. ರಾವ್ ಸಂಗೀತ ಕಾರ್ಯಕ್ರಮ ನೀಡಿದರು.ವಯಲಿನ್ ವಾದಕರಾಗಿ ಮಂಗಳೂರಿನ ಗೌತಮ್ ಭಟ್, ಮೃದಂಗ ವಾದಕರಾಗಿ ವಿದ್ವಾನ್ ವಸಂತಕೃಷ್ಣ ಕಾಂಚನ ಮತ್ತು ತಬಲಾವಾದಕರಾಗಿ ಶಿವಮೊಗ್ಗದ ವಿಠಲ ರಂಗಧೋಳ್ ಸಹಕರಿಸಿದರು.

ಗಮಕ-ನೃತ್ಯರೂಪಕ ಪ್ರದರ್ಶನ

ಬೆಳ್ತಂಗಡಿ: ಶರನ್ನವರಾತ್ರಿ ಪ್ರಯುಕ್ತ ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ ವತಿಯಿಂದ ಪರಿಷತ್‌ನ ಸದಸ್ಯರು ಗಮಕ-ನೃತ್ಯ ರೂಪಕವನ್ನು ಪ್ರದರ್ಶಿಸಿದರು. ನಿತ್ಯಾತ್ಮಯೋಗಿ ಕವಿಯು ಬರೆದ ಶ್ರೀ ಕರ್ನಾಟಕ ಭಾಗವತದಿಂದ ಆಯ್ದ ಕಾವ್ಯಭಾಗಗಳನ್ನು ಆಧರಿಸಿ ‘ಶ್ರೀ ಕೃಷ್ಣ ಲೀಲಾಮೃತಂ’ ಎಂಬ ನೃತ್ಯರೂಪಕ ಕಾರ್ಯಕ್ಮವನ್ನು ನಡೆಸಿಕೊಟ್ಟರು. ಕಾವ್ಯ ವಾಚನದಲ್ಲಿ ತಾಲೂಕು ಗಮಕ ಕಲಾ ಪರಿಷತ್ ಕಾರ್ಯದರ್ಶಿ ಗಮಕಿ ಮೇಧಾ ಅಶೋಕ ಭಟ್ ಮತ್ತು ಗಮಕ ವಿದ್ಯಾರ್ಥಿನಿ ಶ್ರೀವಿದ್ಯಾ ಐತಾಳ್ ಪ್ರಸ್ತುತ ಪಡಿಸಿದರು. ನಿರೂಪಣಾ ವ್ಯಾಖ್ಯಾನವನ್ನು ಗಮಕ […]

‘ಮ್ಯೂಸಿಯಂಗಳು ಈ ನೆಲದ ಜ್ಞಾನ ಸಂಪತ್ತು’

ಬೆಳ್ತಂಗಡಿ: ಮ್ಯೂಸಿಯಂಗಳು ಭೌತಿಕ ಸಂಶೋಧನೆಗಳಿಗೆ ಬಹುದೊಡ್ಡ ಸಂಪನ್ಮೂಲ. ಇದನ್ನು ಸಂರಕ್ಷಿಸಿಕೊಂಡು ಮುಂದಿನ ತಲೆಮಾರಿಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇವುಗಳು ಈ ನೆಲದ ಸಂಪತ್ತು ಎಂದು ಧರ್ಮಸ್ಥಳದ ಮಂಜೂಷ ಮ್ಯೂಸಿಯಂನ ಮೇಲ್ವಿಚಾರಕ ರಿತೇಶ್ ಅಭಿಪ್ರಾಯಪಟ್ಟರು. ಅವರು ಅಕ್ಟೋಬರ್ 8ರಂದು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾಭವನ ಕಾಶಿಬೆಟ್ಟುನ ರೊ. ಕೆ. ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ನಡೆದ ‘ಮ್ಯೂಸಿಯಂ ಆಳ-ಅಗಲ’ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಮ್ಯೂಸಿಯಂ ಕಟ್ಟಲು ಮತ್ತು ಅದನ್ನು ಸದಾ ಸಂರಕ್ಷಿಸಲು […]