ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಧರ್ಮಸ್ಥಳದ ಕನ್ಯಾಡಿಯ ಯಕ್ಷ ಭಾರತಿ ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ತುಳು ಶಿವಳ್ಳಿ ಸಭಾ ಬೆಳ್ತಂಗಡಿ ಆಶ್ರಯದಲ್ಲಿ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಜುಲೈಕಾ ಕ್ಯಾನ್ಸರ್ ಆಸ್ಪತ್ರೆ ದೇರಳಕಟ್ಟೆಯ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರವು ಅಕ್ಟೋಬರ್ 13ರಂದು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಜರಗಿತು.ಉಜಿರೆಯ ಕನಸಿನ ಮನೆ ‘ಲಕ್ಷ್ಮಿ ಗ್ರೂಪ್’ ಮಾಲಕ ಹಾಗೂ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್. […]

ಎಸ್.ಡಿ.ಎಂ. ಕಾಲೇಜಿನಲ್ಲಿ ಔದ್ಯಮಿಕ ಬೂಟ್ ಕ್ಯಾಂಪ್

ಬೆಳ್ತಂಗಡಿ: ಜನರ ಸ್ವಭಾವ, ಸಾಮಾಜಿಕ ಅಗತ್ಯತೆ ಮತ್ತು ಆದ್ಯತೆಗಳಿಗೆ ಅನುಗುಣವಾಗಿ ನೂತನ ವಿಚಾರಗಳನ್ನು ಹೊಳೆಸಿಕೊಳ್ಳುವ ಸಾಮರ್ಥ್ಯ ಔದ್ಯಮಿಕ ಪ್ರಯೋಗಶೀಲತೆಗೆ ಸಹಾಯಕವಾಗುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು.ಅವರು ಅಕ್ಟೋಬರ್ 14ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿ.ವೋಕ್ ರೀಟೇಲ್ ಅಂಡ್ ಸಪ್ಲೇ ಚೈನ್ ಮ್ಯಾನೇಜಮೆಂಟ್ ವಿಭಾಗ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಘಟಕ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿದ್ದ ‘ಆಲೋಚನೆಗಳಿಂದ […]

ಕರ್ನಾಟಕ ಆಯುಷ್ ಫೆಡರೆಷನ್ ಆಫ್ ಇಂಡಿಯಾ ಬೆಳ್ತಂಗಡಿ ಘಟಕದ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ: ಕರ್ನಾಟಕ ಆಯುಷ್ ಫೆಡರೆಷನ್ ಆಫ್ ಇಂಡಿಯಾದ (ಎ.ಎಫ್.ಐ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಕ್ಟೋಬರ್ 13ರಂದು ಉಜಿರೆಯ ಓಷಿಯನ್ ಪರ್ಲ್ ಹೋಟೆಲ್‌ನ ಸಭಾಂಗಣದಲ್ಲಿ ಎ.ಎಫ್.ಐ. ಬೆಳ್ತಂಗಡಿ ಘಟಕದ ನೂತನ ಅಧ್ಯಕ್ಷೆ ಡಾ| ಸುಷ್ಮಾ ಡೋಂಗ್ರೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪದಗ್ರಹಣ ಸಭಾರಂಭವನ್ನು ಎ.ಎಫ್.ಐ. ದಕ್ಷಿಣಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ಮಂಗಳೂರಿನ ಡಾ| ಕೃಷ್ಣ ಗೋಖಲೆ ನಿರ್ವಹಿಸಿಕೊಟ್ಟರು.ಮುಖ್ಯ ಅತಿಥಿಗಳಾಗಿ ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ವೈದ್ಯರೂ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳೂ ಆಗಿರುವ ಡಾ| ಚಕ್ರಪಾಣಿ […]

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯಾಗಿ ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ಇವರನ್ನು ಸಂಘದ ರಾಜ್ಯ ಅಧ್ಯಕ್ಷರಾದ ಡಾ. ಎಲ್. ಭಯರಪ್ಪರವರು ನೇಮಕ ಮಾಡಿರುತ್ತಾರೆ.ಜಯಕೀರ್ತಿ ಜೈನ್‌ರವರು ಸುದೀರ್ಘ 25ವರ್ಷಗಳ ಕಾಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ ಅಧ್ಯಕ್ಷರಾಗಿ ಸಂಘಕ್ಕೆ ಯಶಸ್ವಿ ನಾಯಕತ್ವ ಒದಗಿಸಿದ್ದರು. ಅಂತೆಯೇ 35 ವರ್ಷಗಳ ಸುದೀರ್ಘ ಅವಧಿಗೆ ದಕ್ಷಿಣ ಕನ್ನಡ ಜಿಲ್ಲಾ ಪಶು […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಮಹೋತ್ಸವ ಸಂಪನ್ನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಅಕ್ಟೋಬರ್ 3ರಿಂದ ಅಕ್ಟೋಬರ್ 11ರ ಮಹಾನವಮಿವರೆಗೆ ಪ್ರತಿ ರಾತ್ರಿ ವಿಶೇಷ ಪೂಜೆ, ಬಲಿ ಉತ್ಸವ, ವಸಂತಮಂಟಪದಲ್ಲಿ ಪೂಜೆ, ಕನ್ನಿಕಾಪೂಜೆ, ಅಷ್ಟಾವಧಾನ ಸೇವೆ, ಅಕ್ಟೋಬರ್ 9ರ ಮೂಲಾನಕ್ಷತ್ರದಂದು ಚಂಡಿಕಾಯಾಗ ಹಾಗೂ ಅಕ್ಟೋಬರ್ 11ರವರೆಗೆ ಪಲ್ಲಕಿ ಉತ್ಸವ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ದೇವಸ್ಥಾನದ ಪ್ರವಚನ ಮಂಟಪದಲ್ಲಿ ಪ್ರತಿ ದಿನ ಸಂಜೆ ಗಂಟೆ 6ರಿಂದ 8ರವರೆಗೆ ನಾಡಿನ ಖ್ಯಾತ ಕಲಾವಿದರಿಂದ […]

‘ಭ್ರಷ್ಟ ಬಿಜೆಪಿ ಸರಕಾರ ತೊಲಗಿಸುವುದು ದುಡಿಯುವ ಜನರ ಕರ್ತವ್ಯ’

ಬೆಳ್ತಂಗಡಿ: ಇಂದು ನಮ್ಮ ದೇಶವನ್ನು ಆಳುತ್ತಿರುವ ಬಿಜೆಪಿಯ ನರೇಂದ್ರ ಮೋದಿ ಸರಕಾರ ಅತಿ ಭ್ರಷ್ಟ ಸರಕಾರವಾಗಿದ್ದು, ಇಂತಹ ಭ್ರಷ್ಟ ಮತ್ತು ಕಾರ್ಮಿಕ ವಿರೋದಿ ಸರಕಾರವನ್ನು ಹಿಮ್ಮೆಟ್ಟಿಸುವುದು ಭಾರತೀಯರ ಇಂದಿನ ಕರ್ತವ್ಯವಾಗಿದ್ದು; ಆ ಮೂಲಕ ರೈತರ, ಕಾರ್ಮಿಕರ ಬದುಕಿನ ರಕ್ಷಣೆ ಮಾಡಬೇಕಾದ್ದು ಅತೀ ಅಗತ್ಯ ಕೆಲಸವಾಗಿದೆ ಮತ್ತು ಅದು ಸಿಪಿಐ(ಎಂ) ಬೆಳವಣಿಗೆಯಿಂದಷ್ಟೇ ಸಾದ್ಯ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ. ಕೃಷ್ಣಪ್ಪ ಕೊಂಚಾಡಿ ಹೇಳಿದರು. ಅವರು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ […]

ನವರಾತ್ರಿ ಉತ್ಸವ ಸಂಪನ್ನ

ಬೆಳ್ತಂಗಡಿ: ಉಜಿರೆ ಶ್ರೀ ಮಹಮ್ಮಾಯಿ (ಮಾರಿಗುಡಿ) ದೇವಸ್ಥಾನದಲ್ಲಿ ಅಕ್ಟೋಬರ್ 3ರಿಂದ ಮೊದಲ್ಗೊಂಡು ಅಕ್ಟೋಬರ್ 11 ಮಹಾನವಮಿ ಪರ್ಯಂತ ಪ್ರತಿ ರಾತ್ರಿ ವಿವಿಧ ತಂಡಗಳಿಂದ ಭಜನೆ ಹಾಗೂ ಸೇವಾರ್ಥಿಗಳಿಂದ ವಿಶೇಷ ರಂಗ ಪೂಜೆ ನಡೆಯಿತು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ಣಾಯರ ನೇತೃತ್ವದಲ್ಲಿ ದೇವಸ್ಥಾನವನ್ನು ವಿಶೇಷವಾಗಿ ಪುಷ್ಪಾಲಂಕಾರ ಮತ್ತು ವಿದ್ದ್ಯುದ್ದೀಪಗಳಿಂದ ಶೃಂಗರಿಸಲಾಗಿತ್ತು. ಅಕ್ಟೋಬರ್ 11 ರಂದು ಶುಕ್ರವಾರ ರಾತ್ರಿ ಉಜಿರೆಯ ಕನಸಿನ ಮನೆ ಲಕ್ಷ್ಮಿ ಗ್ರೂಪ್ ಮಾಲಕರಾದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ. ಮೋಹನ […]

ಧರ್ಮಸ್ಥಳದಲ್ಲಿ ಸೀರೆ ವಿತರಣೆ

ಬೆಳ್ತಂಗಡಿ: ನವರಾತ್ರಿ ಸಂದರ್ಭದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ಟೋಬರ್ 11ರ ರಾತ್ರಿ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮುತ್ತೈದೆಯರಿಗೆ ದೇವಸ್ಥಾನದಲ್ಲಿ 3,026 ಸೀರೆಗಳನ್ನು ಪ್ರಸಾದ ರೂಪವಾಗಿ ವಿತರಿಸಿದರು.

ಸಮಾಜದ ಆಚಾರ-ವಿಚಾರ ಉಳಿಸೋಣಾ-ಅಜಿತ್ ರೈ ಮಾಲಾಡಿ

ಬೆಳ್ತಂಗಡಿ: ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ನಮ್ಮ ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಮಾಜದ ವಿದ್ಯಾರ್ಥಿಗಳಲ್ಲಿ ಸಮಾಜ ನಿಮ್ಮ ಜೊತೆಗಿದೆ ಎಂಬ ಭರವಸೆ ಮೂಡಿಸಿ, ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಇಂದು ಇಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು.ಅವರು ಅಕ್ಟೋಬರ್ 13ರಂದು ಗುರುವಾಯನಕೆರೆ ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ […]

ಕೊಯ್ಯೂರಿನಲ್ಲಿ ಹರಿಕಥಾ ಕಾಲಕ್ಷೇಪ

ಬೆಳ್ತಂಗಡಿ: ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿಯ ಪ್ರಯುಕ್ತ ‘ಶ್ರೀ ಮಹಿಷ ಮರ್ದಿನಿ’ ಪುರಾಣಕಥೆಯ ಹರಿಕಥಾ ಕಾಲಕ್ಷೇಪವು ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಂದ ನಡೆಯಿತು. ಸುವರ್ಣ ಕುಮಾರಿ, ಸುಮಂಗಲ ಕುಂಟಿನಿ ಹಾಗೂ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಹಿಮ್ಮೇಳದಲ್ಲಿ ಹಾಡಿನಲ್ಲಿ ಸಹಕರಿಸಿದರೆ; ಓಜಸ್ವಿ ತಬಲದಲ್ಲಿ ಸಹಕರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಕೊಯ್ಯುರು ಅಶೋಕ ಭಟ್ ಅಗ್ರಶಾಲೆ ಮತ್ತು ದೇವಳದ ಭಜನಾ ಸಂಘವು ಸಹಕಾರವನ್ನು ನೀಡಿತ್ತು.