ನೆನಪುಗಳ ನೇವರಿಕೆ’ ಪುಸ್ತಕ ಬಿಡುಗಡೆ

‘ಬೆಳ್ತಂಗಡಿ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ ‘ನೆನಪುಗಳ ನೇವರಿಕೆ’ ಪುಸ್ತಕವನ್ನು ಅಕ್ಟೋಬರ್ 12ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ ‘ನೆನಪುಗಳ ನೇವರಿಕೆ’ ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು […]
ಸಂಗೀತ ಕಾರ್ಯಕ್ರಮ

ಬೆಳ್ತಂಗಡಿ: ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಕ್ಟೋಬರ್ 11ರಂದು ಬೆಂಗಳೂರಿನ ಡಾ. ಅರ್ಚನಾ ಕುಲಕರ್ಣಿ, ಸಿದ್ಧಯ್ಯ, ಹಾಗೂ ಗುಂಡಪ್ಪ ಸಂಗೀತ ಕಾರ್ಯಕ್ರಮ ನೀಡಿದರು.ಕೀಬೋರ್ಡ್ ವಾದಕರಾಗಿ ವೆಂಕಟೇಶ್, ರಿದಂಪ್ಯಾಡ್ ವಾದಕರಾಗಿ ಪ್ರಸಾದ್, ತಬಲಾ ವಾದಕರಾಗಿ ಕ್ಷೀರಲಿಂಗ ಹಾಗೂ ತಾಳದಲ್ಲಿ ಸೂರ್ಯನಾರಾಯಣ ಸಹಕರಿಸಿದರು.
ಕೋಳಿ ಸಾಕಾಣಿಕೆಯ ಬಗ್ಗೆ ಮಾಹಿತಿ ಶಿಬಿರ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸುಲ್ಕೇರಿಯ ಮಾಸಿಕ ಸಭೆ ಮತ್ತು ಕೋಳಿ ಸಾಕಾಣಿಕೆ ಬಗ್ಗೆ ಮಾಹಿತಿ ಕಾರ್ಯಕ್ರಮವು ಲಯನ್ ಹರೀಶ್ ಪೂಜಾರಿಯವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿಣ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹಾಗೂ ಲಯನ್ ಸದಸ್ಯರುಗಳಾದ ಸುಂದರ ಶೆಟ್ಟಿ ಕೆ., ವಸಂತ ರಾವ್, ನಾರಾಯಣ ಪೂಜಾರಿ, ರಾಮಣ್ಣ ಶೆಟ್ಟಿ, ಹರೀಶ್ ಪೂಜಾರಿ, ಸಂದೀಪ್ ಶೆಟ್ಟಿ, ಮಹಾಬಲ ಶೆಟ್ಟಿ ಉಪಸ್ಥಿತರಿದ್ದರು
ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ

ಬೆಳ್ತಂಗಡಿ: ಸಾಲಿಗ್ರಾಮ ಮಕ್ಕಳ ಮೇಳದ ಬಾಲಕಲಾವಿದರ ಪ್ರತಿಭೆ, ವಾಕ್‌ಚಾತುರ್ಯ, ಪ್ರೌಢ ಅಭಿನಯ, ಹೃದಯಸ್ಪರ್ಶಿ ಹಾವಭಾವವನ್ನು ಶ್ಲಾಘಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಎಳೆಯ ಕಲಾವಿದರೆ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಸಮರ್ಥರು ಹಾಗೂ ಪ್ರಬುದ್ಧರು ಎಂದು ಹೇಳಿದರು.ಅವರು ಅಕ್ಟೋಬರ್ 10ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಸುವರ್ಣಪರ್ವ ಆಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಹಿರಿಯ ಕಲಾವಿದರ ಕೊರತೆ ಕಾಡುತ್ತಿರುವಾಗ ಎಳೆಯ ಮಕ್ಕಳೆ ಯಕ್ಷಗಾನ ಕಲೆಯನ್ನು […]
ಬೆಳಾಲಿನಲ್ಲಿ 1867ನೇ ಮದ್ಯವರ್ಜನ ಶಿಬಿರದಕ್ಕೆ ಡಾ. ಹೆಗ್ಗಡೆ ಭೇಟಿ

ಬೆಳ್ತಂಗಡಿ: ಮದ್ಯಪಾನದಂತಹ ವ್ಯಸನದಿಂದ ವ್ಯಕ್ತಿ ತನ್ನ ವ್ಯಕ್ತಿತ್ವವನ್ನೇ ಕಳೆದುಕೊಳ್ಳುತ್ತಾನೆ. ಆ ಮೂಲಕ ಸಮಾಜದಲ್ಲಿ ತನ್ನ ಹಾಗೂ ತನ್ನ ಕುಟುಂಬಿಕರ ಗೌರವಕ್ಕೆ ಕುತ್ತು ತರುತ್ತಾನೆ. ಪಂಚೇಂದ್ರಿಯಗಳನ್ನು ಹತೋಟಿಯಲ್ಲಿರಿಸಿ, ದುರ್ಜನರ ಸಂಘದಿಂದ ದೂರವಿದ್ದು, ಸಜ್ಜನರ ಸಹವಾಸ ಮಾಡಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ದುಶ್ಚಟಗಳು ಕ್ರಿಮಿನಲ್ ಕೃತ್ಯಗಳಿಗೂ ಪ್ರೇರಣೆ ನೀಡುತ್ತದೆ ಎಂಬ ಬಗ್ಗೆ ಎಚ್ಚರ ಅಗತ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಲಹೆ ನೀಡಿದರು.ಅವರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳಾಲು ಇದರ ಆಶ್ರಯದಲ್ಲಿ; […]
ಉಜಿರೆಯಲ್ಲಿ ಮ್ಯಾರಥಾನ್ ಓಟ

ಬೆಳ್ತಂಗಡಿ: ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ| ರಮೇಶ್ ಹೇಳಿದರು.ಅವರು ಅಕ್ಟೋಬರ್ 10ರಂದು ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಸಂದರ್ಭ ಆಯೋಜಿಸಲಾದ ಮ್ಯಾರಥಾನ್ ಓಟವನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸುತ್ತಿದ್ದರು.ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. […]
‘ವಾರ್ಷಿಕೋತ್ಸವ ವಿದ್ಯಾರ್ಥಿಗಳ ಸಾಧನೆ ಗುರುತಿಸಲಿರುವ ವೇದಿಕೆ’

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಅಕ್ಟೋಬರ್ 8ರಂದು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ; ವಾರ್ಷಿಕೋತ್ಸವ ವಿದ್ಯಾರ್ಥಿಗಳು ಮಾಡಿದ ಸಾಧನೆಯನ್ನು ಗುರುತಿಸುವುದಕ್ಕೆ ಇರುವ ವೇದಿಕೆ. ಈ ಸಾಲಿನ ವಿದ್ಯಾರ್ಥಿಗಳು ಅದ್ಭುತವಾದ ಸಾಧನೆಯನ್ನು ಮಾಡಿ ಕಾಲೇಜಿಗೆ ಹೆಸರು ಹಾಗೂ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಅನುಕೂಲತೆ ದೃಷ್ಟಿಯಿಂದ ಕಾಲೇಜಿಗೆ ಬೇಕಾಗುವ ಅಗತ್ಯ ವ್ಯವಸ್ಥೆಗಳನ್ನು ಆಡಳಿತ ಮಂಡಳಿಯಿಂದ ಕಲ್ಪಿಸಿದ್ದೇವೆ. […]
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಅಧ್ಯಕ್ಷರಿಗೆ ಅಭಿನಂದನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಬೆಳ್ತಂಗಡಿ ಮತ್ತು ಗುರುವಾಯನಕೆರೆ ತಾಲೂಕಿನ ಭಜನಾ ಪರಿಷತ್ ವತಿಯಿಂದ ಅಭಿನಂದನೆಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ,ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ, ಭಜನಾ ಪರಿಷತ್ತಿನ ಸಮನ್ವಯಾಧಿಕಾರಿ ರಾಘವೇಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಸದಸ್ಯರು ಹಾಗೂ […]
ಉಜಿರೆ ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

ಬೆಳ್ತಂಗಡಿ: ಅವಘಡ ಅಥವಾ ಅಪಘಾತಗಳಿಗೆ ಒಳಗಾದ ಗಾಯಾಳುಗಳು ಹಾಗೂ ದಿಢೀರ್ ಅನಾರೋಗ್ಯಕ್ಕೆ ತುತ್ತಾದ ರೋಗಿಗಳಿಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ. ತುರ್ತು ಚಿಕಿತ್ಸೆ ಅಥವಾ ಎಮರ್ಜೆನ್ಸಿ ಮೆಡಿಸಿನ್ ಕ್ಷೇತ್ರದ ಪರಿಣಿತರು ಇಂತಹ ಚಿಕಿತ್ಸೆ ನೀಡುತ್ತಾರೆ. ಈ ವಿಶೇಷ ಸೇವೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಇದೀಗ ಲಭ್ಯವಿದೆ ಎಂದು ಉಜಿರೆಯ ಬೆನಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ|ಗೋಪಾಲಕೃಷ್ಣ ತಿಳಿಸಿದರು.ಅವರು ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತುರ್ತು ಚಿಕಿತ್ಸಾ ತಜ್ಞ ಡಾ| ಆದಿತ್ಯ ರಾವ್ ಅವರನ್ನು ಸ್ವಾಗತಿಸುತ್ತಾ […]
ಉಜಿರೆಯಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಶುಭಾರಂಭ

ಬೆಳ್ತಂಗಡಿ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ 44ನೇ ವರ್ಷದ 4 ದಿನಗಳ ಶ್ರೀ ಶಾರದಾ ಪೂಜೋತ್ಸವ ಹಾಗೂ ತದಂಗವಾಗಿ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಅಕ್ಟೋಬರ್ 9ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಬೆಳಿಗ್ಗೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ ಬಳಿಕ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಗಣಪತಿ ಹವನ ಹಾಗೂ ಶ್ರೀ ಶಾರದಾ ಮೂರ್ತಿ ಪ್ರತಿಷ್ಠಾ ಕಾರ್ಯ ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳರ ಪೌರೋಹಿತ್ಯದಲ್ಲಿ […]