ಬಂಟರ ಸಂಘದ ನಿರ್ದೇಶಕ ಮಂಡಳಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ಖಾಯಂ ಆಹ್ವಾನಿತರ ಸಭೆಯು ಸೆಪ್ಟೆಂಬರ್ 29ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ತೆರಿಗೆ ಪಾವತಿಗೆ ವಿಶೇಷ ಶ್ರಮ ವಹಿಸಿದ ಸಂಘದ ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ ಇವರನ್ನು ಅಭಿನಂದಿಸಲಾಯಿತು. ತೆರಿಗೆ ಪಾವತಿಸಲು ಸಹಕರಿಸಿದ […]

‘ಭಜನೆಯಿಂದ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ’

ಬೆಳ್ತಂಗಡಿ : ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ ವ್ಯಸನಮುಕ್ತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಇತ್ಯಾದಿ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ ಎಂದು ಕುಂದಗೋಳ ಕಲ್ಯಾಣಪುರ ಮಠದ ಪೂಜ್ಯ ಬಸವಣ್ಣಜ್ಜನವರು ಹೇಳಿದರು.ಅವರು ಸೆಪ್ಟೆಂಬರ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 26ನೇ ವರ್ಷದ ಭಜನಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡುತ್ತಿದ್ದರು.ಭಜನಾ […]

ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿಕೆಆರ್‌ಡಿಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಸೆಪ್ಟೆಂಬರ್ 28ರಂದು ಹೆಚ್‌ಐವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿಸಾಂತೋಮ್ ಟವರ್ ನಲ್ಲಿ ನಡೆಯಿತು.ತೆರಿಗೆ ಸಲಹೆಗಾರ ಬೆಳ್ತಂಗಡಿಯ ಸಿನು ಅಬ್ರಹಾಂ ಸಭೆಯಲ್ಲಿ ಭಾಗವಹಿಸಿ ಮಾತನಾಡಿ; ಜೀವನದಲ್ಲಿ ಯಾವುದೇ ಸಮಸ್ಯೆಯನ್ನು ಧೈರ್ಯದಿಂದ ಎದುರಿಸುವಾಗ ಯಶಸ್ಸನ್ನುಗಳಿಸಲು ಸಾಧ್ಯ ಎಂದರಲ್ಲದೇ, ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.ಬಂಗಾಡಿ ಮರಿಯಂಬಿಕ ಚರ್ಚ್‌ನ ಮಾತೃವೇದಿ ಘಟಕದ ಅಧ್ಯಕ್ಷರಾದ ಆನಿಮೋಲ್ ಹಾಗೂ ಘಟಕದ ಪದಾಧಿಕಾರಿಗಳ […]

ಸುವರ್ಣ ಸಂಭ್ರಮ ರಥಯಾತ್ರೆಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣಗೊಂಡ 50ನೇ ವರ್ಷ ಸುವರ್ಣ ಕರ್ನಾಟಕ ಸಂಭ್ರಮವೆಂಬ ಪ್ರಯುಕ್ತ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಸುವರ್ಣ ಸಂಭ್ರಮ ರಥಯಾತ್ರೆ ಸೆಪ್ಟೆಂಬರ್ 28ರಂದು ದಕ್ಷಿಣ ಜಿಲ್ಲೆಯನ್ನು ಪ್ರವೇಶಿಸುವ ಸಂದರ್ಭದಲ್ಲಿ ಉಜಿರೆಯ ಮುಖ್ಯ ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಮ್ ರಥದಲ್ಲಿ ಅಳವಡಿಸಲಾದ ಭವ್ಯ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರಥವನ್ನು ಜಿಲ್ಲೆಗೆ ಬರಮಾಡಿಕೊಂಡರು. ಚಿಕ್ಕಮಗಳೂರು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ […]

ಬೆಳ್ತಂಗಡಿ ತಾಲೂಕು ಲ್ಯಾಂಪ್ ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ (ಲ್ಯಾಂಪ್) ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 20ರಂದು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಹಾಸಭೆಯ ಮುಂದಿರಿಸಿ, ಅನುಮೋದನೆ ಪಡೆದರು. ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕೃಷಿ […]

ಮದ್ದಡ್ಕ ಹಾಲಿನ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ಮದ್ದಡ್ಡ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಮದ್ದಡ್ಕ ಸುವರ್ಣ ಸೌಧ ಸಭಾ ಭವನದಲ್ಲಿ ಸೆಪ್ಟೆಂಬರ್ 19ರಂದು ಸಂಘದ ಅಧ್ಯಕ್ಷ ಕೋರ್ಯಾರು ಗೋಪಾಲ ಶೆಟ್ಟರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯನ್ನು ಉದ್ಧೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೋರ್ಯಾರು ಗೋಪಾಲ್ ಶೆಟ್ಟಿ; ವರದಿ ವರ್ಷದಲ್ಲಿ ಸಂಘವು 3.90 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ರೂಪಾಯಿ 15.30ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು.ಸಭೆಯಲ್ಲಿ ನಿರ್ದೇಶಕರದ ಅಣ್ಣಿ […]

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ: ವಿದ್ಯೆಯಿಂದ ಜ್ಞಾನ, ಜ್ಞಾನದಿಂದ ಧನ, ಧನದಿಂದ ಪ್ರಗತಿ ಪ್ರಾಪ್ತಿಯಾಗುತ್ತದೆ. ಅದಕ್ಕೆ ವಿದ್ಯಾದಾನ ಶ್ರೇಷ್ಠ ಎಂದು ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಡಿಜಿಎಂ ಪ್ರಶಾಂತ್ ಜೋಷಿ ಹೇಳಿದರು.ಅವರು ಬೆಳ್ತಂಗಡಿ ರೋಟರಿ ಕ್ಲಬ್ , ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾನಗರ ವತಿಯಿಂದ ಸೆಪ್ಟೆಂಬರ್ 21ರಂದು ಕಾಶಿಬೆಟ್ಟು ರೋಟರಿ ಸುವರ್ಣ ಸಭಾಭಾವನದಲ್ಲಿ ನಡೆದ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ 90% ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡುತ್ತಿದ್ದರು.ಕ್ಯಾನ್‌ಫಿನ್ ವತಿಯಿಂದ ಕಳೆದ […]

ವಿಮುಕ್ತಿ ಸ್ವ-ಸಹಾಯ ಸಂಘಗಳ ಒಕ್ಕೂಟ ಸಾಮಾನ್ಯ ಸಭೆ

ಬೆಳ್ತಂಗಡಿ: ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್‌ನ ಒಕ್ಕೂಟ ಸಾಮಾನ್ಯ ಸಭೆಯು ಸೆಪ್ಟೆಂಬರ್ 22ರಂದು ವಿಮುಕ್ತಿ ಕಛೇರಿಯಲ್ಲಿ ಬೆಳಿಗ್ಗೆ ನಡೆಯಿತು. ವಿಮುಕ್ತಿ ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಾಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ವಿನೋದ್ ಮಸ್ಕರೇನಸ್ ಹಾಗೂ ಸಹ ನಿರ್ದೇಶಕರಾದ ವಂದನೀಯ ರೋಹನ್ ಲೋಬೋ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿ ರೈನಾ ಸರ್ವರನ್ನು ಸ್ವಾಗತಿಸಿ ಹಿಂದಿನ ಒಕ್ಕೂಟ ಸಾಮಾನ್ಯ ಸಭೆಯ ವರದಿಯನ್ನು ವಾಚಿಸಿದರು. ಸಂಸ್ಥೆಯ ಸಿಬ್ಬಂಧಿಗಳು ಘಟಕ ಸಭೆಯ ವಿವರಗಳು, ಒಕ್ಕೂಟ ಸಾಲಗಳು, ಲೆಕ್ಕಪರಿಶೋದನೆ, ವಿದಾಸ್ನೇಹಿ […]

ರಕ್ತ ಮತ್ತು ಆರೋಗ್ಯದ ಉಚಿತ ತಪಾಸಣೆ

ಬೆಳ್ತಂಗಡಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕ,ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ದಕ್ಷಿಣ ಕನ್ನಡ ಹಾಸ್ಪಿಟಲ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಕಛೇರಿ ‘ಅನನ್ಯ’ದಲ್ಲಿ ಸೆಪ್ಟೆಂಬರ್ 22ರಂದು ನಡೆದ ರಕ್ತ ಹಾಗೂ ಅರೋಗ್ಯ ಉಚಿತ ತಪಾಸಣಾ ಶಿಬಿರವನ್ನು ವಾಲ್ಟರ್ ಸಿಕ್ವೇರಾ ದೀಪ ಬೆಳಗಿಸಿ ಉದ್ಘಾಟಿಸಿದರು.ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಹರಿದಾಸ್ ಎಸ್.ಎಂ. ಪ್ರಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿದರು. ಮಂಜುಶ್ರೀ ಸೀನಿಯರ್ ಛೇಂಬರ್ಕಾರ್ಯದರ್ಶಿ ಜಾನ್ ಅರ್ವಿನ್ ಡಿ’ಸೋಜ ಶುಭಕೋರಿದರು.ವೇದಿಕೆಯಲ್ಲಿ ವಕೀಲ ಶಿವಕುಮಾರ್, ವೆಂಕಟೇಶ್ ಮಯ್ಯ, ಡಾI […]

‘ವಿದ್ಯಾರ್ಥಿಗಳು ವಿದ್ಯೆಯ ಜೊತೆ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು’

ಬೆಳ್ತಂಗಡಿ: ವಿದ್ಯಾರ್ಥಿಗಳು ವಿದ್ಯೆಯ ಜೊತೆ ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.ಅವರು ಸೆಪ್ಟೆಂಬರ್ 20ರಂದು ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ 733 ವಿದ್ಯಾರ್ಥಿಗಳಿಗೆ 20,29,000/-ರೂಪಾಯಿಗಳ ವಿದ್ಯಾರ್ಥಿ ಪ್ರೋತ್ಸಾಹಧನವನ್ನು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸ್ಮಾರಕ ಟ್ರಸ್ಟ್ ವತಿಯಿಂದ ವಿತರಿಸಿ ಆಶೀರ್ವಚನ ನೀಡುತ್ತಿದ್ದರು.ಇಂದಿನ ಅತ್ಯಂತ ವೇಗ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಒತ್ತಡದಲ್ಲೇ ಬದುಕುತ್ತಿದ್ದಾರೆ. ಗುರುಹಿರಿಯರಿಂದಲೂ ಮಕ್ಕಳಿಗೆ ಸಕಾಲಿಕ […]