ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ

ಬೆಳ್ತಂಗಡಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ 2 ದಿನಗಳ ತುಳು ಸಾಹಿತ್ಯ ರಚನಾ ಕಮ್ಮಟಕ್ಕೆ ಸೆಪ್ಟೆಂಬರ್ 13ರಂದು ವಾಣಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ತಾರಾನಾಥ ಗಟ್ಟಿ ದೀಪ ಬೆಳಗಿಸಿ ಉದ್ಭಾಟಿಸಿ ಮಾತನಾಡಿ; ದ್ರಾವಿಡ ಭಾಷಾ ವರ್ಗದಲ್ಲಿ ತುಳುವಿಗೆ ವಿಶಿಷ್ಟವಾದ ಸ್ಥಾನವಿದೆ. ತುಳುವಿಗೆ ಸತ್ವವಿದೆ, ಭಾಷಾ […]

ಸವಾಲನ್ನು ಹಿಮ್ಮೆಟ್ಟಿಸಿದಾಗ ಸಾಧನೆ ಸಾಧ್ಯ-ಸ್ಮಿತೇಶ್

ಬೆಳ್ತಂಗಡಿ: ಸಾಧನೆಯ ಹಾದಿಯಲ್ಲಿ ಪರಿಶ್ರಮ ಹಾಗೂ ಬದ್ಧತೆ ಇದ್ದಲ್ಲಿ ಗುರಿಯನ್ನು ಸಾಕಾರಗೊಳಿಸಬಹುದು. ಕಠಿಣ ಪರಿಶ್ರಮ ಹಾಗೂ ಸತತ ಪ್ರಯತ್ನ ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ‘ಕನಸು ಮಾರಾಟಕ್ಕಿದೆ’ ಚಿತ್ರದ ನಿರ್ದೇಶಕ ಸ್ಮಿತೇಶ್ ಬಾರ್ಯ ಹೇಳಿದರು.ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗವು ಆಯೋಜಿಸಿದ್ದ ನೂತನ ಶೈಕ್ಷಣಿಕ ವರ್ಷದ ವಿಧ್ಯಾರ್ಥಿಗಳ ವಿಭಾಗದ ಓರಿಯಂಟೇಷನ್ ಹಾಗೂ ಮೀಡಿಯಾ ಮೆಸೆಂಜರ್ ಕ್ಲಬ್‌ಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.ಸೃಜನಶೀಲತೆ ಎಂಬುದು ಸತತ […]

ಚುಟುಕು ಚಿನ್ಮಯಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್(ರಿ) ಕೇಂದ್ರ ಸಮಿತಿ ಹುಬ್ಬಳ್ಳಿ ಅವರ ಆಶ್ರಯದಲ್ಲಿ ಸೆಪ್ಟೆಂಬರ್ 5ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ ಏಳನೆಯ ಸಮ್ಮೇಳನದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯಮೂಲ್ಯ ಸೇವೆಯೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಶೈಕ್ಷಣಿಕ ಕಾಳಜಿ, ಜನಪರ ಚಿಂತನೆ, ಸ್ನೇಹಪರ ಮನೋಭಾವ ಅರಳಿಸಿದ ಬೆಳ್ತಂಗಡಿಯ ಶಿಕ್ಷಕರ ಸಹಕಾರಿ ಬ್ಯಾಂಕಿನ ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸಹಿತ ಐದು ಮಂದಿ ಸಾಧಕರಿಗೆ ಇತರ […]

ಚುಟುಕು ಚಿನ್ಮಯಿ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್(ರಿ) ಕೇಂದ್ರ ಸಮಿತಿ ಹುಬ್ಬಳ್ಳಿ ಅವರ ಆಶ್ರಯದಲ್ಲಿ ಸೆಪ್ಟೆಂಬರ್ 5ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ ಏಳನೆಯ ಸಮ್ಮೇಳನದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯಮೂಲ್ಯ ಸೇವೆಯೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಶೈಕ್ಷಣಿಕ ಕಾಳಜಿ, ಜನಪರ ಚಿಂತನೆ, ಸ್ನೇಹಪರ ಮನೋಭಾವ ಅರಳಿಸಿದ ಬೆಳ್ತಂಗಡಿಯ ಶಿಕ್ಷಕರ ಸಹಕಾರಿ ಬ್ಯಾಂಕಿನ ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸಹಿತ ಐದು ಮಂದಿ ಸಾಧಕರಿಗೆ ಇತರ […]

ನೃತ್ಯಾಮೃತ ದೃಷ್ಟಿ-ಸೃಷ್ಟಿ

ಬೆಳ್ತಂಗಡಿ: ಪ್ರಕೃತಿ, ಪ್ರಾಣಿ ಸಹಿತ ಎಲ್ಲ ಚರಾಚರ ವಸ್ತುಗಳಲ್ಲಿ ದೇವರನ್ನು ಕಾಣುವುದು ಭಾರತೀಯ ಸಂಸ್ಕೃತಿ. ದೇವರಿಗೆ ಸಮಾನವಾಗಿ ಕಲೆಯನ್ನು ದೈವತ್ವಕ್ಕೇರಿಸಿ ಆರಾಧಿಸಿಕೊಂಡು ಬರುತ್ತಿರುವುದು ಸ್ಮರಣೀಯ. ಧಾರ್ಮಿಕ ಕ್ಷೇತ್ರಗಳಲ್ಲಿ ಕಲೆಗೆ ಪ್ರೋತ್ಸಾಹ ನಡೆದುಕೊಂಡು ಬಂದಿದೆ. ನೃತ್ಯ, ಸಂಗೀತ, ಯಕ್ಷಗಾನ ಕಲೆಯ ರುಚಿ ಆಸ್ವಾದಿಸಲು ಅವಕಾಶ ದೊರೆಯುತ್ತಿದ್ದು, ಏನೇ ಅಡೆತಡೆಯಿದ್ದರೂ ಅದನ್ನು ಮೀರಿ ಹಿರಿಯರು ಬೆಳೆಸಿದ ಕಲಾಪರಂಪರೆಯನ್ನು ಉಳಿಸುವ ಕಾರ್ಯ ಮಂಗಳೂರಿನ ನಾಟ್ಯಾರಾಧನಾ ಕಲಾ ಕೇಂದ್ರ ಮಾಡುತ್ತಿರುವುದು ಶ್ಲಾಘನೀಯ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ […]

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

: ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಬೆಂಗಳೂರು ಇಂದಿರಾನಗರ ರೋಟರಿ ಕ್ಲಬ್ ಮತ್ತು ರೋಟರಿ ಸೇವಾ ಟ್ರಸ್ಟ್‌ನ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 258 ವಿದ್ಯಾರ್ಥಿಗಳಿಗೆ ರೂಪಾಯಿ 10.32 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಸೆಪ್ಟೆಂಬರ್ 14ರಂದು ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ವಿತರಿಸಲಾಯಿತು. ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಶೇ 85ಕ್ಕಿಂತ ಅಧಿಕ ಅಂಕ ಪಡೆದ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ […]

‘ಕೌಶಲ್ಯಗಳ ನವೀಕರಣ ಸ್ಪರ್ಧಾತ್ಮಕತೆಗೆ ಪೂರಕ’

ಬೆಳ್ತಂಗಡಿ: ಕೌಶಲ್ಯಗಳನ್ನು ನವೀಕರಿಸಿಕೊಂಡು ಜ್ಞಾನಾಧಾರಿತ ಸಂಶೋಧನಾ ಪ್ರಜ್ಞೆ ಮತ್ತು ಅನ್ವಯಿಕ ಸಾಮರ್ಥ್ಯದೊಂದಿಗೆ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರುಗೊಂಡಾಗ ಮಾತ್ರ ಅಚ್ಚಳಿಯದ ಪ್ರಭಾವ ಮೂಡಿಸಿ ಯಶಸ್ಸು ಗಳಿಸಲು ಸಾಧ್ಯ ಎಂದು ಬೆಂಗಳೂರಿನ ಸಿಗ್ಮಾ ಅಲ್ಡಿçಜ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ. ರವೀಂದ್ರ ವಿಕ್ರಮ್ ಸಿಂಗ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಉದ್ದೇಶದಿಂದ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೆಪ್ಟೆಂಬರ್ […]

ಮಹಿಳಾ ದೌರ್ಜನ್ಯಗಳ ಕಠಿಣ ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲಿನ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಿನಬೇಕು…. ಮುಂತಾದ ಬೇಡಿಕೆಗಳಿಗೆ ಆಗ್ರಹಿಸಿ ಬೆಳ್ತಂಗಡಿಯ ಸ್ನೇಹ ಕಿರಣ್ ಮಹಿಳಾ ಒಕ್ಕೂಟದ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೆಪ್ಟೆಂಬರ್ 12ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ […]

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದಂಗವಾಗಿ ಸೆಪ್ಟೆಂಬರ್ 11ರಂದು ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಸಂಭ್ರಮಾಚರಣೆ ನಡೆಸಲಾಯಿತು. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಓಣಂ ಸಂಭ್ರಮಾಚರಣೆಯನ್ನು ಉದ್ಘಾಟಿಸಿ ಮಾತನಾಡಿ; ಓಣಂ ಕೇರಳದ ಪ್ರಮುಖ ಧಾರ್ಮಿಕ ಹಬ್ಬವಾದರೂ ದೇಶದೆಲ್ಲೆಡೆ ಕೇರಳೀಯರು ನೆಲೆಸಿರುವ ಪ್ರದೇಶಗಳಲ್ಲಿ ಹಬ್ಬವನ್ನು ವಿಶೇಷ ಸಂತಸ ಸಡಗರದಿಂದ ಆಚರಿಸುತ್ತಾರೆ. ಬಲಿಚಕ್ರವರ್ತಿಯ ಆಶೀರ್ವಾದ ಪಡೆದು ಉತ್ತಮ ಅರೋಗ್ಯ ಸಂಪದಗಳಿಗಾಗಿ ಪ್ರಾರ್ಥಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮಾಚರಿಸುತ್ತಾರೆ. ಎಲ್ಲರಿಗೂ ಓಣಂ […]

ಸದಸ್ಯರ ಅವಶ್ಯಕತೆಗಳಿಗೆ ತುರ್ತು ಸ್ಪಂದನೆ – ವೇಣೂರು ಸೊಸೈಟಿಯ ಮಹಾಸಭೆಯಲ್ಲಿ ಅಧ್ಯಕ್ಷ ಸುಂದರ ಹೆಗ್ಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ 8ಗ್ರಾಮಗಳ ವಿಶಾಲ ಕಾರ್ಯವ್ಯಾಪ್ತಿ ಹೊಂದಿರುವ ನಮ್ಮ ಸಹಕಾರಿ ಸಂಘವು ಸದಸ್ಯರ ಹಾಗೂ ಕೃಷಿಕರ ಅವಶ್ಯಕತೆಗಳಿಗೆ ತುರ್ತು ಸ್ಪಂದನೆ ನೀಡುವ ಮೂಲಕ ಅಗತ್ಯ ಸಾಲದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ತ್ವರಿತವಾಗಿ ಗ್ರಾಹಕರಿಗೆ ಸೇವೆಯನ್ನು ನೀಡುತ್ತಿರುವ ನಮ್ಮ ಸಂಘ ಗ್ರಾಮದ ಜನತೆ ಆರ್ಥಿಕವಾಗಿ ಸಬಲರಾಗಲು ಕೊಡುಗೆ ನೀಡುತ್ತಿದೆ ಎಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಹೇಳಿದರು.ಅವರು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆದ ವೇಣೂರು ಪ್ರಾಥಮಿಕ […]