ಪುಸ್ತಕ ಬಿಡುಗಡೆ

ಬೆಳ್ತಂಗಡಿ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ ‘ಮಂಜೂಷಾ’ ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ ‘ಪರ್ಯೂಷಣ ಪರ್ವ’ ಕೃತಿಯನ್ನು ಸೆಪ್ಟೆಂಬರ್ 9ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಹೆಗ್ಗಡೆಯವರ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಪುಸ್ತಕದಲ್ಲಿರುವ ಉಪಯುಕ್ತ ಆಧ್ಯಾತ್ಮಿಕ ಮಾಹಿತಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಲೇಖಕ ಪುಷ್ಪದಂತ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ನಿರಂಜನ್ ಜೈನ್, ಹಿರಿಯ ಪತ್ರಕರ್ತ ಆರ್.ಯನ್. ಪೂವಣಿ, ಉಪಸ್ಥಿತರಿದ್ದರು.

ಪುಸ್ತಕ ಬಿಡುಗಡೆ

ಬೆಳ್ತಂಗಡಿ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ ‘ಮಂಜೂಷಾ’ ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ ‘ಪರ್ಯೂಷಣ ಪರ್ವ’ ಕೃತಿಯನ್ನು ಸೆಪ್ಟೆಂಬರ್ 9ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಹೆಗ್ಗಡೆಯವರ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಪುಸ್ತಕದಲ್ಲಿರುವ ಉಪಯುಕ್ತ ಆಧ್ಯಾತ್ಮಿಕ ಮಾಹಿತಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಲೇಖಕ ಪುಷ್ಪದಂತ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ನಿರಂಜನ್ ಜೈನ್, ಹಿರಿಯ ಪತ್ರಕರ್ತ ಆರ್.ಯನ್. ಪೂವಣಿ, ಉಪಸ್ಥಿತರಿದ್ದರು.

ಕಕ್ಕಿಂಜೆಯಲ್ಲಿ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆ.ಎಮ್.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಇದರ ಸಹಭಾಗಿತ್ವದಲ್ಲಿ ಶ್ರೀ ನಾರಾಯಣ ಧರ್ಮಪರಿಪಾಲನಾ ಯೋಗಂ ತೋಟತ್ತಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಹಾಗೂ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಸೆಪ್ಟೆಂಬರ್ […]

ಗುರು ಶಿಷ್ಯರ ಪರಂಪರೆ ದೇಶದ ಶಕ್ತಿ: ಡಾ. ಸತೀಶ್ಚಂದ್ರ

ಬೆಳ್ತಂಗಡಿ: ಸಮಾಜದ ಪ್ರತಿಯೊಬ್ಬ ಸಾಧಕನ ಹಿಂದೆ ಗುರುವೆಂಬ ಶಕ್ತಿಯ ಆದರ್ಶ, ಮಾರ್ಗದರ್ಶನ, ಮತ್ತು ಪ್ರೀತಿಯ ಹಾರೈಕೆ ಇದೆ. ಈ ದೇಶದಲ್ಲಿ ಬೆಳೆದು ಬಂದಂತಹ ಗುರು ಶಿಷ್ಯರ ಪರಂಪರೆ ಅತ್ಯಂತ ಶ್ರೇಷ್ಠವಾದದ್ದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಅವರು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾಭವನ ಕಾಶಿಬೆಟ್ಟುವಿನ ರೊ. ಕೆ. ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನ ಸಂಭ್ರಮಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದರು. ಒಬ್ಬ ಗುರು ಸ್ವಪ್ರಯತ್ನ […]

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್‌ರನ್ನು ಬೆಳ್ತಂಗಡಿಯ ಅವರ ಕಛೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ರಕ್ಷಿತ್ ಶಿವರಾಂ, ಶೀಘ್ರದಲ್ಲಿ ರಾಜ್ಯ ಸರಕಾರದ ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ […]

ಕೊಯ್ಯೂರು ಸೊಸೈಟಿಯ ಮಹಾಸಭೆ

ಬೆಳ್ತಂಗಡಿ: ವ್ಯಾವಹಾರಿಕವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 31ರಂದು ಕೊಯ್ಯೂರು ಶ್ರೀ ಪಂಚದುರ್ಗಾ ಸಭಾಭವನದಲ್ಲಿ ಸಂಘದ ಅಧ್ಯಕ್ಷ ನವೀನ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ಜರಗಿತು.ಮಹಾಸಭೆಯನ್ನು ಉದ್ಧೇಶಿಸಿ ಮಾತನಾಡಿ ಸಂಘದ ವಾರ್ಷಿಕ ವ್ಯವಹಾರದ ಬಗ್ಗೆ ಸವಿವರವಾದ ಮಾಹಿತಿ ನೀಡಿದ ಅಧ್ಯಕ್ಷ ನವೀನ್ ಕುಮಾರ್; ಸಂಘವು ವರದಿ ಸಾಲಿನಲ್ಲಿ 157 ಕೋಟಿ ರೂಪಾಯಿ ವ್ಯವಹಾರ ನಡೆಸಿ, 61.70ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದರಲ್ಲದೇ; ಸದಸ್ಯರಿಗೆ 10.25% […]

ಅಳದಂಗಡಿ ಶ್ರೀ ಮಹಾಗಣಪತಿ ದೇಗುಲದಲ್ಲಿ ಗಣೇಶ ಚತುರ್ಥಿ.

ಬೆಳ್ತಂಗಡಿ: ಮಹಾಗಣಪತಿಯ ದಿವ್ಯಸಾನಿಧ್ಯವುಳ್ಳ ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯು ಸಹಸ್ರಾರು ಆಸ್ತಿಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.ವೇದಮೂರ್ತಿ ವಿಜಯಕೃಷ್ಣ ಐತಾಳರ ನೇತೃತ್ವದಲ್ಲಿ 24 ತೆಂಗಿನಕಾಯಿ ಗಣಹವನ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಹಾಗೂ ಸಹ ಅರ್ಚಕ ಪ್ರವೀಣ ಮಯ್ಯ ಅವರ ಪೌರೋಹಿತ್ಯದಲ್ಲಿ ವಿವಿಧ ಸೇವೆಗಳು, ಮಹಾಮಂಗಳಾರತಿ ಇತ್ಯಾದಿಗಳು ನಡೆದವು. ಸ್ಥಳೀಯರಿಂದ ಭಜನಾ ಸತ್ಸಂಗ, ಗಣೇಶ ದೇವಾಡಿಗ ಅವರಿಂದ ವಾದ್ಯಸೇವೆ ನೆರವೇರಿತು.ಬೆಳ್ಳಂದೂರಿನ ರಾಣಿ ಶ್ರೀನಿವಾಸ ರೆಡ್ಡಿ ಅವರು ನಾಲ್ಕೂವರೆ ಅಡಿಯ ತೋಮಾಲೆ, ನಾಲ್ಕು ಅಡಿಯ ಸುಗಂಧ […]

ಯಕ್ಷಗಾನ ಸಂಸ್ಕೃತಿ ಯನ್ನು ಹುಟ್ಟುಹಾಕಿದ ಕಲೆ-ಶರತ್‌ಕೃಷ್ಣ ಪಡುವೆಟ್ಣಾಯ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ದೊಂಡೋಲೆ ಮನೆಯಲ್ಲಿ ಸೂರ್ಯನಾರಾಯಣ ರಾವ್ ಅವರು ಪ್ರಾರಂಭಿಸಿಕೊಂಡು ಬಂದ 74ನೇ ವರ್ಷದ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7ರಂದು ಬೆಳಿಗ್ಗೆ ಗಣಪತಿ ಹವನ, ಶ್ರೀ ಗಣಪತಿ ಮೂರ್ತಿ ಪ್ರತಿಷ್ಠೆ, ಮದ್ಯಾಹ್ನ ಮಹಾಪೂಜೆ, ರಾತ್ರಿ ಮನೆಯವರಿಂದ ಭಜನಾ ಕಾರ್ಯಕ್ರಮ, ಹವ್ಯಾಸಿ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ, ಕಲಾವಿದರ ಸಮ್ಮಾನ ಹಾಗೂ ಸೆಪ್ಟೆಂಬರ್ 8ರಂದು ಬೆಳಿಗ್ಗೆ ಗಣೇಶಮೂರ್ತಿ ವಿಸರ್ಜನಾ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಸಂಪನ್ನಗೊಂಡಿದೆ. ಸೆಪ್ಟೆಂಬರ್ 7ರ ಸಂಜೆ ಕಮಲಾ ಸೂರ್ಯನಾರಾಯಣ ರಾವ್ ಚಾರಿಟೇಬಲ್ ಟ್ರಸ್ಟ್‌ನ ಚತುರ್ಥ ವರ್ಷದ ಸಮ್ಮಾನ […]

ಗ್ರಾಮದ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ ಸಾಕಷ್ಟು. ನಿಡ್ಲೆ ಸೊಸೈಟಿಯ ಶತಮಾನೋತ್ಸವ ಸಮಾರಂಭದಲ್ಲಿ ಡಾ.ಎಂ.ಎನ್.ಆರ್.

ಬೆಳ್ತಂಗಡಿ: ಶತಮಾನಗಳ ಹಿಂದೆ ನಿಡ್ಲೆಯಂತಹ ತೀರಾ ಹಿಂದುಳಿದ ಗ್ರಾಮದಲ್ಲಿ ಸಹಕಾರ ಸಂಘ ಸ್ಥಾಪಿಸಿದ ಇಲ್ಲಿನ ಹಿರಿಯರ ದೂರದೃಷ್ಟಿಯ ಪರಿಣಾಮ ಇಂದು ಗ್ರಾಮದ ಅಭಿವೃದ್ಧಿಯಲ್ಲಿಯೂ ಇಲ್ಲಿನ ಸೊಸೈಟಿ ಮಹತ್ತರ ಕೊಡುಗೆ ನೀಡುವಂತಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಿನಾಸಿಗರ ಆರ್ಥಿಕ ಸದೃಢತೆಗಾಗಿ ತನ್ನದೇ ಆದ ಕೊಡುಗೆ ನೀಡಿದ ನಿಡ್ಲೆ ಸೊಸೈಟಿ ಜಿಲ್ಲೆಯ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಎಂದು ಗುರುತಿಸಲ್ಪಟ್ಟಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯಿಸಿದರು.ಅವರು […]

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಕಪುಚಿನ್‌ ಕೃಷಿಕ ಸೇವಾ ಕೇಂದ್ರದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯನ್ನು ಉಜಿರೆಯ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು. ಶಾಲಾ ಸಂಚಾಲಕರಾದ ವಂದನೀಯ ವಿನೋದ್‌ ಮಸ್ಕರೇನಸ್‌ ಕಾರ್ಯಕ್ರಮದ ಅಧ್ಯಕ್ಷತೆದ್ದರು. ಮುಖ್ಯ ಅತಿಥಿಗಳಾಗಿ ಬದ್ಯಾರು ಎಲ್‌.ಎಂ‌. ಪಿಂಟೊ ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ರೋಶನ್‌ ಕ್ರಾಸ್ತಾ, ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಲೇರಿಯನ್‌ ರೋಡ್ರಿಗಸ್‌, ಉಪಾಧ್ಯಕ್ಷ ಅನಿಲ್‌ ಪ್ರಕಾಶ್‌ ಡಿಸೋಜಾ, ವಿಮುಕ್ತ ಸ್ವ-ಸಹಾಯ ಸಂಘಗಳ ಟ್ರಸ್ಟ್‌ನ ಅಧ್ಯಕ್ಷೆ […]