ಜೀವನವನ್ನು ಭದ್ರವಾಗಿಸಲು ಆಸಕ್ತ ಕ್ಷೇತ್ರದ ಬದ್ಧತೆ ಸಾಕು’ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವದಲ್ಲಿ ರೊನಾಲ್ಡ್ ಡಿ’ಸೋಜಾ

‘ ಬೆಳ್ತಂಗಡಿ: ಜೀವನವನ್ನು ಭದ್ರವಾಗಿಸಿಕೊಳ್ಳಲು ದೊಡ್ಡ ದೊಡ್ಡ ಪದವಿಗಳು ಬೇಕಾಗಿಲ್ಲ; ಹಸಿವಿನ ಅರಿವು, ಆಸಕ್ತಿಯ ಕ್ಷೇತ್ರದಲ್ಲಿನ ಬದ್ಧತೆ ಮತ್ತು ಅಂತರಂಗದಲ್ಲಿರುವ ನಾಯಕತ್ವ ಗುಣವನ್ನು ಜಾಗೃತಗೊಳಿಸಿಕೊಳ್ಳುವ ಮನಸ್ಸು ಇದ್ದರೆ ಸಾಕು ಎಂಬುದಾಗಿ ಲೆಕ್ಸಾ ಲೈಟಿಂಗ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ರೊನಾಲ್ಡ್ ಡಿ’ಸೋಜಾ ಹೇಳಿದರು.ಅವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆ| ಡಾ| ಸ್ಟ್ಯಾನಿ ಗೋವಿಯಸ್ ಮಾತನಾಡಿ; ಸಾಂಸ್ಕೃತಿಕ […]
ಕನ್ಯಾಡಿ ಸೇವಾಭಾರತಿಯಿಂದ ಸಂಸದರ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಕನ್ಯಾಡಿಯ ಸೇವಾಭಾರತಿ ತಂಡ ಮೇ 12ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕರಾದ ಕೆ. ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಜಯರಾಜ್ ಸಾಲಿಯಾನ್ ಕಾನರ್ಪ, ಟ್ರಸ್ಟಿ ಪೃಥ್ವಿಶ್ ಹಾಗೂ ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ಸ್ವಯಂಸೇವಕರಾದ […]
ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮೇ 12ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಹಿತ ಪ್ರಮುಖರು ಸಚಿವರ ಜೊತೆಗಿದ್ದರು.ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು.ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಕೊಕ್ಕಡ ಮೂಲಕ […]
ರಕ್ಷಿತ್ ಶಿವರಾಂ ಮುತುವರ್ಜಿಗೆ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್‌ರಿಂದ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರ ಬಹುದಿನದ ಬೇಡಿಕೆಯಾಗಿದ್ದ ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು; ಇದಕ್ಕಾಗಿ ಖುದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಮಸ್ಯೆ ಕುರಿತು ಮನವರಿಕೆ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸದ್ರಿ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸುವ ಮೂಲಕ ಜನತೆಯ ಸಂಕಷ್ಟ ನೀಗಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಕಾರ್ಯ ಅಭಿನಂದನಾರ್ಹ. ಬೆಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ […]
ನೇಣು ಬಿಗಿದುಕೊಂಡು ಸಾವಿಗೆ ಶರಣು

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯ್ಲದಿಂದ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಪ್ರಗತಿನಗರ ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ (34) ಎಂಬಾತ ಎಪ್ರಿಲ್ 26ರಂದು ರಾತ್ರಿ ಮನೆಯಲ್ಲಿ ನೇಣುಬಿಗಿದಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಸಾವಿಗೆ ಶರಣಾಗಲು ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ ನಾಳೆ

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ನಾಳೆ ಬುಧವಾರ ಸಂಜೆ ಗಂಟೆ 6-40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ […]
ಉಜಿರೆ ದೇಗುಲದಲ್ಲಿ ದೃಢಕಲಶ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕಳೆದ ಮಾರ್ಚ್ 3ರಿಂದ 11ನೇ ತಾರೀಕಿನ ತನಕ ನಡೆದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ ಹಾಗೂ ನೂತನ ಬ್ರಹ್ಮರಥ-ಪುಷ್ಪರಥ ಸಮರ್ಪಣಾ ಸಮಾರಂಭದ ಬಳಿಕ ಮುಂದುವರಿದ ಧಾರ್ಮಿಕ ವಿಧಿಯಂತೆ ದೃಢ ಕಲಶಾಭಿಷೇಕ ಮಹೋತ್ಸವವು ಎಪ್ರಿಲ್ 24ರಂದು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ಮತ್ತು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ಣಾಯರ ನೇತೃತ್ವದಲ್ಲಿ ಜರಗಿತು.ಬೆಳಿಗ್ಗೆ ವಾಸ್ತು ಹೋಮ, ವಾಸ್ತು ಬಲಿ, ಗಣಹೋಮ, ಶ್ರೀ ಜನಾರ್ದನ ಸ್ವಾಮಿ, ಮಂಜುಳೇಶ, ಮಹಾಗಣಪತಿ ಹಾಗೂ ಅಮ್ಮನವರಿಗೆ […]
ರಿಕ್ಷಾ ಬಾಡಿಗೆ ದರ ಪರಿಷ್ಕರಣೆಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಮನವಿ ಸಲ್ಲಿಕೆಯಯ ನೇತೃತ್ವವನ್ನು ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು. ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ ವಹಿಸಿದ್ದರು.ಇತ್ತೀಚಿನ ಜಾಗತಿಕ ಪರಿಸ್ಥಿತಿ ಹಿನ್ನೆಲೆ ಇಂಧನದ ಬೆಲೆ ಏರಿಕೆ ಹಾಗೂ LPG/CNG ಗ್ಯಾಸ್ ಅಭಾವವು ರಿಕ್ಷಾ ಕಾರ್ಮಿಕರ ಜೀವನದ ಮೇಲೆ ತೀವ್ರ […]
ವಿವಾಹ ಸಂದರ್ಭದಲ್ಲಿ ನವಜೋಡಿಗಳಿಂದ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಹೇರ ನಿವಾಸಿ ಹಾಗೂ ಕನ್ಯಾಡಿ ಸೇವಾಭಾರತಿ ಸಂಸ್ಥೆಯ ಸಿಬ್ಬಂದಿಯಾದ ಕುಸುಮಾಧರ ಹಾಗೂ ಪೂರ್ಣಿಮಾರವರ ಶುಭವಿವಾಹವು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎಪ್ರಿಲ್ 20ರಂದು ನೆರವೇರಿತು. ಈ ಸಂದರ್ಭದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾoಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂಪಾಯಿ 15,000/- ಹಾಗೂ ಮೊಗ್ರು ಗ್ರಾಮ ಮುಗೇರಡ್ಕ ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಶ್ರೀ ರಾಮ ಶಿಶುಮಂದಿರದ ಮಕ್ಕಳ ಶಿಕ್ಷಣ ಮತ್ತು ಅನ್ನಯಜ್ಞ ಯೋಜನೆಗೆ ರೂಪಾಯಿ […]
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಭ್ರಮದ ವಿಷು ಜಾತ್ರೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಎಪ್ರಿಲ್ 14ರಿಂದ ಮೊದಲ್ಗೊಂಡು ಎಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವ ಸಂಭ್ರಮದಿಂದ ವಿದ್ಯುಕ್ತವಾಗಿ ನಡೆಯಿತು. ರಾತ್ರಿ ಒಳಾಂಗಣದಲ್ಲಿ ಶ್ರೀ ದೇವರ ಉತ್ಸವ ಮೂರ್ತಿಯ ಸುತ್ತುಬಲಿ ನಡೆದು ದೇವಸ್ಥಾನ ಹಾಗೂ ರಥಕ್ಕೆ ಪ್ರದಕ್ಷಿಣೆ ಬಂದು ರಥಾರೋಹಣ ನಡೆಯಿತು. ಕ್ಷೇತ್ರದ ಸಕಲ ಬಿರುದುಬಾವಲಿಗಳೊಂದಿಗೆ ಆನೆಗಳು, ಬಸವ, ಚೆಂಡೆ ಬಳಗ, ಸ್ಯಾಕ್ಸೋಫೋನ್ ವಾದ್ಯಮೇಳ ವಾದನ ಸಹಿತ ಸಹಸ್ರಾರು […]