ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ಎಂದೇ ಪರಿಚಿತರಾದ ವಿಶ್ವನಾಥ ಕೆ. ವಿಟ್ಲ ಅವರಿಗೆ ಈ ಬಾರಿಯ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ. ಮೂಲತಃ ವಿಟ್ಲದ ಕಲ್ಲಕಟ್ಟ ನಿವಾಸಿ, ಪ್ರಸ್ತುತ ಉಜಿರೆಯ ಪೆರ್ಲ ರಸ್ತೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ್ತವ್ಯವಿರುವ ಅವರು ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯನ್ನು ವಿವಿಧ ಚಿತ್ರಕಲಾಕೃತಿಗಳ ಮೂಲಕ ವರ್ಣರಂಜಿತವಾಗಿ ಅಲಂಕರಿಸಿ, ರಾಜ್ಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಗಣೇಶ, ಶಾರದೆ ಮತ್ತಿತರ ಚಿತ್ರ ಕಲಾಕೃತಿಗಳ ಮೂಲಕ […]
ಧರ್ಮ ಸಂಸ್ಥಾಪನೆಗೆ ಆದ್ಯಾತ್ಮ ಶಕ್ತಿ ಜಾಗೃತವಾಗಬೇಕು-ಸದ್ಗುರು ಶ್ರೀ ಗಳು

ಬೆಳ್ತಂಗಡಿ: ಸುಖ ಶಾಂತಿ ಪಡೆಯಲು ತ್ಯಾಗದಿಂದ ಕರ್ಮ ಮಾಡಬೇಕು. ದೇಶದಲ್ಲಿ ಧರ್ಮ ಸಂಸ್ಥಾಪನೆಗಾಗಿ ಅಧ್ಯಾತ್ಮ ಶಕ್ತಿ ಜಾಗೃತವಾಗಬೇಕು. ತ್ಯಾಗದಿಂದ ಕೆಲಸ ಮಾಡುವವನು ಅಮೃತತ್ವ ಪಡೆಯುತ್ತಾನೆ. ಭಗವದ್ಭಕ್ತಿ ಮತ್ತು ಕರ್ಮಯೋಗದಿಂದ ಜಗತ್ ಕಲ್ಯಾಣ. ಅದೇ ಸನ್ಯಾಸಿಗಳ ಕಾರ್ಯ. ಪ್ರತಿಯೊಬ್ಬರೂ ಅವರವರ ಧರ್ಮವನ್ನು ಸರಿಯಾಗಿ ಅರ್ಥಮಾಡಿಕೊಂಡು ಆಚರಿಸುವ ಜ್ಞಾನ ಸತ್ರ ಮಾಡಬೇಕು. ನಾವು ಯಾರನ್ನೂ ದೂರದೇ ನಮ್ಮ ದಾರಿಯನ್ನು ನಾವು ಸೃಷ್ಟಿಸಿಕೊಳ್ಳಬೇಕು. ಸೇವೆಯೇ ಭಗವಂತನ ಸನಿಹಕ್ಕೆ ಹೋಗುವ ಸುಲಭ ಮಾರ್ಗ. ಸನಾತನ ಸಂಸ್ಕೃತಿಯನ್ನು ಮುಂದಿನ ಪರಂಪರೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ […]
ಎಕ್ಸೆಲ್ ಕಾಲೇಜಿನಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಹೆಚ್.ಡಿ.ಎಫ್.ಸಿ. ಬ್ಯಾಂಕ್‌ನ ಮ್ಯೂಚುವಲ್ ಫಂಡ್ ಮತ್ತು ಎ.ಎಸ್.ಆರ್. ಫಿನ್‌ಟೆಕ್ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕ ವೃಂದಕ್ಕೆ ಹಾಗೂ ವಾಣಿಜ್ಯ ವಿಭಾಗದ ಮಕ್ಕಳಿಗಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಬಾಲಾಜಿ ರಾವ್ ಡಿ.ಜಿ.. ಮಾತನಾಡಿ; ಜನರು ಸಾಮಾನ್ಯವಾಗಿ ತಮ್ಮ ವ್ಯಾಪ್ತಿಗೆ ಬರುವ ಮತ್ತು ಹೆಸರುವಾಸಿಯಾಗಿರುವ ಬೆರಳೆಣಿಕೆಯ ಸಂಸ್ಥೆಗಳಲ್ಲಿ ತಮ್ಮ ಹೂಡಿಕೆ ಚಟುವಟಿಕೆಗಳನ್ನು ನಡೆಸುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ […]
‘ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ’

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವಿದೆ ಎಂದು ಮಂಗಳೂರಿನ ನೇಶನಲ್ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲ ಯು.ಎಚ್. ಖಾಲಿದ್ ಉಜಿರೆ ಹೇಳಿದರು.ಅವರು ಆಗಸ್ಟ್ 31ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಸಂಘದ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ರೂಪಾಯಿ 5,000/- ದಂತೆ ಒಟ್ಟು ರೂಪಾಯಿ 75,000/- ವಿದ್ಯಾರ್ಥಿವೇತನ […]
ಸಿರಿಯನ್ ಕ್ಯಾಥೋಲಿಕ್ ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ 14ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 31ರಂದು ಬೆಳ್ತಂಗಡಿ ಸಾಂತೋಮ್ ಟವರ್‌ನಲ್ಲಿರುವ ಸಂಘದ ಕಛೇರಿ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಅನಿಲ್ ಎ.ಜೆ.ಯವರ ಅಧ್ಯಕ್ಷತೆಯಲ್ಲಿ ಜರುಗಿತು. 2023-24 ನೇ ಸಾಲಿನಲ್ಲಿ ರೂಪಾಯಿ 106 ಕೋಟಿ ವ್ಯವಹಾರ ನಡೆಸಿ, ರೂಪಾಯಿ 43.41 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ 15% ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ. ತಿಳಿಸಿದರು.ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್.ವಿ. ಸ್ವಾಗತಿಸಿದರು. […]
ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

ಬೆಳ್ತಂಗಡಿ: ನಮ್ಮ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘವು 2019ರಲ್ಲಿ ಆರಂಭವಾದ ದಿನದಿಂದ ಸತತವಾಗಿ ಅಭಿವೃದ್ಧಿ ಪಥದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ 42 ಲಕ್ಷ ರೂಪಾಯಿ ನಿವ್ವಳ ಲಾಭಗಳಿಸಿದೆ. ಉಜಿರೆಯಲ್ಲಿ ಸಂಘವು ಹೊಂದಿರುವ 15 ಕೋಟಿ ರೂಪಾಯಿ ಮೌಲ್ಯದ ಆಸ್ತಿಯಲ್ಲಿ 10 ಕೋಟಿ ರೂಪಾಯಿ ಅಂದಾಜು ವೆಚ್ಚದ ಸುಸಜ್ಜಿತ ಸಭಾಭವನ ನಿರ್ಮಾಣ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸದಸ್ಯರಿಗೆ 10% ಡಿವೆಡೆಂಡ್ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಹೇಳಿದರು.ಅವರು ಉಜಿರೆ […]
ರಾಜ್ಯ ಸರಕಾರಿ ನೌಕರರ ಸೊಸೈಟಿಯ ಮಹಾಸಭೆ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 25ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ವಾರ್ಷಿಕ ವರದಿಗೆ ಸಭೆ ಸರ್ವಾನುಮತದಿಂದ ಅನುಮೋದನೆ ನೀಡಿತು. ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಒಮ್ಮತದ ನಿರ್ಣಯ ಅಂಗೀಕರಿಸಲಾಯಿತು.ಕಳೆದ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ವಿಶೇಷ ಪ್ರೋತ್ಸಾಹ ನಿಧಿಯೊಂದಿಗೆ ಅಭಿನಂದಿಸಲಾಯಿತು. […]
ಹೆಡ್ ಕಾನ್‌ಸ್ಟೇಬಲ್ ವಿಜಯ ಕುಮಾರ್‌ರಿಗೆ ರಾಷ್ಟ್ರಪತಿಗಳ ಚಿನ್ನದ ಪದಕ ಗೌರವ

ಬೆಳ್ತಂಗಡಿ: ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಬಿ. ವಿಜಯ ಕುಮಾರ್‌ರವರ ಪ್ರಾಮಾಣಿಕ ಅತ್ಯುನ್ನತ ಸೇವೆಯನ್ನು ಗುರುತಿಸಿ; ಅವರನ್ನು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಇವರ ಸಾಧನೆಗಾಗಿ ಇವರನ್ನು ಬೆಂಗಳೂರಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು ಸ್ಮರಣಿಕೆ ನೀಡಿ ಗೌರವಿಸಿದರು. ಬಿ. ವಿಜಯ ಕುಮಾರ್ 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಕಳೆದ 31ವರ್ಷಗಳಿಂದ ಪಣಂಬೂರು, […]
ನೆನಪಿನಂಗಳ’ ವಾರ್ಷಿಕ ಪುನರ್ಮಿಲನ 2024

‘ಬೆಳ್ತಂಗಡಿ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ಹೇಳಿದರು.ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಆಗಸ್ಟ್ 24ರಂದು ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್‌ಡಿಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಮಾತನಾಡುತ್ತಿದ್ದರು.ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, […]
ಉಜಿರೆ ರಬ್ಬರು ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಸಂಘವು ಕಳೆದ ಸಾಲಿನಲ್ಲಿ 25.82 ಲಕ್ಷ ರೂಪಾಯಿ ಲಾಭ ಗಳಿಸಿದ್ದು ಸದಸ್ಯರಿಗೆ 10% ಡಿವಿಡೆಂಡ್ ನೀಡಲಾಗುವುದು ಎಂದು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆ ತಿಳಿಸಿದರು. ಅವರು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಆಗಸ್ಟ್ 22ರಂದು ಜರಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸದಸ್ಯರಿಂದ ಸಂಗ್ರಹಿಸಿದ ರಬ್ಬರನ್ನು ದೇಶದಾದ್ಯಂತ ಮಾರಾಟ ಮಾಡಲಾಗಿದ್ದು, ಹೆಚ್ಚಾಗಿ ಉತ್ಪಾದಕರಿಗೆ ಮಾರಾಟ ಮಾಡುವತ್ತ ಗಮನ ಕೇಂದ್ರೀಕರಿಸಿ ಸದಸ್ಯರ ಉತ್ಪನ್ನಗಳಿಗೆ […]