ಉಜಿರೆ ರಬ್ಬರು ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಸಂಘವು ಕಳೆದ ಸಾಲಿನಲ್ಲಿ 25.82 ಲಕ್ಷ ರೂಪಾಯಿ ಲಾಭ ಗಳಿಸಿದ್ದು ಸದಸ್ಯರಿಗೆ 10% ಡಿವಿಡೆಂಡ್ ನೀಡಲಾಗುವುದು ಎಂದು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆ ತಿಳಿಸಿದರು. ಅವರು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಆಗಸ್ಟ್ 22ರಂದು ಜರಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸದಸ್ಯರಿಂದ ಸಂಗ್ರಹಿಸಿದ ರಬ್ಬರನ್ನು ದೇಶದಾದ್ಯಂತ ಮಾರಾಟ ಮಾಡಲಾಗಿದ್ದು, ಹೆಚ್ಚಾಗಿ ಉತ್ಪಾದಕರಿಗೆ ಮಾರಾಟ ಮಾಡುವತ್ತ ಗಮನ ಕೇಂದ್ರೀಕರಿಸಿ ಸದಸ್ಯರ ಉತ್ಪನ್ನಗಳಿಗೆ […]

ಸದ್ವಿಚಾರಗಳನ್ನು ನೆನಪಿಸಲು ಉತ್ಸವಗಳು. ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಪೂರಣ್ ವರ್ಮ

ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಕಲಿಯುಗದ ಕಾಮದೇನು ಹಾಗೂ ಕಲ್ಪವೃಕ್ಷ ಎಂದೇ ಭಕ್ತರು ನಂಬುತ್ತಾರೆ. ಭಕ್ತರ ಬೇಡಿಕೆ ಈಡೇರಿಸುವ ಶ್ರೀ ರಾಯರಲ್ಲಿ ಭಕ್ತರು ಉತ್ತಮ ಮನಸ್ಸಿನಿಂದ ಪ್ರಾರ್ಥಿಸಬೇಕು. ಸಂತರು ಹಾಗೂ ದಾರ್ಶನಿಕರು ಸಮಾಜಕ್ಕೆ ನೀಡಿದ ಸಂದೇಶವನ್ನು ಸದ್ವಿಚಾರಗಳನ್ನು ನೆನಪಿಸಲು ಇಂತಹ ಆರಾದನೆಗಳನ್ನು ಆಚರಿಸಲಾಗುತ್ತಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ ಹೇಳಿದರು. ಅವರು ಆಗಸ್ಟ್ 21ರಂದು ಲಾಯ್ಲ ಶ್ರೀ ಗುರುರಾಘವೇಂದ್ರ ಮಠದಲ್ಲಿ ನಡೆದ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದಲ್ಲಿ ಮುಖ್ಯ […]

ರಾಜ್ಯಪಾಲರ ನಡೆ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾರ್ಯಕರ್ತರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದು ತಾಲೂಕು ಕಛೇರಿಯಲ್ಲಿ ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು. ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. […]

ಎನ್‌ಸಿವಿಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಆದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸೂಚನೆಯಂತೆ, 2024-25ನೇ ಸಾಲಿಗೆ ಅನ್ವಯಿಸುವಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಶಾಶ್ವತವಾಗಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿಯನ್ನು ಪ್ರಾರಂಭಿಸಲಾಗುವುದು. ಈಗಿನ ಕಾಲದ ಬೇಡಿಕೆಗೆ ತಕ್ಕಂತೆ ಮಹಿಳೆಯರ, ಮಕ್ಕಳ ಹಾಗೂ ಪುರುಷರ ವಿವಿಧ ನೂತನ ವಸ್ತ್ರ ವಿನ್ಯಾಸ, ಎಂಬ್ರೋಯಿಡರಿ ಮುಂತಾದ ಆಧುನಿಕ ಶಿಕ್ಷಣ […]

ದ.ಕ. ಜಿಲ್ಲಾ ಅತಿಥಿ ಉಪನ್ಯಾಸಕಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಪುನರಾರಂಭಗೊಂಡಿದ್ದು; ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ […]

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಖಂಡನೆ

ಬೆಳ್ತಂಗಡಿ: ವಿದ್ಯಾರ್ಥಿಗಳು ತಾವು ಅಂಕ ಗಳಿಸಿದ್ದರಲ್ಲಿ ಯಾವುದಾದರೂ ಸಮಸ್ಯೆಯಿದ್ದರೆ ಅಥವಾ ತಾವು ಗಳಿಸಿದ ಅಂಕದ ಕುರಿತು ಸಮಾಧಾನ ಅವರಿಗಿಲ್ಲದ್ದಿದ್ದರೆ ಅದರ ಮೇಲೆ ಮರು ಮೌಲ್ಯ ಮಾಪನ ಮಾಡಿಸುವುದು ಎಲ್ಲಾ ವಿದ್ಯಾರ್ಥಿಗಳ ಒಂದು ಹಕ್ಕು ಹಾಗೂ ಸಾಮಾನ್ಯ ಪ್ರಕ್ರಿಯೆ. ಆದರೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಯಾವ ಪಾಪ ಮಾಡಿದ್ದಾರೋ ತಿಳಿಯದು ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈಗಾಗಲೇ ವಿದ್ಯಾರ್ಥಿಗಳಿಗೆ ಮರು ಮೌಲ್ಯ ಮಾಪನಕ್ಕೆ ಶುಲ್ಕ ಹೆಚ್ಚಳಗೊಳಿಸಿ ಹೊರೆ […]

ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬಗ್ಗೆ ನಾಗರಿಕರನ್ನು ಕತ್ತಲಲ್ಲಿರಿಸಿರುವ ಇಲಾಖೆಯ ಧೋರಣೆಯನ್ನು ಖಂಡಿಸಲು ಹಾಗೂ ಆಗುವ ರಸ್ತೆ ಕಾಮಗಾರಿಗೆ ಕಣ್ಗಾವಲಾಗಲು ಆಗಸ್ಟ್ 12ರಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂತು.ವೇದಿಕೆಯು ಒಂದೆಡೆ ಕಾಮಗಾರಿಯ ಗುತ್ತಿಗೆ ಹಾಗೂ ಒಡಂಬಡಿಕೆ ಮತ್ತು ಒಳ ಒಪ್ಪಂದಗಳ ಬಗ್ಗೆ ಕಾನೂನು ಹೋರಾಟ ನಡೆಸಲು ತಜ್ಞರ ಜೊತೆ ಚರ್ಚಿಸಲು ತೀರ್ಮಾನಿಸಿತು. ಇನ್ನೊಂದೆಡೆ ಹೆದ್ದಾರಿ ಕಾಮಗಾರಿಯ ಅವ್ಯವಹಾರಗಳ ಬಗ್ಗೆ ಜನಜಾಗೃತಿ […]

ನಾಳ ದೇಗುಲದಲ್ಲಿ ನಾಗರ ಪಂಚಮಿ

ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಗಸ್ಟ್ 9ರಂದು ನಾಗರ ಪಂಚಮಿಯನ್ನು ಸಡಗರದಿಂದ ಆಚರಿಸಲಾಯಿತು.ಮುಂಜಾನೆ ಕ್ಷೇತ್ರದ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆದ ಬಳಿಕ ಕ್ಷೇತ್ರದ ಒಳಗಿರುವ ನಾಗನ ಮೂಲ ಸನ್ನಧಿ( ಹುತ್ತಕ್ಕೆ) ಕ್ಷೀರಾಭಿಷೇಕ ನೆರವೇರಿಸಿ; ತಂಬಿಲಸೇವೆ, ಪೂಜೆ ನಡೆಸಲಾಯಿತು.ಕ್ಷೇತ್ರದ ನಾಗನಕಟ್ಟೆಯಲ್ಲಿ‌ ಕ್ಷೀರಾಭಿಷೇಕ, ತಂಬಿಲ ಸೇವೆ, ವಿಶೇಷ ಪೂಜೆ ನಡೆಯಿತು.ಕ್ಷೇತ್ರದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತುದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ, ಅಭಿವದ್ದಿ ಸಮಿತಿ ಅಧ್ಯಕ್ಷ ಯಾದವ ಗೌಡ, […]

ಸ್ವಾತಂತ್ರ್ಯೋತ್ಸವದ ಸಂದರ್ಭ ರಾಜ್ಯಾದ್ಯಂತ ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಮಾನಸಿಕ ನೆಮ್ಮದಿ, ಶಾಂತಿಗಾಗಿ ಜನರು ಶ್ರದ್ಧಾಕೇಂದ್ರಗಳಿಗೆ ಆಗಮಿಸುತ್ತಾರೆ. ಅಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳು ಒಂದು ಗ್ರಾಮದ ಅತೀ ಮುಖ್ಯ ಭಾಗವಾಗಿದ್ದು ಇವುಗಳು ಸ್ವಚ್ಛವಾಗಿರುವುದು ಅತೀ ಅಗತ್ಯವಾಗಿದೆ. ಈ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಚಿಂತನೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನತೆಯ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ […]

ವಾತ್ಸಲ್ಯ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರು ತಾಲೂಕಿನಲ್ಲಿ ಮಾಶಾಸನ ಪಡೆಯುತ್ತಿರುವ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 19 ವಾತ್ಸಲ್ಯ ಸದಸ್ಯರ 27 ಮಂದಿ ಮಕ್ಕಳಿಗೆ 22,000ರ ಮೌಲ್ಯದ ಶಾಲಾ ಪುಸ್ತಕ, ಬ್ಯಾಗ್, ಛತ್ರಿ, ಬಟ್ಟೆ ಹಾಗೂ ಶಾಲಾ ಶುಲ್ಕವನ್ನು ಒದಗಿಸಿದ್ದು ಇದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ರವರು ವಾಸ್ತಲ್ಯ ಸದಸ್ಯರ ಮನೆ […]