ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ಘಟಕದ ಸ್ವಯಂಸೇವಕ ನಾಯಕ ರಾಮಕೃಷ್ಣ ಶರ್ಮ ಎನ್. ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾಷ್ಟ್ರೀಯ ಸೇವಾ .ಯೋಜನೆ ಕೋಶದ ಸಹಯೋಗದೊಂದಿಗೆ ಆಗಸ್ಟ 6ರಿಂದ 12ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು 20 ಸ್ವಯಂಸೇವಕರು ಪ್ರತಿನಿಧಿಸಲಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ರಾಮಕೃಷ್ಣ […]
ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್: ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ದಡ್ಕ ಮಸೀದಿ ಸಮೀಪ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಕೆಟ್ಟು ನಿಂlತು ಸುಮಾರು 2 ಗಂಟ್ಟೆಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿ ಪ್ರಯಾಣಿಕರು ಪರದಾಡಿದ ಘಟನೆ ಅ 5ರಂದು ನಡೆದಿದೆ. ತಕ್ಷಣ ಸ್ಪಂದಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾದ ಕೆಎಸ್‌ಆರ್‌ಟಿಸಿ ನಿಗಮದ ಯಾವುದೇ ಅಧಿಕಾರಿಗಳು ಸರಿಯಾದ ಸ್ಪಂದನೆ ನೀಡದೇ ಪ್ರಯಾಣಿಕರು ಪರದಾಡಬೇಕಾಯಿತು. ಕೆಎಸ್‌ಆರ್‌ಟಿಸಿ ಅಧಿಕಾರಿಗಳ ನಿರ್ಲ್ಯಕ್ಷ್ಯದ ಬಗ್ಗೆ ಸಾರ್ವಜನಿಕರು ಅಕ್ರೊಶ ವ್ಯಕ್ತಪಡಿಸಿದ್ದಾರೆ. ಆದರೆ ತಕ್ಷಣ ಸ್ಥಳಕ್ಕಾಗಮಿಸಿದ ಬೆಳ್ತಂಗಡಿ […]
ಕುಂದುಕೊರತೆ ನಿವಾರಣಾ ಸಮಿತಿ ನೇಮಕಕ್ಕೆ ಅರ್ಜಿ ಆಹ್ವಾನ
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-2019 ರಂತೆ ಕುಂದುಕೊರತೆ ನಿವಾರಣಾ ಸಮಿತಿ ಸದಸ್ಯರಾಗಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮಿತಿಯನ್ನು ಸರಕಾರದ ಮಾರ್ಗಸೂಚಿಯಂತೆ ಈ ಕೆಳಗಿನಂತೆ ರಚಿಸಲಾಗುವುದು.ಸಮಿತಿಯ ಅಧ್ಯಕ್ಷರು 65ವರ್ಷ ವಯೋಮಾನದ ಒಳಗಿನ ನಿವೃತ್ತ ಸಿವಿಲ್ ನ್ಯಾಯಾಧೀಶರಾಗಿರಬೇಕು. ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು ಒಬ್ಬರು 65ವರ್ಷ ವಯೋಮಾನದ ಒಳಗಿನ ರಾಜ್ಯ ಸರಕಾರದ ನಿವೃತ್ತ ‘ಎ’ ದರ್ಜೆಯ ಅಧಿಕಾರಿಯಾಗಿರಬೇಕು. ಇತರ ಸ್ಥಾನಗಳಿಗೆ ಅರ್ಜಿ ಸಲ್ಲಿಸುವವರು ಸ್ಥಳೀಯ ಪ್ರದೇಶದ ಕಳಂಕ […]
‘ಶಾಸಕ ಹರೀಶ್ ಪೂಂಜರನ್ನು ಹುಡುಕಿಕೊಡಿ’

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ 15 ದಿನಗಳಿಂದ ಕಾಣೆಯಾಗಿದ್ದಾರೆ; ಅವರನ್ನು ಹುಡುಕಿ ಕೊಡಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಜುಲೈ 3ರಂದು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು; ಇಡೀ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದರೂ ಶಾಸಕರು ಮಾತ್ರ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರರು 30 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ […]
ಜಡಿಮಳೆಗೆ ಅಪಾರ ಹಾನಿ : ಕಂಗಾಲಾದ ಜನತೆ

ಬೆಳ್ತಂಗಡಿ: ಜುಲೈ 30ರಂದು ಇಡೀ ದಿನ ಸುರಿದ ಭಾರೀ ಮಳೆಯಿಂದ ಹೆದ್ದಾರಿ ಚರಂಡಿ, ತೋಡು, ಹೊಳೆ, ನದಿಗಳು ತುಂಬಿ ಹರಿದು ಹಲವೆಡೆ ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತ ವ್ಯಸ್ತವಾದ ಘಟನೆ ವರದಿಯಾಗಿದೆ. ಧರ್ಮಸ್ಥಳದ ನೇತ್ರಾವತಿ ನದಿ ಸ್ನಾನಘಟ್ಟ ಮುಳುಗಡೆಯಾಗಿ ಅಪಾಯಮಟ್ಟದಲ್ಲಿ ನೀರು ತುಂಬಿ ಹರಿಯುತ್ತಿದೆ. ಬೆಳ್ತಂಗಡಿ-ಸರಳೀಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ. ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು […]
ವೇಣೂರು ಗ್ರಾ.ಪಂ. ಕಛೇರಿ ಅಪಾಯದಲ್ಲಿ

ಬೆಳ್ತಂಗಡಿ: ವೇಣೂರು ಪೇಟೆಯ ಹೃದಯಭಾಗದಲ್ಲಿರುವ ವೇಣೂರು ಗ್ರಾಮ ಪಂಚಾಯತ್ ಕಛೇರಿ ಕಟ್ಟಡಗಳು ಅಪಾಯದ ಅಂಚಿನಲ್ಲಿದೆ. ಜುಲೈ 29 ಮತ್ತು 30ನೇ ತಾರೀಕಿನಂದು ಸುರಿದ ಭಾರೀ ಮಳೆಗೆ ಗ್ರಾಮ ಪಂಚಾಯತ್ ಕಛೇರಿಯ ಹಳೆಯ ಮತ್ತು ಹೊಸ ಕಟ್ಟಡದ ನೆಲದಡಿ ಕುಸಿಯಲಾರಂಭಿಸಿದ್ದು; ಗುಡ್ಡದ ಮಣ್ಣು ರಸ್ತೆಯನ್ನು ಆವರಿಸುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗ್ರಾಮ ಪಂಚಾಯತ್ ಕಛೇರಿ ಕಟ್ಟಡಗಳಿಗೆ ಅಪಾಯ ತಪ್ಪಿದ್ದಲ್ಲ ಎಂದು ಆತಂಕ ವ್ಯಕ್ತಪಡಿಸಿದ ಸ್ಥಳೀಯರು ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ತುರ್ತಾಗಿ ಇತ್ತ ಗಮನ ಹರಿಸಿ, […]
ಕುಂಭದ್ರೋಣ ಮಳೆಗೆ ಕುಂಭಕರ್ಣ ನಿದ್ರೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಎಂದಿನಂತೆ ಜುಲೈ 30ರ ಮುಂಜಾನೆಯೂ ಗಾಢ ನಿದ್ರೆಗೆ ಜಾರಿತ್ತು. ಕುಂಭದ್ರೋಣ ಮಳೆ ಸುರಿದರೂ ಈ ಕುಂಭಕರ್ಣರಿಗೆ ಎಚ್ಚರವಾಗಿರಲಿಲ್ಲ. ಕುಂಭದ್ರೋಣ ಮಳೆಗೆ ತಾಲೂಕು ಆಡಳಿತ ರಜೆ ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಾಕಷ್ಟು ಶಾಲಾ ಕಾಲೇಜು ವಿದ್ಯಾರ್ಥಿಗಳು ಅದಾಗಲೇ ಹ್ಯಾಪ್ ಮೋರೆ ಹಾಕಿಕೊಂಡು ಮನೆಯಿಂದ ಶಾಲೆಗೆ ಅರ್ಧ ದೂರ ಕ್ರಮಿಸಿ ಆಗಿತ್ತು. ಅಷ್ಟು ಹೊತ್ತಿಗೆ ಎಚ್ಚೆತ್ತ ತಾಲೂಕು ಆಡಳಿತ ತಡಬಡಾಯಿಸಿ, ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ, ಈ ಮಾಹಿತಿಯನ್ನು ಎಲ್ಲ ಮಾಧ್ಯಮಕ್ಕೆ ತಿಳಿಸುವ […]
ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮ

ಬೆಳ್ತಂಗಡಿ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಸೈನ್ಯಾಧಿಕಾರಿ ತೇಜ ಕುಮಾರ ಕೊಂಡಾಲ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ; ಕಾರ್ಗಿಲ್ ಕದನದ ಸಂದರ್ಭದಲ್ಲಿನ ಸನ್ನಿವೇಶಗಳನ್ನು ನೆನೆಯುತ್ತಾ, ದೇಶಕ್ಕಾಗಿ ಮಡಿದ ವೀರ ಯೋಧರು ತಮ್ಮ ಜೀವನವನ್ನು ತ್ಯಾಗ ಮಾಡಿ ನಮ್ಮ ನಾಳೆಯ ನೆಮ್ಮದಿಗಾಗಿ ಕಾರಣಕರ್ತರಾಗಿದ್ದಾರೆ. ಒಂದೆಡೆ ವಿಜಯೋತ್ಸವ ಆಚರಿಸುವೆವಾದರೆ ಮತ್ತೊಂದೆಡೆ ಮರಣವನ್ನಪ್ಪಿದ ವೀರ ಯೋಧರ ಮನೆಯಲ್ಲಿ ಸೂತಕದ ಛಾಯೆ. ನಮ್ಮ ಸಂಭ್ರಮದ ನಡುವೆಯೂ ಸೈನಿಕರ ತ್ಯಾಗ ಬಲಿದಾನದ ಗಾಥೆಯನ್ನು ಮಕ್ಕಳಿಗೆ […]
ಪತ್ರಕರ್ತರ ಸಂಘದಿಂದ ಶಾಲೆಗೆ ಗ್ರೀನ್ ಬೋರ್ಡ್ ಹಸ್ತಾಂತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಜುಲೈ 29ರಂದು ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ; ಉತ್ತಮ ವಾತಾವರಣ ಇರುವ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಉತ್ಸಾಹ ಹೆಚ್ಚಿರುತ್ತದೆ. ಇಂದಿನ ದಿನಗಳಲ್ಲಿ ಅಂಕಗಳೇ ಮಾನದಂಡವಲ್ಲ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ತಕ್ಕ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿದೆ ಎಂದರು. ಶಾಲೆಯ […]
ಜೇಸಿ ಸಂತೋಷ್ ಕೋಟ್ಯಾನ್‌ರಿಗೆ ‘ಸಾಧನಾಶ್ರೀ’ ಪುರಸ್ಕಾರ

ಬೆಳ್ತಂಗಡಿ: ಮಂಗಳೂರಿನಲ್ಲಿ ಜುಲೈ 28ರಂದು ನಡೆದ ಜೆಸಿಐ ಅಭಿವೃದ್ಧಿ, ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ-2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್‌ರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.2011ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡು ಕೋಶಾಧಿಕಾರಿಯಾಗಿ,ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೇಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ; 2017 ರಲ್ಲಿ ಘಟಕಾಧ್ಯಕ್ಷರಾಗಿ […]