ಆತ್ಮೀಯ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆರ್. ಪ್ರಸನ್ನರನ್ನು ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭವು ಮೇ 31ರಂದು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಪಂಚಾಯತ್‌ರಾಜ್ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್‌ಗಳಾದ ಸುಜಿತ್ ಹಾಗೂ ಹರ್ಷಿತ್, ಇಂಜಿನಿಯರ್ […]

ನವೀಕೃತ ಶಾಲೆ ಹಸ್ತಾಂತರ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ನವೀಕರಣಗೊಂಡ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮೇ 31ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ ಮಾತನಾಡಿ; ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ […]

ಹೃದಯಸ್ಪರ್ಶಿ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವಯೋ ನಿವೃತ್ತರಾದ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕರ ಬೀಳ್ಕೊಡುಗೆ ಸಮಾರಂಭವು ಮೇ 31ರ ಅಪರಾಹ್ನ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣರ ಅಧ್ಯಕ್ಷತೆಯಲ್ಲಿ ಜರಗಿತು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿವರ್ಗದವರು ಹಾಗೂ ತಾಲೂಕು ಪಂಚಾಯತ್‌ನ ಸಿಬ್ಬಂದಿಗಳು ಈ ಸರಳ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ […]

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಉದ್ಘಾಟನೆ

ಬೆಳ್ತಂಗಡಿ: ಮಹಿಳೆಯರು ಬುದ್ಧಿವಂತರಾಗಿದ್ದು ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೇ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಮೇ 30ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ. […]

ವರದಿಯ ಫಲಶ್ರುತಿ – ಅನಧಿಕೃತ ಫ್ಲಕ್ಸ್ ತೆರವುಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪರವಾನಿಗೆ ಇಲ್ಲದೇ ಕಾನೂನುಬಾಹಿರವಾಗಿ ವಿದ್ಯುತ್ ಕಂಬಗಳನ್ನು ಬಳಸಿ ಅಪಾಯಕಾರಿಯಾಗಿ ಸಾಕಷ್ಟು ಫ್ಲೆಕ್ಸ್‌ಗಳನ್ನು ಅಳವಡಿಸಿರುವ ಬಗ್ಗೆ ಜೈಕನ್ನಡಮ್ಮ ನಿನ್ನೆಯಷ್ಟೇ (ಮೇ30) ವರದಿ ಮಾಡಿತ್ತು. ಸಾಮಾಜಿಕ ಕಾಳಜಿಯ ಈ ಜನಪರ ವರದಿಯಿಂದ ಎಚ್ಚೆತ್ತ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ, ಮುಖ್ಯಾಧಿಕಾರಿ ಮತ್ತು ಸಿಬ್ಬಂದಿವರ್ಗದವರು ಇಂದು (ಮೇ 31)ರಂದು ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿ, ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಎಲ್ಲ ಅನಧಿಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ, ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಮ್ಮ ವರದಿಯಿಂದ […]

ಡಾ| ಎಲ್.ಎಚ್ ಮಂಜುನಾಥರಿಗೆ ಸಮ್ಮಾನ.

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವೃತ್ತಿಯಿಂದ ವಯೋ ನಿವೃತ್ತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ‌ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥರವರನ್ನು ಅಭಿನಂದಿಸಿ, ಸಮ್ಮಾನಿಸಲಾಯಿತು. ಸಮ್ಮಾನವನ್ನು ನೆರವೇರಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ; ಡಾ| ಎಲ್.ಎಚ್. ಮಂಜುನಾಥರವರು […]

ಬಿಗ್ ಬ್ರೇಕಿಂಗ್ ನ್ಯೂಸ್! ಮಾನಸಿಕ ಅಸ್ವಸ್ಥತೆಯ ಮೇಲೆ ಗ್ಯಾಂಗ್ ರೇಪ್?

ಬೆಳ್ತಂಗಡಿ: ಹೆತ್ತಬ್ಬೆಯನ್ನು ಕಳೆದುಕೊಂಡು ತಬ್ಬಲಿಯಾದ ಮಾನಸಿಕ ಅಸ್ವಸ್ಥತೆಯ ಮೇಲೆ ಕಿರಾತಕರ ಗುಂಪೊಂದು ಗ್ಯಾಂಗ್ ರೇಪ್ ನಡೆಸಿದ ಹೃದಯವಿದ್ರಾವಕ ಘಟನೆಯೊಂದು ಗುರುವಾಯನಕೆರೆಯ ಪಿಲಿಚಂಡಿಕಲ್ಲು ಪರಿಸರದಿಂದ ವರದಿಯಾಗಿದೆ.ನಿರಂತರ ಅತ್ಯಾಚಾರಕ್ಕೊಳಗಾಗುತ್ತಿದ್ದ ಈ ಮಾನಸಿಕ ಅಸ್ವಸ್ಥೆ ಇದೀಗ ಆರು ತಿಂಗಳ ಗರ್ಭಿಣಿ ಎನ್ನಲಾಗುತ್ತಿದ್ದು; ಈಕೆಯ ಮಾನಸಿಕ ದೌರ್ಬಲ್ಯವನ್ನು ದುರ್ಬಳಕೆ ಮಾಡಿಕೊಂಡ ಮೂಡುಬಿದಿರೆ ಪರಿಸರದ ನಾಲ್ಕಾರು ಮಂದಿ ಕಿರಾತಕರು ಈಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದರು ಎನ್ನಲಾಗಿದೆ. ತಾಯಿಯನ್ನು ಕಳೆದುಕೊಂಡ ಈ ಮಾನಸಿಕ ಅಸ್ವಸ್ಥ ಯುವತಿ ತನ್ನ ಮಾನಸಿಕ ಅಸ್ವಸ್ಥ ಸಹೋದರನೊಂದಿಗೆ ಮನೆಯಲ್ಲಿ ವಾಸ್ತವ್ಯವಿದ್ದು; […]

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೇ 24ರಂದು 2023-24ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರಗಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಐಟಿ ಮತ್ತು ಹಾಸ್ಟೆಲ್ ವಿಭಾಗದ ಕಾರ್ಯ ನಿರ್ವಾಹಣಾ ಅಧಿಕಾರಿ ಪೂರಣ್ ವರ್ಮಾ ಮಾತನಾಡಿ; ಸಹೋದ್ಯೋಗಿಗಳು ಮತ್ತು ಸ್ನೇಹಿತರೊಂದಿಗೆ ಉತ್ತಮ ಸಂಪರ್ಕ -ಸಂವಹನ ಬೆಳೆಸಿಕೊಳ್ಳುವುದರಿಂದ ಸತತವಾಗಿ‌ ಬದಲಾಗುತ್ತಿರುವ ತಾಂತ್ರಿಕ ವಿಷಯವನ್ನು ಹಾಗೂ ಅವಕಾಶಗಳನ್ನು ತಿಳಿದುಕೊಳ್ಳಲು ನೆರವಾಗುತ್ತದೆ ಎಂದು ಹೇಳಿದರು.ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. […]

ಓಡೀಲು ದೇಗುಲದಲ್ಲಿ ದೃಢಕಲಶಾಭಿಷೇಕ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 30ರಂದು ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗವು ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ತಂತ್ರಿಗಳಾದ ಉದಯ ಪಾಂಗಾಣ್ಣಯರ ನೇತೃತ್ವದಲ್ಲಿ ವಿವಿಧ ವೈಧಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಮೇ 29ರಂದು ಸಂಜೆ ಗಂಟೆ 5 ರಿಂದ ರಾಕ್ಷೋಘ್ನ ಹೋಮ ಹಾಗೂ ವಾಸ್ತು ಹೋಮ ನಡೆಯಿತು. ಮೇ 30ರಂದು ಕಲಶಾಧಿವಾಸ, ಅಧಿವಾಸ ಹೋಮ, ಚಂಡಿಕಾಯಾಗ, ಮಹಾ ಪೂಜೆ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಪಧಾದಿಕಾರಿಗಳು; ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು […]

ವಿದ್ಯುತ್ ಕಂಬಕ್ಕೆ ಬಿಗಿಯಲಾದ ಅನಧಿಕೃತ ಫ್ಲೆಕ್ಸ್

ಬೆಳ್ತಂಗಡಿ: ಕೆಲ ದಿನಗಳ ಹಿಂದೆಯಷ್ಟೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಕಾರಣಕ್ಕಾಗಿ ಬೆಳ್ತಂಗಡಿ ಪೇಟೆಯ ಹೆದ್ದಾರಿ ಬದಿಯಲ್ಲಿ ಅಳವಡಿಸಲಾಗಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರರನ್ನು ಸ್ವಾಗತಿಸುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ ಗಂಡಸುತನ ಮೆರೆದಿದ್ದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಮತ್ತು ಅಧಿಕಾರಿಗಳು ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಹೆದ್ದಾರಿ ಬದಿಯಲ್ಲೇ ಇಂದು ಪರವಾನಿಗೆ ಪಡೆಯದೇ ಕಾನೂನುಬಾಹಿರವಾಗಿ ಅಳವಡಿಸಲಾದ ಹತ್ತಾರು ವ್ಯಾವಹಾರಿಕ ಪ್ರಚಾರದ ಫ್ಲೆಕ್ಸ್‌ಗಳನ್ನು ಕಂಡೂ ಕಾಣದಂತೆ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕ ಮನದಲ್ಲಿ ಸಾಕಷ್ಟು ಅನುಮಾನ […]