ಸರಕಾರಿ ಅಥವಾ ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ.

ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಗ್ರೇಟೆಡ್ ಪದವಿ ಪೂರ್ವ ಕಾಲೇಜಾಗಿ ಎಕ್ಸೆಲ್ ವಿದ್ಯಾಸಂಸ್ಥೆ ಹೊರಹೊಮ್ಮಿದೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ರಾರಾಜಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗಳ ಫಲಿತಾಂಶದೊಂದಿಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಪ್ರಸ್ತುತ 2024- 25ನೇ ಸಾಲಿನಲ್ಲಿ ಸಂಸ್ಥೆಯು ವಾಣಿಜ್ಯ ವಿಭಾಗದಲ್ಲಿ ಕಾರ್ಯಾರಂಭ ಮಾಡುತ್ತಿದೆ. ಇಂಟಗ್ರೇಟೆಡ್ ಕಲಿಕಾ ವ್ಯವಸ್ಥೆಯ ವಾಣಿಜ್ಯ ವಿಭಾಗವನ್ನು ಹೊಂದುತ್ತಿರುವ ರಾಜ್ಯದ ಪ್ರಥಮ ಕಾಲೇಜು ಎಂಬ ಹೆಗ್ಗಳಿಕೆಯನ್ನು ಪಡೆದುಕೊಳ್ಳುತ್ತಿದೆ. ಜಿಲ್ಲೆಯ ನಾನಾ ಭಾಗಗಳಲ್ಲಿ ಯಾವುದೇ ಸರಕಾರಿ […]
ಎಸ್‌ಎಸ್‌ಎಲ್‌ಸಿ ಸಾಧಕಿ ತನುಶ್ರೀಗೆ ಅಭಿನಂದನೆ

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ತನುಶ್ರೀ ಅವರನ್ನು ಶಾಸಕ ಹರೀಶ್ ಪೂಂಜ ವಿದ್ಯಾರ್ಥಿನಿಯ ಮನೆಗೆ ತೆರಳಿ ಅಭಿನಂದಿಸಿ ಸಮ್ಮಾನಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಮತ್ತು ಜಯಾನಂದ ಗೌಡ, ಕಲ್ಮಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮ, ಗ್ರಾಮದ ಪ್ರಮುಖರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಕೊರಗಪ್ಪ, […]
ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್‌ಗೆ ಅಭಿನಂದನೆ.

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಅವರನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ವಿದ್ಯಾರ್ಥಿಯ ನಿವಾಸಕ್ಕೆ ತೆರಳಿ ಅಭಿನಂದಿಸಿ, ಸಮ್ಮಾನಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಮತ್ತು ಜಯಾನಂದ ಗೌಡ ಹಾಗೂ […]
ನಂದಗೋಕುಲ ಗೋಶಾಲೆ ನಿರ್ವಹಣೆಗೆ ನೆರವು.

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕ ನಂದಗೋಕುಲ ಗೋಶಾಲೆಯ ದೀಪೋತ್ಸವ ಮತ್ತು ಗೋಶಾಲೆ ನಿರ್ವಹಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರೂಪಾಯಿ 5ಲಕ್ಷದ ಆರ್ಥಿಕ ನೆರವನ್ನು ನೀಡಿರುತ್ತಾರೆ. ಶ್ರೀ ಕ್ಷೇತ್ರದ ಪರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ರವರು ನಂದಗೋಕುಲ ಗೋಶಾಲೆ ನಿರ್ವಹಣೆಯ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪದಾಧಿಕಾರಿಗಳಿಗೆ ನೆರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ […]
ರಾಷ್ಟ್ರೀಯ ಪರೀಕ್ಷೆಯಲ್ಲಿ 191ನೇ ರಾಂಕ್

ಬೆಳ್ತಂಗಡಿ: ಭಾರತೀಯ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಮಟ್ಟದ (INICET) ಪ್ರವೇಶ ಪರೀಕ್ಷೆಯಲ್ಲಿ ಉಜಿರೆಯ ಡಾ| ಶಿವಾನಿ ಎಂ.ಡಿ. ಅವರು ರಾಷ್ಟ್ರೀಯ ಮಟ್ಟದಲ್ಲಿ 191ನೇ ರಾಂಕ್ ಪಡೆದಿರುತ್ತಾರೆ. ಅವರು ತನ್ನ ಎಂ.ಬಿ.ಬಿ.ಎಸ್. ಪದವಿಯನ್ನು ಮಂಗಳೂರಿನ ಕೆ.ಎಂ.ಸಿ. ಕಾಲೇಜಿನಲ್ಲಿ ಪೂರೈಸಿದ್ದರು. ಅವರು ಉಜಿರೆಯ ದಂತ ವೈದ್ಯರಾದ ಡಾ|ಎಂ.ಎಂ. ದಯಾಕರ್ ಮತ್ತು ಡಾ| ಅನಿತಾ ದಯಾಕರ್ ದಂಪತಿಗಳ ಪುತ್ರಿ. ಅವರು ಪ್ರಸ್ತುತ ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜೈನರ ನಿಯೋಗದಿಂದ ಸಿಎಂ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮೇ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿದ ಜೈನ ಧರ್ಮೀಯರ ನಿಯೋಗ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾಭಿರಾಜ್ ಜೈನ್, ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯ ಕುಮಾರ್ ಕಾರ್ಯತ್ತಡ್ಕ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮತ್ತಿತರರು ಹಾಜರಿದ್ದರು.
ಉಜಿರೆಯಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ಯಾವುದೇ ಪ್ರಚಾರದ ಬಯಕೆ ಇಲ್ಲದೆ ಮಾಡುವ ರಕ್ತದಾನವು ಇತರ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾಗಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಪೂರನ್‌ವರ್ಮ ಹೇಳಿದರು.ಅವರು ಮೇ 26ರಂದು ಉಜಿರೆಯ ಶಾರದಾ ಮಂಟಪದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಮಂಗಳೂರಿನ ಕೆ.ಎಂ.ಸಿ. ರಕ್ತ ಕೇಂದ್ರದ ಜಂಟಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ರಕ್ತದಾನ ಮಾಡಿದವರಿಗೆ ಆರೋಗ್ಯವರ್ಧನೆಯೊಂದಿಗೆ ಮಾನಸಿಕಶಾಂತಿ, ನೆಮ್ಮದಿ ಸಿಗುತ್ತದೆ. ಜೊತೆಗೆ ಧನಾತ್ಮಕ ಚಿಂತನೆಯೊಂದಿಗೆ ಧನ್ಯತಾ ಭಾವವೂ ಮೂಡಿ ಬರುತ್ತದೆ ಎಂದು […]
ಮುಖ್ಯಮಂತ್ರಿ ಸಿದ್ಧರಾಮಯ್ಯ ಧರ್ಮಸ್ಥಳ ಭೇಟಿ.

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಪಶುಸಂಗೋಪನಾ ಸಚಿವ ವೆಂಕಟೇಶ್ ಮೇ 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದಾಗ; ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಪ್ರವೇಶದ್ವಾರದಿಂದ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.ಡಿ. ಹರ್ಷೇಂದ್ರ ಕುಮಾರ್ ಸಚಿವರುಗಳನ್ನು ಸ್ವಾಗತಿಸಿದರು.ಬಳಿಕ ಮುಖ್ಯಮಂತ್ರಿ ಸಹಿತ ಗಣ್ಯರು ದೇವರದರ್ಶನ ಮಾಡಿ, ವಿಶೇಷಪೂಜೆ ಸಲ್ಲಿಸಿ, ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಉತ್ಸವ

ಬೆಳ್ತಂಗಡಿ: ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ (ಹತ್ತನಾವಧಿ) ಮೇ 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವರ್ಷದ ಉತ್ಸವ, ವಿಶೇಷ ಸೇವೆಗಳು ಸಮಾಪ್ತಿಗೊಳ್ಳುವ ಸಂಭ್ರಮದ ಪರ್ವ. ಮೇ 24 ರಂದು ಪತ್ತನಾಜೆ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಂಗ ಪೂಜೆ, ಬಲಿ ಉತ್ಸವ, ವಸಂತ ಮಂಟಪದಲ್ಲಿ ಕಟ್ಟೆಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜ ಮರ ಇಳಿಸುವ ಕಾರ್ಯಕ್ರಮದೊಂದಿಗೆ ವಿಶೇಷ ಉತ್ಸವ, ಸೇವೆಗಳು […]
ಉದ್ಯಮಶೀಲತೆ ಕಾರ್ಯಾಗಾರ

ಬೆಳ್ತಂಗಡಿ: ಸ್ಪಷ್ಟಗುರಿ ಮತ್ತು ಕೌಶಲ್ಯಯುತ ಹೆಜ್ಜೆಗಳ ಮೂಲಕ ಯಶಸ್ವಿ ಉದ್ಯಮಿಯಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಎನ್. ಜನಾರ್ಧನ ಹೇಳಿದರು.ಅವರು ಮೇ 22ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಎಂಟರ್‌ಪ್ರೈನರ್‌ಶಿಪ್ ಡೆವಲಪ್ಮೆಂಟ್ ಸೆಲ್ ಸಹಯೋಗದಲ್ಲಿ ಆಯೋಜಿದ್ದ ಉದ್ಯಮಶೀಲತೆಯ ಅಭಿವೃದ್ಧಿ ಕುರಿತಾದ ಎರಡು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಕೇವಲ ಶಿಕ್ಷಣ ಮಾತ್ರದಿಂದ ಬೆಳವಣಿಗೆಯ ಮಾನದಂಡವನ್ನು ನಿರ್ಧರಿಸಲಾಗುವುದಿಲ್ಲ. ನಿರಂತರವಾದ ಪ್ರಯತ್ನ […]