ರಸ್ತೆ ರಿಪೇರಿಗೆ ಕೊಡೆ ಹಿಡಿಯಬೇಕಾಗಿಲ್ಲ – ರಸ್ತೆ ಗುಂಡಿಯಲ್ಲಿ ದೀಪ ಬೆಳಗಿ ವಿನೂತನ‌ ಪ್ರತಿಭಟನೆ

ಬೆಳ್ತಂಗಡಿ: ಹೆದ್ದಾರಿಯ ರಸ್ತೆ ದುರಸ್ತಿಗೆ ಆಗ್ರಹಿಸಿ, ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಅಥವಾ ತೆಂಗಿನ ಗಿಡ ಹಾಗೂ ಅಡಿಕೆ ಗಿಡ ನೆಟ್ಟು ಪ್ರತಿಭಟಿಸುವುದನ್ನು ಕಂಡಿದ್ದೇವೆ.‌ ಹೊಂಡಗುಂಡಿಯ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸಿ ಅಥವಾ ಹೋಲ್ಡಿಂಗ್ಸ್ ಅಳವಡಿಸಿ ಪ್ರತಿಭಟಿಸಿ ಸರಕಾರದ ಕಣ್ಣು ತೆರೆಸುವ ಪ್ರತಿಭಟನೆಯನ್ನೂ ನೋಡಿದ್ದೇವೆ. ರಸ್ತೆ ದುರಸ್ಥಿಗೆ ಒತ್ತಾಯಿಸಿ, ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ ಹೋರಾಟಗಳನ್ನೂ ನೋಡಿದ್ದೇವೆ. ಆದರೆ ರಸ್ತೆ ಹೊಂಡಗುಂಡಿಗಳಲ್ಲಿ ದೀಪಗಳನ್ನು ಹಚ್ಚಿ ರಸ್ತೆ ದುರವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟಿಸಿದ ಉದಾಹರಣೆ […]

ಎನ್‌ಎಸ್‌ಟಿ ಸೋಮನಾಥ ನಾಯಕ್ ಮೇಲ್ಮನವಿ ವಜಾ-ಜೈಲು ಶಿಕ್ಷೆ ಖಾಯಂ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಹಾಗೂ ಶ್ರೀ ಕ್ಷೇತ್ರದ ಸಂಸ್ಥೆಗಳ ಬಗ್ಗೆ ನ್ಯಾಯಾಲಯದ ತಡೆಯಾಜ್ಞೆಯನ್ನೂ ಧಿಕ್ಕರಿಸಿ, ಗೌರವಕ್ಕೆ ಚ್ಯುತಿ ತರುವ ರೀತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನ್ಯಾಯಾಂಗ ನಿಂದನೆಗೈದ ಆರೋಪದಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ರಿಗೆ ಬೆಳ್ತಂಗಡಿಯ ಜೆಎಂಎಫ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದ ರಾಷ್ಟ್ರದ ಸರ್ವೋಚ್ಛ ನ್ಯಾಯಾಲಯ ಅಕ್ಟೋಬರ್ 19ರಂದು ನೀಡಿದ ಮಹತ್ವದ ತೀರ್ಪಿನಲ್ಲಿ ಸೋಮನಾಥ ನಾಯಕ್‌ರಿಗೆ ಜೈಲು ಶಿಕ್ಷೆ ಖಾಯಂಗೊಳಿಸಿ […]

ಲಯನ್ಸ್ ಪ್ರಾಂತ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ

ಬೆಳ್ತಂಗಡಿ: ನವೆಂಬರ್ 27ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆಯಲಿರುವ ಲಯನ್ಸ್ ಜಿಲ್ಲೆ 317ಡಿಯ ಪ್ರಾಂತ್ಯ 5ರ ‘ಪ್ರಾಪ್ತಿ’ ಪ್ರಾಂತೀಯ ಸಮ್ಮೇಳನ 2022ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಗೌರವ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಟೋಬರ್ 17ರಂದು ಅವರ ಅಧಿಕೃತ ನಿವಾಸ ಧರ್ಮಸ್ಥಳದ ಬೀಡಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ, ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗೆತ್ಯಾರು, ಕಾರ್ಯಾಧ್ಯಕ್ಷ ಹೇಮಂತ ರಾವ್ […]

ಆಳ್ವಾಸ್ ಜಾಂಬೂರಿ: ಪುರಸಭೆಯಲ್ಲಿ ಸ್ವಚ್ಛತಾ ಪೂರ್ವಭಾವಿ ಸಭೆ

ಮೂಡುಬಿದಿರೆ: ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯ ಆಳ್ವಾಸ್‌ನಲ್ಲಿ ನಡೆಯುವ ಅಂತರಾಷ್ಟ್ರೀಯ ಜಂಬೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಮೂಡುಬಿದಿರೆ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸನಿಹದ ಕೆಲವು ಪಂಚಾಯತ್ ಆಡಳಿತಕ್ಕೂ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ಸಭೆಯಲ್ಲಿ ಸ್ವಚ್ಛ ಭಾರತದ ಪರಿಕಲ್ಪನೆ ಯೊಂದಿಗೆ ಸ್ವಚ್ಛ ಸುಂದರ ಮೂಡುಬಿದಿರೆ ಕುರಿತು ಮಕ್ಕಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕುರಿತು ಚರ್ಚಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷೆ ಸುಜಾತ […]

ಎಕ್ಸೆಲ್ ನಲ್ಲಿ ಅಕ್ಟೋಬರ್ 29ರಂದು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ‘ ಶೋಧ ‘ ರಾಜ್ಯ ಮಟ್ಟದ ವಿಜ್ಞಾನ – ಕಲಾ ಸ್ಪರ್ಧೆಗಳು

**ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 29 ರಂದು ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಶೋಧ 2022 ಹೆಸರಿನಲ್ಲಿ ವಿಜ್ಞಾನ – ಕಲಾ ಸ್ಪರ್ಧೆಗಳು ನಡೆಯಲಿವೆ. ವಿಜ್ಞಾನ ಮಾದರಿ, ವಿಜ್ಞಾನ ರಸಪ್ರಶ್ನೆ, ಇಂಗ್ಲೀಷ್ ಭಾಷಣ,ಕನ್ನಡ ಭಾಷಣ, ಇಂಗ್ಲೀಷ್ ಪ್ರಬಂಧ, ಕನ್ನಡ ಪ್ರಬಂಧ , ಪೆನ್ಸಿಲ್ ಡ್ರಾಯಿಂಗ್, ವರ್ಣ ಚಿತ್ರ, ಛದ್ಮ ವೇಷ ಸ್ಪರ್ಧೆ, ರಂಗೋಲಿ,ಚದುರಂಗ ಸ್ಪರ್ಧೆಗಳು ನಡೆಯಲಿವೆ. ಪ್ರತಿ ಸ್ಪರ್ಧೆಗಳಲ್ಲೂ ಪ್ರಥಮ , ದ್ವಿತೀಯ, ತೃತೀಯ ಬಹುಮಾನ ವಿಜೇತರಿಗೆ ತಲಾ 3000,2000,1000 ಮೊತ್ತದೊಂದಿಗೆ ಪ್ರಮಾಣ ಪತ್ರ ಹಾಗೂ […]

ಉಜಿರೆ ಗ್ರಾಮಸಭೆ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ಗ್ರಾಮಸ್ಥರ ಆಗ್ರಹ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಅಕ್ಟೋಬರ್ 11ರಂದು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ| ಯತೀಶ್ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖಾ ಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರು ಮತ್ತು […]

ಅತಿಕ್ರಮಿತ ಡಿಸಿ ಮನ್ನಾ ಜಮೀನಿನಲ್ಲಿಯೇ ಪ್ರತಿಭಟನಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಪರಿಶಿಷ್ಠ ಜಾತಿ/ಪಂಗಡಕ್ಕೆ ಮೀಸಲಿಟ್ಟ ಡಿ.ಸಿ. ಮನ್ನಾ ಭೂಮಿಯನ್ನು ಸ್ಥಳೀಯ ಭೂಮಾಲೀಕರೊರ್ವರು ಅತಿಕ್ರಮಣ ಮಾಡಿಕೊಂಡಿದ್ದನ್ನು ವಿರೋಧಿಸಿ ಅದೇ ಜಮೀನಿನಲ್ಲಿ ಸಮಾಲೋಚನಾ ಸಭೆಯನ್ನು ಅಕ್ಟೋಬರ್ 11ರಂದು ನಡೆಸಲಾಯಿತು.ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಳೆಂಜ ಗ್ರಾಮ ಶಾಖೆಯ ನೇತೃತ್ವದಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ‘ನಮ್ಮ ಭೂಮಿ ನಮ್ಮ ಹಕ್ಕು’ ಹಕ್ಕೊತ್ತಾಯ ಸಭೆ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ದಸಂಸ (ಅಂಬೇಡ್ಕರ್ ವಾದ) ತಾಲೂಕು ಪ್ರಧಾನ ಸಂಚಾಲಕ ಕೆ. ನೇಮಿರಾಜ್ ಕಿಲ್ಲೂರು […]

ಬಿಜೆಪಿಯ ಗೂಂಡಾ ರಾಜಕೀಯಕ್ಕೆ ಅನಧಿಕೃತ ಟೋಲ್ ಹಣದ ದುರ್ಬಳಕೆ – ಅಭಯಚಂದ್ರ ಜೈನ್

ಮೂಡುಬಿದಿರೆ: ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯವರು ತಮ್ಮ ದುರಾಡಳಿತದ ವಿರುದ್ಧ ಹೋರಾಟ ನಡೆಸುವವರನ್ನು ಗೂಂಡಾಗಿರಿಯ ಮೂಲಕ ದಮನಿಸುವ ಕೆಲಸ ಮಾಡುತ್ತಿದ್ದಾರೆ. ಅನಧಿಕೃತ ಟೋಲ್ ಮತ್ತಿತರ ಅನಧಿಕೃತ ಮೂಲಗಳಿಂದ ಸಂಗ್ರಹಿಸಿರುವ ಹಣವನ್ನು ತಮ್ಮ ಕ್ರಿಮಿನಲ್ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂದು ಮಾಜಿ ಸಚಿವ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ. ಅಭಯಚಂದ್ರ ಜೈನ್ ಗಂಭೀರ ಆರೋಪ ಮಾಡಿದರು.ಅಕ್ಟೋಬರ್ 18ರಂದು ಹಮ್ಮಿಕೊಳ್ಳಲಾಗಿರುವ ಐತಿಹಾಸಿಕ ಸುರತ್ಕಲ್ ಟೋಲ್ ತೆರವು ಹೋರಾಟದ ಸಿದ್ಧತೆಗಾಗಿ ಮೂಡುಬಿದಿರೆಯ ಸಮಾಜಮಂದಿರದಲ್ಲಿ ಅಕ್ಟೋಬರ್ 10ರಂದು ಕರೆಯಲಾಗಿದ್ದ […]

ವಿಭಾಗಮಟ್ಟದ ವಾಲಿಬಾಲ್ ಪಂದ್ಯಾಟಸತತ 10ನೇ ಬಾರಿ ಗೆದ್ದು ಬೀಗಿದ ಬಂದಾರು ಶಾಲೆ

ಬೆಳ್ತಂಗಡಿ: ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ 14ರ ವಯೋಮಾನದ ಬಾಲಕಿಯರ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕು ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು ಗೆದ್ದು ಬೀಗಿರುವುದಲ್ಲದೇ; ಸತತ 10ನೇ ಬಾರಿ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಆಡಲು ಆಯ್ಕೆಯಾಗಿದ್ದಾರೆ. ಆ ಮೂಲಕ ಇಲ್ಲಿನ ಪ್ರತಿಭಾನ್ವಿತ ಆಟಗಾರರು ಶಾಲೆಗೆ, ಊರಿಗೆ ಮಾತ್ರವಲ್ಲ; ಬೆಳ್ತಂಗಡಿ ತಾಲೂಕಿಗೇ ಕೀರ್ತಿ ತಂದಿದ್ದಾರೆ.

ನೇತಾಜಿ ಬ್ರಿಗೇಡ್: 3ನೇ ವರ್ಷದ ವಾರ್ಷಿಕೋತ್ಸವ

ಮೂಡುಬಿದಿರೆ: ಮೂಡುಬಿದಿರೆ ಪೇಟೆಯ ಸ್ವಚ್ಛತೆಗಾಗಿ ಕಳೆದ ಮೂರು ವರ್ಷಗಳಿಂದ ನಿರಂತರ ಸೇವೆಗೈಯುತ್ತಾ ಬಂದಿರುವ ಮೂಡುಬಿದಿರೆಯ ರಾಹುಲ್ ಕುಲಾಲ್ ನೇತ್ರತ್ವದ ನೇತಾಜಿ ಬ್ರಿಗೇಡ್‌ (ರಿ.) ಸಂಸ್ಥೆ 3ನೇ ವಾರ್ಷಿಕೋತ್ಸವವನ್ನು ಅಕ್ಟೋಬರ್ 9ರಂದು ಅದ್ದೂರಿಯಾಗಿ ಆಚರಿಸಿತು.ಇಲ್ಲಿನ ಸಮಾಜಮಂದಿರ ಸಭಾಭವನದಲ್ಲಿ ನಡೆದ ಸಂಸ್ಥೆಯ 3ನೇ ವಾರ್ಷಿಕೋತ್ಸವ ಸಮಾರಂಭವನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಇಲ್ಲಿನ ನೇತಾಜಿ ಬ್ರಿಗೇಡ್‌ ಸಂಸ್ಥೆ […]