ಅ.9 ರಿಂದ 15 ಯೋಗಾಸನ-ಪ್ರಾಣಾಯಾಮ ಧ್ಯಾನ ಶಿಬಿರ
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಗಿನ್ನೆಸ್ ದಾಖಲೆ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಕ್ಟೋಬರ್ 9ರಿಂದ 15ರವರೆಗೆ ನಗರ ಮತ್ತು ಹಳ್ಳಿ ಹಳ್ಳಿಗಳಲ್ಲಿ 80ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಅನುಭವೀ ಯೋಗ ಶಿಕ್ಷಕರಿಂದ ಸಾರ್ವಜನಿಕರಿಗೆ ಯೋಗಾಸನ-ಪ್ರಾಣಾಯಾಮ ಮತ್ತು ಧ್ಯಾನ […]
ಯುವ ತೇಜಸ್ಸು ಟ್ರಸ್ಟ್‌ನಿಂದ ಮಾದರಿ ಕಾರ್ಯದೇಣಿಗೆಯಿಂದ ನಿರ್ಮಿಸಿದ ಕಿರುಸೇತುವೆ ಲೋಕಾರ್ಪಣೆ

ಬೆಳ್ತಂಗಡಿ: ಯುವ ತೇಜಸ್ಸು ಟ್ರಸ್ಟ್‌ನ ಯುವ ಸದಸ್ಯರು ಮಾಡುತ್ತಿರುವ ಸಮಾಜ ಸೇವಾ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ. ಯುವಕರ ತಂಡವನ್ನು ಕಟ್ಟುವಾಗ ಪ್ರತಿ ಸದಸ್ಯನೂ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಿದರೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ತಂಡಗಳು ರಚನೆಗೊಂಡರೆ ಗ್ರಾಮಗ್ರಾಮಗಳಲ್ಲಿ ಅಭಿವೃದ್ಧಿ ಕಾಣಬಹುದು. ಯುವಜನತೆ ದಾರಿತಪ್ಪುತ್ತಿರುವ ಇಂದಿನ ದಿನಗಳಲ್ಲಿ ತಂಡದ ಯುವಕರು ಇತರರಿಗೆ ಸ್ಪೂರ್ತಿ ಹಾಗೂ ಪ್ರೇರಣೆಯಾಗುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಸಾಮಾಜಿಕ ಕಾರ್ಯಕರ್ತ ರವಿ ಕಟಪಾಡಿ ಹೇಳಿದರು.ಅವರು ಅಕ್ಟೋಬರ್ 3ರಂದು ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕಲ್ಲಂಡ ಎಂಬಲ್ಲಿ ಯುವ […]
ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ

ಬೆಳ್ತಂಗಡಿ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಅಕ್ಟೋಬರ್ 1ರಂದು ‘ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ’ ದ ಪ್ರಯುಕ್ತ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತ ಪೂರಣ ಕೇಂದ್ರದ ಸಹಯೋಗದಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತ ದಾನ ಶಿಬಿರ ನಡೆಯಿತು.ಕಾಲೇಜು ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿಯವರು ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೆನ್ಲೋಕ್ ರಕ್ತಬ್ಯಾಂಕ್‌ನ ಅಧಿಕಾರಿಗಳಾದ ಅಶೋಕ್, […]
ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ನಟರಾಜ್ ಅಳದಂಗಡಿ ಅರಮನೆಗೆ ಭೇಟಿ

ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ರಾದ ಶ್ರೀ ಕೆ ಎಮ್ ನಟರಾಜ್ ಅಕ್ಟೋಬರ್ 3ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು ಈ ಸಂಧರ್ಭದಲ್ಲಿ ಅಳದಂಗಡಿ ಅರಮನೆಯ ಡಾ| ಪದ್ಮ ಪ್ರಸಾದ್ ಅಜಿಲ, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಬೆಳ್ತಂಗಡಿಯ ನ್ಯಾಯವಾದಿ ಅಜಿತ್ ನಾವರ, ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಶೇಖರ ಶೆಟ್ಟಿ ಮತ್ತಿತರರು ಹಾಜರಿದ್ದು; ಭಾರತ ಸರಕಾರದ ಅಡಿಷನಲ್ ಸಾಲಿಸಿಟ್ ಜನರಲ್ ಕೆ. ಎಮ್. ನಟರಾಜ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದರು
“ಯಕ್ಷಮಾರ್ಗಮುಕುರ” ಗ್ರಂಥ ಲೋಕಾರ್ಪಣೆ

ಬೆಳ್ತಂಗಡಿ: ಹಲವು ವರ್ಷಗಳ ನಿರಂತರ ಅಧ್ಯಯನ ಮತ್ತು ಸಂಶೋಧನೆಯೊಂದಿಗೆ ಖ್ಯಾತ ಕಲಾವಿದೆ ಹಾಗೂ ಲೇಖಕಿ ಡಾ. ಮನೋರಮಾ ಬಿ.ಎನ್. ಬರೆದ ‘ಯಕ್ಷಮಾರ್ಗಮುಕುರ’ವು ಯಕ್ಷಗಾನವನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡುವವರಿಗೆ ದಾರಿದೀಪ ಹಾಗೂ ಅಧಿಕೃತ ಆಕರ ಗ್ರಂಥವಾಗಿದೆ ಎಂದು ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್. ಹೇಳಿದರು. ಅವರು ಸೆಪ್ಟೆಂಬರ್ 30ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಮನೋರಮಾ ಬಿ.ಎನ್. ಬರೆದ ‘ಯಕ್ಷಮಾರ್ಗಮುಕುರ’ ಗ್ರಂಥವನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಈ ಗ್ರಂಥಕ್ಕೆ ಮುಕರ ಹಿಡಿದು […]
ಸಿರಿಯನ್ ಕ್ಯಾಥೊಲಿಕ್ ಸೊಸೈಟಿಯ ಕಾಯರ್ತಡ್ಕ ಶಾಖೆಯ ಉದ್ಘಾಟನೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೊಲಿಕ್ ವಿವಿದೋದ್ದೇಶ ಸಹಕಾರಿ ಸಂಘದ ಕಾಯರ್ತಡ್ಕ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 1ರಂದು ನಡೆಯಿತು.ಸೈಂಟ್ ಸೆಬಾಸ್ಟಿಯನ್ ಚರ್ಚ್ ಕಳೆಂಜದ ಧರ್ಮಗುರುಗಳಾದ ವಂದನೀಯ ಜೋಸೆಫ್ ವಾಳೂಕಾರನ್ ಅವರು ಆಶೀರ್ವಚನ ನೀಡಿ ಊರಿನ ಎಲ್ಲ ಜನರೂ ಸಹಕಾರದಿಂದ ವರ್ತಿಸಿದರೆ ಗ್ರಾಮ ಇನ್ನಷ್ಟು ಬೆಳವಣಿಗೆಯಾಗಲು ಸಾದ್ಯವಿದೆ.ಸಹಕಾರ ಸಂಘದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ಸಂಸ್ಥೆಯ ಬೆಳವಣಿಗೆಗೆ ಸಹಕರಿಸಬೇಕು. ಉಳಿತಾಯದ ಮನೋಭಾವನೆಯನ್ನು ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು. ನೂತನ ಶಾಖೆಯನ್ನು ಉದ್ಘಾಟಿಸಿದ ಕಳೆಂಜ ಗ್ರಾಮಪಂಚಾಯತು ಅಧ್ಯಕ್ಷ ಪ್ರಸನ್ನ ಎ.ಪಿ. ಅವರು ಮಾತನಾಡುತ್ತಾ, […]
ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಉತ್ತಮ ಜೀವನ ಶೈಲಿ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಕ್ತ ವೈದ್ಯರಿಂದ ತಪಾಸಣೆ ನಡೆಸಿದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ನಿವಾರಿಸಬಹುದು ಎಂದು ಮುಂಡಾಜೆ ಸಂತ ಮೇರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಸೆಬಾಸ್ಟಿಯನ್ ಪುನ್ನತ್ತಾನತ್ ನುಡಿದರು. ಅವರು ಸೆಪ್ಟೆಂಬರ್ 26ರಂದು ಡಿಕೆಆರ್‌ಡಿಎಸ್ ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಮುಂಡಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆ, ಸಂತ ಮೇರಿಸ್ ಚರ್ಚ್ ಮುಂಡಾಜೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ, […]
ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಸೆಪ್ಟೆಂಬರ್ 25ರಂದು ಮಂಗಳೂರು ದೇರಳೆಕಟ್ಟೆ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ಯೇನಪೋಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರದ ಮೆಡಿಕಲ್ ಆಫೀಸರ್ ಡಾ|ಹನಾ ಸಂಶುದ್ದೀನ್, ದಂತವೈದ್ಯೆ ಡಾ| ಪ್ರಕೃತಿ […]
ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಲಾಯ್ಲ ಪ್ರಸನ್ನ ಪದವಿಪೂರ್ವ ಕಾಲೇಜು ಹಾಗೂ 14 ಕಾಲೇಜುಗಳನ್ನು ಹೊಂದಿರುವ ಎ.ಎ. ಅಕಾಡೆಮಿಯ ಸಹಯೋಗದಲ್ಲಿ ಶಿಕ್ಷಕ-ರಕ್ಷಕ ಸಭೆ ಹಾಗೂ ವಿದ್ಯಾರ್ಥಿಗಳ ಫ್ರೆಶರ್ಸ್ ಡೇ ಕಾರ್ಯಕ್ರಮ ಆಗಸ್ಟ್ 28ರಂದು ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಪ್ರಸನ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ಗಂಗಾಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಆಧುನಿಕ ಸ್ಪರ್ಧಾತ್ಮಕ ಶಿಕ್ಷಣದ ಕುರಿತು ಹಾಗೂ ಶಿಕ್ಷಕ-ರಕ್ಷಕ ಸಭೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಆಡಳಿತಾಧಿಕಾರಿ ಕೃಪಾ […]
ಮೂಡುಬಿದಿರೆ ಪುರಸಭೆ ಸ್ವಚ್ಛತಾ ಕಾರ್ಮಿಕರ ಅಧ್ಯಯನ ಪ್ರವಾಸ

ಮೂಡುಬಿದಿರೆ: ಮೂಡುಬಿದಿರೆ ಪುರಸಭೆಯ ಸ್ವಚ್ಛತಾ ಕಾರ್ಮಿಕರು ಮತ್ತು ಚಾಲಕರು ಹಾಗೂ ಇದಕ್ಕೆ ಪೂರಕವಾಗಿ ಇರುವ ಇತರ ಕಾರ್ಮಿಕರ ಅಧ್ಯಯನಾ ಪ್ರವಾಸವನ್ನು ಕಾರ್ಮಿಕರ ದಿನಾಚರಣೆಯಾದ ಸೆಪ್ಟೆಂಬರ್ 23ರಂದು ಹಮ್ಮಿಕೊಳ್ಳಲಾಗಿತ್ತು.ಊರಿನ ಸ್ವಚ್ಛತೆಯ ಬಗ್ಗೆ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯತ್‌ನ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ತ್ಯಾಜ್ಯ ನಿರ್ವಹಣೆಯನ್ನು ವೀಕ್ಷಿಸಿದ ಪುರಸಭೆಯ ಪೌರ ಕಾರ್ಮಿಕರು ವಿಶೇಷ ಆಸಕ್ತಿ ವಹಿಸಿದರು. ಈ ಅಧ್ಯಯನ ತಂಡದ ಮಾರ್ಗದರ್ಶಕರಾಗಿ ಪುರಸಭಾಧ್ಯಕ್ಷ […]