ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಸೆಪ್ಟೆಂಬರ್ 21ರಂದು ನಡೆಯಿತು. ಸಮಾರಂಭದಲ್ಲಿ 2021-22ನೇ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಜಿರೆಯ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಶಾಖಾಧಿಕಾರಿ ವಸಂತ್ ಟಿ. ವೃತ್ತಿ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಮತ್ತೋರ್ವ ಅತಿಥಿ ಮಂಗಳೂರು ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಎ. […]

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಎರಡನೇ ಬಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ರಂಗದ ಅಗ್ರಮಾನ್ಯ ನಾಯಕರಾಗಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 19ರಂದು ನಡೆದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ . ಮಂಗಳೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರಿ ಸಂಘದ ಪ್ರತಿನಿಧಿಯಾಗಿ ಕರ್ನಾಟಕ ರಾಜ್ಯ ಸಹಕಾರ […]

ರಾಜ್ಯ ಸರಕಾರಿ ನೌಕರರ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ಧೇಶ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 18ರಂದು ರಾಜ್ಯ ಸರಕಾರಿ ನೌಕರರ ಸಂಘದ ‘ಏಕತಾ ಸೌಧ’ ಸಭಾಭವನದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.ಮಹಾಸಭೆಯನ್ನುದ್ಧೇಶಿಸಿ ಮಾತನಾಡಿದ ಅಧ್ಯಕ್ಷ ಜಯಕೀರ್ತಿ ಜೈನ್, ಸಂಘದ ಬೆಳವಣಿಗೆಗೆ ಸಹಕರಿಸಿದ ಸರ್ವರನ್ನು ಕೃತಜ್ಞತೆಯಿಂದ ಸ್ಮರಿಸಿದರಲ್ಲದೇ; ವರದಿ ವರ್ಷದಲ್ಲಿ ಸಂಘದ ಸದಸ್ಯರಿಗೆ 20% ಡಿವಿಡೆಂಡ್ ಘೋಷಿಸಿದರು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡಿದ ಸದಸ್ಯರನ್ನು ಅಭಿನಂದಿಸಲಾಯಿತು.ಮಹಾಸಭೆಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ […]

ಎಕ್ಸೆಲ್‌ನ ವಿದ್ಯಾರ್ಥಿ ಆಗ್ನೇಯ ಐ.ಐ.ಟಿ.ಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿ ಡಿ.ಎ. ಆಗ್ನೇಯ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಐ.ಐ.ಟಿಯಲ್ಲಿ ಉನ್ನತ ವ್ಯಾಸಂಗ ನಡೆಸಲು ಆಯ್ಕೆಯಾಗಿದ್ದಾರೆ. ದೇಶದ 9.5 ಲಕ್ಷ ವಿಜ್ಞಾನ ವಿದ್ಯಾರ್ಥಿಗಳು ಜೆ.ಇ.ಇ. ಪರೀಕ್ಷೆಗೆ ಹಾಜರಾಗಿದ್ದು, ಆಯ್ಕೆಯಾದವರು ಕೇವಲ 1.5 ಲಕ್ಷ ವಿದ್ಯಾರ್ಥಿಗಳು ಮಾತ್ರ. ಅತ್ಯುತ್ತಮ ತರಬೇತಿ ಪಡೆದ ವಿದ್ಯಾರ್ಥಿಗಳು ಮಾತ್ರ ಐ.ಐ.ಟಿ.ಯಲ್ಲಿ ಸ್ಥಾನ ಪಡೆಯಲು ಸಾಧ್ಯ. ಆಗ್ನೇಯ ಅವರು ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಭ್ಯಾಸ ನಡೆಸಿ, ದ್ವಿತೀಯ ಪಿಯುಸಿ ಯಲ್ಲಿ […]

ಮರಾಠಿ ಆರೋಗ್ಯ ನಿಧಿ ಹಸ್ತಾಂತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮರಾಟಿ ಸಮಾಜ ಸೇವಾ ಸಂಘದಿಂದ ಮರಾಟಿ ಆರೋಗ್ಯ ನಿಧಿ‌ ಹಸ್ತಾಂತರ ನಡೆಯಿತು. ಸಂಘದ ಸದಸ್ಯ ಕಣಿಯೂರು ಗ್ರಾಮದ ಪೈರೊಟ್ಟು ಸುಂದರ ನಾಯ್ಕ ಅವರ ಪತ್ನಿ ರೇವತಿ ಅವರ ಚಿಕಿತ್ಸೆಗೆ ದಾನಿಗಳಿಂದ ಸಂಗ್ರಹಿಸಿದ ಮರಾಟಿ ಆರೋಗ್ಯ ನಿಧಿ 34 ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು.ಸಂಘದ ಅಧ್ಯಕ್ಷ ಉಮೇಶ್ ಕೆ., ಗೌರವ ಸಲಹೆಗಾರರಾದ ಸಂತೋಷ್ ಕುಮಾರ್ ಲಾಯ್ಲ, ಉಪಾಧ್ಯಕ್ಷ ಸತೀಶ್ ಎಚ್.ಎಲ್., ಕಾರ್ಯದರ್ಶಿ ಪ್ರಸಾದ್, ಕೋಶಾಧಿಕಾರಿ ಪ್ರಜ್ವಲ್, ಪತ್ರಿಕಾ ಮಾಧ್ಯಮ ಜತೆ ಕಾರ್ಯದರ್ಶಿ ಶರತ್ ಕಣಿಯೂರು, ಕಣಿಯೂರು […]

ಬಿದ್ದು ಸಿಕ್ಕಿದ ಚಿನ್ನದ ಸರ ವಾರೀಸುದಾರಿಗೆ ಹಸ್ತಾಂತರ

ಬೆಳ್ತಂಗಡಿ; ವಕೀಲರೊಬ್ಬರು ತಿಂಗಳುಗಳ ಹಿಂದೆ ಕಳೆದುಕೊಂಡಿದ್ದ ಚಿನ್ನದ ಸರ ಬಿದ್ದು ಸಿಕ್ಕಿರುವುದನ್ನು ಅದರ ವಾರೀಸುದಾರರಿಗೆ ಮರಳಿಸುವ ಮೂಲಕ ಬೆಳ್ತಂಗಡಿಯ ಉದ್ಯಮಿ‌ ಹಾಗೂ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಬಶೀರ್ ವಗ್ಗ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ.ನ್ಯಾಯವಾದಿ ಶೈಲೇಶ್ ಠೋಸರ್ ಅವರು ತಿಂಗಳ ಹಿಂದೆ 1.5 ಲಕ್ಷ ರೂಪಾಯಿ ಮೌಲ್ಯದ ತನ್ನ ಚಿನ್ನದ ಸರ ಕಳೆದುಕೊಂಡಿದ್ದರು‌. ಹಲವೆಡೆ ಹುಡುಕಾಟ ನಡೆಸಿದ್ದರೂ ಸರ ಸಿಕ್ಕಿರಲಿಲ್ಲ. ಇದು ಇನ್ನು ಸಿಗುವುದು ಅನುಮಾನ ಎಂದುಕೊಂಡಿದ್ದರು. ಆದರೆ ಈ ಸರ ಮುಹಮ್ಮದ್ ಬಶೀರ್ ಅವರಿಗೆ ಸಿಕ್ಕಿತ್ತು.‌ ಈ […]

ತಣ್ಣೀರುಪಂತ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆಪ್ಟೆಂಬರ್ 10ರಂದು ಕಲ್ಲೇರಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ. ನಿರಂಜನ್‌ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, 20 21- 22 ನೇ ಸಾಲಿನಲ್ಲಿ ಸಂಘವು ರೂಪಾಯಿ 233ಕೋಟಿ ವ್ಯವಹಾರ ನಡೆಸಿ ರೂಪಾಯಿ 1.11ಕೋಟಿ ಲಾಭಗಳಿಸಿದೆ.ಸದಸ್ಯರಿಗೆ 12% ಡಿವಿಡೆಂಡ್ ನೀಡಲು ಆಡಳಿತ ಮಂಡಳಿಯಲ್ಲಿ ತೀರ್ಮಾನಿಸಲಾಗಿದೆ ಎಂದುಘೋಷಣೆ ಮಾಡಿದರು. ಬರುವ ಮಹಾಸಭೆಯ ಒಳಗೆ ಸಂಘದ ಶತಮಾನೋತ್ಸವ ಸವಿನೆನಪಿಗಾಗಿ ಸಂಘದ ಮುಖ ಕಚೇರಿ ಹಿಂಭಾಗದಲ್ಲಿ ರೂಪಾಯಿ 1.92ಕೋಟಿ […]

ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳನ್ನು ತಕ್ಷಣ ಮುಚ್ಚಲು ಆಗ್ರಹಿಸಿ ಶನಿವಾರ ಗುರುವಾಯನಕೆರೆಯಲ್ಲಿ ಪಕ್ಷಬೇಧ ಮರೆತು ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.ಬೆಳ್ತಂಗಡಿ ಉದ್ಯಮಿ ಯಶವಂತ ಆರ್. ಬಾಳಿಗ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಮನೋಹರ್ ಇಳಂತಿಲ, ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಅಸಾಧ್ಯವಾಗಿದ್ದರೂ ಇದೇ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ಶಾಸಕ ಹರೀಶ್ ಪೂಂಜಾ ಕಣ್ಣಿಲ್ಲದವರಂತೆ ವರ್ತಿಸುತ್ತಿದ್ದಾರೆ. ಸಂಸದರು ತಿಂಗಳಲ್ಲಿ ಎರಡು ಬಾರಿ ಬೆಳ್ತಂಗಡಿಗೆ ಬಂದರೂ ಆಕಾಶದಲ್ಲಿ ಬಂದವರಂತೆ ವರ್ತಿಸುತ್ತಿದ್ದಾರೆ […]

ಬಂಗಾಡಿ ಸೊಸೈಟಿ ಮಹಾಸಭೆ ಸದಸ್ಯರಿಗೆ 15% ಡಿವಿಡೆಂಡ್

ಬೆಳ್ತಂಗಡಿ: ಸಂಘವು 2021-22 ಸಾಲಿನಲ್ಲಿ ರೂ.3.29 ಕೋಟಿಗಿಂತ ಅಧಿಕ ಲಾಭಗಳಿಸಿದ್ದು ಸದಸ್ಯರಿಗೆ 15% ಡಿವಿಡೆಂಡ್ ನೀಡಲಾಗಿದೆ. ಆಡಳಿತ ಮಂಡಳಿ ಅಪೇಕ್ಷೆ ಮೇರೆಗೆ ಇದರಲ್ಲಿ 2% ಭಾಗವನ್ನು ಕಟ್ಟಡ ನಿಧಿಗೆ ವರ್ಗಾಯಿಸಲು ಮಹಾಸಭೆಯಲ್ಲಿ ಸದಸ್ಯರು ಒಪ್ಪಿಗೆ ನೀಡಿದ್ದು, ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಹೇಳಿದರು.ಅವರು ಕೊಲ್ಲಿ ಶ್ರೀ ದುರ್ಗಾದೇವಿ ಕಲಾಮಂದಿರದಲ್ಲಿ ಸೆಪ್ಟೆಂಬರ್ 3ರಂದು ಜರಗಿದ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಸದಸ್ಯರು ಹಾಗೂ ಗ್ರಾಹಕರಿಗೆ ಸೇವೆ ಸಲ್ಲಿಸುವುದು ಸಂಘದ ಮುಖ್ಯ […]