ಬೆಳ್ತಂಗಡಿ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಘದ ಅಧ್ಯಕ್ಷರಾದ ಲಕ್ಷೀನಾರಾಯಣ ಕೆ. ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ದಿವಾಕರ ಆಚಾರ್ಯ ಗೇರುಕಟ್ಟೆಯವರು ಮಾತನಾಡುತ್ತಾ, ಮುಖ್ಯ ಶಿಕ್ಷಕರು ಇಲಾಖೆ, ಸಮುದಾಯ ಮತ್ತು ಪೋಷಕರ ನಡುವಿನ ಸೇತುವಿನಂತೆ ಜವಾಬ್ದಾರಿ ನಿರ್ವಹಿಸುವವರು. ಸಮಾಜದ ಪರಿವರ್ತನೆಯಲ್ಲಿ ಇವರ ಪಾತ್ರ ಪ್ರಧಾನವಾಗಿದೆ. ಪ್ರಸ್ತುತ ಶಿಕ್ಷಕರ ಪ್ರತಿಭೆ ಮತ್ತು ಹವ್ಯಾಸಗಳು ಮಕ್ಕಳ ಪ್ರತಿಭಾ ವಿಕಸನಕ್ಕೆ […]

ರಬ್ಬರು ಸೊಸೈಟಿ ವತಿಯಿಂದ ಡಾ. ಹೆಗ್ಗಡೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಕೇಂದ್ರ ಸರಕಾರದಿಂದ ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಉಜಿರೆಯ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ. ಭಿಡೆ, ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನಿರ್ದೇಶಕರಾದ ಸೋಮನಾಥ ಬಂಗೇರ ವರ್ಪಾಳೆ, ರಾಮ ನಾಯ್ಕ, ಅಬ್ರಹಾಂ ಅರಸಿನಮಕ್ಕಿ, ಬಾಲಕೃಷ್ಣ ಗೌಡ ಕೇರಿಮಾರು, ಜಯಶ್ರೀ ಡಿ. ಎಂ. ಗೌಡ ಹಾಗೂ […]

ಶಟ್ಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 17ರಂದು ನಡೆದ ಪ್ರೌಢ ಶಾಲಾ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಾಲೂಕು ಮಟ್ಟದ ಉತ್ತಮ ಆಟಗಾರ ಪ್ರಶಸ್ತಿಯನ್ನು ಸದ್ರಿ ಶಾಲೆಯ ಸಂಗಮ್ ಪಡೆದುಕೊಂಡಿದ್ದಾರೆ.

ಅಸ್ರಣ್ಣ ಟ್ರಸ್ಟ್ ವತಿಯಿಂದ ಡಾ. ಹೆಗ್ಗಡೆಯವರಿಗೆ ಗೌರವಾರ್ಪಣೆ

                             ಬೆಳ್ತಂಗಡಿ: ಕೇಂದ್ರ ಸರಕಾರದಿಂದ ರಾಜ್ಯ ಸಭೆಗೆ ನಾಮನಿರ್ದೇಶನಗೊಂಡ  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಜುಲೈ 17ರಂದು ಕಟೀಲು ಶ್ರೀ ಗೋಪಾಲಕೃಷ್ಣ ಅಸ್ರಣ್ಣ ಟ್ರಸ್ಟ್ ವತಿಯಿಂದ  ಲಕ್ಸ್ಮಿ ನಾರಾಯಣ ಅಸ್ರಣ್ಣ ಅವರು ಕಟೀಲು ಶ್ರೀ ಭ್ರಮರಾಂಬೆಯ ಪ್ರಸಾದ ಸಹಿತ  ಶಾಲು ಹೊದಿಸಿ ಮಾಲಾರ್ಪಣೆಗೈದು, ಸ್ಮರಣಿಕೆ ನೀಡಿ ಗೌರವಾರ್ಪಣೆ ಸಲ್ಲಿಸಿದರು.          […]

‘ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಅಗತ್ಯ’

ಬೆಳ್ತಂಗಡಿ: ಶಿಕ್ಷಣ ಎಂಬ ದಾರಿದೀವಿಗೆ ಎಲ್ಲ ಮಕ್ಕಳಿಗೂ ದಕ್ಕಿದಾಗ ಸಮಾಜದಲ್ಲಿ ಉಳ್ಳವರು ಮತ್ತು ಇಲ್ಲದವರ ನಡುವಿನ ತಾರತಮ್ಯ ದೂರವಾಗಲು ಸಾಧ್ಯ. ಶೈಕ್ಷಣಿಕ ಕ್ರಾಂತಿ ಬಡತನ ಬೇಗೆಯಿಂದ ಹೊರಬರಲು ಮೂಲ ಕಾರಣ ಎಂಬುದನ್ನರಿತು ದಾನಿಗಳ ನೆರವಿನಿಂದ ಇಂದು ಹಮ್ಮಿಕೊಂಡ ಈ ಕಾರ್ಯಕ್ರಮ ಶಿಕ್ಷಣ ಮೌಲ್ಯದ ಗರಿಮೆ ಹೆಚ್ಚಿಸಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ವಿ. ಮನೋರಮಾ ಭಟ್ ಹೇಳಿದರು.ಬದುಕು ಕಟ್ಟೋಣ ಬನ್ನಿ ತಂಡ ಉಜಿರೆಯ ಆಶ್ರಯದಲ್ಲಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿಯ […]

ಕೆಸರುಡೊಂಜಿ ದಿನ ನೇಜಿ ನೆಡುವ ಸಂಭ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನೆಡುವ ಸಂಭ್ರಮ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು. ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಜಿರೆ ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಮಾತನಾಡುತ್ತಾ, ಪ್ರಕೃತಿಯ ವಿಸ್ಮಯ, ಅದರಿಂದಾಗುವ ಪ್ರಯೋಜನ, ಅದನ್ನು ಉಳಿಸುವ ಪ್ರಯತ್ನ ವಿದ್ಯಾರ್ಥಿಗಳು ಮಾಡಬೇಕಾಗಿದೆ ಎಂದು ನುಡಿದರು. ಕೃಷಿ ಹಾಗೂ ಅದರ ಮಹತ್ವ, ಗದ್ದೆ ಮಾಡುವ […]

ಛಾಯಾಗ್ರಾಹಕರ ಸಂಘದಿಂದ ಪೊಲೀಸ್ ಠಾಣಾ ಉಪನಿರೀಕ್ಷಕರಿಗೆ ಅಭಿನಂದನೆ

ಬೆಳ್ತಂಗಡಿ: 2021ನೇ ಸಾಲಿನ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದಿರುವ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕರಿಗೆ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವತಿಯಿಂದ ಜುಲೈ 15ರಂದು ಅಭಿನಂದನೆ ಸಲ್ಲಿಸಲಾಯಿತು.ಈ ಸಂಧರ್ಭದಲ್ಲಿ ಛಾಯಾಗ್ರಾಹಕರ ಸಂಘದ  ವಲಯ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಅಧ್ಯಕ್ಷ ಅಶೋಕ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ, ಜೊತೆ ಕಾರ್ಯದರ್ಶಿ ಸುಜೀತ್ ಕುಮಾರ್ ಕೊಯ್ಯೂರು, ಉಪಾಧ್ಯಕ್ಷರುಗಳಾದ ಸಿಲ್ವಿಯಾ ಬೆಳ್ತಂಗಡಿ ಮತ್ತು ಪ್ರವೀಣ್ ಕೆದ್ದು, ಸಂಘಟನಾ ಕಾರ್ಯದರ್ಶಿ ಗೋಪಾಲ ಉಜಿರೆ, ಗೌರವ […]

ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ ಸರಕಾರಿ ನೌಕರರ ಅಭಿನಂದನೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ರಾಜ್ಯ ಸರಕಾರಿ ನೌಕರರ ವಿವಿದೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರು ಮತ್ತು ಸರಕಾರಿ ನೌಕರರ ವಿವಿಧ ಸಂಘಗಳ ಪದಾಧಿಕಾರಿಗಳು ಜುಲೈ 11ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೆಗ್ಗಡೆಯವರ ಅಧಿಕೃತ ನಿವಾಸ ಬೀಡುವಿನಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು […]

ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಸಂವಾದ

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಜಕೀಯ ಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಜುಲೈ 12ರಂದು ಮಡಂತ್ಯಾರು ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್‌. ಎಂ. ವಹಿಸಿದ್ದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಮಾತನಾಡಿ, ಗ್ರಾಮ ಪಂಚಾಯಿತ್ ಎಂದರೇನು ಮತ್ತು ಸದಸ್ಯರ ಕಾರ್ಯ ಚಟುವಟಿಕೆಗಳು, ಗ್ರಾಮ ಪಂಚಾಯಿತ್ ಎದುರಿಸುತ್ತಿರುವ ಸವಾಲುಗಳು ಯಾವುದೆಲ್ಲ ಇವುಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ವಿದ್ಯಾರ್ಥಿಗಳು ಕೇಳಿದಂತಹ ಪ್ರಶ್ನೆಗಳಿಗೆ […]

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂಡಳಿ ಅದೂರ್ ಪೆರಲ್ ಕೊಯ್ಯೂರು ಇಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಮತ್ತು ಕೊಯ್ಯೂರು ಪ್ರೌಢಶಾಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೊಯ್ಯೂರು ಇಲ್ಲಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಶ್ರೀಕೃಷ್ಣ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ ಜರಗಿತು. ಸಮಾರಂಭದಲ್ಲಿ ಮುಖ್ಯ […]