ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟಕ್ಕೆ ಚಾಲನೆ.

ಬೆಳ್ತಂಗಡಿ: ಮನುಷ್ಯನಿಗೆ ಸಂಸ್ಕಾರ ದೊರೆಯಬೇಕಾದರೆ ಗುರು ಇರಬೇಕು. ಶುದ್ಧ ಮನಸ್ಸು ಹಾಗೂ ಭಕ್ತಿಯಿಂದ ದೇವರನ್ನು ಭಜಿಸುವ ಮೂಲಕ ದೇವರನ್ನು ಒಲಿಸಿಕೊಳ್ಳಬಹುದು. ಭಜನೆಯಿಂದ ಸಂಸ್ಕಾರಯುತ ನಾಗರಿಗ ಸಮಾಜ ನಿರ್ಮಾಣ ಸಾಧ್ಯ ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.ಅವರು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸೆಪ್ಟೆಂಬರ್ 14ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ಕಮ್ಮಟವನ್ನು ಸೆಪ್ಟೆಂಬರ್ 14ರಂದು ಉದ್ಘಾಟಸಿ ಮಾತನಾಡುತ್ತಿದ್ದರು.ಮಾನವನಿಗೆ ಉತ್ತಮ ಸಂಸ್ಕಾರ ನೀಡಿ ಭವಿಷ್ಯದ ನಾಗರಿಕನನ್ನಾಗಿಸಲು ಧರ್ಮಸ್ಥಳ ಧರ್ಮಾಧಿಕಾರಿಗಳ ಕೊಡುಗೆ […]
ಮುಂಡಾಜೆ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ರೂಪಾಯಿ 1,439 ಕೋಟಿ ವ್ಯವಹಾರ ನಡೆಸಿ, ರೂಪಾಯಿ 2.39 ಕೋಟಿ ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ 16% ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ತಿಳಿಸಿದರು.ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಸೆಪ್ಟೆಂಬರ್ 13ರಂದು ಜರಗಿದ ಸಂಘದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಸಂಘವು 6,071 ಮಂದಿ ಸದಸ್ಯರನ್ನು ಹೊಂದಿದ್ದು , 7.96 ಕೋಟಿ ರೂಪಾಯಿ […]
ಸಿರಿಯನ್ ಕ್ಯಾಥೋಲಿಕ್ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ಸಿರಿಯನ್ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ 16ನೇ ವಾರ್ಷಿಕ ಮಹಾಸಭೆ ಆಗಸ್ಟ್ 23ರಂದು ಲಾಯ್ಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಅನಿಲ್ ಎ.ಜೆ.ರವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25 ನೇ ಸಾಲಿನಲ್ಲಿ ರೂಪಾಯಿ 164 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂಪಾಯಿ 72.70ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ 16% ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ. ರವರು ತಿಳಿಸಿದರು.ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್.ವಿ. ರವರು ಸ್ವಾಗತಿಸಿದರು. […]
ವಿಜಯಾ ಕ್ರೆಡಿಟ್ ಕೋ . ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ‘ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,104 ಕೋಟಿ ರೂಪಾಯಿಗಳಿಗಿಂತ ಅಧಿಕ ವ್ಯವಹಾರ ನಡೆಸಿದ್ದು, 3 ಕೋಟಿ ರೂಪಾಯಿಗಳಿಗಿಂತ ಅಧಿಕ ಲಾಭವನ್ನು ಗಳಿಸಿದೆ. ಸದಸ್ಯರಿಗೆ 18% ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಹೇಳಿದರು. ಅವರು ಸಂಘದ ಗುರುವಾಯನಕೆರೆಯ ಕೇಂದ್ರ ಕಚೇರಿಯ ಸಮೀಪದ ಬಂಟರ ಭವನದಲ್ಲಿ ಸೆಪ್ಟೆಂಬರ್ 5ರಂದು ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು 33,245 ಸದಸ್ಯರನ್ನು ಹೊಂದಿರುವ ಸಂಘವು 4 ಕೋಟಿ […]
ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆಗಸ್ಟ್ 24ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಮಹಸಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿರಾಜ್ ಸಂಘದ ಗತವರ್ಷದ ವರದಿಯನ್ನು ಸಭೆಗೆ ಮಂಡಿಸಿ 2025-26 ನೇ ಸಾಲಿನ ಬಜೆಟ್ ಮಂಡಿಸಿದರು. ಕ್ಲಪ್ತ ಸಮಯದಲ್ಲಿ ದಂಡನೆ ಬಡ್ಡಿ ಇಲ್ಲದೆ ಸಾಲ ಮರುಪಾವತಿ ಮಾಡಿದ ಗ್ರಾಹಕರನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷ ನಡೆದ […]
ಶಿಸ್ತು ಹಾಗೂ ಬದ್ಧತೆ ಅಳವಡಿಸಿಕೊಳ್ಳದವ ಸಂಘದ ಸ್ವಯಂ ಸೇವಕನೇ ಅಲ್ಲ-ಹರೀಶ್ ಪೂಂಜ

Lಬೆಳ್ತಂಗಡಿ: ಸಂಘದ ಶಿಸ್ತು ಹಾಗೂ ಬದ್ಧತೆ ಅಳವಡಿಸಿಕೊಳ್ಳದ ಯಾವುದೇ ವ್ಯಕ್ತಿ ಸಂಘದ ಸ್ವಯಂಸೇವಕನೇ ಅಲ್ಲ. ಅಂತಹ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಮತ್ತು ಸಂಘದ ಪ್ರಮುಖರನ್ನು ಸಾರ್ವಜನಿಕವಾಗಿ ನಿಂದಿಸುತ್ತಿದ್ದಾರೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಟೀಕಿಸಿದರು.ಅವರು ಆಗಸ್ಟ್ 17ರಂದು ಗುರುವಾಯನಕೆರೆಯ ನವಶಕ್ತಿ ಸಭಾಂಗಣದಲ್ಲಿ ಕರೆಯಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ತೀರಾ ಅವಹೇಳನಕಾರಿಯಾಗಿ ಮಾತನಾಡಿದ ಹಿಂದು ಸಂಘಟನೆಯ ಮುಖವಾಡದ […]
ಸಮವಸ್ತ್ರ ಮತ್ತು ಪ್ರೋತ್ಸಾಹಧನ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನಂತರತ್ನ ಸಭಾಭವನದಲ್ಲಿ ನಡ ಗ್ರಾಮದ 8 ಅಂಗನವಾಡಿ ಕೇಂದ್ರಗಳ 136 ಹಾಗೂ ಸ್ಥಳೀಯ ಶಾಲೆಯ 71 ಒಟ್ಟು 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಮತ್ತು ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, 7 ಜನರಿಗೆ ವೈದ್ಯಕೀಯ ಸಹಾಯಧನ ಮತ್ತು 4 ವಿಶೇಷ ಚೇತನರಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಆಗಸ್ಟ್ 16ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಅನುವಂಶಿಕ […]
ಅಧ್ಯಾಪಕರು ತರಬೇತಿಗಳನ್ನು ಪಡೆದು ತಮ್ಮ ಜ್ಞಾನ ಭಂಡಾರವನ್ನು ವೃದ್ಧಿಸಬೇಕು’

‘ಬೆಳ್ತಂಗಡಿ: ನಾವು ಪ್ರತಿಯೊಬ್ಬರೂ ಕಲಿಕೆಯನ್ನು ನಮ್ಮ ಬದುಕಿನ ಗಳಿಕೆಯೆಂದು ಅರ್ಥೈಸಿಕೊಳ್ಳಬೇಕು. ಪ್ರತಿಯೊಬ್ಬ ಶಿಕ್ಷಕರು ಮುಂದುವರಿದ ತರಬೇತಿಯನ್ನು ಪಡೆದು ತಮ್ಮ ಜ್ಞಾನವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು. ಆಗ ಅದರ ಪ್ರಯೋಜನ ನಮ್ಮ ಮುಂದಿನ ಭವಿಷ್ಯದ ಪೀಳಿಗೆಗೆ ನೀಡಲು ಸಾಧ್ಯವಾಗುತ್ತದೆ. ಅಂತಹ ಕಾಯಕದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಿ. ಅದೇ ರೀತಿ ಮಡಂತ್ಯಾರು ಸ್ಥಳೀಯ ಸಂಸ್ಥೆಯು ತಮ್ಮ ಸ್ವಂತ ಜಾಗವನ್ನು ವ್ಯವಸ್ಥೆ ಮಾಡುವುದರೊಂದಿಗೆ ಕಟ್ಟಡವನ್ನು ಕೂಡ ಕಟ್ಟುವ ಬಗ್ಗೆ ಯೋಜನೆಗಳನ್ನು ಹಾಕಿಕೊಳ್ಳಬೇಕು. ಈ ಯೋಜನೆಗೆ ಸರ್ವರ ಸಹಕಾರವು ಖಂಡಿತ ದೊರೆಯಲಿದೆ. ಜಿಲ್ಲಾ ಸಂಸ್ಥೆಯು ಸದಾ […]
ಎಸ್‌ಐಟಿ ತನಿಖೆಯ ನೆಪದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ತಕ್ಷಣ ಕಡಿವಾಣ ಹಾಕಬೇಕು- ಬಿ.ವೈ. ವಿಜಯೇಂದ್ರ

ಬೆಳ್ತಂಗಡಿ: ಸುಮಾರು ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಯೂಟ್ಯೂಬ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಐಟಿ ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ತಡೆಯಲು ರಾಜ್ಯ ಸರಕಾರ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಂಡು ಇಂತಹ ಕುಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.ಅವರು ಜುಲೈ 17ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, […]
ಧರ್ಮಸ್ಥಳದ ಬಗ್ಯೆ ಅಪಪ್ರಚಾರ ತಡೆಗಾಗಿ ಭಕ್ತರಿಂದ ದೇವಸ್ಥಾನದಲ್ಲಿ ಉರುಳು ಸೇವೆ

: ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇತರ ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವದಂತಿ ಹಾಗೂ ಅಪಪ್ರಚಾರ ತಡೆಯಲು ಮತ್ತು ಎಲ್ಲಾ ಪ್ರಕರಣಗಳು ಶೀಘ್ರ ಇತ್ಯರ್ಥವಾಗಲಿ ಎಂದು ಪ್ರಾರ್ಥಿಸಿ ಬೆಂಗಳೂರಿನಿಂದ ಬಂದ ಸಾತ್ವಿಕರು; ಕನ್ನಡಿಗರ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಕನ್ನಡ ಪ್ರಕಾಶ್ ಅವರ ನೇತೃತ್ವದಲ್ಲಿ ಜುಲೈ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವಸ್ಥಾನದಲ್ಲಿ ಉರುಳು ಸೇವೆ ಸಲ್ಲಿಸಿ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಎಂಟು ಶತಮಾನಗಳ ಭವ್ಯ […]