ಕಲ್ಮಂಜ ರೋಟರಿ ಸಮುದಾಯದಳ ಪದಗ್ರಹಣ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗಸಂಸ್ಥೆಯಾದ ಕಲ್ಮಂಜ ರೋಟರಿ ಸಮುದಾಯ ದಳದ 2021-22 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಿದ್ದಬೈಲು ಪರಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕಲ್ಮಂಜ ರೋಟರಿ ಸಮುದಾಯ ದಳದ ನಿಕಟಪೂರ್ವ ಅಧ್ಯಕ್ಷೆ ಜಾನಕಿ ಗಣ್ಯರನ್ನು ಸ್ವಾಗತಿಸಿ, ಈ ಹಿಂದಿನ ಅವಧಿಯ ಕೆಲಸದ ಬಗ್ಗೆ ಮಾತನಾಡಿದರು. ನಿಕಟಪೂರ್ವ ಕಾರ್ಯದರ್ಶಿ ದಿನೇಶ್ ಗೌಡ ಮಾತನಾಡಿ, ಕೊರೋನಾದ ಸಂಕಷ್ಟದ ಸಂದರ್ಭದಲ್ಲೂ ಕೈಗೊಂಡ ಸನಾಜಮುಖಿ ಕಾರ್ಯಕ್ರಮಗಳ ಬಗ್ಗೆ ವರದಿ ಮಂಡಿಸಿದರು. ಬೆಳ್ತಂಗಡಿ ರೋಟರಿ […]

ಎಸ್‌ಎಸ್‌ಎಲ್‌ಸಿಯಲ್ಲಿ 621 ಅಂಕ ಪಡೆದ ಅನಘಗೆ ಡಿಸಿಯಿಂದ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮಾ ಶಾಲೆಯ ವಿದ್ಯಾರ್ಥಿನಿ ಅನಘ ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಲ್ಲಿ 621ಅಂಕಗಳನ್ನು ಪಡೆದಿದ್ದಾರೆ. ಆಗಸ್ಟ್ 10ರ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾl ರಾಜೇಂದ್ರ ಕೆ. ವಿ. ಅವರು ಅನಘನನ್ನು ಮಂಗಳೂರು ಕಚೇರಿಯಲ್ಲಿ ಅಭಿನಂದಿಸಿದರು.ಅನಘ ಅವರು ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಬೆಳ್ತಂಗಡಿ ಕಸಬಾ ಗ್ರಾಮದ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್‌ರಾಜ್ ಹಾಗೂ ಧರ್ಮಸ್ಥಳ ಶಾಂತಿವನದಲ್ಲಿ ಫಿಸಿಯೋತೆರೆಪಿಸ್ಟ್ ಆಗಿರುವ ಮಂಜುಳಾ […]

‘ಕಾರ್ಪೋರೇಟ್ ಕಂಪೆನಿಗಳೇ ಭಾರತ ಬಿಟ್ಟು ತೊಲಗಿ’ ಪ್ರತಿಭಟನೆ

ಬೆಳ್ತಂಗಡಿ: ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಲಾಮರಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಏಜೆಂಟ್ ಆಗಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ಮತ್ತೆ ಬಹುರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿ ಹಾಸುವ ಮೂಲಕ ಮತ್ತೆ ದೇಶವನ್ನು ಗುಲಾಮಗಿರಿಗೆ ತಳ್ಳುವ ಕ್ರಮ ಅತ್ಯಂತ ಅಪಾಯಕಾರಿಯಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಮಿತಿ ಸದಸ್ಯ ಶೇಖರ್ ಲಾಯಿಲ ಆರೋಪಿಸಿದರು.ಅವರು ಆಗಸ್ಟ್ 9ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ‘ಕಾರ್ಪೊರೇಟ್ […]

ನಲಿಕೆಯವರ ಸಮಾಜ ಸೇವಾ ಸಂಘದಿಂದ ಪೊಲೀಸ್ ವೃತ್ತನಿರೀಕ್ಷರ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಪದಾಧಿಕಾರಿಗಳನ್ನೊಳಗೊಂಡ ನಿಯೋಗವೊಂದು ಇತ್ತೀಚೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿಕೊಂಡ ನೂತನ ಪೊಲೀಸ್ ವೃತ್ತನಿರೀಕ್ಷಕಾರದ ಶಿವಕುಮಾರ್ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡು ಸಮುದಾಯದ ಪರವಾಗಿ ಪುಷ್ಪಗುಚ್ಛ ನೀಡಿ ಗೌರವಿಸಿ ಸೇವಾವಧಿಗೆ ಶುಭಹಾರೈಸಲಾಯಿತು.ಈ ಸಂದರ್ಭ ನಿಯೋಗದಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಂಘದ ಅಧ್ಯಕ್ಷ ಯಸ್. ಪ್ರಭಾಕರ ಶಾಂತಿಕೋಡಿ, ಉಪಾಧ್ಯಕ್ಷ ರಾಮು ಶಿಶಿಲ, ಮಾಜಿ ಕಾರ್ಯದರ್ಶಿ ಅನಂತ್ ಮುಂಡಾಜೆ, ಯುವ ವೇದಿಕೆ ಮಾಜಿ ಕಾರ್ಯದರ್ಶಿ ರಮೇಶ್ […]

ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ ಗುಂಪಿನ ಸದಸ್ಯರಿಗೆ ತರಬೇತಿ

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಮತ್ತು ಸ್ತ್ರೀಶಕ್ತಿ ಒಕ್ಕೂಟದ ಪದಾಧಿಕಾರಿಗಳು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಇದರೊಂದಿಗೆ ಸರಕಾರದ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಂಡು ಕಟ್ಟಕಡೆಯ ಕುಟುಂಬಗಳಿಗೂ ಸರಕಾರದ ಸೌಲಭ್ಯ ಸಿಗುವಂತೆ ಮಾಡುವ ಮೂಲಕ ಸಬಲೀಕರಣಕ್ಕೆ ನೆರವಾಗಬೇಕು ಎಂದು ತಾಲೂಕು ಸಮಾಜಕಲ್ಯಾಣಾಧಿಕಾರಿ ಹೇಮಚಂದ್ರ ಹೇಳಿದರು.ಅವರು ಆಗಸ್ಟ್ 4ರಂದು ಬೆಳ್ತಂಗಡಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ, ತಾಲೂಕು ಸ್ತ್ರೀಶಕ್ತಿ ಒಕ್ಕೂಟ (ರಿ.) ಬೆಳ್ತಂಗಡಿ […]

ಟೈಲರ್ಸ್ ಎಸೋಸಿಯೇಷನ್‌ನಿಂದ ‘ಆಟಿಡೊಂಜಿ ದಿನ’

ಬೆಳ್ತಂಗಡಿ: ಟೈಲರ್ಸ್ ಎಸೋಸಿಯೇಷನ್ ವಲಯ ಸಮಿತಿಗಳು ಜಿಲ್ಲಾ ಸಂಘದ ಆಧಾರ ಸ್ತಂಭಗಳು. ರಾಜ್ಯದಲ್ಲಿ 9500  ಸದಸ್ಯರಿದ್ದು, ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯುವಲ್ಲಿ ಹಿಂದುಳಿದಿದ್ದೇವೆ. ವಲಯ ಪದಾಧಿಕಾರಿಗಳು ಸದಸ್ಯರನ್ನು ಸಂಪರ್ಕಿಸಿ, ಸೌಲಭ್ಯಗಳ ಮಾಹಿತಿ ನೀಡಬೇಕು. ಪ್ರತಿಯೊಬ್ಬರೂ ಸಂಘಟನೆಯಲ್ಲಿ  ತಮ್ಮನ್ನು ಸಕ್ರಿಯವಾಗಿ  ತೊಡಗಿಸಿಕೊಂಡು ಸಂಘಟನೆ ಭದ್ರ ಪಡಿಸುವ ಹೊಣೆ ನಮ್ಮದು.  ಕಾರ್ಯಚಟುವಟಿಕೆಗಳಿಗೆ ಎಲ್ಲರ ಸಹಕಾರ ಮುಖ್ಯ ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್  ನುಡಿದರು.                        […]

ಡಾ. ಶಾಂತಾರಾಮ ಪ್ರಭುಗಳಿಗೆ ಕುರಿಯ ಪ್ರಶಸ್ತಿ

ಬೆಳ್ತಂಗಡಿ: ಎಡನೀರು ಶ್ರೀ ಕೇಶವಾನಂದ ಭಾರತೀ ಶ್ರೀಗಳವರ ಪ್ರಥಮ ಆರಾಧನಾಸ್ಮೃತಿ ಹಾಗೂ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪ್ರಥಮ ಚಾತುರ್ಮಾಸ್ಯ ಗೌರವಾರ್ಥ  ಉಜಿರೆಯ ಕುರಿಯ ವಿಠಲ ಶಾಸ್ತ್ರೀ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಸಮಾರೋಪ  ಸಮಾರಂಭದಲ್ಲಿ ಹಿರಿಯ ಕಲಾವಿದ, ವಿದ್ವಾಂಸ ಡಾ. ನಿಟ್ಟೂರು ಶಾಂತಾರಾಮ ಪ್ರಭು ಅವರಿಗೆ  ಶ್ರೀ ಸಚ್ಚಿದಾನಂದ ಭಾರತೀಶ್ರೀಗಳವರು ಕುರಿಯ ಪ್ರಶಸ್ತಿ ಪ್ರಧಾನ ಗೈದರು.        ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಶಾಂತಾರಾಮ ಪ್ರಭು, ಕುರಿಯ ವಿಠಲ ಶಾಸ್ತ್ರಿಗಳು ಧರ್ಮಸ್ಥಳ ಮೇಳದ ಸಂಚಾಲಕರಾಗಿ, […]

ಮೇಲಂತ ಬೆಟ್ಟು ಸರಕಾರಿ ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಕ್ಲಬ್ ಮಡಂತ್ಯಾರು, ರೋಟರಿ ಕ್ಲಬ್ ಮಂಗಳೂರು ಮಿಡ್‌ಟೌನ್, ರೋಟರಿ ಕ್ಲಬ್ ಮಂಗಳೂರು ಡೌನ್‌ಟೌನ್, ರೋಟರಿ ಕ್ಲಬ್ ಮಂಗಳೂರು ಸೀ ಸೈಡ್ ಹಾಗೂ ಪ್ರಖ್ಯಾತ ಕೋಗ್ನಿಸೆಂಟ್ ಕಂಪೆನಿ ಇವುಗಳ ಪ್ರಾಯೋಜಕತ್ವದಲ್ಲಿ ರೋಟರಿ ಜಿಲ್ಲೆ 3181ರ 2022-23 ನೇ ಸಾಲಿನ ನೀಯೋಜಿತ ಗವರ್ನರ್ ಎಚ್. ಆರ್. ಕೇಶವ್ ಅವರ ನೇತೃತ್ವದಲ್ಲಿ , ರೋಟರಿ ಸಹಕಾರಿತ ಯೋಜನೆಯಡಿಯಲ್ಲಿ ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟುಗೆ ರೂಪಾಯಿ 4,50,000ಮೌಲ್ಯದ 15 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ಕೊಡಲಾಯಿತು. […]

ಓಡೀಲು ದೇಗುಲದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಮಡಂತ್ಯಾರು ವಲಯ ಹಾಗೂ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಹಭಾಗಿತ್ವದಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತ ಮುತ್ತ ಆಗಸ್ಟ್ 3ರಂದು ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು‌. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಕುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷೆ ಸುಮಂಗಳ ಪ್ರಭು, ಮೇಲ್ವಿಚಾರಕ ಮಧು […]

ಭಜನಾ ತಂಡಗಳ ಅಧ್ಯಕ್ಷ-ಕಾರ್ಯದರ್ಶಿಗಳ ಸಭೆ

ಬೆಳ್ತಂಗಡಿ: ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಕಾರ್ಯ ಭಜನಾ ಮಂಡಳಿಗಳಿಂದಾಗಿದೆ. ಭಜನಾ ಮಂದಿರಗಳ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸರಕಾರಿ ದಾಖಲೆಗಳನ್ನು ಸರಿಪಡಿಸುವ ಜತೆಗೆ ಸಂಪೂರ್ಣ ಮೂಲ ಸೌಕರ್ಯ ಅಭಿವೃದ್ಧಿಗೆ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಬೆಳ್ತಂಗಡಿ ತಾಲೂಕಿನ ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಜತೆ ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ಆಗಸ್ಟ್ 1ರಂದು ನಡೆಸಲಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಮಂದಿರಗಳಿಗೆ […]