ಅಂಬ್ಯುಲೆನ್ಸ್ ನಲ್ಲಿ ಮಹಿಳೆ ಹೆರಿಗೆ

ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ 108 ಅಂಬುಲೆನ್ಸ್‌ನಲ್ಲೇ ಹೆರಿಗೆಯಾದ ಘಟನೆ ಜೂನ್ 25ರಂದು ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಮಜಲಡ್ಡ ನಿವಾಸಿ ಲಲಿತ (38) ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದವರು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಡಂತ್ಯಾರು ಸಮೀಪಿಸುತ್ತಿದ್ದಂತೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ಶುಶ್ರೂಷಕಿ ವಿಲ್ಮಾ ಹಾಗೂ ವಾಹನ ಚಾಲಕ ಗಿರೀಶ್‌ರವರ ಸಹಾಯದಿಂದ ಅಂಬುಲೆನ್ಸ್ ನ ಒಳಗೆ ಹೆರಿಗೆ ಮಾಡಿಸಿ ಸಾರ್ವಜನಿಕರ […]
ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷೀಲಿ ಎಂಬಂತೆ ಮತ್ತೆ ವಕ್ಕರಿಸಿದ ಕೊರೋನಾ ಸೋಂಕು

ಬೆಳ್ತಂಗಡಿ: ಇಡೀ ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಕಡಿಮೆಯಾಗಿದ್ದರೂ ಗ್ರಾಮೀಣ ಭಾಗಗಳಲ್ಲಿ ಇನ್ನೂ ಸೋಂಕಿನ ಪ್ರಮಾಣ ಹೆಚ್ಚಾಗುತ್ತಾ ಇದೆ. ಬೆಳ್ತಂಗಡಿ ತಾಲೂಕು ಜಿಲ್ಲೆಯಲ್ಲೇ ಕೊರೊನಾ ಸೋಂಕಿನ ಹಾಟ್ ಸ್ಪಾಟ್ ಆಗಿದೆ. ತಾಲೂಕಿನ ಕೆಲವೊಂದು ಗ್ರಾಮಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಲಾಯ್ಲ ಗ್ರಾಮದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದ ಕಾರಣ ಜಿಲ್ಲಾಡಳಿತ ಕಳೆದ ವಾರ ಇಡೀ ಗ್ರಾಮವನ್ನು ಸೀಲ್‌ಡೌನ್ ಮಾಡಿತ್ತು. ಇನ್ನೇನು ಲಾಯ್ಲ ಗ್ರಾಮದಲ್ಲಿ ಕೊರೋನಾ ಸೋಂಕು ಹತೋಟಿಗೆ ಬಂದು ಸೀಲ್‌ಡೌನ್ ತೆರವಾಯಿತು ಅನ್ನೋವಾಗಲೇ ಗ್ರಾಮದ ಕನ್ನಾಜೆ […]
ಕೋವಿಡ್‌ನಿಂದ ಮೃತರಾದ ಕುಟುಂಬಗಳ ಸಂದರ್ಶನ, ನೆರವು – ಉಲಮಾಗಳಿಗೂ ಸ್ಪಂದನೆ

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಫಝಲ್ ತಂಙಳ್ ಕೂರತ್‌ರವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಸಹಾಯಕ ಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಇವರು ಬೆಳ್ತಂಗಡಿ ತಾಲೂಕಿನಾದ್ಯಂತ ಕೋವಿಡ್‌ನಿಂದ ಮರಣಹೊಂದಿದವರ ಮನೆಗಳಿಗೆ ಸಂದರ್ಶನ ನೀಡಿ ಆಹಾರ ಕಿಟ್ ಹಾಗೂ ಕೆಲಸವಿಲ್ಲದೇ ಮನೆಯಲ್ಲಿರುವ ಉಲಮಾಗಳಿಗೆ ಆಹಾರ ಕಿಟ್ ಹಾಗೂ ಧನ ಸಹಾಯ ವಿತರಣೆ ನಡೆಸಿದರು.ಗುರುವಾಯನಕೆರೆ ಶೈಖ್ ಹಝ್ರತ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ವಠಾರದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ […]
ಬುಲ್ ಬುಲ್ ಗೋಲ್ಡನ್ ಆ್ಯರೋ ಪರೀಕ್ಷೆ-ಬೆಳ್ತಂಗಡಿ ಎಸ್‌ಡಿಎಂ ಶಾಲೆಗೆ ರಾಷ್ಟ್ರಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬುಲ್‌ಬುಲ್ ವಿದ್ಯಾರ್ಥಿನಿಯರಾದ ಪ್ರಾಪ್ತಿ ವಿ. ಶೆಟ್ಟಿ, ರಿತಿಕಾ ಶೆಣೈ, ಜಸ್ವಿತಾ ಪಿ. ಹಾಗೂ ಅದಿತಿ ಪಿ. ಪೂಜಾರಿ ಇವರು ಬುಲ್ ಬುಲ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ನವದೆಹಲಿ ಇವರು ಆಯೋಜಿಸಿದ ಗೋಲ್ಡನ್ ಆ್ಯರೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಷ್ಟ್ರೀಯ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ […]
413 ವಿದ್ಯಾರ್ಥಿಗಳಿಗೆ ಟ್ಯಾಬ್ ಪಿಸಿ ವಿತರಣೆ

ಬೆಳ್ತಂಗಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗೆ ಇನ್ನಷ್ಟು ಪರಿಹಾರ ನೀಡುವ ದೃಷ್ಟಿಯಿಂದ ರಾಜ್ಯ ಸರಕಾರವು ಗ್ರಾಮೀಣ ಭಾಗದಲ್ಲೂ ಸರಕಾರಿ ಶಾಲೆಗಳನ್ನು ತಾಂತ್ರಿಕ ಪ್ರಗತಿಯತ್ತ ಕೊಂಡುಯ್ಯುವ ಮಹತ್ತರ ಯೋಜನೆಯನ್ನು ರೂಪಿಸಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಡಿಜಿಟಲ್ ಕಲಿಕಾ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಮತ್ತು ಪೂಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಒಟ್ಟು 413 ವಿದ್ಯಾರ್ಥಿಗಳಿಗೆ ಜೂನ್ 23ರಂದು ಟ್ಯಾಬ್ ಪಿಸಿಗಳನ್ನು ಸಾಂಕೇತಿಕವಾಗಿ ವಿತರಿಸಿ ಮಾತನಾಡುತ್ತಿದ್ದರು. ಆರ್ಥಿಕ ಪ್ರಗತಿಗೆ ಕೋವಿಡ್ ಹೊಡೆತ ನೀಡಿರುವ ಮಧ್ಯೆ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು […]
ವಿಮುಕ್ತಿ ಸಂಸ್ಥೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಚಿಕಿತ್ಸಾ ಸಲಕರಣೆ ಕೊಡುಗೆ

ಬೆಳ್ತಂಗಡಿ: ಕಪುಚಿನ್ ಕೃಷಿಕ ಸೇವಾ ಕೇಂದ್ರ ಹಾಗೂ ವಿಮುಕ್ತಿ ಲಾಯ್ಲದ ವತಿಯಿಂದ ಬೆಳ್ತಂಗಡಿ ತಾಲೂಕಿನ 15ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳ ಉಪಯೋಗಕ್ಕಾಗಿ 75ಅಕ್ಸಿಮೀಟರ್, 1,500ಸರ್ಜಿಕಲ್ ಮಾಸ್ಕ್ ಹಾಗೂ 1,500ಸರ್ಜಿಕಲ್ ಗ್ಲೌಸ್‌ಗಳನ್ನು ಜೂನ್ 23ರಂದು ಬೆಳ್ತಂಗಡಿಯ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿದ ವಿಮುಕ್ತಿ ಸಂಸ್ಥೆಯ ನಿರ್ದೇಶಕ ವಂದನೀಯ ವಿನೋದ್ ಮಸ್ಕರೇನ್ಹಸ್, ಈ ಕೊಡುಗೆಯ ಸದ್ಬಳಕೆಯಾಗಲಿ ಎಂದು ಹಾರೈಸಿದರು. ಅಂತೆಯೇ ಈ ಸೌಲಭ್ಯವನ್ನು ವಿಮುಕ್ತಿ ಸಂಸ್ಥೆಯ ವತಿಯಿಂದ ತಾಲೂಕಿನ ಎಲ್ಲ […]
ರಾಷ್ಟ್ರೀಯ ಶೌರ್ಯ ವಿಪತ್ತು ನಿರ್ವಹಣಾ ನಡ ಘಟಕದಿಂದ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ: ನಡ /ಕನ್ಯಾಡಿ ರಾಷ್ಟ್ರೀಯ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಂಡದ ವಾರ್ಷಿಕೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮವು ಜೂನ್ 23ರಂದು ನಡೆಯಿತು.ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯ್ಸ್, ಹಾಗೂ ಉಪವಲಯ ಅರಣ್ಯ ಅಧಿಕಾರಿ ರಾಜೇಶ್ ಅವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.ಶಾಲಾ ಮೈದಾನದ ಸುತ್ತ ಸುಮಾರು ಆರುವತ್ತಕ್ಕೂ ಅಧಿಕ ವಿವಿಧ ಬಗೆಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಲಾಯಿತು. ವಿಜಯ ಗೌಡ […]
ಸ್ಪಂದನ ಸೇವಾ ಸಂಘದಿಂದ ನೆರವು

ಬೆಳ್ತಂಗಡಿ: ಇಳಂತಿಲ ಗ್ರಾಮದ ಕೊಡಂಗೆ ನಿವಾಸಿ ನೀಲಯ್ಯ ಗೌಡರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ತೀರ ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಬೆಳ್ತಂಗಡಿ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯ ಧನ ಸಹಾಯ ರೂ.20,000/- ದ ಚೆಕ್ಕನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ಯುವರಾಜ ಗೌಡ ಅನಾರು ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.ಈ ಸಂದರ್ಭ ವಾಣಿ ಸೌಹಾರ್ದ ಕೋ-ಆಪರೇಟಿವ್(ಲಿ.) ನಿರ್ದೇಶಕ ಸುರೇಶ್ ಕೌಡಂಗೆ, ಸ್ಥಳೀಯರಾದ ಕಾರ್ತಿಕ್ ಗೌಡ ಅನ್ನಾಜೆ, ಲೋಕೇಶ್ ಗೌಡ ಕಂಗಿನಾರುಬೆಟ್ಟು, ಸುಬ್ರಹ್ಮಣ್ಯ […]
ಕೋವಿಡ್ ಮೂರನೇ ಅಲೆ ಎದುರಿಸಲು ಸಜ್ಜು-ಹರೀಶ್ ಪೂಂಜ

ಬೆಳ್ತಂಗಡಿ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಬೆಳ್ತಂಗಡಿ ತಾಲೂಕಿನ ಜನರ ಆರೋಗ್ಯ ಕಾಪಾಡುವ ಮಹದುದ್ಧೇಶದಿಂದ ಇಲ್ಲಿನ ಸರಕಾರಿ ಆಸ್ಪತ್ರೆಗೆ 5ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಕೊಡುಗೆಯಿಂದ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈಗಾಗಲೇ ಬೇರೆಬೇರೆ ದಾನಿಗಳು ಇಲ್ಲಿನ ಆಸ್ಪತ್ರೆಗೆ ಸಾಕಷ್ಟು ಸೌಲಭ್ಯ-ಸಲಕರಣೆಗಳನ್ನು ಕೊಡುಗೆಯಾಗಿ ನೀಡಿದ್ದು, ಇದೀಗ ಆಕ್ಸಿಜನ್ ಘಟಕವೂ ಲೋಕಾರ್ಪಣೆಗೆ ಸಿದ್ಧವಾಗಿದೆ. ಸುಮಾರು 50ಬೆಡ್‌ಗಳಿಗೆ ಆಕ್ಸಿಜನ್ ಪೂರೈಸುವ ವ್ಯವಸ್ಥೆಯೊಂದಿಗೆ ಕೊರೋನಾ 3ನೇ ಅಲೆ ಎದುರಿಸಲು ಸರ್ವ ರೀತಿಯಿಂದಲೂ […]
ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಪುಣ್ಯತಿಥಿ

ಬೆಳ್ತಂಗಡಿ: ಸ್ವತಂತ್ರ ಭಾರತದ ಮೊತ್ತಮೊದಲ ಸರ್ವಪಕ್ಷ ಸರಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದ ಭಾರತದ ಏಕತೆಗೆ ಶ್ರಮಿಸಿದ ಮಹಾನ್ ನಾಯಕ ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿಯವರ ಪುಣ್ಯತಿಥಿಯನ್ನು ಜೂನ್ 23ರಂದು ಬೆಳ್ತಂಗಡಿ ಮಂಡಲ ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು. ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಸಸಿ ನೆಡುವ ಮೂಲಕವೃಕ್ಷಾರೋಪಣ ಮಾಡಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ […]