ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಜೂನ್ 16ರಂದು ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಡಾ. ಹೆಗ್ಗಡೆಯವರು ಶುಭ ಹಾರೈಸಿದರು.ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ, 1,00,254 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ […]

ಉಜಿರೆ ಎಸ್.ಡಿ.ಎಂ ಅಂಗಳದಲ್ಲಿ ವಿಶ್ವಪರಿಸರ ದಿನಾಚರಣೆ

ಬೆಳ್ತಂಗಡಿ: ನದಿ, ಹಳ್ಳ-ಕೊಳ್ಳ ಮತ್ತು ಹಸಿರಸಿರಿಯೊಂದಿಗಿನ ಪರಿಸರವನ್ನು ಓದಿಕೊಂಡು ಮನನ‌ ಮಾಡಿಕೊಂಡು ಪ್ರಕೃತಿದತ್ತ ಬದುಕಿನ ಮಾದರಿಗಳನ್ನು ಅನುಸರಿಸಲೇಬೇಕಿದೆ ಎಂದು ಖ್ಯಾತ ಪರಿಸರ ಬರಹಗಾರ ಶಿವಾನಂದ ಕಳವೆ ಅಭಿಪ್ರಾಯಪಟ್ಟರು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯು ಮಂಗಳೂರಿನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಳ್ತಂಗಡಿಯ ಕಾನೂನು ಸೇವಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್ 17ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಪ್ಲಾಸ್ಟಿಕ್ ಮುಕ್ತ […]

ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿದ್ದು; ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ ಹೊಂದಿದ ಸಾಲಗಾರರ ಸಾಲಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಇವರಿಗೆ ನೀಡಲಾದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಮಂಜೂರಾತಿ ಮೇರೆಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸಿ. ಇವರ ಕುಟುಂಬದವರಿಗೆ ಸಾಲದಿಂದ ಋಣ ಮುಕ್ತಾಯಗೊಳಿಸಿದ ಖಾತ್ರಿ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ| ರಾಜಾರಾಮ […]

ಉಜಿರೆ ದುರ್ಗಾ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಪತ್ತೆ

ಬೆಳ್ತಂಗಡಿ: ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌ನ್ 14ರ ರಾತ್ರಿ ಪೊಲೀಸ್ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್‌ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದು; ಲಾಡ್ಜ್‌ನ ಮ್ಯಾನೇಜರ್ […]

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್‌ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ.ಪ್ರವಣ್ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ವಾನ್ 542,ಸಾನಿಕಾ – 542ಆರುಲ್ ಡಿಸೋಜ 540,ಸಂದೀಪ್ ದುಲಾಜ್ 533,ನಿಶ್ಚಲ್ ಆರ್ ಸೊನ್ನಾದ್ 532,ಶಾಂತವ್ವ 535,ಗೌತಮ್ ಎಸ್.ಜಿ 519,ಉಲ್ಲಾಸ್ ಎಂ.ಬಿ 502,ಪ್ರತೀಕ್ಷಾ ಎಸ್ – 506ವಿಜಯ್ ಕುಮಾರ್ 508,ಕೃಪಾ ಸಾಂಚಿ ಮೌರ್ಯ 508,ಪ್ರೇಕ್ಷಾ ಕುಂದರ್ 519,ವಿನೀತ್ ಎಸ್ ಅಣ್ಣ 511,ಏರಲ್ ಸಮಿಯಾ ಡಿಸೋಜ 518,ನಿಧಿ […]

ಎಕ್ಸೆಲ್‌ನಲ್ಲಿ ದೃಷ್ಟಿ – 2025 ಓರಿಯಂಟೇಶನ್

ಬೆಳ್ತಂಗಡಿ: ಹಣದ ಹಿಂದೆ ಹೋದವರು ಗೆದ್ದಿಲ್ಲ. ಗುರಿಯ ಹಿಂದೆ ಹೋದವರು ಗೆದ್ದಿದ್ದಾರೆ; ಹಾಗೂ ಹಣವನ್ನೂ ಗಳಿಸಿದ್ದಾರೆ. ಹೀಗಾಗಿ ಅಚಲವಾದ ಗುರಿ ನಿಮ್ಮಲ್ಲಿದ್ದರೆ ಗೆಲುವನ್ನು ಸಾಧಿಸಬಹುದು. ಆಗ ತಾನಾಗಿಯೇ ಹಣ ಸಂಪಾದನೆ ಯಾಗುತ್ತದೆ ಎಂದು ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಿ.ವಿ. ಸೂರ್ಯನಾರಾಯಣ ಅವರು ಹೇಳಿದರು. ಅವರು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ‘ದೃಷ್ಟಿ-2025’ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು […]

ಗೃಹ ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿದ ಗೃಹ ಸಚಿವರಾದ ಡಾ| ಜಿ. ಪರಮೇಶ್ವರ ರವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್‌ರವರು ಹಾಗೂ ಕಾಂಗ್ರೆಸ್ […]

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ

ಬೆಳ್ತಂಗಡಿ: ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದುರ್ಗಾದಾಸ್ ಎಂ. ಹಾಗೂ ರೇವತಿ ದಂಪತಿಯ ಪುತ್ರಿ, ಪ್ರಸ್ತುತ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ‌ ಪಿಯುಸಿ ವಿದ್ಯಾರ್ಥಿನಿ ಸಂಜನ ಎಂ.ಡಿ. ಅವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ. ಕರಾಟೆ, ಯಕ್ಷಗಾನ, ಭರತನಾಟ್ಯದಲ್ಲಿ ತೊಡಗಿಸಿಕೊಂಡಿರುವ ಈಕೆಗೆ ಸಾಮಾಜಿಕ ಕಳಕಳಿಯಿಂದ ಸಮಾಜ ಸೇವೆ ಮಾಡಬೇಕೆಂಬ ಹಂಬಲದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರಿಗೆ ಶೃಂಗಾರ್ ಮಾಸ್ಟರ್ ಕಟ್ ಅವರ ಮೂಲಕ ಯುವಶಕ್ತಿ ಸೇವಾಪಥ ಟ್ರಸ್ಟ್ ಅವರಿಗೆ ದಾನವಾಗಿ ನೀಡಿದ್ದಾರೆ. […]

ಎಕ್ಸೆಲ್‌ನ ವಿವೇಕ್ ಎನ್‌ಡಿಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್.ಎಸ್. ನೇಷನಲ್ ಡಿಫೆನ್ಸ್ ಅಕಾಡೆಮಿ ನಡೆಸುವ ಎನ್‌ಡಿಎ ಲಿಖಿತ ಪರೀಕ್ಷೆಯಗೆ ಹಾಜರಾದ ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್.ಎಸ್. ಒಬ್ಬನಾಗಿದ್ದಾನೆ. ಎಕ್ಸೆಲ್‌ ಕಾಲೇಜಿನಲ್ಲಿ ರಾಷ್ಟ್ರಸೇವೆ ಮಾಡಲು ಮತ್ತು ರಾಷ್ಟ್ರ ಸೇವಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್‌ಡಿಎ ಬ್ಯಾಚ್‌ನ […]

ಸಂತಾಪ ಸೂಚಕ ಸಭೆ

ಬೆಳ್ತಂಗಡಿ: ಎಪ್ರಿಲ್ 23ರಂದು ಗೇರುಕಟ್ಟೆಯ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ವಸಂತ ಮಜಲುರವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಎಪ್ರಿಲ್ 22ರಂದು ನಡೆದ ಪಾಕ್ ಪ್ರಾಯೋಜಿತ ಭಯೋತ್ಪಾದಕ ದಾಳಿಯಲ್ಲಿ ಹತರಾದ 26 ಪ್ರವಾಸಿಗರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು. ಈ ದುರ್ಘಟನೆಯನ್ನು ಉಗ್ರವಾಗಿ ಖಂಡಿಸಿರುವ ಆಡಳಿತ ಮಂಡಳಿ, ಉಗ್ರರಿಗೆ ತಕ್ಕ ಶಾಸ್ತಿ ಮಾಡಲು […]