ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಕಾಂಗ್ರೆಸ್ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕುವೆಟ್ಟು ಹಾಗು ಓಡಿಲ್ನಾಳ ಗ್ರಾಮ ಸಮಿತಿಯ ನೇತ್ರತ್ವದಲ್ಲಿ ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಸಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಜೂನ್ 14ರಂದು ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಮಾತನಾಡಿ, ಇತ್ತೀಚಿನ ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಲೆ ಲೀಟರ್ ಪೆಟ್ರೋಲ್‌ಗೆ 35 ರೂಪಾಯಿ ಆಗಿದ್ದರೂ ಕೂಡ ತೆರಿಗೆ ರೂಪದಲ್ಲಿ […]
ಯಕ್ಷರಸದೌತಣ ಇನ್ನಷ್ಟು ನಡೆಯಲಿ: ಶಾಸಕ ಪೂಂಜ

ಬೆಳ್ತಂಗಡಿ: ಕರಾವಳಿ ಜಿಲ್ಲೆಗಳ ಹೆಚ್ಚಿನ ಪ್ರೇಕ್ಷಕರು ಇಷ್ಟ ಪಡುವ ಕಲೆ ಯಕ್ಷಗಾನ. ಕೋವಿಡ್ ಮಹಾಮಾರಿ ಯಕ್ಷಗಾನ ಕಲಾವಿದರು ಹಾಗೂ ಪ್ರೇಕ್ಷಕರಿಗೂ ನೋವುಂಟುಮಾಡಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಕಲೆ ಶಕ್ತಿ ತುಂಬುತ್ತಿದೆ. ನೋವಿನ ಸಂದರ್ಭದಲ್ಲಿ ಕಲಾಪ್ರದರ್ಶನದಿಂದ ಯಕ್ಷಗಾನ ರಸದೌತಣ ಇನ್ನಷ್ಟು ನಡೆಯಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಜೂನ್ 12ರಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ (ರಿ) ಬೆಳ್ತಂಗಡಿ, ಮತ್ತು ಬೆಳ್ತಂಗಡಿ ಹಾಗೂ ಬಂಟ್ವಾಳ ರೋಟರಿ ಕ್ಲಬ್‌ಗಳ ಸಹಯೋಗದೊಂದಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ […]
ಬೆಸ್ಟ್ ಫೌಂಡೇಶನ್‌ನಿಂದ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಷನ್ ಬೆಂಗಳೂರು ಹಾಗೂ ತಾಲೂಕು ಯುವ ಕಾಂಗ್ರೆಸ್ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಆದಿವಾಸಿಗಳಿಗೆ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಲಾಯಿಲ ಶ್ರೀ ರಾಘವೇಂದ ಮಠದ ಸಭಾಭವನದಲ್ಲಿ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ, ಜನರು ಸಂಕಷ್ಟದಲಿರುವ ಈ ಸಂದರ್ಭದಲ್ಲಿ ಅವರ ನೆರವಿಗೆ ನಿಲ್ಲುವ ಕಾರ್ಯವನ್ನು ಎಲರೂ ಮಾಡಬೇಕಾಗಿದೆ. ಇದೀಗ ಜನರಿಗೆ ನೆರವಾಗುವ ಕಾರ್ಯಕ್ರಮಕ್ಕೆ ಯುವಕರ ತಂಡ ಮುಂದಾಗಿದ್ದು ಇದು ಉತ್ತಮ ಕಾರ್ಯವಾಗಿದೆ ಎಂದರು. […]
ಪ್ರಧಾನಿ ಭಾವಚಿತ್ರಕ್ಕೆ ಅಪಮಾನ ಖಂಡನಿಯ-ಜಯಂತ ಕೋಟ್ಯಾನ್
ಬೆಳ್ತಂಗಡಿ: ಸಾಂಕ್ರಾಮಿಕ ಕಾಯಿಲೆ ಕೋವಿಡ್ 19 ಸುಳಿಯಲ್ಲಿ ಇಡೀ ವಿಶ್ವವೇ ನರಳುತ್ತಿರುವ ಸಂಕೀರ್ಣ ಕಾಲಘಟ್ಟದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿರುವ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲವಾಗಿ ನಿಲ್ಲಬೇಕಿದ್ದ ಜವಾಬ್ದಾರಿಯುತ ರಾಜಕೀಯ ಪಕ್ಷವಾದ ಕಾಂಗ್ರೆಸ್ ಪೆಟ್ರೋಲ್ ನಾಟೌಟ್ 100 ಎಂಬ ಪ್ರಹಸನ ಮಾಡಿಕೊಂಡು ಕೇಕ್ ಕಟ್ ಮಾಡಿ ಇತರರಿಗೆ ಹಂಚಿ ಸಂಭ್ರಮಿಸುತ್ತಿರುವುದು ಆರರಿಂದ ಏಳು ದಶಕಗಳ ಕಾಲ ರಾಷ್ಟ್ರವನ್ನಾಳಿದ ರಾಜಕೀಯ ಪಕ್ಷವೊಂದು ನೈತಿಕ ಪತನದತ್ತ ಸಾಗುತ್ತಿರುವ ದಿಕ್ಸೂಚಿಯಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ತಿಳಿಸಿದೆ.ಬಿಜೆಪಿ ಹಿಂದೆ ವಿರೋಧ ಪಕ್ಷದಲ್ಲಿದ್ದ […]
ಶ್ರೀ ಗುರುದೇವ ಸೊಸೈಟಿಯಿಂದ ಕೋವಿಡ್-19 ನಿಯಂತ್ರಣ ಸಾಮಾಗ್ರಿ ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೊದ್ಧೇಶ ಸಹಕಾರಿ ಸಂಘದ ವತಿಯಿಂದ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕೋವಿಡ್-19 ನಿಯಂತ್ರಣ ಸಾಮಾಗ್ರಿಗಳಾದ ಎನ್-95 ಮಾಸ್ಕ್, ಟ್ರಿಪಲ್ ಲೇಯರ್ ಮಾಸ್ಕ್, ಪೇಸ್ ಶೀಲ್ಡ್, ಪಲ್ಸ್ ಆಕ್ಸಿಮಿಟರ್ ಸಾಮಾಗ್ರಿಗಳನ್ನು ಹಸ್ತಾಂತರಿಲಾಯಿತು. ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ಮಾಣಿಂಜ ರವರು ಅಗತ್ಯ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ, ವಾರಿಯರ್ಸ್ ಆಗಿ ದುಡಿಯುತ್ತಿರುವ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಶ್ರಮ, ಪ್ರಾಮಾಣಿಕ ಸೇವೆಗೆ ಅಭಿನಂದನೆಗಳು ಮತ್ತು ಕೃತಜ್ಣತೆಗಳನ್ನು ಅರ್ಪಿಸಿದರು. ಕಳೆದ ವರ್ಷ ಸಂಘದಿಂದ ರೂ.50000/- ಕೋವಿಡ್ […]
ಅಕ್ರಮ ಮದ್ಯ ಮಾರಾಟ ಪತ್ತೆ

ಬೆಳ್ತಂಗಡಿ: ಜೂನ್ 10ರಂದು ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರಾದ ಸೌಮ್ಯಲತಾ ತಮ್ಮ ಸಿಬ್ಬಂದಿಗಳೊಂದಿಗೆ ರಸ್ತೆಯಲ್ಲಿ ಗಸ್ತು ಹಾಗೂ ತಪಾಸಣೆ ನಡೆಸುತ್ತಿದ್ದಾಗ, ಪಿಲ್ಯದಲ್ಲಿ ಬೈಕೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ್ದು; ಆರೋಪಿಯಿಂದ 15.300ಲೀಟರ್ ಮದ್ಯ ಹಾಗೂ ಮದ್ಯ ಮಾರಾಟಕ್ಕೆ ಬಳಸಲಾಗಿದ್ದ ಹೀರೊ ಹೋಂಡಾ ಸ್ಪ್ಲೆಂಡರ್ ಬೈಕನ್ನು ವಶ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶ ಪಡಿಸಿಕೊಂಡ ಮದ್ಯ ಹಾಗೂ ಇತರ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 46,000/- ಎಂದು ಅಂದಾಜಿಸಲಾಗಿದೆ. ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಪ್ರತಿಭಟನೆ

ಬೆಳ್ತಂಗಡಿ: ದೇಶದ ಜನತೆಗೆ ‘ಅಚ್ಛೇದಿನ್’ನ ಭ್ರಮೆ ಹುಟ್ಟಿಸಿ, ಅಧಿಕಾರಕ್ಕೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದಲ್ಲಿ ಪೆಟ್ರೋಲ್-ಡೀಸಿಲ್-ಅಡುಗೆ ಅನಿಲ ಸಹಿತ ಎಲ್ಲ ತೈಲೋತ್ಪನ್ನಗಳ ಬೆಲೆ ಏರಿಸಿ, ಜನಜೀವನ ದುಸ್ಥರವಾಗುವಂತೆ ಮಾಡಿದೆ. ಪೆಟ್ರೋಲ್-ಡೀಸಿಲ್ ದರ ಹೆಚ್ಚಳದಿಂದ ವಸ್ತುಗಳ ಸಾಗಾಟ ದರ ಏರಿಕೆಯಾದುದರ ಪರಿಣಾಮ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಚ್ಛೇದಿನ್‌ನ ನಿರೀಕ್ಷೆಯಲ್ಲಿದ್ದ ದೇಶದ ಜನಸಾಮಾನ್ಯ ದಿನಕಳೆಯುವುದೇ ತ್ರಾಸದಾಯಕವಾಗಿದೆ. ಪೆಟ್ರೋಲ್ ದರ ಶತಕ ದಾಟಿ ಮುನ್ನುಗ್ಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ದರದಲ್ಲಿ ಅಜೇಯ ಶತಕ ಬಾರಿಸಿ ಮುನ್ನುಗ್ಗುತ್ತಿದ್ದಾರೆ […]
ಅರ್ಚಕರು ಹಾಗೂ ಅಡುಗೆ ಭಟ್ಟರಿಂದ ಸಹಾಯಧನಕ್ಕೆ ಅರ್ಜಿ ಸಲ್ಲಿಕೆ

ಬೆಳ್ತಂಗಡಿ: ಕೋವಿಡ್-19 ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ಸಮೂಹ ‘ಸಿ’ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಅಡುಗೆಭಟ್ಟರು ಹಾಗೂ ಸಿಬ್ಬಂದಿಗಳಿಗೆ ತಲಾ ರೂಪಾಯಿ 3000/ ರಂತೆ ಧನ ಸಹಾಯಧನವನ್ನು ಸರಕಾರ ಘೋಷಿಸಿದೆ. ಆ ಪ್ರಯುಕ್ತ ತಾಲೂಕಿನ 40 ‘ಸಿ’ ದೇವಾಲಯಗಳ ಸುಮಾರು ನೂರಕ್ಕೂ ಹೆಚ್ಚು ಅರ್ಜಿಗಳನ್ನು ಜೂನ್ 11ರಂದು ಬೆಳ್ತಂಗಡಿಯ ‘ಶ್ರಮಿಕ’ ಶಾಸಕರ ಅಧಿಕೃತ ಕಛೇರಿಯಲ್ಲಿ ಶಾಸಕ ಹರೀಶ ಪೂಂಜ ಅವರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ […]
ಉಜಿರೆ ರಬ್ಬರ್ ಸೊಸೈಟಿಯಿಂದ ತಾಲೂಕು ಸರಕಾರಿ ಆಸ್ಪತ್ರೆಗೆ ಆಕ್ಸೀಮೀಟರ್ ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕೊಡಮಾಡಿದ 10ಆಕ್ಸಿಮೀಟರ್‌ಗಳನ್ನು ಸಂಘದ ಅಧ್ಯಕ್ಷ ಶ್ರೀಧರ ಜಿ. ಬಿಡೆಯವರು ಜೂನ್ 11ರಂದು ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾl ವಿದ್ಯಾವತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ., ನಿರ್ದೇಶಕರುಗಳಾದ ಬಾಲಕೃಷ್ಣ ಗೌಡ ಕೆ., ವಿ. ವಿ. ಅಬ್ರಾಹಂ, ಬೈರಪ್ಪ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ […]
ಸೇವಾಸಂಸ್ಥೆಗಳಿಂದ ಸಹಜವಾದ ಮಾನವೀಯ ಸ್ಪಂದನ ಲಭಿಸಿದೆ-ಪ್ರತಾಪ್‌ಸಿಂಹ ನಾಯಕ್

ಬೆಳ್ತಂಗಡಿ: ಕೋವಿಡ್ ನಿಯಂತ್ರಣ ಕೇವಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕೆಲಸವಲ್ಲ. ಇದನ್ನು ಮನಗಂಡ ಮಾನವ ಸ್ಪಂದನ ಮತ್ತು ಸಮಾನಮನಸ್ಕ ಸಂಘಟನೆ ನೆಲ್ಯಾಡಿಯವರು ಹಾಗೂ ಇತರ ಸೇವಾಸಂಸ್ಥೆಗಳೂ ಕೋವಿಡ್ ಯುದ್ಧದಲ್ಲಿ ಸರಕಾರದ ಜೊತೆ ಕೈ ಜೋಡಿಸುತ್ತಿದ್ದು, ಸಹಜವಾಗಿ ಮಾನವೀಯ ಸ್ಪಂದನೆ ನೀಡಿದೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಹೇಳಿದರು.ಮಾನವ ಸ್ಪಂದನ ಕೋವಿಡ್ ಸೋಲ್ಜರ್ಸ್ ತಂಡಹಾಗೂ ಸಿಯೋನ್ ಆಶ್ರಮಕ್ಕೆ ಸಹಕಾರಿಯಾಗುವಂತೆ ಸಮಾನ ಮನಸ್ಕ ವೇದಿಕೆ ನೆಲ್ಯಾಡಿ ವತಿಯಿಂದ ಪರಿಕರಗಳನ್ನು ಬೆಳ್ತಂಗಡಿ ಸರಕಾರಿ ಪ್ರವಾಸಿ ಬಂಗಲೆಯಲ್ಲಿ ಜೂನ್ 11ರಂದು […]