ಬೆಸ್ಟ್ ಫೌಂಡೇಶನ್‌ನಿಂದ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಷನ್ ಬೆಂಗಳೂರು ಹಾಗೂ ತಾಲೂಕು ಯುವ ಕಾಂಗ್ರೆಸ್ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಆದಿವಾಸಿಗಳಿಗೆ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಲಾಯಿಲ ಶ್ರೀ ರಾಘವೇಂದ ಮಠದ ಸಭಾಭವನದಲ್ಲಿ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ  ಮಾಜಿ ಶಾಸಕ ಕೆ‌. ವಸಂತ ಬಂಗೇರ, ಜನರು ಸಂಕಷ್ಟದಲಿರುವ ಈ ಸಂದರ್ಭದಲ್ಲಿ ಅವರ ನೆರವಿಗೆ ನಿಲ್ಲುವ ಕಾರ್ಯವನ್ನು ಎಲರೂ ಮಾಡಬೇಕಾಗಿದೆ. ಇದೀಗ ಜನರಿಗೆ ನೆರವಾಗುವ ಕಾರ್ಯಕ್ರಮಕ್ಕೆ ಯುವಕರ ತಂಡ ಮುಂದಾಗಿದ್ದು ಇದು ಉತ್ತಮ ಕಾರ್ಯವಾಗಿದೆ ಎಂದರು. […]

ಪ್ರಧಾನಿ ಭಾವಚಿತ್ರಕ್ಕೆ ಅಪಮಾನ ಖಂಡನಿಯ-ಜಯಂತ ಕೋಟ್ಯಾನ್

ಬೆಳ್ತಂಗಡಿ: ಸಾಂಕ್ರಾಮಿಕ ಕಾಯಿಲೆ ಕೋವಿಡ್ 19 ಸುಳಿಯಲ್ಲಿ ಇಡೀ ವಿಶ್ವವೇ ನರಳುತ್ತಿರುವ ಸಂಕೀರ್ಣ ಕಾಲಘಟ್ಟದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿರುವ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲವಾಗಿ ನಿಲ್ಲಬೇಕಿದ್ದ ಜವಾಬ್ದಾರಿಯುತ ರಾಜಕೀಯ ಪಕ್ಷವಾದ ಕಾಂಗ್ರೆಸ್ ಪೆಟ್ರೋಲ್ ನಾಟೌಟ್ 100 ಎಂಬ ಪ್ರಹಸನ ಮಾಡಿಕೊಂಡು ಕೇಕ್ ಕಟ್ ಮಾಡಿ ಇತರರಿಗೆ ಹಂಚಿ ಸಂಭ್ರಮಿಸುತ್ತಿರುವುದು ಆರರಿಂದ ಏಳು ದಶಕಗಳ ಕಾಲ ರಾಷ್ಟ್ರವನ್ನಾಳಿದ ರಾಜಕೀಯ ಪಕ್ಷವೊಂದು ನೈತಿಕ ಪತನದತ್ತ ಸಾಗುತ್ತಿರುವ ದಿಕ್ಸೂಚಿಯಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ತಿಳಿಸಿದೆ.ಬಿಜೆಪಿ ಹಿಂದೆ ವಿರೋಧ ಪಕ್ಷದಲ್ಲಿದ್ದ […]

ಶ್ರೀ ಗುರುದೇವ ಸೊಸೈಟಿಯಿಂದ ಕೋವಿಡ್-19 ನಿಯಂತ್ರಣ ಸಾಮಾಗ್ರಿ ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೊದ್ಧೇಶ ಸಹಕಾರಿ ಸಂಘದ ವತಿಯಿಂದ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕೋವಿಡ್-19 ನಿಯಂತ್ರಣ ಸಾಮಾಗ್ರಿಗಳಾದ ಎನ್-95 ಮಾಸ್ಕ್, ಟ್ರಿಪಲ್ ಲೇಯರ್ ಮಾಸ್ಕ್, ಪೇಸ್ ಶೀಲ್ಡ್, ಪಲ್ಸ್ ಆಕ್ಸಿಮಿಟರ್ ಸಾಮಾಗ್ರಿಗಳನ್ನು ಹಸ್ತಾಂತರಿಲಾಯಿತು. ಸಂಘದ ಅಧ್ಯಕ್ಷರಾದ ಎನ್‌ ಪದ್ಮನಾಭ ಮಾಣಿಂಜ ರವರು ಅಗತ್ಯ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ, ವಾರಿಯರ್ಸ್ ಆಗಿ ದುಡಿಯುತ್ತಿರುವ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಶ್ರಮ, ಪ್ರಾಮಾಣಿಕ ಸೇವೆಗೆ ಅಭಿನಂದನೆಗಳು ಮತ್ತು ಕೃತಜ್ಣತೆಗಳನ್ನು ಅರ್ಪಿಸಿದರು. ಕಳೆದ ವರ್ಷ ಸಂಘದಿಂದ ರೂ.50000/- ಕೋವಿಡ್ […]

ಅಕ್ರಮ ಮದ್ಯ ಮಾರಾಟ ಪತ್ತೆ

ಬೆಳ್ತಂಗಡಿ: ಜೂನ್ 10ರಂದು ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರಾದ ಸೌಮ್ಯಲತಾ ತಮ್ಮ ಸಿಬ್ಬಂದಿಗಳೊಂದಿಗೆ ರಸ್ತೆಯಲ್ಲಿ ಗಸ್ತು ಹಾಗೂ ತಪಾಸಣೆ ನಡೆಸುತ್ತಿದ್ದಾಗ, ಪಿಲ್ಯದಲ್ಲಿ ಬೈಕೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ್ದು; ಆರೋಪಿಯಿಂದ 15.300ಲೀಟರ್ ಮದ್ಯ ಹಾಗೂ ಮದ್ಯ ಮಾರಾಟಕ್ಕೆ ಬಳಸಲಾಗಿದ್ದ ಹೀರೊ ಹೋಂಡಾ ಸ್ಪ್ಲೆಂಡರ್ ಬೈಕನ್ನು ವಶ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶ ಪಡಿಸಿಕೊಂಡ ಮದ್ಯ ಹಾಗೂ ಇತರ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 46,000/- ಎಂದು ಅಂದಾಜಿಸಲಾಗಿದೆ. ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಪ್ರತಿಭಟನೆ

ಬೆಳ್ತಂಗಡಿ: ದೇಶದ ಜನತೆಗೆ ‘ಅಚ್ಛೇದಿನ್’ನ ಭ್ರಮೆ ಹುಟ್ಟಿಸಿ, ಅಧಿಕಾರಕ್ಕೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದಲ್ಲಿ ಪೆಟ್ರೋಲ್-ಡೀಸಿಲ್-ಅಡುಗೆ ಅನಿಲ ಸಹಿತ ಎಲ್ಲ ತೈಲೋತ್ಪನ್ನಗಳ ಬೆಲೆ ಏರಿಸಿ, ಜನಜೀವನ ದುಸ್ಥರವಾಗುವಂತೆ ಮಾಡಿದೆ. ಪೆಟ್ರೋಲ್-ಡೀಸಿಲ್ ದರ ಹೆಚ್ಚಳದಿಂದ ವಸ್ತುಗಳ ಸಾಗಾಟ ದರ ಏರಿಕೆಯಾದುದರ ಪರಿಣಾಮ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಚ್ಛೇದಿನ್‌ನ ನಿರೀಕ್ಷೆಯಲ್ಲಿದ್ದ ದೇಶದ ಜನಸಾಮಾನ್ಯ ದಿನಕಳೆಯುವುದೇ ತ್ರಾಸದಾಯಕವಾಗಿದೆ. ಪೆಟ್ರೋಲ್ ದರ ಶತಕ ದಾಟಿ ಮುನ್ನುಗ್ಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ದರದಲ್ಲಿ ಅಜೇಯ ಶತಕ ಬಾರಿಸಿ ಮುನ್ನುಗ್ಗುತ್ತಿದ್ದಾರೆ […]

ಅರ್ಚಕರು ಹಾಗೂ ಅಡುಗೆ ಭಟ್ಟರಿಂದ ಸಹಾಯಧನಕ್ಕೆ ಅರ್ಜಿ ಸಲ್ಲಿಕೆ

ಬೆಳ್ತಂಗಡಿ: ಕೋವಿಡ್-19 ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ಸಮೂಹ ‘ಸಿ’ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಅಡುಗೆಭಟ್ಟರು ಹಾಗೂ ಸಿಬ್ಬಂದಿಗಳಿಗೆ ತಲಾ ರೂಪಾಯಿ 3000/ ರಂತೆ ಧನ ಸಹಾಯಧನವನ್ನು ಸರಕಾರ ಘೋಷಿಸಿದೆ. ಆ ಪ್ರಯುಕ್ತ ತಾಲೂಕಿನ 40 ‘ಸಿ’ ದೇವಾಲಯಗಳ ಸುಮಾರು ನೂರಕ್ಕೂ ಹೆಚ್ಚು ಅರ್ಜಿಗಳನ್ನು ಜೂನ್ 11ರಂದು ಬೆಳ್ತಂಗಡಿಯ ‘ಶ್ರಮಿಕ’ ಶಾಸಕರ ಅಧಿಕೃತ ಕಛೇರಿಯಲ್ಲಿ ಶಾಸಕ ಹರೀಶ ಪೂಂಜ ಅವರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ‌ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ […]

ಉಜಿರೆ ರಬ್ಬರ್ ಸೊಸೈಟಿಯಿಂದ ತಾಲೂಕು ಸರಕಾರಿ ಆಸ್ಪತ್ರೆಗೆ ಆಕ್ಸೀಮೀಟರ್ ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕೊಡಮಾಡಿದ 10ಆಕ್ಸಿಮೀಟರ್‌ಗಳನ್ನು ಸಂಘದ ಅಧ್ಯಕ್ಷ ಶ್ರೀಧರ ಜಿ. ಬಿಡೆಯವರು ಜೂನ್ 11ರಂದು ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾl ವಿದ್ಯಾವತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ., ನಿರ್ದೇಶಕರುಗಳಾದ ಬಾಲಕೃಷ್ಣ ಗೌಡ ಕೆ., ವಿ. ವಿ. ಅಬ್ರಾಹಂ, ಬೈರಪ್ಪ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ […]

ಸೇವಾಸಂಸ್ಥೆಗಳಿಂದ ಸಹಜವಾದ ಮಾನವೀಯ ಸ್ಪಂದನ ಲಭಿಸಿದೆ-ಪ್ರತಾಪ್‌ಸಿಂಹ ನಾಯಕ್

ಬೆಳ್ತಂಗಡಿ: ಕೋವಿಡ್ ನಿಯಂತ್ರಣ ಕೇವಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕೆಲಸವಲ್ಲ. ಇದನ್ನು ಮನಗಂಡ ಮಾನವ ಸ್ಪಂದನ ಮತ್ತು ಸಮಾನ‌ಮನಸ್ಕ ಸಂಘಟನೆ ನೆಲ್ಯಾಡಿಯವರು ಹಾಗೂ ಇತರ ಸೇವಾಸಂಸ್ಥೆಗಳೂ ಕೋವಿಡ್ ಯುದ್ಧದಲ್ಲಿ ಸರಕಾರದ ಜೊತೆ ಕೈ ಜೋಡಿಸುತ್ತಿದ್ದು, ಸಹಜವಾಗಿ ಮಾನವೀಯ ಸ್ಪಂದನೆ ನೀಡಿದೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಹೇಳಿದರು.ಮಾನವ ಸ್ಪಂದನ ಕೋವಿಡ್ ಸೋಲ್ಜರ್ಸ್ ತಂಡಹಾಗೂ ಸಿಯೋನ್ ಆಶ್ರಮಕ್ಕೆ ಸಹಕಾರಿಯಾಗುವಂತೆ ಸಮಾನ‌ ಮನಸ್ಕ ವೇದಿಕೆ ನೆಲ್ಯಾಡಿ ವತಿಯಿಂದ ಪರಿಕರಗಳನ್ನು ಬೆಳ್ತಂಗಡಿ ಸರಕಾರಿ ಪ್ರವಾಸಿ ಬಂಗಲೆಯಲ್ಲಿ ಜೂನ್ 11ರಂದು […]

ಮಾಸ್ಕ್ ಧರಿಸದವರಿಗೆ ದಂಡ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚಳ ಆಗುತ್ತಿರುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮದ ಬಗ್ಗೆ ಜೂನ್ 11ರಂದು ಬೆಳಿಗ್ಗೆ 7ಗಂಟೆಯಿಂದಲೇ ಉಜಿರೆ ಪೇಟೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಮತ್ತು ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಸ್ಕ್ ಹಾಕದೆ ತಿರುಗಾಡುವ ಸಾರ್ವಜನಿಕರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲಾಯ್ತು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ನಿರ್ವಹಣೆಯಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲ-ಹರೀಶ್ ಕುಮಾರ್

ಬೆಳ್ತಂಗಡಿ : ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೊರೊನಾ ನಿಯಂತ್ರಿಸುವಲ್ಲಿ ಮತ್ತು ಲಸಿಕೆ ಹಂಚಿಕೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಇದು ದುರ್ಬಲ ಹಾಗೂ ಬೇಜವಾಬ್ದಾರಿಯಿಂದ ಕೂಡಿದ ಪ್ರಚಾರ ಪ್ರಿಯ ಸರ್ಕಾರಗಳಾಗಿವೆ. 18ರಿಂದ 44ವರ್ಷದವರಿಗೆ ಉಚಿತ ಲಸಿಕೆ ನೀಡಲು ಸುಪ್ರೀಂ ಕೋರ್ಟಿನ ಆದೇಶವಾಗಿದ್ದು, ಅದಕ್ಕಾಗಿ ಸುಪ್ರೀಂಕೋರ್ಟಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು.ಅವರು ಮೇ 9ರಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.‘ಲಸಿಕೆ ಉತ್ಪಾದನಾ […]