ಗಬ್ಬೆದ್ದು ನಾರುತ್ತಿರುವ ಕರಿಂಜೆ ಕಸ ವಿಲೇವಾರಿ ಘಟಕ

ಮೂಡುಬಿದಿರೆ: ಮೂಡುಬಿದಿರೆಯನ್ನು ಸ್ವಚ್ಛಗೊಳಿಸುವ ಕಾರ್ಯ ಸ್ಥಳೀಯ ಪುರಸಭೆ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ನಡೆಯುತ್ತಿದೆ. ಜವಾಬ್ದಾರಿಯನ್ನು ಮರೆತಿರುವ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಒಳ್ಳೆಯ ಉದ್ದೇಶವಿಟ್ಟು ಸ್ಥಾಪಿಸಲಾಗಿರುವ ಕರಿಂಜೆಯ ಕಸ ವಿಲೇವಾರಿ ಘಟಕ ಗಬ್ಬೆದ್ದು ನಾರುತ್ತಿದ್ದು, ಪರಿಸರದಲ್ಲಿ ವಾಸಿಸುವ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯನ್ನೆದುರಿಸುತ್ತಿದ್ದಾರೆ. ಹಲವು ದಿನಗಳಿಂದ ಕರಿಂಜೆ ಕಸ ವಿಲೇವಾರಿ ಘಟಕದ ಸುತ್ತಲಿನ ಪ್ರದೇಶದಲ್ಲಿ ಕಸದ ರಾಶಿ ತಂದು ಹಾಕಲಾಗುತ್ತಿದೆ. ಈ ಪರಿಸರ ದುರ್ವಾಸನೆಯಿಂದ ತುಂಬಿದ್ದು ಈ ಪರಿಸರದಲ್ಲಿ ವಾಸಿಸುವ ಜನ ಮೂಗು ಮುಚ್ಚಿ ತಿರುಗುವಂತಾಗಿದೆ. ಈ […]
ಮಾರೂರಿನಲ್ಲಿ ಮದ್ಯದಂಗಡಿಗೆ ಪರವಾನಿಗೆ -ಅಧಿಕಾರಿಗಳ ಬೆವರಿಳಿಸಿದ ಕಾಂಗ್ರೆಸ್ ಪ್ರತಿಭಟನೆ

ಮೂಡುಬಿದಿರೆ: ಇಲ್ಲಿನ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಆಪ್ತರೊಬ್ಬರಿಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನಲ್ಲಿ ಎಂ.ಎಸ್.ಐ.ಎಲ್. ಪರವಾನಿಗೆಯ ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ನೇತೃತ್ವದಲ್ಲಿ ಇಲ್ಲಿನ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಜನವರಿ 22ರ ಬೆಳಿಗ್ಗೆ 10-30ಕ್ಕೆ ಸರಿಯಾಗಿ ಪ್ರತಿಭಟನೆ ನಡೆಸುವುದೆಂದು ತೀರ್ಮಾನಿಸಿ, ನಮ್ಮ ಮನವಿ ಸ್ವೀಕರಿಸಿ ಎಂದು ತಹಶಿಲ್ದಾರರಿಗೆ ಮೊದಲೇ ತಿಳಿಸಲಾಗಿತ್ತು. ಸಮಯಕ್ಕೆ ಸರಿಯಾಗಿ ತಾಲೂಕು ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು […]
ನಾರಾವಿ ದೇಗುಲದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ.

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರ ಸಭೆಯು ಜನವರಿ 18ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಡೆಯಿತು ಆಡಳಿತ ಮೊಕ್ತೇಸರರಾಗಿ ನಿರಂಜನ ಬಿ. ಆಜ್ರಿ ರಾಮೆರಗುತ್ತು ನಾರಾವಿ ಆಯ್ಕೆಯಾದರು. ಸಹ ಮೊಕ್ತೇಸರರಾದ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ. ಕೃಷ್ಣತಂತ್ರಿ, ಪ್ರಸಾದ್ ಬಿ. ಶೆಟ್ಟಿ, ಉದಯ ಕುಮಾರ್ ಹೆಗ್ಡೆ, ಡಾಕಯ್ಯ ಪೂಜಾರಿ, ವಸಂತಿ ನಾರಾಯಣ ಪೂಜಾರಿ, ಅರ್ಪಿತಾ ವಸಂತ ಆಚಾರ್ಯ ಸಭೆಯಲ್ಲಿ ಭಾಗವಹಿಸಿದ್ದರು.
ಮತಎಣಿಕೆ ಕೇಂದ್ರದ ಬಳಿ ರಾಷ್ಟ್ರದ್ರೋಹಿಗಳಿಂದ ಪಾಕಿಸ್ತಾನಪರ ಘೋಷಣೆ.ರಾಷ್ಟ್ರದ್ರೋಹಿಗಳ ಬಂಧನಕ್ಕೆ ಆಗ್ರಹ.

*ಬಿಗ್ ಬ್ರೇಕಿಂಗ್ ನ್ಯೂಸ್ * ಬೆಳ್ತಂಗಡಿ: ಡಿಸೆಂಬರ್ 30ರಂದು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯ ಮತಗಳ ಎಣಿಕೆ ಕಾರ್ಯ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎದುರುಗಡೆ ಜಮಾಯಿಸಿದ ಎಸ್‌ಡಿಪಿಐ ಕಾರ್ಯಕರ್ತರು ತಮ್ಮ ಸಂಘಟನೆಯ ಧ್ವಜ ಹಿಡಿದು ಸಹಸ್ರಾರು ಮಂದಿ ಸಾರ್ವಜನಿಕರ ನಡುವೆಯೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿ ರಾಷ್ಟ್ರದ್ರೋಹದ ವಿಕೃತಿ ಮೆರೆದರು. ಸ್ಥಳದಲ್ಲಿದ್ದ ಕೇಸರಿ ಶಾಲು ಧರಿಸಿದ್ದ ಸಹಸ್ರಾರು ಸಂಖ್ಯೆಯ ಹಿಂದು ಕಾರ್ಯಕರ್ತರು ಈ ಸಂದರ್ಭದಲ್ಲಿ ಉದ್ವೇಗಕ್ಕೆ ಒಳಗಾಗದೇ ತಾಳ್ಮೆ ಪ್ರದರ್ಶಿಸಿದ್ದು ಸಂಭಾವ್ಯ […]
ದೀಪೋತ್ಸವ ಪ್ರಯುಕ್ತ ಭಜನಾ ಪಾದಯಾತ್ರೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಗಳು ಡಿಸೆಂಬರ್ 10ರಿಂದ 14ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇಗುಲದ ದ್ವಾರದಿಂದ ಧರ್ಮಸ್ಥಳದವರೆಗೆ 8ನೇ ವರ್ಷದ ಪಾದಾಯಾತ್ರೆ ಡಿಸೆಂಬರ್ 10ರಂದು ನಡೆಯಿತು.ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾl ಎಲ್.ಹೆಚ್. […]
‘ನಾಯಕತ್ವ ಬೆಳೆಯಲು ತರಬೇತಿ ಅಗತ್ಯ’

ಬೆಳ್ತಂಗಡಿ: ಅಂತಾರಾಷ್ಟ್ರೀಯ ಕಾರಿತಾಸ್ ಸಂಸ್ಥೆಯ ಪ್ರಾಯೋಜಕತ್ವ ದಲ್ಲಿ, ಕರ್ನಾಟಕ ರೀಜನಲ್ ಆರ್ಗನೈಜೇಷನ್ ಫಾರ್ ಸೋಶಿಯಲ್ ಸರ್ವಿಸ್ (ಕ್ರಾಸ್) ಸಂಸ್ಥೆ ಬೆಂಗಳೂರು ಇವರ ಮೂಲಕ ಡಿ.ಕೆ.ಆರ್.ಡಿ.ಎಸ್ ಸಂಸ್ಥೆ ಬೆಳ್ತಂಗಡಿ ಇದರ ಸಿಬ್ಬಂದಿ ಮತ್ತು ಸ್ವಯಂ ಸೇವಕರಿಗೆ ಕಾರಿತಾಸ್ ಇಂಡಿಯಾದ ಪ್ರಮುಖ ಕಾರ್ಯತಂತ್ರಗಳ ಸ್ತಂಭಗಳ ಮತ್ತು ವಿಧಾನಗಳ ಕುರಿತು ತರಬೇತಿ ಆಯೋಜಿಸಲಾಗಿತ್ತು.ಈ ತರಬೇತಿಯನ್ನು ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ. ಬಿನೋಯಿ ಏ.ಜೆ. ಉದ್ಘಾಟಿಸಿ ಮಾತನಾಡುತ್ತಾ, ಗ್ರಾಮ ಮಟ್ಟದಲ್ಲಿ ನಾಯಕ ನಾಯಕಿಯರು ಬೆಳೆದು ಸಮಾಜಮುಖಿ ಕೆಲಸ ಮಾಡಲು ತರಬೇತಿಗಳ ಅಗತ್ಯವಿದೆ. ಸಮಾಜ […]
ರಾಷ್ಟ್ರ ಪುನರ್ ನಿರ್ಮಾಣದ ಕಲ್ಪನೆ ಸಾಕಾರವಾಗಲಿ.ವೇಣೂರಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟಿಸಿ ಶಾಸಕ ಪೂಂಜಾ.

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್‌ರ ಕಲ್ಪನೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆಯ ಸ್ವಾವಲಂಬಿ-ಸ್ವಾಭಿಮಾನಿ ಭಾರತ್ ನಿರ್ಮಾಣವನ್ನು ದೃಷ್ಟಿಯಲ್ಲಿರಿಸಿ; ಯುವಕರಿಗೆ ಅವರವರ ಊರುಗಳಲ್ಲೇ ಸ್ವ-ಉದ್ಯೋಗ ಮಾಡಲು ಅವಕಾಶ ಕಲ್ಪಿಸಲು ಈ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಪೂರಕ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ ಉದ್ಯೋಗ ನೈಪುಣ್ಯ ತರಬೇತಿ ಪಡೆದ ಸುಮಾರು 4,000ಯುವಕರ ಪೈಕಿ ಸುಮಾರು 1,200ಯುವಕರು ತಮ್ಮತಮ್ಮ ಊರುಗಳಲ್ಲೇ ಸ್ವ-ಉದ್ಯೋಗ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಆ ಮೂಲಕ ರಾಷ್ಟ್ರ ಪುನರ್ ನಿರ್ಮಾಣ […]
ಪತ್ರಕರ್ತರ ಸಂಘದಿಂದ ಸಾಧಕರಿಗೆ ಸಮ್ಮಾನ

ಬೆಳ್ತಂಗಡಿ: ಸಾಧಕರನ್ನು ಗುರುತಿಸಿ ಅವರನ್ನು ಸಮಾಜಕ್ಕೆ ಪರಿಚಯಿಸುವಂತಹ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಬೆಳ್ತಂಗಡಿ ಪತ್ರಕರ್ತರು ಮುಂಚೂಣಿಯಲ್ಲಿದ್ದಾರೆ ಎಂದು ಶ್ರೀ.ಧ.ಮಂ. ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಸತೀಶ್ಚಂದ್ರ ಹೇಳಿದರು.ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದವತಿಯಿಂದ ನವೆಂಬರ್ 28ರಂದು ನಡೆದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸಮ್ಮಾನಿಸಿ ಅವರು ಮಾತನಾಡಿದರು.ನಮ್ಮ ಸಂಸ್ಕೃತಿಯಲ್ಲಿ ಗುರುಗಳಿಗೆ ಮಹತ್ತರ ಸ್ಥಾನವಿದೆ. ಅವರು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಗುರುತಿಸಿ ಬೆಳೆಸಿದರೆ, ಪತ್ರಕರ್ತರು ಅವರನ್ನು ಸಮಾಜಕ್ಕೆ ಪರಿಚಯಿಸುತ್ತಾರೆ. ವಿವಿಧ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು […]
‘ಸಾರ್ವಜನಿಕ ಸಂಸ್ಥೆಗಳನ್ನು ಚಹಾದಂತೆ ಮಾರುತ್ತಿರುವ ಮೋದಿ’

ಬೆಳ್ತಂಗಡಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತನ್ನ 6 ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ಸಂಸ್ಥೆಗಳಾದ ವಿಮಾನ, ರೈಲ್ವೆ, ವಿಮೆ, ಬಂದರು, ಬ್ಯಾಂಕುಗಳನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಚಹಾ ಮಾರಿದಂತೆ ಮಾರಾಟ ಮಾಡುತ್ತಿದ್ದಾರೆ ಎಂದು ಸಿಐಟಿಯು ತಾಲೂಕು ಅಧ್ಯಕ್ಷ, ಹಿರಿಯ ನ್ಯಾಯವಾದಿ ಶಿವಕುಮಾರ್ ಎಸ್. ಎಂ. ಆರೋಪಿಸಿದರು.ಅವರು ನವೆಂಬರ್ 27ರಂದು ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ (JCTU) ಕರೆ ನೀಡಿದ ಅಖಿಲ ಭಾರತ ಮುಷ್ಕರ ಬೆಂಬಲಿಸಿ ಸಿಐಟಿಯು ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನಸೌಧದ […]
ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73 ನೇ ಹುಟ್ಟುಹಬ್ಬದ ಸಂದರ್ಭ ನಾಡಿನ ಗಣ್ಯರು, ಅಭಿಮಾನಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಡಾ. ಹೆಗ್ಗಡೆಯವರಿಗೆ ಶುಭ ಹಾರೈಸಿದರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೆಗ್ಗಡೆಯವರ ಕುಟುಂಬಸ್ಥರು ಜೊತೆಗಿದ್ದರು. ಡಾ.ಹೆಗ್ಗಡೆಯವರ ಹುಟ್ಟು ಹಬ್ಬದ ಸಂದರ್ಭ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರ ಕಲ್ಪನೆಯಂತೆ ಧರ್ಮಸ್ಥಳ ಗ್ರಾಮಾಭಿವೃದ್ದಿ […]