ಮಗುವಿಗೆ ವಿಷವಿಕ್ಕಿ ದಂಪತಿ ಸಾವಿಗೆ ಯತ್ನ
ಬೆಳ್ತಂಗಡಿ: ತಮ್ಮ ಕರುಳಕುಡಿಗೆ ವಿಷವಿಕ್ಕಿದ ದಂಪತಿಗಳು ತಾವೂ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ದುರ್ಘಟನೆ ನವೆಂಬರ್ 3ರಂದು ಕೊಕ್ರಾಡಿಯಿಂದ ವರದಿಯಾಗಿದ್ದು; ದುರ್ಘಟನೆಯಲ್ಲಿ ಅಮಾಯಕ ಮಗು ಕಿಶಾ(5)ಹಾಗೂ ಮಗುವಿನ ತಂದೆ ಚೇತನ್ ಕುಮಾರ್ (32) ಸಾವಿಗೀಡಾಗಿದ್ದು; ಮಗುವಿನ ತಾಯಿ ಆಶಾಲತಾ (27) ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಸಧ್ಯಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಹೆಡ್ಲಬೆಟ್ಟು ನಿವಾಸಿ ಚೇತನ್ ಕುಮಾರ್ ನವೆಂಬರ್ 2ರ ಸಂಜೆ ತಂಪು ಪಾನೀಯಕ್ಕೆ ವಿಷಯುಕ್ತ […]
ಕೃಷಿ ಇಲಾಖೆಯಿಂದ ಟ್ರಾಕ್ಟರ್ ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬೆಳ್ತಂಗಡಿಯ ವತಿಯಿಂದ ನವೆಂಬರ್ 4ರಂದು ಕಛೇರಿಯ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾರವರು ಆಯ್ಕೆಯಾದ ಅರ್ಹ ಕೃಷಿಕ ಫಲಾನುಭವಿಗಳಿಗೆ ಟ್ರಾಕ್ಟರ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ ಹಾಗೂ […]
ಕಾಂಗ್ರೇಸ್ ಐಕ್ಯತಾ ಸಮಾವೇಶ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗ್ರಾಮೀಣ ಬ್ಲಾಕ್ ಸಮಿತಿ ಬೆಳ್ತಂಗಡಿ ಹಾಗೂ ಗ್ರಾಮ ಸಮಿತಿ ನೆರಿಯ ಇದರ ಜಂಟಿ ಆಶ್ರಯದಲ್ಲಿ ನೆರಿಯ ಗ್ರಾಮ ಪಂಚಾಯತ್ ಮಟ್ಟದ ಗ್ರಾಮ ಸಮಿತಿ ಮತ್ತು ಬೂತ್ ಸಮಿತಿಯ ಪದಾಧಿಕಾರಿಗಳ ಐಕ್ಯತಾ ಸಮಾವೇಶವು ನೆರಿಯ ಗ್ರಾಮದ ಬಯಲು ಅಂಕೋತ್ಯಾರು ಇಸುಬು ರವರ ಮನೆ ವಠಾರದಲ್ಲಿ ನಡೆಯಿತು.ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ. ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವ ಕೆ. ಗಂಗಾಧರ ಗೌಡ […]
ತೋಟಗಾರಿಕಾ ಕಛೇರಿ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕಾ ಇಲಾಖಾ ಕಛೇರಿಯ ನೂತನ ಕಟ್ಟಡವನ್ನು ನವೆಂಬರ್ 4ರಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ ಹಾಗೂ ಸೌಮ್ಯಲತಾ ಜಯಂತ್ ಗೌಡ, ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಶಶಿಧರ ಕಲ್ಮಂಜ, ಸದಸ್ಯರಾದ […]
ಇವರಿಗೆ ಪ್ರಧಾನಿ ಮೋದಿ ಆದರ್ಶನಾ…? ಮಾಸ್ಕ್ ಧರಿಸದೇ ಇನ್ನೊಂದು ಹೈಮಾಸ್ಕ್ ದೀಪ ಉದ್ಘಾಟನೆ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಶ್ರೀ ಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಅಳವಡಿಸಲಾದ ಹೈಮಾಸ್ಕ್ ದೀಪವನ್ನು ನವೆಂಬರ್ 3ರಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ಕಳೆದ ವಾರ ಸುಲ್ಕೇರಿಮೊಗ್ರು ದೈವಸ್ಥಾನದಲ್ಲಿ ನಡೆದಂತೆ ಇಲ್ಲೂ ಕೂಡಾ ಮಾಸ್ಕ್ ಧರಿಸದೇ ಬಹುತೇಕರು ಹೈಮಾಸ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೊರೋನಾ ಸೋಂಕಿಗೆ ಸವಾಲು ಹಾಕಿದರು.ಬಹಳ ವಿಶೇಷವೆಂದರೆ ಹೇಳಿಕೇಳಿ ಈ ಕಾರ್ಯಕ್ರಮಗಳಲ್ಲಿ ಉದ್ಘಾಟಕರಾಗಿ ಭಾಗವಹಿಸಿದ ಶಾಸಕ ಹರೀಶ್ ಪೂಂಜಾರ ಸಹಿತ ಬಹುತೇಕರು ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರ […]
ಜಾಗೃತ ಸಮಾಜದಿಂದ ಭ್ರಷ್ಟಾಚಾರಕ್ಕೆ ಕಡಿವಾಣ.ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ನ್ಯಾl ನಾಗೇಶ್ ಮೂರ್ತಿ

ಬೆಳ್ತಂಗಡಿ: ಭ್ರಷ್ಟಾಚಾರಕ್ಕೆ ಅದರದ್ಧೇ ಆದ ಕರಾಳ ಇತಿಹಾಸವಿದೆ. ರಾಷ್ಟ್ರದ ಅಭಿವೃದ್ಧಿಗೆ ಭ್ರಷ್ಟಾಚಾರಕ್ಕೆಕಡಿವಾಣ ಹಾಕಬೇಕಾದ್ದು ತೀರಾ ಅಗತ್ಯ. ಅದಕ್ಕಾಗಿ ಸಮಾಜವನ್ನು ಜಾಗೃತಗೊಳಿಸಬೇಕಾಗಿದೆ. ಜಾಗೃತ ಸಮಾಜದಿಂದ ಮಾತ್ರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ಕೆ. ನಾಗೇಶ್ ಮೂರ್ತಿ ಹೇಳಿದರು.ಅವರು ನವೆಂಬರ್ 2ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, […]
ಕಾರ್ಮಿಕರಿಗೆ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಜಂಟಿ ಅಶ್ರಯದಲ್ಲಿನೊಂದಣಿಯಾದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮಹಾಗೂ ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವು ನವೆಂಬರ್ 1ರಂದು ಮರೋಡಿ ಗ್ರಾಮಪಂಚಾಯತ್ ಸಭಾ ಭವನ ದಲ್ಲಿ ನಡೆಯಿತು.ಭಾರತೀಯ ಮಜ್ದೂರ್ ಸಂಘದ ಮರೀಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಕರ್ಕೇರ ಇವರ ನೇತ್ರತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಘದ ತಾಲೂಕು ಸಮಿತಿ ಅಧ್ಯಕ್ಷರಾದ ಉದಯ […]
ಘನತ್ಯಾಜ್ಯ ವಿಲೇವಾರಿ ಘಟಕದ ಬ್ರ್ಯಾಂಡಿಗ್ ಲೋಕಾರ್ಪಣೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆ ‘ಸ್ವಚ್ಛೋತ್ಸವ -ನಿತ್ಯೋತ್ಸವ’ ಮಾಸಾಚರಣೆ ಪ್ರಯುಕ್ತ ಧರ್ಮಸ್ಥಳ ಗ್ರಾಮ ಪಂಚಾಯತ್ ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ರ್ಯಾಂಡಿಗ್ ಲೋಕಾರ್ಪಣೆ ಕಾರ್ಯಕ್ರಮ ಅಕ್ಟೋಬರ್ 30 ರಂದು ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡುತ್ತಾ, ಸ್ವಚ್ಛತೆ ಕಡೆಗೆ ಆದಷ್ಟು ಗಮನ ನೀಡಬೇಕು. ನಮ್ಮ ಸುತ್ತಮುತ್ತಲ ಪ್ರದೇಶದ ಸ್ವಚ್ಛತೆಯಲ್ಲಿ ನಮ್ಮ ಪಾತ್ರ ಪ್ರಾಮುಖ್ಯತೆ ವಹಿಸಿದೆ. ಪಂಚಾಯತ್ ಮಟ್ಟದ ಎಲ್ಲಾ ಅಧಿಕಾರಿಗಳು ಸ್ವಚ್ಛತೆ ಬಗ್ಗೆ ಹೆಚ್ಚಿನ […]
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಎಸ್.ಟಿ. ಮೋರ್ಚಾದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪರ್ಷನೆ ಮಾಡಿ ಮಾತನಾಡುತ್ತಾ, ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮಹನೀಯರ ಆದರ್ಶಗಳನ್ನು ಮುಂದಿಟ್ಡುಕೊಂಡು ಆ ವರ್ಗಗಳಿಗೆ ಶಕ್ತಿ ನೀಡುವ ಕೆಲಸ ಮಾಡುತ್ತಿದೆ. ಮಹರ್ಷಿ ವಾಲ್ಮೀಕಿ ನಮಗೆ ಆ ದೃಷ್ಠಿಯಿಂದ ಆದರ್ಶಪ್ರಾಯರು ಎಂದರು.ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ […]
ಬೆಳ್ತಂಗಡಿಯಲ್ಲಿ ನಕಲಿ ನೋಟು ಪತ್ತೆ

ಬೆಳ್ತಂಗಡಿ : ಇತ್ತೀಚಿನ ದಿನಗಳಲ್ಲಿ ಖೋಟಾನೋಟು ಚಲಾವಣೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಜಾಲದ ಬಾಹುಗಳು ಬೆಳ್ತಂಗಡಿ ಚಾಚಿಕೊಂಡ ಬಗ್ಗೆ ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಕಾಪಿನಡ್ಕದ ಅಲಡ್ಕ ಚಿಕನ್ ಸೆಂಟರ್ ಮಾಲಕ ದೇವದಾಸ್ ಎಂಬರಿಗೆ ಒಂದು ಬೆಳಿಗ್ಗೆ ಕಾಪನಡ್ಕ ಹೋಟೆಲ್ ಮಾಲಕರೊಬ್ಬರು ವ್ಯವಹಾರ ಸಮಯದಲ್ಲಿ 100 ರೂಪಾಯಿಯ 3 ಹೊಸ ನೋಟು ನೀಡಿದ್ದರು. (300 ರೂಪಾಯಿ) ಅವರು ತನ್ನ ಚಿಕನ್ ಅಂಗಡಿಯಲ್ಲಿ ವ್ಯವಹಾರದ ಸಮಯ ಇದೇ ನೋಟನ್ನು ಬೇರೆಯರಿಗೆ ನೀಡಿದಾಗ ಅವರಿಗೆ ಒಂದು ನೂರು ರೂಪಾಯಿ […]