“ಫಿಟ್ ಇಂಡಿಯಾ ಪ್ರೀಡಮ್ ರನ್”

ಮಡಂತ್ಯಾರು: ಕಾಲೇಜು ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಫಿಸಿಕಲ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾ ಕರ್ನಾಟಕ, ಮತ್ತು ಫಿಟ್ ಇಂಡಿಯಾ ಇವುಗಳ ಸಹಕಾರದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಮತ್ತು ರಾಷ್ಟೀಯ ಸೇವಾ ಯೋಜನೆ ಇವುಗಳ ಜಂಟಿ ಆಶ್ರಯದಲ್ಲಿ “ಫಿಟ್ ಇಂಡಿಯಾ ಫ್ರೀಡಮ್ ರನ್” ಕಾರ್ಯಕ್ರಮವು ಕಾಲೇಜಿನ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 5ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು ಸಂಚಾಲಕರಾದ ವಂ| ಬೆಸಿಲ್ ವಾಸ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಜೋಸೆಪ್ ಎನ್. ಎಮ್., ಕಾರ್ಯಕ್ರಮ […]

ಫೊಟೋಗ್ರಾಫರ್ಸ್ ಎಸೋಸಿಯೇಷನ್‌ನ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಷನ್ ದ. ಕ. ಹಾಗೂ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 18ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 5 ರಂದು ಗುರುವಾಯನಕೆರೆ ಶ್ರೀ ಅಯ್ಯಪ್ಪ ಗುಡಿ ಬಳಿಯಿರುವ ಛಾಯಭವನದಲ್ಲಿ ವಲಯದ ಅಧ್ಯಕ್ಷ ಸುರೇಶ್ ಬಿ. ಕೌಡಂಗೆಯವರ ಅಧ್ಯಕ್ಷತೆಯಲ್ಲಿ ಜರಗಿತು. ದ. ಕ. ಹಾಗೂ ಉಡುಪಿ ಜಿಲ್ಲಾ ಫೋಟೋಗ್ರಾಫರ್ಸ್ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಛಾಯಾಗ್ರಾಹಣ ವೃತ್ತಿ ಉಳಿದರೆ ಮಾತ್ರ ಸಂಘಟನೆ ಬೆಳೆಯಬಹುದು. ನಮ್ಮ ಸದಸ್ಯರ ಕಷ್ಟಗಳನ್ನು ಅರಿತು […]

ಮತ್ತೆ ತಲೆ ಎತ್ತಿದ ಅಕ್ರಮ ಮರಳು ಧಂದೆ

ಬೆಳ್ತಂಗಡಿ: ಮಳೆ ಬಿಡುವು ನೀಡುತ್ತಿದ್ದಂತೆಯೇ ಮಿತ್ತಬಾಗಿಲು ಗ್ರಾಮದ ನೇತ್ರಾವತಿ ನದಿಯ ದಡದಲ್ಲಿ ಅಕ್ರಮ ಮರಳುಗಾರಿಕೆ ಮತ್ತೆ ಆರಂಭವಾಗಿದೆ.ಈಗಾಗಲೇ ನದಿ ಕೊರೆತದಿಂದ ಹಲವರ ಕೃಷಿ ಜಾಗ ನದಿ ಪಾಲಾಗಿದೆ. ಆದರೆ ಮತ್ತೆ ಗಾಯಕ್ಕೆ ಬೆಂಕಿ ಸುರಿಯುವಂತೆ ಮರಳನ್ನು ತೆಗೆಯುವ ಮೂಲಕ ಅಕ್ರಮ ಮರಳುಗಾರರು ಮತ್ತಷ್ಟು ತೊಂದರೆ ನೀಡುತ್ತಿದ್ದಾರೆ.ಕಂಚರೋಡಿ ಭಾಗದಲ್ಲಿ ನದಿ ಕೊರೆತ ಉಂಟಾಗಿದ್ದು ಸಾಕಷ್ಟು ಸಮಸ್ಯೆ ಸೃಷ್ಟಿಸಿದೆ. ಈಗ ಇಲ್ಲಿ ಅಕ್ರಮ ಮರಳುಗಾರಿಕೆಯಿಂದ ಕೃಷಿ ಭೂಮಿ ನದಿ ನೀರಿಗೆ ಮತ್ತಷ್ಟು ಕೊರೆದು ಹೋಗುವ ಅಪಾಯ ಉಂಟಾಗಿದೆ.ಬೆಳಗ್ಗೆ 6 ಗಂಟೆಯಿಂದ […]

ನಾಪತ್ತೆಯಾದ ಯುವಕ ಶವವಾಗಿ ಪತ್ತೆ

ಬೆಳ್ತಂಗಡಿ : ಚೆನ್ನರಾಯಪಟ್ಟಣದ ಖಾಸಗಿ ಸಂಸ್ಥೆಯೊಂದರಲ್ಲಿ ಮೇನೇಜರ್ ಆಗಿ9 ದಿನಗಳ ಹಿಂದೆಯಷ್ಷೇ ಕೆಲಸಕ್ಕೆ ಸೇರಿದ್ದ; ತದನಂತರ ಏಕಾಏಕಿ ನಾಪತ್ತೆಯಾದ ಯುವಕನ ಶವ ತನ್ನ ನಾವೂರು ಮನೆಯ ಸಮೀಪ ಕೆರೆಯಲ್ಲಿ ಪತ್ತೆಯಾದ ಘಟನೆ ಆ.28 ರಂದು ವರದಿಯಾಗಿದೆ.ನಾವೂರು ಗ್ರಾಮದ ನಾಗಜೆ ನಿವಾಸಿ ದಿ। ಶೀನಪ್ಪ ಗೌಡರ ಪುತ್ರ ರಕ್ಷಿತ್ (28) ಅಸಹಜವಾಗಿ ಸಾವನ್ನಪ್ಪಿದ ಯುವಕ.ರಕ್ಷಿತ್ 9ದಿನಗಳ ಹಿಂದೆ ಚೆನ್ನರಾಯಪಟ್ಟಣಕ್ಕೆ ಹೋಗಿ ಕೆಲಸಕ್ಕೆ ಸೇರಿದ್ದು, ಕಳೆದ ಆ.22ರಂದು ಶನಿವಾರ ಮನೆಗೆ ಬಂದಿದ್ದರು. ಗಣೇಶ ಹಬ್ಬ ಪೂರೈಸಿದ ಬಳಿಕ ಆಗಸ್ಟ್ 24ರಂದು […]

ರಾಷ್ಟ್ರಮಟ್ಟದ ಜಲಸಾಕ್ಷರತೆ 2020 ಜಲಸಾಕ್ಷರತೆ : ರಾಷ್ಟ್ರಮಟ್ಟದ ವಿಚಾರ ಸಂಕಿರಣ.

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ವತಿಯಿಂದ ಜಲಸಾಕ್ಷರತೆಯ ಬಗ್ಗೆ ರಾಷ್ಟ್ರಮಟ್ಟದ ಆನ್ ಲೈನ್ ವಿಚಾರ ಸಂಕೀರ್ಣವನ್ನು ಆಗಸ್ಟ್ 29ರಂದು ಹಮ್ಮಿಕೊಳ್ಳಲಾಯಿತುಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಮ್. ಇವರು ಆನ್ ಲೈನ್ ಮೂಲಕ ಜಲಸಾಕ್ಷರತೆಯ ಬಗ್ಗೆ ಉಪನ್ಯಾಸ ನೀಡಿದರು. ಅಭಿಯಾನದ ಪ್ರಾಯೋಗಿಕ ಉದಾಹರಣೆಗಳ ಸಹಿತ ಮಳೆ ನೀರು ಕೊಯ್ಲು ಬಗ್ಗೆ ಮಾಹಿತಿ ನೀಡಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಭಾಗಿತ್ವದೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮವನ್ನು ಸೇಕ್ರೆಡ್ […]

ನಡ ಸರಕಾರಿ ಪ್ರೌಢ ಶಾಲಾ ಗಣಿತ ಶಿಕ್ಷಕ ಯಾಕೂಬ್‌‌ರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಪ್ರೌಢ ಶಾಲೆಯ ಗಣಿತ ಶಿಕ್ಷಕ , ಶಾಲೆಯ ಗಣಿತ ಪ್ರಯೋಗಾಲಯದ ರೂವಾರಿ ಯಾಕೂಬ್‌ರವರನ್ನು ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದ ರಾಷ್ಟ್ರ ಮಟ್ಟದ ಉತ್ತಮ‌ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸೆಪ್ಟೆಂಬರ್ 5ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಘನತೆವೆತ್ತ ರಾಮನಾಥ ಕೋವಿಂದ್ ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ರಕ್ತದಾನಂ ಮಹಾದಾನಂ – ಜೀವದಾನಂಚ ನಿಶ್ಚಯಂ’

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ಹಾಗೂ ಸಂಶೋಧನಾ ಸಂಘ (ನಿ) ಮಂಗಳೂರು , ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಹಾಗೂ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಬೆಳ್ತಂಗಡಿ ವಿಘ್ನೇಶ್ ಬಿಲ್ಡಿಂಗ್‌ನಲ್ಲಿ ಆಗಸ್ಟ್ 21 ರಂದು ಜರುಗಿತು.ಕೊರೋನಾ ವೈರಸ್ ನಿಂದಾಗಿ ಜಿಲ್ಲೆಯ ಬ್ಲಡ್ ಬ್ಯಾಂಕುಗಳಲ್ಲಿ ರಕ್ತದ ಕೊರತೆ ಇರುವುದನ್ನು ಮನಗಂಡು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಂಗಾತಿ ಎಕೆಜಿ […]

ಮಡಂತ್ಯಾರು ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ‘ಸದ್ಭಾವನಾ ದಿನ’

ಮಡಂತ್ಯಾರು: ರಾಷ್ಟ್ರದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಇವರ ಜನ್ಮದಿನವಾದ ಆಗಸ್ಟ್ 20ನ್ನು ದೇಶದಾದ್ಯಂತ ಸದ್ಭಾವನಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷ ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತೆಯಾಗಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕಾದ ಹಿನ್ನೆಲೆಯಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ರಾಜೀವ್ ಗಾಂಧಿ ಜನ್ಮದಿನದ ಸಂದೇಶವನ್ನು ಹಂಚಿಕೊಳ್ಳಲು ಆನ್‌ಲೈನ್ ಕಾರ್ಯಕ್ರಮವನ್ನು ಆಯೋಜಿಸಿತು.ಕಾಲೇಜಿನ ಪ್ರಾಂಶುಪಾಲರಾದ , ಡಾ.ಜೋಸೆಫ್ ಎನ್. ಎಂ. ಭಾಗವಹಿಸಿದವರನ್ನು ಉದ್ದೇಶಿಸಿ ಮಾತನಾಡಿ, ಸದ್ಭಾವನಾ ದಿನಾಚರಣೆಯ ಹಿನ್ನೆಲೆಯನ್ನು ತಿಳಿಸಿದರಲ್ಲದೇ; ವಿದ್ಯಾರ್ಥಿಗಳು ಶಾಂತಿ, […]

ಪ್ರತಿಭಾವಂತ ವಿದ್ಯಾರ್ಥಿಗೆ ಮೊಬೈಲ್ ನೀಡಿ ಪ್ರೋತ್ಸಾಹಿಸಿದ ಉದ್ಯಮಿ ಪುಷ್ಪರಾಜ್ ಶೆಟ್ಟಿ

ಬೆಳ್ತಂಗಡಿ : ಕಳೆದ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ಮೊಬೈಲ್ ಫೋನ್ ಇಲ್ಲದ ಬಡ ವಿದ್ಯಾರ್ಥಿಯೊಬ್ಬನಿಗೆ ಬೆಳ್ತಂಗಡಿಯ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿಯವರು ಅಂಡ್ರಾಯ್ಡ್ ಮೊಬೈಲ್ ನೀಡಿ ಅವನ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.ಕಳೆದ 5 ತಿಂಗಳ ಹಿಂದೆ ಇವನ ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದು, ತಂದೆ 6 ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಗೇರುಕಟ್ಟೆಯಲ್ಲಿರುವ ತನ್ನ ಅಜ್ಜನ ಮನೆಯಲ್ಲಿ ವಾಸ್ತವ್ಯವಿದ್ದು, ಕೊರೊನಾ ಮಹಾಮಾರಿಯಿಂದ ಈ ಭಾರಿ ಹತ್ತನೆ ತರಗತಿಯ ಪರೀಕ್ಷೆಗೆ ತಯಾರಿಗಳು ಮೊಬೈಲ್ ಮೂಲಕವೇ ಅಧ್ಯಾಪಕರು […]

ವಿವಿಧತೆಯಲ್ಲಿ ಏಕತೆಯೇ ಭಾರತದ ಪರಂಪರೆ

ಸ್ವಾತಂತ್ರ್ಯಕ್ಕಾಗಿ ನಡೆಸಿದ ಸಮರವು 1947 ಆಗಸ್ಟ್ 15 ರಂದು ಫಲ ನೀಡಿತು. ದೇಶದ ಆಡಳಿತವು ಭಾರತೀಯರ ವಶವಾದಾಗ ದೀರ್ಘವಾದ 200 ವರ್ಷಗಳ ಪರಕೀಯರ ವಂಚನಾತ್ಮಕ ಆಡಳಿತವು ಕೊನೆಗೊಂಡಿತು. ಅದರೊಂದಿಗೆ ನಾವು ಸ್ವತಂತ್ರರಾದೆವು. ಶತಮಾನಗಳ ಕಾಲ ವಿದೇಶಿಯರ ಸಾಮ್ರಾಜ್ಯಕ್ಕೆ ಅಂತ್ಯ ಹಾಡಿ, 1947 ಆಗಸ್ಟ್ 14 ರ ಮಧ್ಯರಾತ್ರಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ನಮ್ಮ ರಾಷ್ಟ್ರ ನಾಯಕರ, ಸ್ವಾತಂತ್ರ್ಯ ಹೋರಾಟಗಾರರ ಆಗ್ರಹದಂತೆ, ನಮ್ಮ ದೇಶವು ಸರ್ವ ಧರ್ಮೀಯರ ಜಾತ್ಯತೀತ, ಪ್ರಜಾಪ್ರಭುತ್ವ ರಾಷ್ಟ್ರವಾಯಿತು.ಭಾರತವು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ, […]