ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಪೆಟ್ರೋಲ್-ಡೀಸಿಲ್ ಬೆಲೆಯನ್ನು ಅವೈಜ್ಞಾನಿಕವಾಗಿ ಮನಬಂದಂತೆ ಏರಿಕೆ ಮಾಡುವ ಕೇಂದ್ರ ಸರಕಾರದ ಜನವರೋಧಿ ನೀತಿಯನ್ನು ವಿರೋದಿಸಿ ಜೂನ್ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಾಂಕೇತಕ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ನೀಡಲಾಯಿತು.ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘ, ದ.ಕ. ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ, ಬೆಳ್ತಂಗಡಿ ತಾಲೂಕು ಋಣಮುಕ್ತ ಹೋರಾಟ ಸಮಿತಿ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸಂಘಟನೆಗಳ ಪ್ರಮುಖರಾದ ಬಿ. ಎಂ. ಭಟ್, ಜಯರಾಮ ಮಯ್ಯ , ಲೋಕೇಶ್ ಕುದ್ಯಾಡಿ, […]

ಶಿಶಿಲ ದೇಗುಲದ ದೇವರ ಮೀನಿಗೆ ದುಶ್ಕರ್ಮಿಗಳಿಂದ ಗಾಳ

ಶಿಶಿಲ: ಇಲ್ಲಿನ ಐತಿಹಾಸಿಕ ಶ್ರೀ ಶಿಶಿಲೇಶ್ವರ ದೇಗುಲದ ಕಪಿಲಾ ನದಿಯಲ್ಲಿರುವ ಪೆರುವೋಳು ಜಾತಿಗೆ ಸೇರಿದ ಮೀನುಗಳು ದೇವರ ಮೀನುಗಳೆಂದೇ ಇಲ್ಲಿನ ಭಕ್ತರ ನಂಬಿಕೆ. ಈ ದೇಗುಲಕ್ಕೆ ಬರುವ ಭಕ್ತರು ಗರ್ಭಗುಡಿಯಲ್ಲಿರುವ ದೇವರಲ್ಲಿ ತೋರುವ ಭಕ್ತಿಯನ್ನು ಈ‌ ಮೀನುಗಳಲ್ಲೂ ತೋರುತ್ತಾರೆ. ಇಂತಹ ದೇವರ ಮೀನುಗಳ ಮೇಲೆ ದುಷ್ಕರ್ಮಿಗಳ ಕಣ್ಣು ಬಿದ್ದರೆ ದೇಗುಲದ ಸ್ಥಳೀಯ ಭಕ್ತರು ಸುಮ್ಮನಿದ್ದಾರೇ… ದುಷ್ಕರ್ಮಿಗಳಿಗೆ ಧರ್ಮದೇಟು ಬೀಳದಿರಲು ಸಾಧ್ಯವೇ… ಜೂನ್ 21ರ ಆದಿತ್ಯವಾರ ಸೂರ್ಯಗ್ರಹಣದಂದು ಇಲ್ಲಿನ ದೇಗುಲದ ಮೀನಿಗೆ ಗಾಳ ಹಾಕಲು ಬಂದ ಸ್ಥಳೀಯ ಮಸೀದಿಯ […]

ಜಂಟಿ ಸಮಾಲೋಚನಾ ಸಭೆ ಕರೆಯಲು‌ ಮನವಿ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ಸೇವಾ ಸೌಲಭ್ಯಗಳಿಗೆ ಸ್ಪಂದಿಸಲು ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾದ ಜಂಟಿ ಸಮಾಲೋಚನಾ ಸಮಿತಿಯ ಸಭೆಯನ್ನು ಕರೆಯುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಲಿಖಿತ‌ ಮನವಿ ನೀಡಿ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

6ನೇ ವಿಶ್ವ ಯೋಗ ದಿನಾಚರಣೆ

ಯೋಗದಿಂದ ನೆಮ್ಮದಿಯ ಬದುಕು-ಡಾl ಪ್ರಶಾಂತ್ ಶೆಟ್ಟಿ ಬೆಳ್ತಂಗಡಿ: ಕಳೆದ 5 ವರ್ಷಗಳಿಂದ ವಿಶ್ವ ಯೋಗ ದಿನವನ್ನು ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭಾರತ ಸರಕಾರದ ಆಯುಷ್ ಮಂತ್ರಾಲಯದ ನಿರ್ದೇಶನದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಸಂಘಸಂಸ್ಥೆಗಳ ಸದಸ್ಯರನ್ನು ತರಬೇತುಗೊಳಿಸಿ, ಒಂದೇ ವೇದಿಕೆಯಲ್ಲಿ ಯೋಗ ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ಆಚರಿಸುತ್ತಿದ್ದೆವು. ಕೊರೋನಾ ಸೋಂಕಿನ‌ ಭೀತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡಬೇಕಾದ್ದರಿಂದ ಬದಲಾದ […]

ವಿಧಾನ ಪರಿಷತ್ ಚುನಾವಣೆಗೆ ಪ್ರತಾಪ್ ಸಿಂಹ ನಾಯಕ್ ನಾಮಪತ್ರ

ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ನ 7ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ದಿಸಲು ಬಿಜೆಪಿಯ ಅಭ್ಯರ್ಥಿಯಾಗಿ ಬೆಳ್ತಂಗಡಿಯ ನ್ಯಾಯವಾದಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಜೂನ್ 18ರಂದು ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ವಿಶಾಲಾಕ್ಷಿಯವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಅರವಿಂದ ಲಿಂಬಾವಳಿ ಮತ್ತಿತರರು ಹಾಜರಿದ್ದರು.ವಿಧಾನಸಭೆಯ ಸಂಖ್ಯಾಬಲದಂತೆ ವಿಧಾನ ಪರಿಷತ್ತಿನ […]

ಮಾಸ್ಕ್ ಧರಿಸಿ ಸ್ವಯಂ ರಕ್ಷಣೆ ಮಾಡಿಕೊಳ್ಳಿ…. ಡಾ. ವಿದ್ಯಾವತಿ

ಇಂದಿನ ಕೋವಿಡ್ 19 ಸಂಕಷ್ಟ ಕಾಲದಲ್ಲಿ ಸ್ವಯಂ ಆರೋಗ್ಯ ರಕ್ಷಣೆಗಾಗಿ ಮಾಸ್ಕ್, ಸ್ಯಾನಿಟೈಸರ್, ವೈಯಕ್ತಿಕ ಅಂತರ ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಸಾಂಕ್ರಾಮಿಕ ಕೋರೋನಾ ರೋಗವನ್ನು ತಡೆಗಟ್ಟಲು ಹಾಗೂ ಸೋಂಕು ಹರಡದಂತೆ ನಿಯಂತ್ರಿಸಲು ಸಾಧ್ಯವಿದೆ. ಕೋರೋನಾ ಸೋಂಕಿನ ಬಗ್ಗೆ ಭಯ ಬೇಡ, ಎಚ್ಚರವಿರಲಿ ಎಂದು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯ ಮುಖ್ಯ ವೈದ್ಯಾಧಿಕಾರಿ ಡಾಕ್ಟರ್ ವಿದ್ಯಾವತಿ ಅವರು ಕರೆ ನೀಡಿದರು.ದೇಶಾದ್ಯಂತ ಜೂನ್ 18ರಂದು ಮಾಸ್ಕ್ ದಿನಾಚರಣೆಯನ್ನು ಆಚರಿಸುತ್ತಿದ್ದು ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾದ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮದಲ್ಲಿ ಅವರು […]

ಮಡಂತ್ಯಾರಿನಲ್ಲಿ‌ ಮಾಸ್ಕ್ ದಿನಾಚರಣೆ

ಮಡಂತ್ಯಾರು: ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧಾರಣೆಯ ಅನಿವಾರ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸಲು ರಾಜ್ಯ ಸರಕಾರ ಸೂಚಿಸಿದಂತೆ ಜೂನ್ 18ರಂದು ಮಡಂತ್ಯಾರಿನಲ್ಲಿ ಮಾಸ್ಕ್ ದಿನಾಚರಣೆ ಆಚರಿಸಲಾಯಿತು.ಮಡಂತ್ಯಾರು ಗ್ರಾಮ ಪಂಚಾಯತಿನ ಆಶ್ರಯದಲ್ಲಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ‌. ನಾಗೇಶ್ ಮಾತನಾಡಿ, ಕೊರೋನಾ ಸೋಂಕು ಹರಡದಂತೆ ತಡೆಯಲು ಮಾಸ್ಕ್ ಧಾರಣೆಯ ಅಗತ್ಯತೆಯನ್ನು ವಿವರಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಕಾಂತಪ್ಪ ಗೌಡ, ಅಬ್ದುಲ್ ರೆಹಮಾನ್ ಪಡ್ಪು, ಮಡಂತ್ಯಾರು ರೋಟರಿ ಕ್ಲಬ್ಬಿನ‌ ನಿಯೋಜಿತ […]

ಮದ್ದಡ್ಕ ಪೇಟೆಯಲ್ಲೊಂದು ಸೊಳ್ಳೆ ಉತ್ಪಾದನಾ ಕೇಂದ್ರ

ಬೆಳ್ತಂಗಡಿ: ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಚರಂಡಿಯಲ್ಲಿ ಹರಿಯಬೇಕಾದ ಮಳೆ ನೀರು ರಸ್ತೆಯಲ್ಲಿಯೇ ಬಸ್ ತಂಗುದಾಣದ ಸುತ್ತ ನಿಂತು ನಾಗರಿಕರಿಗೆ ಹೊಸ ಸಮಸ್ಯೆ ಸೃಷ್ಟಿಸಿದೆ. ಕುವೆಟ್ಟು ಗ್ರಾಮದ ಬೆಳ್ತಂಗಡಿ-ಮಂಗಳೂರು ಹೆದ್ದಾರಿಯಲ್ಲಿ ಮದ್ದಡ್ಕ ಪೇಟೆಯಲ್ಲಿ ನಾಗರಿಕರು ಈ ಸಮಸ್ಯೆ ಎದುರಿಸುತ್ತಿದ್ದು; ಹೀಗೆ ನಿಂತ ನೀರಲ್ಲಿ ಸೊಳ್ಳೆ ಉತ್ಪತ್ತಿಯಾಗಿ, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗ ಹರಡುವ ಕೇಂದ್ರವಾಗುವ ಮುನ್ನ ಸಂಬಂಧಪಟ್ಟ ಇಲಾಖೆ ಎಚ್ಚೆತ್ತು ಚರಂಡಿ ದುರಸ್ಥಿಗೊಳಿಸಿ, ರಸ್ತೆಯ ಬದಿಯಲ್ಲಿ-ರಸ್ತೆಯಲ್ಲಿ ನಿಂತ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯುವಂತೆ ಮಾಡಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕೊರೋನಾ ವಾರಿಯರ್ಸ್‌ಗೆ ಅಭಿನಂದನೆ

ಬೆಳ್ತಂಗಡಿ: ವಿಶ್ವದಾದ್ಯಂತ ಪಸರಿಸಿ ಲಕ್ಷಾಂತರ ಮಂದಿಯ ಸಾವು-ನೋವುಗಳಿಗೆ ಕಾರಣವಾದ ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಅವಿರತವಾಗಿ ಹೋರಾಡಿ ಕೊರೋನಾ ಮಹಾಮಾರಿಯನ್ನು ಬೆಳ್ತಂಗಡಿ ತಾಲೂಕಿನಲ್ಲಿ ನಿಯಂತ್ರಿಸುವಲ್ಲಿ ಶ್ರಮಿಸಿದ ಕೊರೋನಾ ವಾರಿಯರ್ಸ್‌ಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯು ವಿಶೇಷವಾಗಿ ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್ ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.ಬೆಳ್ತಂಗಡಿಯ ತಹಶೀಲ್ದಾರ್ ನೇತೃತ್ವದ ತಂಡ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪೊಲೀಸ್ ವೃತ್ತ ನಿರೀಕ್ಷಕರು, ಉಪನಿರೀಕ್ಷಕರುಗಳು ಹಾಗೂ ಪೊಲೀಸ್ ಸಿಬ್ಬಂದಿವರ್ಗ, ತಾಲೂಕು ಪಂಚಾಯತ್ […]

ಮರಳು ಸಾಗಾಟ ವಾಹನ ತಡೆಹಿಡಿದು ಮತ್ತೆ ಪ್ರತಿಭಟನೆ

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಫರ್ಲಾಣಿಯಲ್ಲಿ ಜೂನ್ 12ರಂದು ರಾತ್ರಿ ಮರಳು ಸಾಗಾಟದ ಲಾರಿಗಳನ್ನು ಹಾಗೂ ಮರಳು ಸಾಗಾಟಗಾರರ ವಾಹನಗಳನ್ನು ತಡೆಹಿಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಜೂ.9ರಂದು ಇದೇ ರೀತಿ ಪ್ರತಿಭಟನೆ ನಡೆದಾಗ ತಾಲೂಕು ಭೇಟಿಗೆ ಬಂದಿದ್ದ ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ತೆರಳಿ, ರಸ್ತೆ ಸರಿಪಡಿಸಿದ ಬಳಿಕ ಮರಳು ಸಾಗಾಟ ನಡೆಸುವಂತೆ ಗಣಿದಣಿಗಳಿಗೆ ಸೂಚಿಸಿದ್ದರು.ಜಿಲ್ಲಾಧಿಕಾರಿಗಳಲ್ಲಿ ರಸ್ತೆ ದುರಸ್ತಿಗೆ ಒಪ್ಪಿ ಕಾಮಗಾರಿ ಆರಂಭಿಸಿದ್ದ ಮರಳು ಗಣಿದಣಿಗಳು, ದುರಸ್ತಿ ಕಾಮಗಾರಿ ಯನ್ನು ಅರ್ಧದಲ್ಲೇ ನಿಲ್ಲಿಸಿ, ಮತ್ತೆ ಮರಳು […]