ಬಂಗಾಡಿ ಸೊಸೈಟಿಗೆ ಪ್ರಶಸ್ತಿಗಳ ಗರಿ

ಬೆಳ್ತಂಗಡಿ ತಾಲೂಕಿನ ಬಂಗಾಡಿ ವ್ಯವಸಾಯಿಕ ಸಂಘವು ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ರಾಜ್ಯ ಅಪೆಕ್ಸ್ ಬ್ಯಾಂಕ್ ವತಿಯಿಂದ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಲೆಕ್ಕ ಪರಿಶೋಧನೆಯಲ್ಲಿ ‘ಎ’ ತರಗತಿ ಗಳಿಸಿದ ಸಹಕಾರಿ ಸಂಘಗಳ ಪೈಕಿ ತೃತೀಯ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಜಿಲ್ಲಾ ಡಿಸಿಸಿ ಬ್ಯಾಂಕ್ ವತಿಯಿಂದ ಪಡೆದಿದೆ.ಈ ಪ್ರಶಸ್ತಿಗಳನ್ನು ಡಿಸೆಂಬರ್ 14 ರಂದು ಮಂಗಳೂರಿನಲ್ಲಿ ಜರಗಿದ ಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ […]
ಪೆರಾಡಿ ಸೊಸೈಟಿಗೆ ಪ್ರಶಸ್ತಿ ನೀಡಿ ಪುರಸ್ಕಾರ

ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2020-21ನೇ ಸಾಲಿನ ಮಹಾಸಭೆಯಲ್ಲಿ 2020-21ನೇ ವರದಿ ಸಾಲಿನಲ್ಲಿ ಆರ್ಥಿಕ ವ್ಯವಹಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತೀಫ್‌ರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಿ, ಅಭಿನಂದಿಸಲಾಯಿತು. ದಕ್ಷಿಣ […]
ಮಂಗಳೂರು ವಿ.ವಿ.ಯಿಂದ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ

‘ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾಲಯವಿಂದು ಕ್ರೀಡೆಯಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಲು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿವರ್ಗ, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ವಿದ್ಯಾರ್ಥಿಗಳ ಶ್ರಮವೇ ಕಾರಣ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ. ಕೆ. ಹೇಳಿದರು.ಅವರು ಡಿಸೆಂಬರ್ 8ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪರ್ತಾಯ ಫಲಕಕ್ಕಾಗಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕಬ್ಬಡ್ಡಿ ಪಂದ್ಯಾಟವನ್ನು […]
ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕಳಿಯ ಗ್ರಾಮದ ಬದಿನಡೆ ಮತ್ತು ಮಂಜಲಡ್ಕ ದೈವಗಳ ಸಾನಿಧ್ಯದಲ್ಲಿ ಡಿಸೆಂಬರ್ 21 ರಿಂದ 26 ರವರೆಗೆ ನಡೆಯಲಿರುವ ಉಳ್ಳಾಕುಲು-ಉಳ್ಳಾಲ್ತಿ, ರಕ್ತೇಶ್ವರೀ, ಮಹಿಷಂತಾಯ, ಪಂಜುರ್ಲಿ ದೈವಗಳ ಮತ್ತು ಮಂಜಲಡ್ಕ ದೈವ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ ಹಾಗೂ ಕಲ್ಕುಡ ದೈವಗಳ ಪ್ರತಿಷ್ಠಾ ಮಹೋತ್ಸವ ಕಲಶಾಭಿಷೇಕ ಮತ್ತು ನರ್ತನ ಸೇವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಡಿಸೆಂಬರ್ 7ರಂದು ಜರುಗಿತು.ಕಲಶಾಭಿಷೇಕ ಸಮಿತಿ ಗೌರವಾಧ್ಯಕ್ಷ ಹಾಗೂ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ […]
ಶ್ರೀ ಗುರುದೇವ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಸಂಘ ಉದ್ಘಾಟನೆ

ಬೆಳ್ತಂಗಡಿ: ದೇಶದಲ್ಲಿ ಅನೇಕ ಚುನಾವಣೆಗಳು ನಡೆಯುತ್ತಿವೆ. ಪ್ರತಿ ಚುನಾವಣೆಯ ಮಹತ್ವ ಮತ್ತು ಮತದಾನದ ರೀತಿಯನ್ನು ಭಾರತೀಯ ಪ್ರಜೆಗಳಾದ ನಾವೆಲ್ಲರೂ ಅರ್ಥೈಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಮಾಜಿ ಶಾಸಕ ಹಾಗೂ ಬೆಳ್ತಂಗಡಿಯ ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು.ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 4ರಂದು ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಮತದಾರರ ಸಾಕ್ಷರತಾ ಸಂಘ ಉದ್ಘಾಟಿಸಿ ಮಾತನಾಡುತ್ತಿದ್ದರು.ಸಾಕಷ್ಟು ಜನಪ್ರತಿನಿಧಿಗಳಿಗೇ ಮತವನ್ನು ಹೇಗೆ ಚಲಾಯಿಸಬೇಕು ಎಂಬ ಪರಿಜ್ಞಾನವಿರುವುದಿಲ್ಲ. ಹಾಗಾಗಿ ಪ್ರತಿ ಚುನಾವಣೆಯಲ್ಲಿ ಮತ […]
ಬೆಳ್ತಂಗಡಿ ಡಿಕೆಆರ್‌ಡಿಎಸ್ ಸಂಸ್ಥೆಯಿಂದ ವಿಶ್ವ ಏಡ್ಸ್ ದಿನಾಚರಣೆ

ಬೆಳ್ತಂಗಡಿ: ಹೆಚ್‌ಐವಿ ರೋಗ ಹರಡುವಿಕೆ ಈಗ ಕಡಿಮೆಯಾಗಿದೆ. ಇದರ ಬಗ್ಗೆ ಬಹಳಷ್ಟು ಜನಜಾಗೃತಿ ಉಂಟಾಗಿದೆ. ರೋಗ ಪೀಡಿತರು ಮರಣ ಹೊಂದುತ್ತಾರೆ ಎಂಬ ಅಭಿಪ್ರಾಯ ಇತ್ತು. ನಮ್ಮ ಡಿಕೆಆರ್‌ಡಿಎಸ್ ಸಂಸ್ಥೆಯಿಂದ ಏಡ್ಸ್ ಬಾಧಿತರಿಗೆ ಮತ್ತು ಸೋಂಕಿತರಿಗೆ ಎಲ್ಲರಂತೆ ಸಮಾನ ಬದುಕು ಕಟ್ಟಿಕೊಡುವ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ. ಎಲ್ಲರೂ ಅವರ ಸೇವೆಗೆ ಸ್ವಯಂ ಪ್ರೇರಿತರಾಗಿ ತೊಡಗಿಕೊಳ್ಳಬೇಕು ಎಂದು ಡಿಕೆಆರ್‌ಡಿಎಸ್ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಹೇಳಿದರು.ಅವರು ದಕ್ಷಿಣ ಕನ್ನಡ ರೂರಲ್ ಡೆವಲಪ್‌ಮೆಂಟ್ […]
ಮಡಂತ್ಯಾರು ಕಾಲೇಜಿನಲ್ಲಿ ಬಿಸಿಯೂಟ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಕಾಲೇಜ್ ಮಡಂತ್ಯಾರಿನ ಬಿಸಿಯೂಟ ಯೋಜನೆಗೆ ನವೆಂಬರ್ 25ರಂದು ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಎನ್. ಜೋಸೆಫ್ ಹಾಗೂ ನಿಕಟ ಪೂರ್ವ ಪ್ರಾಂಶುಪಾಲರಾದ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ವಿದ್ಯಾರ್ಥಿಗಳಿಗೆ ಊಟ ಬಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಸಂಯೋಜಕರದ ಪ್ರೊ. ಬೇಬಿ ಎ., ಪ್ರೊ. ಉಷಾ, ಪ್ರಾಧ್ಯಾಪಕರಾದ ಜನಾರ್ಧನ ರಾವ್, ರಾಜೇಶ್ ಶೆಟ್ಟಿ ಮತ್ತಿತರರು ಹಾಜರಿದ್ದರು ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಈ ಬಿಸಿಯೂಟ ಯೋಜನೆಯ ಧ್ಯೇಯೋದ್ಧೇಶಗಳ ಕುರಿತು ಪ್ರೊ. […]
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಧ್ಯೇಯದೊಂದಿಗೆ ಚುನಾವಣೆಗೆ ಸ್ಪರ್ಧೆ- ಡಾ. ಎಂ.ಎನ್. ರಾಜೇಂದ್ರ ಕುಮಾರ್

ಬೆಳ್ತಂಗಡಿ: ಪಂಚಾಯತ್ ಸದಸ್ಯರು, ಸಹಕಾರಿ ಬಂಧುಗಳ ಹಾಗೂ ಆತ್ಮೀಯರ ಅಭಿಲಾಷೆಯಂತೆ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು.ಅವರು ನವೆಂಬರ್ 14ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ, ಗಣಪತಿ ದೇವರ ದರ್ಶನ ನಡೆಸಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.ಗ್ರಾಮ ಪಂಚಾಯತ್, ನಗರ ಪಂಚಾಯತ್ ಹಾಗೂ ಪಟ್ಟಣ […]
ಗೃಹ ಸಚಿವ ಹಾಗೂ ಸ್ವಾಮೀಜಿಯ ಗುಪ್ತ ಸಮಾಲೋಚನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನವೆಂಬರ್ 9 ರಂದು ಪೊಲೀಸ್ ಠಾಣೆಯ ಕಟ್ಟಡದ ಶಿಲಾನ್ಯಾಸಕ್ಕೆ ಆಗಮಿಸಿದ ರಾಜ್ಯ ಸರಕಾರ ಗೃಹ ಸಚಿವ ಅರಗ ಜ್ಞಾನೇಂದ್ರ ಶಿಲಾನ್ಯಾಸ ಕಾರ್ಯಕ್ರಮ ಪೂರೈಸಿ ಸುಲ್ಕೇರಿ ಶಾಲೆಗೆ ತೆರಳುವ ಹಾದಿ ಮಧ್ಯೆ ಧರ್ಮಸ್ಥಳ ಕನ್ಯಾಡಿಯ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಸೀತಾರಾಮರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರ ಕೋರಿಕೆಯಂತೆ ಶ್ರೀ ರಾಮಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಬಳಿಕ ಕ್ಷೇತ್ರದ ಬ್ರಹ್ಮಾನಂದ […]
‘ಸಂಘದ ಮೂಲಕ ಸಮಾಜದ ಬಂಧುಗಳಿಗೆ ಇನ್ನಷ್ಟು ಸಹಾಯ ನೀಡುವಂತಾಗಲಿ’ಬೆಳ್ತಂಗಡಿ ಬಿಲ್ಲವ ಸಂಘದ ಮಹಾಸಭೆಯಲ್ಲಿ ಬಂಗೇರ

ಬೆಳ್ತಂಗಡಿ : ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆರ್ಥಿಕವಾಗಿ ಇನ್ನಷ್ಟು ಸದೃಢವಾಗಿ ಬೆಳೆಯಬೇಕು. ಆ ಮೂಲಕ ಸಮಾಜದ ಬಂಧುಗಳಿಗೆ, ವಿದ್ಯಾರ್ಥಿಗಳಿಗೆ ಸಹಕಾರ ನೀಡುವಲ್ಲಿ ಇನ್ನಷ್ಟು ಹೆಚ್ಚಿನ ಮುತುವರ್ಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.ಅವರು ನವೆಂಬರ್ 7ರಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ನಡೆದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆಯನ್ಬು ಉದ್ದೇಶಿಸಿ ಮಾತನಾಡುತ್ತಿದ್ದರು.ಸಂಘಕ್ಕೆ […]