ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ವಿದ್ಯಾರ್ಥಿ ಬದುಕು ಸಾಧನೆಗೆ ಮೆಟ್ಟಿಲು. ಆ ಸಂದರ್ಭ ಇರುವ ಅವಕಾಶಗಳನ್ನು ವಿದ್ಯಾರ್ಥಿಗಳು ಚೆನ್ನಾಗಿ ಬಳಸಿಕೊಂಡು ಸಾಧಕರಾಗಬೇಕು. ಪಠ್ಯ ಚಟುಟಿಕೆಗಳ ಜೊತೆ ಜೊತೆಯಲ್ಲಿ ಕ್ರೀಡೆಯಲ್ಲೂ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.ಅವರು ಮಾರ್ಚ್ 5ರಂದು ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ ದೈಹಿಕ […]
ಡಾ. ಸತೀಶ್ಚಂದ್ರರಿಗೆ ‘ಪ್ರೊಫೆಸರ್ ಆಫ್ ಎಕ್ಸಲೆನ್ಸ್ ‘ ಗೌರವ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಅಲ್ಯುಮಿನಿ ಅಸೋಸಿಯೇಷನ್ ವತಿಯಿಂದ ಪ್ರಾಂಶುಪಾಲರಾದ ಡಾ. ಸತೀಶ್ಚಂದ್ರ ಎಸ್. ಅವರಿಗೆ ‘ಪ್ರೊಫೆಸರ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಷನ್ ಡಿಸೆಂಬರ್ 22ರಂದು ಕಾಲೇಜಿನಲ್ಲಿ ಆಯೋಜಿಸಿದ್ದ ‘ಹವಾಮಾನ ಬದಲಾವಣೆ’ ಕುರಿತ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಪುರಸ್ಕರಿಸಲಾಯಿತು. ಪ್ರತಿವರ್ಷ ಕಾಲೇಜಿನ ಪ್ರಾಧ್ಯಾಪಕರ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.ಡಾ. ಸತೀಶ್ಚಂದ್ರ ಎಸ್ ಅವರು 36 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಮೂರು […]
ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ರಾಜ್ಯಪಾಲರ ಅಧಿಕೃತ ಭೇಟಿ,ಸೇವಾ ಚಟುವಟಿಕೆಗಳ ಅನಾವರಣ.

ಬೆಳ್ತಂಗಡಿ: ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಹಾಗೂ ದೀರ್ಘ ಇತಿಹಾಸವುಳ್ಳ ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಲಯನ್ಸ್ ಜಿಲ್ಲಾ ರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ ಅವರ ಅಧಿಕೃತ ಭೇಟಿ ಮತ್ತು ವಿವಿಧ ಸೇವಾ ಚಟುವಟಿಕೆಗಳ ಅನಾವರಣ ಕಾರ್ಯಕ್ರಮ ಡಿಸೆಂಬರ್ 23ರಂದು ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಹೇಂಮತ ರಾವ್ ಯರ್ಡೂರು, ಪ್ರಾಂತ್ಯಾಧ್ಯಕ್ಷ ಧರಣೇಂದ್ರ ಕೆ. ಜೈನ್ ತಿಳಿಸಿದರು.ಬೆಳ್ತಂಗಡಿಯ ಪ್ರೆಸ್‌ಕ್ಲಬ್‌ನಲ್ಲಿ ಡಿಸೆಂಬರ್ 22ರಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.ಅಂದು ಅಪರಾಹ್ನ 3.00 ಗಂಟೆಗೆ ಲಯನ್ಸ್ ಭವನದಲ್ಲಿ ರಾಜ್ಯಪಾಲರನ್ನು ಸ್ವಾಗತಿಸಿಕೊಂಡು ಬಳಿಕ […]
ಡಿ. 22ರಂದು ರೋಟರಿ ಗವರ್ನರ್ ಬೆಳ್ತಂಗಡಿಗೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮಗಳ ಸಮಾರೋಪ ಡಿಸೆಂಬರ್ 22 ರಂದು ಕಾಶಿಬೆಟ್ಟು ಅರಳಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಜರುಗಲಿದ್ದು, ಆ ದಿನ ಬಹುವಿಧ ಸೇವಾ ಚಟುವಟಿಕೆಗಳ ಅನಾವರಣ ಹಾಗೂ ರೋಟರಿ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ ವ್ಯವಸ್ಥಿತವಾಗಿ ಆಯೋಜಿಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಶರತ್‌ಕೃಷ್ಣ ಪಡುವೆಟ್ನಾಯ ತಿಳಿಸಿದರು.ಬೆಳ್ತಂಗಡಿಯ ಪತ್ರಿಕಾಭವನದಲ್ಲಿ ಡಿಸೆಂಬರ್ 18ರಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿದರು.ರಾಜ್ಯಪಾಲರ ಭೇಟಿಯ ಅಂಗವಾಗಿ ರೋಟರಿ ಪ್ರಮುಖ ಯೋಜನೆ ಘೋಷಿಸಿದ್ದು, ಬೆಳ್ತಂಗಡಿ […]
ಪದ್ಮುಂಜ ಸೊಸೈಟಿಗೆ ಪ್ರಶಸ್ತಿಯ ಹಿರಿಮೆ

ಬೆಳ್ತಂಗಡಿ: 2020-21ನೇ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಯನ್ನು ಗುರುತಿಸಿ ಡಿಸೆಂಬರ್ 14ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಈ ಪ್ರತಿಷ್ಢಿತ ಪ್ರಶಸ್ತಿಯನ್ನು ಸಂಘ ಅಧ್ಯಕ್ಷ ಪಿ. ರಕ್ಷಿತ್ ಶೆಟ್ಟಿ ಹಾಗು […]
ಕಳಿಯ ಸೊಸೈಟಿಯ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ 2020-21ನೇ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗುರುತಿಸಿ; ಸಂಘದ ನಿರ್ದೇಶಕರು, ಸರ್ವಸದಸ್ಯರು ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಅಧ್ಯಕ್ಷ ವಸಂತ ಮಜಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಶಂಕರ ಭಟ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. […]
ಬಾರ್ಯ ಸೊಸೈಟಿಗೆ ಪ್ರಶಸ್ತಿಯ ಗರಿ

ಬೆಳ್ತಂಗಡಿ: 2020-21ನೇ ಆರ್ಥಿಕ ವರ್ಷದಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸದಸ್ಯರೆಲ್ಲರ ಹಾಗೂ ಸಿಬ್ಬಂದಿವರ್ಗದವರ ಸಹಕಾರದಿಂದ ಉತ್ತಮ ವ್ಯವಹಾರ ನಡೆಸಿ; ಸದಸ್ಯರ ಸಾಲ ವಸೂಲಾತಿ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಸಾಧಿಸಿದ ಉತ್ತಮ ಸಾಧನೆಯನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ; ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ಬ್ಯಾಂಕಿನ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರಸನ್ನ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. […]
ಬೆಳ್ತಂಗಡಿ ಸೊಸೈಟಿಗೆ ಪ್ರಶಸ್ತಿ ಪುರಸ್ಕಾರ

ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರ ವಿಭಾಗಗಳಲ್ಲಿ ಉತ್ತಮ ನಿರ್ವಹಣೆ ತೋರಲು ಸಹಕರಿಸಿದ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವಸದಸ್ಯರು ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಸಂಘದ ಅಧ್ಯಕ್ಷ ಮುನಿರಾಜ ಅಜ್ರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ […]
ತಣ್ಣೀರುಪಂತ ಸೊಸೈಟಿಗೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸದಸ್ಯರ ಸಾಲ ವಸೂಲಾತಿಯಲ್ಲಿ 100% ಸಾಧನೆ ಮಾಡುವುದರ ಜೊತೆಗೆ ಎಲ್ಲ ಆರ್ಥಿಕ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವಸದಸ್ಯರ ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಅಧ್ಯಕ್ಷ ನಿರಂಜನ ಬಾವಂತಬೆಟ್ಟು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್‌ರನ್ನು ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ […]
ಬಂಗಾಡಿ ಸೊಸೈಟಿಗೆ ಪ್ರಶಸ್ತಿಗಳ ಗರಿ

ಬೆಳ್ತಂಗಡಿ ತಾಲೂಕಿನ ಬಂಗಾಡಿ ವ್ಯವಸಾಯಿಕ ಸಂಘವು ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ರಾಜ್ಯ ಅಪೆಕ್ಸ್ ಬ್ಯಾಂಕ್ ವತಿಯಿಂದ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಲೆಕ್ಕ ಪರಿಶೋಧನೆಯಲ್ಲಿ ‘ಎ’ ತರಗತಿ ಗಳಿಸಿದ ಸಹಕಾರಿ ಸಂಘಗಳ ಪೈಕಿ ತೃತೀಯ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಜಿಲ್ಲಾ ಡಿಸಿಸಿ ಬ್ಯಾಂಕ್ ವತಿಯಿಂದ ಪಡೆದಿದೆ.ಈ ಪ್ರಶಸ್ತಿಗಳನ್ನು ಡಿಸೆಂಬರ್ 14 ರಂದು ಮಂಗಳೂರಿನಲ್ಲಿ ಜರಗಿದ ಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ […]