ಶ್ರವಣ ಮತ್ತು ಮಾತು ಪರಿಶೀಲನಾ ಉಚಿತ ಶಿಬಿರ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ ಧಾರವಾಡ ಇದರ ಸಹಯೋಗದಲ್ಲಿ ಅಕ್ಟೋಬರ್ 4 ಮತ್ತು 5 ರಂದು ಶ್ರವಣ ಮತ್ತು ಮಾತು ಪರಿಶೀಲನಾ ಉಚಿತ ಶಿಬಿರ ನಡೆಯಿತು.ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ಣಾಯ ಶಿಬಿರ ಉದ್ಘಾಟಿಸಿ ಮಾತನಾಡಿ; ಮಾನವ ಶರೀರ ಹೊರಗಿನ ಪ್ರಪಂಚದೊಂದಿಗೆ ಸಂಪರ್ಕ ಸಾಧಿಸಲು ಪಂಚೇಂದ್ರಿಯಗಳೇ ಮೂಲ ಸಾಧನ. ಎಲ್ಲಾ ಅಂಗಗಳ ಬಗ್ಗೆ ಅತೀ ಕಾಳಜಿ ಹೊಂದಿರುವ […]
ಎಕ್ಸೆಲ್ ವಾಣಿಜ್ಯ ವಿಭಾಗದ ಮಕ್ಕಳಿಂದ ವಿಟ್ಲದ ಇಕೋ-ಬ್ಲಿಸ್ ಕೈಗಾರಿಕಾ ಘಟಕಕ್ಕೆ ಭೇಟಿ.

ಬೆಳ್ತಂಗಡಿ: ಗುರುವಾಯನಕೆರೆಯ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಿಟ್ಲದ ಮೂರ್ಕಜೆಯಲ್ಲಿರುವ ಇಕೋ-ಬ್ಲಿಸ್ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿದರು.ಇಕೋ-ಬ್ಲಿಸ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಸಿ.ಇ.ಓ ಆಗಿರತಕ್ಕಂತಹ ಶ್ರೀರಾಜಾರಾಂ ಬಲಿಪಗುಳಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ;ಮನಸ್ಸಿನ ಇಚ್ಛಾಶಕ್ತಿಯಿಂದಲೇ ಒಬ್ಬ ವ್ಯಕ್ತಿ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರವಾದ ಬೆಳವಣಿಗೆ ಕಾಣಲು ಸಾಧ್ಯವಿದೆ. ಉದ್ಯೋಗವನ್ನು ಸೃಷ್ಠಿಸುವಲ್ಲಿ ನಾನಾ ಆಲೋಚನೆಗಳನ್ನು ಹೊಂದಲಾಯಿತು. ಪ್ರಸ್ತುತವಾಗಿ ಸ್ವತಂತ್ರ ಉದ್ಯಮಗಳಿಂದ ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವುದರೊಂದಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ವದೇಶಿ ಉತ್ಪನ್ನಗಳು ಸದ್ದುಮಾಡುತ್ತಿದೆ.‘ಝೀರೋ […]
‘ವಿದ್ಯಾವಂತರು ವಿಚಾರವಂತರಾದರೆ ಸಾಲದು, ಆಚಾರವಂತರೂ ಆಗಬೇಕು’

ಬೆಳ್ತಂಗಡಿ: ವಿದ್ಯಾವಂತರು ವಿಚಾರವಂತರಾಗುವುದರೊಂದಿಗೆ ಆಚಾರವಂತರೂ ಆಗಬೇಕು. ಆಗ ಮಾತ್ರ ಕಲಿತ ವಿದ್ಯೆಗೆ ವಿಶೇಷ ಮಾನ್ಯತೆ, ಗೌರವ ಸಿಗುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.ಅವರು ಅಕ್ಟೋಬರ್ 5ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಸಂದರ್ಭ ಸುವರ್ಣಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ವಿದ್ಯಾರ್ಥಿಗಳ ಪ್ರತಿಭೆ, ಶಕ್ತಿ-ಸಾಮರ್ಥ್ಯ ಮತ್ತು ಉತ್ಸಾಹ ಸದುಪಯೋಗ ಮಾಡಿ […]
ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ

ಬೆಳ್ತಂಗಡಿ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರವಚನ ಮಂಟಪದಲ್ಲಿ ಅಕ್ಟೋಬರ್ 3ರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಸುಪ್ರೀತಾ ಧರ್ಮಸ್ಥಳ ಸುಶ್ರಾವ್ಯವಾಗಿ ಸಂಗೀತ ಕಾರ್ಯಕ್ರಮ ನೀಡಿದರು.ಮೃದಂಗ ವಾದಕರಾಗಿ ವಿದ್ವಾನ್ ಪುತ್ತೂರು ನಿಕ್ಷಿತ್ ಮತ್ತು ಮಾ. ವರ್ಚಸ್ ಧರ್ಮಸ್ಥಳ, ವಯಲಿನ್ ವಾದಕರಾಗಿ ವಿದ್ವಾನ್ ನಿಶಾಂತ್ ರಾವ್ ಬೆಂಗಳೂರು, ಘಟವಾದಕರಾಗಿ ವಿದ್ವಾನ್ ಫಣೀಂದ್ರ ಬೆಂಗಳೂರು ಹಾಗೂ ಖಂಜಿರದಲ್ಲಿ ಅತ್ಯುಲ್ಯತೇಜ ವೇಣೂರು ಸಹಕರಿಸಿದರು.ಕಂಚಿಮಾರು ಟೈಗರ್ಸ್ ತಂಡದವರಿಂದ ಹುಲಿವೇಷ ಪ್ರದರ್ಶನ ನಡೆಯಿತು.
ಪವರ್‌ಲಿಫ್ಟಿಂಗ್‌ನಲ್ಲಿ ನೂತನ ದಾಖಲೆ

ಬೆಳ್ತಂಗಡಿ: ಕೆಲ ದಿನಗಳ ಹಿಂದೆಯಷ್ಟೇ ಖಿರ್ಗಿಸ್ತಾನ್‌ನಲ್ಲಿ ನಡೆದ ಏಷ್ಯನ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕರಾವಳಿ ಕರ್ನಾಟಕದ ಬಂಟ್ವಾಳ ತಾಲೂಕಿನ ಅಳಿಕೆ ಮೂಲದ ಅದ್ಭುತ ಪ್ರತಿಭೆ, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರರು ಕರ್ನಾಟಕ ಸರಕಾರದ ಮುಖ್ಯ ಸಚೇತಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ತಾಲೂಕಿನ ಅಭಿವೃದ್ಧಿಗೆ ಸಹಕರಿಸಿದ ನೆಕ್ಕಿತಪುಣಿ ಎನ್. ಗೋಪಾಲಕೃಷ್ಣ-ಮೀರಾಕೃಷ್ಣ ದಂಪತಿಗಳ ಮುದ್ದಿನ ಮೊಮ್ಮಗಳು ದಿಶಾಮೋಹನ್ ಇದೀಗ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಅದ್ಭುತ ಸಾಧನೆಯ ಮೂಲಕ ಪವರ್‌ಲಿಫ್ಟಿಂಗ್‌ನಲ್ಲಿ ನೂತನ […]
ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವ, ಶಿಸ್ತು, ಸಮಯ ಪಾಲನೆ ಹಾಗೂ ಕೂಡಿ ಬಾಳುವ ಮನೋಭಾವ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಇಂತಹ ಶಿಭಿರಗಳು ಸಹಾಯಕಾರಿಯಾಗಿವೆ ಎಂದು ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿ ಸಂಚಾಲಕ ನಾರಾಯಣ ಫಡ್ಕೆ ಹೇಳಿದರು. ಅವರು ಅಕ್ಟೋಬರ್ 3ರಂದು ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಗ್ರಾಮದ ಪೆರಿಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಭಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದದರು.ಕಾಲೇಜಿನ ಪ್ರಾಂಶುಪಾಲೆ ಜಾಲಿ […]
ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಅಕ್ಟೋಬರ್ 2ರಂದಿ ಮಹಾತ್ಮಾ ಗಾಂಧೀಜಿ ಜಯಂತಿ ಹಾಗೂ ನವರಾತ್ರಿ ಪ್ರಯುಕ್ತ ಶ್ರೀ ಮಹಾಮಾಯಿ ದೇವಸ್ಥಾನ ಭಂಡಾರಿಗೋಳಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಲಯನ್ ಸದಸ್ಯರುಗಳಾದ ಸುಂದರ ಶೆಟ್ಟಿ ಕೆ., ವಸಂತ ರಾವ್, ಸಂದೀಪ್ ಶೆಟ್ಟಿ, ನಾರಾಯಣ ಪೂಜಾರಿ, ಪಾರ್ಶ್ವನಾಥ ಜೈನ್, ಮಹಾಬಲ ಶೆಟ್ಟಿ, ಶಂಕರ ಪೂಜಾರಿ, ರಾಮಣ್ಣ ಶೆಟ್ಟಿ, ಹರೀಶ್ ಪೂಜಾರಿ […]
ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅಕ್ಟೋಬರ್ 2ರಂದು ಮಹಾತ್ಮಾ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ಮಾತನಾಡಿ; ಗಾಂಧೀಜಿಯವರು ಶಾಂತಿ-ಅಹಿಂಸೆಗಳ ಹರಿಕಾರ, ಸತ್ಯದ ಸರದಾರ. ನಮ್ಮ ರಾಷ್ಟ್ರಪಿತರ ಬದುಕು, ಬೋಧನೆ, ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು. ಸಿಯೋನ್ ಅಶ್ರಮದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ […]
ದೇಗುಲಕ್ಕೆ ಆಡಳಿತಾಧಿಕಾರಿ ನೇಮಕ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು ಅಧಿಕಾರ ಹಸ್ತಾಂತರ ಸೆಪ್ಟೆಂಬರ್ 25ರಂದು ನೆರವೇರಿತು.ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ ಮಿತ್ತಮಾರು ಅವರು ನಿರ್ಣಯ ಹಾಗೂ ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.
ವಿಶಿಷ್ಟ ರೀತಿಯಲ್ಲಿ ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆ

ಬೆಳ್ತಂಗಡಿ: ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ, ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್‌ಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆಯನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಯಿತು.ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದಲ್ಲದೇ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಅತ್ಯಂತ ವಿಶಿಷ್ಟವಾಗಿ ಮಹಾತ್ಮಾ ಗಾಂಧೀಜಿ ಜಯಂತಿ ಆಚರಿಸುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ನ್ಯಾಷನಲ್ ಇನ್ಶುರೆನ್ಸ್ […]