Warning: Constant WP_AUTO_UPDATE_CORE already defined in /home/u584898912/domains/jaikannadamma.in/public_html/wp-config.php on line 100
ತಾಜಾ ಸುದ್ದಿ - Jai Kannadamma - Page 2

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಅಧಿಸೂಚನೆಯಂತೆ ರಾಜ್ಯದ ಎಲ್ಲ ಮೊರಾರ್ಜಿ ದೇಸಾಯಿ, ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ವಿಶೇಷ ವರ್ಗದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ಧೇಶದಿಂದ ಸ್ಥಾಪಿಸಿದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ […]

ಜ. 23 – ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: 1997-98ನೇ ಸಾಲಿನಲ್ಲಿ ಸುಮಾರು 604 ಸದಸ್ಯರನ್ನು ಒಳಗೊಂಡು ರೂಪಾಯಿ 6 ಲಕ್ಷದಷ್ಟು ಪಾಲು ಬಂಡವಾಳದೊಂದಿಗೆ 1998 ಜನವರಿ 26 ರಂದು ‘ಪರಸ್ಪರ ಸಹಕಾರ’ ಎಂಬ ಧ್ಯೇಯವನ್ನು ಮುಂದಿಟ್ಟುಕೊಂಡು ಅಂದಿನ ಮಂಗಳೂರು ಧರ್ಮಪ್ರಾಂತ್ಯದ ಧರ್ಮಧ್ಯಕ್ಷರಾದ ವಂದನೀಯ ಬಿಷಪ್ ಅಲೋಶಿಯಸ್ ಪಾವ್ಲ್ ಡಿ’ಸೊಜರವರಿಂದ ಆರ್ಶೀವಚನಗೊಂಡು, ಅಂದಯ ಬೆಳ್ತಂಗಡಿಯ ವಿದಾನಸಭಾ ಕ್ಷೇತ್ರದ ಶಾಸಕರಾಗಿದ್ದ ಕೆ. ವಸಂತ ಬಂಗೇರ ರಿಂದ ಉದ್ಘಾಟನೆಗೊಂಡು; ಸುಮಾರು ನಾಲ್ಕು ವರ್ಷಗಳ ಕಾಲ ಬೆಳ್ತಂಗಡಿಯ ಪಿಂಟೊ ಕಾಂಪ್ಲೆಕ್ಸ್‌ನಲ್ಲಿ ಎಲ್ಲರ ಸಹಕಾರದೊಂದಿಗೆ ವ್ಯವಹಾರ ನಡೆಸಿ ದಿನಾಂಕ 07-07-2001ರಂದು ಸುಮಾರು […]

ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ದಿಯಾ ಎಂ. ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು ಪತ್ರಕರ್ತ ಮನೋಹರ್ ಬಳಂಜ ಮತ್ತು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿಗಳ ಪುತ್ರಿ. ಪ್ರಸ್ತುತ ಬೆಳ್ತಂಗಡಿಯ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂಭತ್ತನೇ ತರಗತಿಯ […]

ಉಜಿರೆ ಬೆನಕ ಆಸ್ಪತ್ರೆಗೆ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಕೇವಲ ಏಳು ಹಾಸಿಗೆಗಳು ಮತ್ತು ಇಬ್ಬರು ವೈದ್ಯರು ಹಾಗೂ ಇಬ್ಬರು ದಾದಿಯರಿಂದ ಎರಡು ದಶಕಗಳ ಹಿಂದೆ ಪ್ರಾರಂಭವಾದ ಬೆನಕ ಆಸ್ಪತ್ರೆ ಸ್ಥಳಿಯ ಅಗತ್ಯತೆಗಳಿಗೆ ಅನುಗುಣವಾಗಿ ತನ್ನ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಇದೀಗ 130 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆರೋಗ್ಯ ಸೇವೆಗಳನ್ನೊಳಗೊಂಡ ಖ್ಯಾತ ಆಸ್ಪತ್ರೆಯಾಗಿ ಬೆಳೆದು ನಿಂತಿದೆ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಗೋಪಾಲಕೃಷ್ಣ ಕೆ. ಹೇಳಿದರು.ಅವರು ಜನವರಿ 16 ರಂದು ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ರಜತ ಸಂಭ್ರಮದಲ್ಲಿರುವ ಆಸ್ಪತ್ರೆಯು ಗುಣಮಟ್ಟದ […]

ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತಿ ದಂಪತಿಗಳ ಸೇವೆ ಅನನ್ಯ-ಸುಬ್ರಹ್ಮಣ್ಯಶ್ರೀಗಳು

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಗೆ ಜನವರಿ 13ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡುತ್ತಾ; ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಚಿಕ್ಕ ಆಸ್ಪತ್ರೆಯನ್ನು ಆರಂಭಿಸಿ, ಕಳೆದ 25 ವppರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಮುಂದೆಯೂ ಇದೆ ರೀತಿ […]

ವಸಂತ ಬಂಗೇರರ ಹುಟ್ಟುಹಬ್ಬಕ್ಕೆ ಕಬಡ್ಡಿ ಪಂದ್ಯಾಟದ ಮೆರುಗು

ಬೆಳ್ತಂಗಡಿ: ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬಿನುತಾ ಬಂಗೇರ ಅವರ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಮಾಜಿ ಶಾಸಕ ದಿ| ವಸಂತ ಬಂಗೇರ ಅವರ 79 ಹುಟ್ಟಹಬ್ಬದ ಪ್ರಯುಕ್ತ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಜನವರಿ 15ರಂದು ಮದ್ದಡ್ಕದ ಬಂಡಿಮಠ ಮೈದಾನದಲ್ಲಿ ನಡೆಯಲಿದೆ ಎಂದು ಬ್ರಿಗೇಡ್ ಗೌರವಾಧ್ಯಕ್ಷೆ ಪ್ರಿತೀತಾ ಬಂಗೇರ ತಿಳಿಸಿದರು.ಜನವರಿ 8ರಂದು ಅವರು ಬೆಳ್ತಂಗಡಿ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲಾ […]

ಬಲಿಪ ಅಸೋಸಿಯೇಟ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಮತ್ತು ನೋಟರಿ ಪಬ್ಲಿಕ್ ಮುರಳಿ ಬಲಿಪರ ಕಛೇರಿಯು ಬೆಳ್ತಂಗಡಿ ಆಡಳಿತ ಸೌಧದ ಅಮೀಪವಿರುವ ವಿಘ್ನೇಶ್ ಸಿಟಿ ಸಂಕೀರ್ಣಕ್ಕೆ ಸ್ಥಳಾಂತರಗೊಂಡಿದ್ದು; ಇದರ ಉದ್ಘಾಟನಾ ಸಮಾರಂಭವು ಡಿಸೆಂಬರ್ 24ರಂದು ನೆರವೇರಿತು.ದೀಪ ಪ್ರಜ್ವಲನಗೈದು ನೂತನ ಕಛೇರಿಯನ್ನು ಉದ್ಘಾಟಿಸಿದ ನ್ಯಾಯವಾದಿ ಮುರಳಿಯವರ ಮಾವ ಕೆನರಾ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಕೆ. ಸುಬ್ರಹ್ಮಣ್ಯ ಭಟ್ ಮತ್ತು ಅವರ ಪತ್ನಿ ಫಿಶರಿಸ್ ಇಲಾಖೆಯ ನಿವೃತ್ತ ಅಧಿಕಾರಿ ಉಮಾ ಎಸ್. ಭಟ್ ಆಶೀರ್ವಾದ […]

ಪೆರಾಡಿ ಸೊಸೈಟಿಯ ಸಿಇಒ ಸೇವಾ ನಿವೃತ್ತಿ

ಬೆಳ್ತಂಗಡಿ: ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಒಂದಾದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ 39 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಉತ್ತಮ ಕರ್ತವ್ಯ ನಿರ್ವಾಹಕರಾದ ಯು. ಶೇಖ್ ಲತೀಫ್ ಇವರು ಕಳೆದ ಡಿಸೆಂಬರ್ 31ರಂದು ಸೇವಾ ನಿವೃತ್ತಿ ಹೊಂದಿದರು.ಸಂಘದ ಆಡಳಿತ ಮಂಡಳಿಯ ಮಾತ್ರವಲ್ಲ; ಮತ್ತು ಸದಸ್ಯರ ಹಾಗೂ ಗ್ರಾಹಕರ ಪ್ರೀತಿ-ವಿಶ್ವಾಸಗಳಿಗೆ ಪಾತ್ರರಾಗಿದ್ದ ಯು. ಶೇಖ್ ಲತೀಫ್; ಆರಂಭದಲ್ಲಿ ಸಂಘದ ಪೆರಿಂಜೆ ಶಾಖೆಯ […]

ಪಂಚಾಯತ್‌ರಾಜ್ ಸಂಸ್ಥೆಗಳ ಕಾರ್ಯಚಟುವಟಿಕೆಗಳ ಅವಲೋಕನಾ ಸಭೆ

ಬೆಳ್ತಂಗಡಿ: ಜನವರಿ 2ರಂದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ರಾಜ್ಯದ ಐದನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿಯವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ರಾಜ್ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಚಟುವಟಿಕೆಗಳು, ಆರ್ಥಿಕ ಸ್ಥಿತಿಗತಿ, ಸಂಪನ್ಮೂಲಗಳ ಕ್ರೂಢೀಕರಣ ಮತ್ತು ಹಂಚಿಕೆ, ಮೂಲಸೌಕರ್ಯಗಳ ಮತ್ತು ಸೇವೆಗಳ ಒದಗಿಸುವಿಕೆಯಲ್ಲಿ ತಾಂತ್ರಿಕ ಸಾಮರ್ಥ್ಯ ಮತ್ತಿತರ ವಿಚಾರಗಳನ್ನು ಅಧ್ಯಯನ ಮಾಡಲು ಅವಲೋಕನಾ ಸಭೆ ನಡೆಯಿತು.ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ […]

ಲಾಯ್ಲ ಶ್ರೀ ಚಂದ್ಕೂರು ದೇಗುಲದಲ್ಲಿ ಯಕ್ಷಗಾನ ಬಯಲಾಟ

ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಲಾಯ್ಲ ಗ್ರಾಮದ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ನವೆಂಬರ್ 29ರಂದು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವು ಅದ್ದೂರಿಯಾಗಿ ನಡೆಯಿತು. ಸಾವಿರಾರು ಮಂದಿ ಕಲಾಭಿಮಾನಿಗಳು ಅನ್ನ ಸಂತರ್ಪಣೆಯಲ್ಲಿ ಭಾಗವಹಿಸಿ’ ಯಕ್ಷಗಾನ ಪ್ರಸಂಗ ವೀಕ್ಷಿಸಿದರು. ಸೇವಾಕರ್ತರಾದ ಲಾಯ್ಲ ಗ್ರಾಮದ ಕೋಡಿಯೇಲು ಶ್ರೀಮತಿ ಜಯಂತಿ ಶೆಟ್ಟಿ ಮತ್ತು ಮಕ್ಕಳು ಬಂದಂತಹ ಎಲ್ಲರನ್ನೂ ಆತ್ಮೀಯವಾಗಿ ಬರಮಾಡಿಕೊಂಡು ಸತ್ಕರಿಸಿದರು.