‘ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ’

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವಿದೆ ಎಂದು ಮಂಗಳೂರಿನ ನೇಶನಲ್ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲ ಯು.ಎಚ್. ಖಾಲಿದ್ ಉಜಿರೆ ಹೇಳಿದರು.ಅವರು ಆಗಸ್ಟ್ 31ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಸಂಘದ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ರೂಪಾಯಿ 5,000/- ದಂತೆ ಒಟ್ಟು ರೂಪಾಯಿ 75,000/- ವಿದ್ಯಾರ್ಥಿವೇತನ […]

ಸಿರಿಯನ್ ಕ್ಯಾಥೋಲಿಕ್ ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ 14ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 31ರಂದು ಬೆಳ್ತಂಗಡಿ ಸಾಂತೋಮ್ ಟವರ್‌ನಲ್ಲಿರುವ ಸಂಘದ ಕಛೇರಿ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಅನಿಲ್ ಎ.ಜೆ.ಯವರ ಅಧ್ಯಕ್ಷತೆಯಲ್ಲಿ ಜರುಗಿತು. 2023-24 ನೇ ಸಾಲಿನಲ್ಲಿ ರೂಪಾಯಿ 106 ಕೋಟಿ ವ್ಯವಹಾರ ನಡೆಸಿ, ರೂಪಾಯಿ 43.41 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ 15% ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ. ತಿಳಿಸಿದರು.ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್.ವಿ. ಸ್ವಾಗತಿಸಿದರು. […]

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

ಬೆಳ್ತಂಗಡಿ: ನಮ್ಮ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘವು 2019ರಲ್ಲಿ ಆರಂಭವಾದ ದಿನದಿಂದ ಸತತವಾಗಿ ಅಭಿವೃದ್ಧಿ ಪಥದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ 42 ಲಕ್ಷ ರೂಪಾಯಿ ನಿವ್ವಳ ಲಾಭಗಳಿಸಿದೆ. ಉಜಿರೆಯಲ್ಲಿ ಸಂಘವು ಹೊಂದಿರುವ 15 ಕೋಟಿ ರೂಪಾಯಿ ಮೌಲ್ಯದ ಆಸ್ತಿಯಲ್ಲಿ 10 ಕೋಟಿ ರೂಪಾಯಿ ಅಂದಾಜು ವೆಚ್ಚದ ಸುಸಜ್ಜಿತ ಸಭಾಭವನ ನಿರ್ಮಾಣ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸದಸ್ಯರಿಗೆ 10% ಡಿವೆಡೆಂಡ್ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಹೇಳಿದರು‌.ಅವರು ಉಜಿರೆ […]

ರಾಜ್ಯ ಸರಕಾರಿ ನೌಕರರ ಸೊಸೈಟಿಯ ಮಹಾಸಭೆ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 25ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ವಾರ್ಷಿಕ ವರದಿಗೆ ಸಭೆ ಸರ್ವಾನುಮತದಿಂದ ಅನುಮೋದನೆ ನೀಡಿತು. ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಒಮ್ಮತದ ನಿರ್ಣಯ ಅಂಗೀಕರಿಸಲಾಯಿತು.ಕಳೆದ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ವಿಶೇಷ ಪ್ರೋತ್ಸಾಹ ನಿಧಿಯೊಂದಿಗೆ ಅಭಿನಂದಿಸಲಾಯಿತು. […]

ಹೆಡ್ ಕಾನ್‌ಸ್ಟೇಬಲ್ ವಿಜಯ ಕುಮಾರ್‌ರಿಗೆ ರಾಷ್ಟ್ರಪತಿಗಳ ಚಿನ್ನದ ಪದಕ ಗೌರವ

ಬೆಳ್ತಂಗಡಿ: ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಬಿ. ವಿಜಯ ಕುಮಾರ್‌ರವರ ಪ್ರಾಮಾಣಿಕ ಅತ್ಯುನ್ನತ ಸೇವೆಯನ್ನು ಗುರುತಿಸಿ; ಅವರನ್ನು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಇವರ ಸಾಧನೆಗಾಗಿ ಇವರನ್ನು ಬೆಂಗಳೂರಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು ಸ್ಮರಣಿಕೆ ನೀಡಿ ಗೌರವಿಸಿದರು. ಬಿ. ವಿಜಯ ಕುಮಾರ್ 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಕಳೆದ 31ವರ್ಷಗಳಿಂದ ಪಣಂಬೂರು, […]

ನೆನಪಿನಂಗಳ’ ವಾರ್ಷಿಕ ಪುನರ್ಮಿಲನ 2024

‘ಬೆಳ್ತಂಗಡಿ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ಹೇಳಿದರು.ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಆಗಸ್ಟ್ 24ರಂದು ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್‌ಡಿಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಮಾತನಾಡುತ್ತಿದ್ದರು.ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, […]

ಉಜಿರೆ ರಬ್ಬರು ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಸಂಘವು ಕಳೆದ ಸಾಲಿನಲ್ಲಿ 25.82 ಲಕ್ಷ ರೂಪಾಯಿ ಲಾಭ ಗಳಿಸಿದ್ದು ಸದಸ್ಯರಿಗೆ 10% ಡಿವಿಡೆಂಡ್ ನೀಡಲಾಗುವುದು ಎಂದು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆ ತಿಳಿಸಿದರು. ಅವರು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಆಗಸ್ಟ್ 22ರಂದು ಜರಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸದಸ್ಯರಿಂದ ಸಂಗ್ರಹಿಸಿದ ರಬ್ಬರನ್ನು ದೇಶದಾದ್ಯಂತ ಮಾರಾಟ ಮಾಡಲಾಗಿದ್ದು, ಹೆಚ್ಚಾಗಿ ಉತ್ಪಾದಕರಿಗೆ ಮಾರಾಟ ಮಾಡುವತ್ತ ಗಮನ ಕೇಂದ್ರೀಕರಿಸಿ ಸದಸ್ಯರ ಉತ್ಪನ್ನಗಳಿಗೆ […]

ಸದ್ವಿಚಾರಗಳನ್ನು ನೆನಪಿಸಲು ಉತ್ಸವಗಳು. ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಪೂರಣ್ ವರ್ಮ

ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಕಲಿಯುಗದ ಕಾಮದೇನು ಹಾಗೂ ಕಲ್ಪವೃಕ್ಷ ಎಂದೇ ಭಕ್ತರು ನಂಬುತ್ತಾರೆ. ಭಕ್ತರ ಬೇಡಿಕೆ ಈಡೇರಿಸುವ ಶ್ರೀ ರಾಯರಲ್ಲಿ ಭಕ್ತರು ಉತ್ತಮ ಮನಸ್ಸಿನಿಂದ ಪ್ರಾರ್ಥಿಸಬೇಕು. ಸಂತರು ಹಾಗೂ ದಾರ್ಶನಿಕರು ಸಮಾಜಕ್ಕೆ ನೀಡಿದ ಸಂದೇಶವನ್ನು ಸದ್ವಿಚಾರಗಳನ್ನು ನೆನಪಿಸಲು ಇಂತಹ ಆರಾದನೆಗಳನ್ನು ಆಚರಿಸಲಾಗುತ್ತಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ ಹೇಳಿದರು. ಅವರು ಆಗಸ್ಟ್ 21ರಂದು ಲಾಯ್ಲ ಶ್ರೀ ಗುರುರಾಘವೇಂದ್ರ ಮಠದಲ್ಲಿ ನಡೆದ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದಲ್ಲಿ ಮುಖ್ಯ […]

ರಾಜ್ಯಪಾಲರ ನಡೆ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾರ್ಯಕರ್ತರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದು ತಾಲೂಕು ಕಛೇರಿಯಲ್ಲಿ ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು. ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. […]

ಎನ್‌ಸಿವಿಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಆದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸೂಚನೆಯಂತೆ, 2024-25ನೇ ಸಾಲಿಗೆ ಅನ್ವಯಿಸುವಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಶಾಶ್ವತವಾಗಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿಯನ್ನು ಪ್ರಾರಂಭಿಸಲಾಗುವುದು. ಈಗಿನ ಕಾಲದ ಬೇಡಿಕೆಗೆ ತಕ್ಕಂತೆ ಮಹಿಳೆಯರ, ಮಕ್ಕಳ ಹಾಗೂ ಪುರುಷರ ವಿವಿಧ ನೂತನ ವಸ್ತ್ರ ವಿನ್ಯಾಸ, ಎಂಬ್ರೋಯಿಡರಿ ಮುಂತಾದ ಆಧುನಿಕ ಶಿಕ್ಷಣ […]