ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬಗ್ಗೆ ನಾಗರಿಕರನ್ನು ಕತ್ತಲಲ್ಲಿರಿಸಿರುವ ಇಲಾಖೆಯ ಧೋರಣೆಯನ್ನು ಖಂಡಿಸಲು ಹಾಗೂ ಆಗುವ ರಸ್ತೆ ಕಾಮಗಾರಿಗೆ ಕಣ್ಗಾವಲಾಗಲು ಆಗಸ್ಟ್ 12ರಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂತು.ವೇದಿಕೆಯು ಒಂದೆಡೆ ಕಾಮಗಾರಿಯ ಗುತ್ತಿಗೆ ಹಾಗೂ ಒಡಂಬಡಿಕೆ ಮತ್ತು ಒಳ ಒಪ್ಪಂದಗಳ ಬಗ್ಗೆ ಕಾನೂನು ಹೋರಾಟ ನಡೆಸಲು ತಜ್ಞರ ಜೊತೆ ಚರ್ಚಿಸಲು ತೀರ್ಮಾನಿಸಿತು. ಇನ್ನೊಂದೆಡೆ ಹೆದ್ದಾರಿ ಕಾಮಗಾರಿಯ ಅವ್ಯವಹಾರಗಳ ಬಗ್ಗೆ ಜನಜಾಗೃತಿ […]

ನಾಳ ದೇಗುಲದಲ್ಲಿ ನಾಗರ ಪಂಚಮಿ

ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಗಸ್ಟ್ 9ರಂದು ನಾಗರ ಪಂಚಮಿಯನ್ನು ಸಡಗರದಿಂದ ಆಚರಿಸಲಾಯಿತು.ಮುಂಜಾನೆ ಕ್ಷೇತ್ರದ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆದ ಬಳಿಕ ಕ್ಷೇತ್ರದ ಒಳಗಿರುವ ನಾಗನ ಮೂಲ ಸನ್ನಧಿ( ಹುತ್ತಕ್ಕೆ) ಕ್ಷೀರಾಭಿಷೇಕ ನೆರವೇರಿಸಿ; ತಂಬಿಲಸೇವೆ, ಪೂಜೆ ನಡೆಸಲಾಯಿತು.ಕ್ಷೇತ್ರದ ನಾಗನಕಟ್ಟೆಯಲ್ಲಿ‌ ಕ್ಷೀರಾಭಿಷೇಕ, ತಂಬಿಲ ಸೇವೆ, ವಿಶೇಷ ಪೂಜೆ ನಡೆಯಿತು.ಕ್ಷೇತ್ರದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತುದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ, ಅಭಿವದ್ದಿ ಸಮಿತಿ ಅಧ್ಯಕ್ಷ ಯಾದವ ಗೌಡ, […]

ಸ್ವಾತಂತ್ರ್ಯೋತ್ಸವದ ಸಂದರ್ಭ ರಾಜ್ಯಾದ್ಯಂತ ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಮಾನಸಿಕ ನೆಮ್ಮದಿ, ಶಾಂತಿಗಾಗಿ ಜನರು ಶ್ರದ್ಧಾಕೇಂದ್ರಗಳಿಗೆ ಆಗಮಿಸುತ್ತಾರೆ. ಅಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳು ಒಂದು ಗ್ರಾಮದ ಅತೀ ಮುಖ್ಯ ಭಾಗವಾಗಿದ್ದು ಇವುಗಳು ಸ್ವಚ್ಛವಾಗಿರುವುದು ಅತೀ ಅಗತ್ಯವಾಗಿದೆ. ಈ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಚಿಂತನೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನತೆಯ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ […]

ವಾತ್ಸಲ್ಯ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರು ತಾಲೂಕಿನಲ್ಲಿ ಮಾಶಾಸನ ಪಡೆಯುತ್ತಿರುವ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 19 ವಾತ್ಸಲ್ಯ ಸದಸ್ಯರ 27 ಮಂದಿ ಮಕ್ಕಳಿಗೆ 22,000ರ ಮೌಲ್ಯದ ಶಾಲಾ ಪುಸ್ತಕ, ಬ್ಯಾಗ್, ಛತ್ರಿ, ಬಟ್ಟೆ ಹಾಗೂ ಶಾಲಾ ಶುಲ್ಕವನ್ನು ಒದಗಿಸಿದ್ದು ಇದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ರವರು ವಾಸ್ತಲ್ಯ ಸದಸ್ಯರ ಮನೆ […]

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ಘಟಕದ ಸ್ವಯಂಸೇವಕ ನಾಯಕ ರಾಮಕೃಷ್ಣ ಶರ್ಮ ಎನ್. ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾಷ್ಟ್ರೀಯ ಸೇವಾ .ಯೋಜನೆ ಕೋಶದ ಸಹಯೋಗದೊಂದಿಗೆ ಆಗಸ್ಟ 6ರಿಂದ 12ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು 20 ಸ್ವಯಂಸೇವಕರು ಪ್ರತಿನಿಧಿಸಲಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ರಾಮಕೃಷ್ಣ […]

ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್: ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ದಡ್ಕ ಮಸೀದಿ ಸಮೀಪ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಕೆಟ್ಟು ನಿಂlತು ಸುಮಾರು 2 ಗಂಟ್ಟೆಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿ ಪ್ರಯಾಣಿಕರು ಪರದಾಡಿದ ಘಟನೆ ಅ 5ರಂದು ನಡೆದಿದೆ. ತಕ್ಷಣ ಸ್ಪಂದಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾದ ಕೆಎಸ್‌ಆರ್‌ಟಿಸಿ ನಿಗಮದ ಯಾವುದೇ ಅಧಿಕಾರಿಗಳು ಸರಿಯಾದ ಸ್ಪಂದನೆ ನೀಡದೇ ಪ್ರಯಾಣಿಕರು ಪರದಾಡಬೇಕಾಯಿತು. ಕೆಎಸ್‌ಆರ್‌ಟಿಸಿ ಅಧಿಕಾರಿಗಳ ನಿರ್ಲ್ಯಕ್ಷ್ಯದ ಬಗ್ಗೆ ಸಾರ್ವಜನಿಕರು ಅಕ್ರೊಶ ವ್ಯಕ್ತಪಡಿಸಿದ್ದಾರೆ. ಆದರೆ ತಕ್ಷಣ ಸ್ಥಳಕ್ಕಾಗಮಿಸಿದ ಬೆಳ್ತಂಗಡಿ […]

ಕುಂದುಕೊರತೆ ನಿವಾರಣಾ ಸಮಿತಿ ನೇಮಕಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-2019 ರಂತೆ ಕುಂದುಕೊರತೆ ನಿವಾರಣಾ ಸಮಿತಿ ಸದಸ್ಯರಾಗಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮಿತಿಯನ್ನು ಸರಕಾರದ ಮಾರ್ಗಸೂಚಿಯಂತೆ ಈ ಕೆಳಗಿನಂತೆ ರಚಿಸಲಾಗುವುದು.ಸಮಿತಿಯ ಅಧ್ಯಕ್ಷರು 65ವರ್ಷ ವಯೋಮಾನದ ಒಳಗಿನ ನಿವೃತ್ತ ಸಿವಿಲ್ ನ್ಯಾಯಾಧೀಶರಾಗಿರಬೇಕು. ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು ಒಬ್ಬರು 65ವರ್ಷ ವಯೋಮಾನದ ಒಳಗಿನ ರಾಜ್ಯ ಸರಕಾರದ ನಿವೃತ್ತ ‘ಎ’ ದರ್ಜೆಯ ಅಧಿಕಾರಿಯಾಗಿರಬೇಕು. ಇತರ ಸ್ಥಾನಗಳಿಗೆ ಅರ್ಜಿ ಸಲ್ಲಿಸುವವರು ಸ್ಥಳೀಯ ಪ್ರದೇಶದ ಕಳಂಕ […]

‘ಶಾಸಕ ಹರೀಶ್ ಪೂಂಜರನ್ನು ಹುಡುಕಿಕೊಡಿ’

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ 15 ದಿನಗಳಿಂದ ಕಾಣೆಯಾಗಿದ್ದಾರೆ; ಅವರನ್ನು ಹುಡುಕಿ ಕೊಡಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಜುಲೈ 3ರಂದು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು; ಇಡೀ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದರೂ ಶಾಸಕರು ಮಾತ್ರ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರರು 30 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ […]

ಜಡಿಮಳೆಗೆ ಅಪಾರ ಹಾನಿ : ಕಂಗಾಲಾದ ಜನತೆ

ಬೆಳ್ತಂಗಡಿ: ಜುಲೈ 30ರಂದು ಇಡೀ ದಿನ ಸುರಿದ ಭಾರೀ ಮಳೆಯಿಂದ ಹೆದ್ದಾರಿ ಚರಂಡಿ, ತೋಡು, ಹೊಳೆ, ನದಿಗಳು ತುಂಬಿ ಹರಿದು ಹಲವೆಡೆ ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತ ವ್ಯಸ್ತವಾದ ಘಟನೆ ವರದಿಯಾಗಿದೆ. ಧರ್ಮಸ್ಥಳದ ನೇತ್ರಾವತಿ ನದಿ ಸ್ನಾನಘಟ್ಟ ಮುಳುಗಡೆಯಾಗಿ ಅಪಾಯಮಟ್ಟದಲ್ಲಿ ನೀರು ತುಂಬಿ ಹರಿಯುತ್ತಿದೆ. ಬೆಳ್ತಂಗಡಿ-ಸರಳೀಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ. ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು […]

ವೇಣೂರು ಗ್ರಾ.ಪಂ. ಕಛೇರಿ ಅಪಾಯದಲ್ಲಿ

ಬೆಳ್ತಂಗಡಿ: ವೇಣೂರು ಪೇಟೆಯ ಹೃದಯಭಾಗದಲ್ಲಿರುವ ವೇಣೂರು ಗ್ರಾಮ‌ ಪಂಚಾಯತ್ ಕಛೇರಿ ಕಟ್ಟಡಗಳು ಅಪಾಯದ ಅಂಚಿನಲ್ಲಿದೆ. ಜುಲೈ 29 ಮತ್ತು 30ನೇ ತಾರೀಕಿನಂದು ಸುರಿದ ಭಾರೀ ಮಳೆಗೆ ಗ್ರಾಮ ಪಂಚಾಯತ್ ಕಛೇರಿಯ ಹಳೆಯ ಮತ್ತು ಹೊಸ ಕಟ್ಟಡದ ನೆಲದಡಿ ಕುಸಿಯಲಾರಂಭಿಸಿದ್ದು; ಗುಡ್ಡದ ಮಣ್ಣು ರಸ್ತೆಯನ್ನು ಆವರಿಸುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗ್ರಾಮ ಪಂಚಾಯತ್ ಕಛೇರಿ ಕಟ್ಟಡಗಳಿಗೆ ಅಪಾಯ ತಪ್ಪಿದ್ದಲ್ಲ ಎಂದು ಆತಂಕ ವ್ಯಕ್ತಪಡಿಸಿದ ಸ್ಥಳೀಯರು ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ತುರ್ತಾಗಿ ಇತ್ತ ಗಮನ ಹರಿಸಿ, […]