ಕುಂಭದ್ರೋಣ ಮಳೆಗೆ ಕುಂಭಕರ್ಣ ನಿದ್ರೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಎಂದಿನಂತೆ ಜುಲೈ 30ರ ಮುಂಜಾನೆಯೂ ಗಾಢ ನಿದ್ರೆಗೆ ಜಾರಿತ್ತು. ಕುಂಭದ್ರೋಣ ಮಳೆ ಸುರಿದರೂ ಈ ಕುಂಭಕರ್ಣರಿಗೆ ಎಚ್ಚರವಾಗಿರಲಿಲ್ಲ. ಕುಂಭದ್ರೋಣ ಮಳೆಗೆ ತಾಲೂಕು ಆಡಳಿತ ರಜೆ ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಾಕಷ್ಟು ಶಾಲಾ ಕಾಲೇಜು ವಿದ್ಯಾರ್ಥಿಗಳು ಅದಾಗಲೇ ಹ್ಯಾಪ್ ಮೋರೆ ಹಾಕಿಕೊಂಡು ಮನೆಯಿಂದ ಶಾಲೆಗೆ ಅರ್ಧ ದೂರ ಕ್ರಮಿಸಿ ಆಗಿತ್ತು. ಅಷ್ಟು ಹೊತ್ತಿಗೆ ಎಚ್ಚೆತ್ತ ತಾಲೂಕು ಆಡಳಿತ ತಡಬಡಾಯಿಸಿ, ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ, ಈ ಮಾಹಿತಿಯನ್ನು ಎಲ್ಲ ಮಾಧ್ಯಮಕ್ಕೆ ತಿಳಿಸುವ […]
ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮ

ಬೆಳ್ತಂಗಡಿ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಸೈನ್ಯಾಧಿಕಾರಿ ತೇಜ ಕುಮಾರ ಕೊಂಡಾಲ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ; ಕಾರ್ಗಿಲ್ ಕದನದ ಸಂದರ್ಭದಲ್ಲಿನ ಸನ್ನಿವೇಶಗಳನ್ನು ನೆನೆಯುತ್ತಾ, ದೇಶಕ್ಕಾಗಿ ಮಡಿದ ವೀರ ಯೋಧರು ತಮ್ಮ ಜೀವನವನ್ನು ತ್ಯಾಗ ಮಾಡಿ ನಮ್ಮ ನಾಳೆಯ ನೆಮ್ಮದಿಗಾಗಿ ಕಾರಣಕರ್ತರಾಗಿದ್ದಾರೆ. ಒಂದೆಡೆ ವಿಜಯೋತ್ಸವ ಆಚರಿಸುವೆವಾದರೆ ಮತ್ತೊಂದೆಡೆ ಮರಣವನ್ನಪ್ಪಿದ ವೀರ ಯೋಧರ ಮನೆಯಲ್ಲಿ ಸೂತಕದ ಛಾಯೆ. ನಮ್ಮ ಸಂಭ್ರಮದ ನಡುವೆಯೂ ಸೈನಿಕರ ತ್ಯಾಗ ಬಲಿದಾನದ ಗಾಥೆಯನ್ನು ಮಕ್ಕಳಿಗೆ […]
ಪತ್ರಕರ್ತರ ಸಂಘದಿಂದ ಶಾಲೆಗೆ ಗ್ರೀನ್ ಬೋರ್ಡ್ ಹಸ್ತಾಂತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಜುಲೈ 29ರಂದು ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ; ಉತ್ತಮ ವಾತಾವರಣ ಇರುವ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಉತ್ಸಾಹ ಹೆಚ್ಚಿರುತ್ತದೆ. ಇಂದಿನ ದಿನಗಳಲ್ಲಿ ಅಂಕಗಳೇ ಮಾನದಂಡವಲ್ಲ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ತಕ್ಕ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿದೆ ಎಂದರು. ಶಾಲೆಯ […]
ಜೇಸಿ ಸಂತೋಷ್ ಕೋಟ್ಯಾನ್‌ರಿಗೆ ‘ಸಾಧನಾಶ್ರೀ’ ಪುರಸ್ಕಾರ

ಬೆಳ್ತಂಗಡಿ: ಮಂಗಳೂರಿನಲ್ಲಿ ಜುಲೈ 28ರಂದು ನಡೆದ ಜೆಸಿಐ ಅಭಿವೃದ್ಧಿ, ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ-2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್‌ರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.2011ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡು ಕೋಶಾಧಿಕಾರಿಯಾಗಿ,ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೇಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ; 2017 ರಲ್ಲಿ ಘಟಕಾಧ್ಯಕ್ಷರಾಗಿ […]
ಪ್ರಕೃತಿದತ್ತ ಕೊಡುಗೆಯನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು -ಹೇಮಾವತಿ ವಿ. ಹೆಗ್ಗಡೆ.

ಬೆಳ್ತಂಗಡಿ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಚರ್ತುದಾನಗಳಲ್ಲಿ ಔಷಧ ದಾನವೂ ಒಂದು. ಶುದ್ಧನೀರು ಮನುಷ್ಯನಿಗೆ ಆರೋಗ್ಯಯುತವಾಗಿರಲು ಪ್ರಕೃತಿಯು ನೀಡಿದ ಕೊಡುಗೆಯಾಗಿದ್ದು, ನೀರು ಆರೋಗ್ಯದ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ. […]
ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಸರಕಸರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರೀಶ್ ತನ್ನ ಹುಟ್ಟುಹಬ್ಬವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.ನಡ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಪ್ರಸ್ತುತ ಅನಾರೋಗ್ಯದಿಂದ ಬಳಲುತ್ತಿರುವ ಮನೆಯ ಆಧಾರಸ್ತಂಭವಾಗಿದ್ದ ಶೀನಪ್ಪ ಗೌಡ ಮತ್ತು ಅವರ ಬುದ್ಧಿಮಾಂದ್ಯ ಮಗಳ ಜೊತೆಗೆ ಜೀವನ ಸಾಗಿಸುತ್ತಿರುವ ಕುಟುಂಬದೊಂದಿಗೆ ಹರೀಶ್ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತನ್ನ ಹುಟ್ಟುಹಬ್ಬದ ಪ್ರಯುಕ್ತ ಈ ಕುಟುಂಬಕ್ಕೆ ಅಕ್ಕಿ , ದವಸಧಾನ್ಯಗಳನ್ನು ನೀಡಿ ಸಹಕರಿಸಿದರು.ಈ ಸಂದರ್ಭದಲ್ಲಿ ಗೆಳೆಯರಾದ ದೀಕ್ಷಿತ್, ರಕ್ಷಿತ್, […]
ತ್ಯಾಜ್ಯನೀರು ಸಂಸ್ಕರಣಾ ವಿಸ್ತರಿತ ಘಟಕ ನಿರ್ಮಾಣಕ್ಕೆ ಭೂಮಿಪೂಜೆ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್‌ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಪ್ರತಿದಿನ ಹತ್ತುಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದ, ತಾಲೂಕಿನ ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಇದಾಗಿದೆ. ಘಟಕದಲ್ಲಿ ಸಂಸ್ಕರಿಸಿದ ನೀರನ್ನು ಸ್ಥಳೀಯ ಕೃಷಿ ಭೂಮಿಗೆ ಬಳಸುವ ಮೂಲಕ ಕೃಷಿಗೆ ಬೆಂಬಲ ನೀಡುವ ಯೋಚನೆ ಎಕ್ಸೆಲ್ ವಿದ್ಯಾಸಂಸ್ಥೆಯ […]
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಹುಮುಖ ಪ್ರತಿಭೆ ಸುಕನ್ಯಾ ಕಾಮತ್

ಬೆಳ್ತಂಗಡಿ: ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಬಹುಮುಖ ಪ್ರತಿಭೆ ಸುಕನ್ಯಾ ಕಾಮತ್ (ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಮತ್ತು ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಚಾರ್ಟರ್ಡ್ ಎಕೌಂಟೆಂಟ್ ಕೆ. ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ […]
ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ| ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ದಿನಾಂಕ ಜೂನ್ 15ರಂದು ಕ್ಷೇತ್ರದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ವಿತರಿಸಿದರು. […]
ಪಟ್ಟಣ ಪಂಚಾಯತ್ ಆಡಳಿತದಿಂದ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ!

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಮಾರಿಗುಡಿ ಎದುರುಗಡೆ ಅನಧಿಕೃತವಾಗಿ ತಲೆ ಎತ್ತಿದ ವ್ಯಾಪಾರಿ ಡೇರೆಯನ್ನು ತೆರವುಗೊಳಿಸಿದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಸಂತೆ ಮಾರ್ಕೆಟ್‌ನ ಪ್ರವೇಶದ್ವಾರದಲ್ಲಿ ತಲೆ ಎತ್ತಿರುವ ಅನಧಿಕೃತ ವ್ಯಾಪಾರಿ ಡೇರೆಯನ್ನು ತೆರವುಗೊಳಿಸದೇ; ‘ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ’ ಧೋರಣೆಯನ್ನು ಅನುಸರಿಸುತ್ತಿರುವುದು ನಾಗರಿಕ ವಲಯದಲ್ಲಿ ಚರ್ಚೆಗೆ ಆಹಾರವಾಗಿದೆ.ಪ್ರತೀದಿನ ವಾಹನ ದಟ್ಟಣೆಯಿಂದ ಎಲ್ಲರೂ ಪರದಾಡುತ್ತಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸಾಗುವ […]