ಹೆದ್ದಾರಿಯೋ….ಸಂತೆ ಅಡ್ಡೆಯೋ….

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಂತೆ ಮಾರುಕಟ್ಟೆಯ ಒಳಗೆ ನಡೆಯುತ್ತಿದ್ದ ಸಂತೆ ಮಾರುಕಟ್ಟೆ ಇಂದು ಬೆಳೆದು ರಾಷ್ಟ್ರೀಯ ಹೆದ್ದಾರಿಯನ್ನೂ ವ್ಯಾಪಿಸಿದೆ. ಪರಿಣಾಮ ವಾಹನ ಸವಾರರು ಮತ್ತು ಪಾದಾಚಾರಿಗಳು ವಾರದ ಸಂತೆಯ ದಿನವಾದ ಸೋಮವಾರ ಪರದಾಡುವಂತಾಗಿದೆ. ಸಂತೆಯ ಪರಿಣಾಮವಾಗಿಯೇ ನಾಲ್ಕಾರು ಸರಣಿ ಅಪಘಾತ ನಡೆದು ಒಂದಂಷ್ಟು ಮಂದಿ ಗಾಯಗೊಂಡರೂ ಪಟ್ಟಣ ಪಂಚಾಯತ್ ಆಡಳಿತವಾಗಲೀ, ತಾಲೂಕು ಆಡಳಿತವಾಗಲೀ ದೀರ್ಘ ನಿದ್ರೆಯಿಂದ ಎಚ್ಚೆತ್ತಂತೆ ಕಾಣುತ್ತಿಲ್ಲ.ಹೌದು, ಇಲ್ಲಿ ಪ್ರತೀ ಸೋಮವಾರ ವಾಹನ ಮಿಸುಕಾಡಲು ತಾಸುಗಟ್ಟಲೆ ಒದ್ದಾಡುವುದು ಸಾಮಾನ್ಯವಾಗಿದೆ. ತುರ್ತು ಚಿಕಿತ್ಸೆಗೆ ರೋಗಿಗಳನ್ನು […]
ನೈತಿಕತೆ ಮರೆತ ಅಧಿಕಾರಿಗಳಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆ

ಬೆಳ್ತಂಗಡಿ: ಇಲ್ಲಿ ಪರಿಣಾಮ ದುಷ್ಪರಿಣಾಮದ ಪ್ರಶ್ನೆ ಅಲ್ಲ; ಬದಲಾಗಿ ನೈತಿಕತೆಯ ಪ್ರಶ್ನೆ. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವಾಗಲೇ ನೌಕರರೊಬ್ಬರ ನಿವೃತ್ತಿ ನೆಪದಲ್ಲಿ ಜವಾಬ್ದಾರಿಯುತ ಸರಕಾರಿ ಅಧಿಕಾರಿಗಳು ಸೇರಿ ಭರ್ಜರಿ ಭೋಜನದ ವ್ಯವಸ್ಥೆ ಸಹಿತ ಸಮಾರಂಭ ಏರ್ಪಡಿಸಿದರೆ….. ಇವರಿಗೆ ನೈತಿಕತೆ ಇದೆಯಾ ಎಂಬ ಪ್ರಶ್ನೆ ಜನಸಾಮಾನ್ಯರಲ್ಲೂ ಮೂಡದಿರದು.ಮೇ 31ರಂದು ಬೆಳ್ತಂಗಡಿ ಕೃಷಿ ಇಲಾಖೆಯ ಅಧಿಕಾರಿ ಚಿದಾನಂದ ಹೂಗಾರ್ ಸೇವೆಯಿಂದ ನಿವೃತ್ತರಾಗಲಿದ್ದರು. ಅವರಿಗಾಗಿ ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಭರ್ಜರಿ ಕಾರ್ಯಕ್ರಮ. ನೂರಾರು ಮಂದಿಗೆ ಭರ್ಜರಿ ಭೋಜನ. ಈ ಕಾರ್ಯಕ್ರಮದಲ್ಲಿ ಚುನಾವಣಾ ನೀತಿಸಂಹಿತೆ […]
ಸರಕಾರಿ ಪ್ರೌಢಶಾಲೆ ಕಾಶಿಪಟ್ಣದಲ್ಲಿ ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ: ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಯಶೋಧರ ನಲ್ಲರಬೆಟ್ಟು ಹೂಗುಚ್ಛ ನೀಡಿ ಸ್ವಾಗತಿಸುವುದರ ಮೂಲಕ ಉದ್ಘಾಟಿಸಿದರು. ಸರಕಾರದಿಂದ ವಿದ್ಯಾರ್ಥಿಗಳಿಗೆ ಸರಬರಾಜಾದ ಪಠ್ಯಪುಸ್ತಕಗಳನ್ನು ಮತ್ತು ಸಮವಸ್ತ್ರವನ್ನು ಇದೇ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ. ಎಲ್ಲರನ್ನು ಸ್ವಾಗತಿಸಿ; 2024-25ನೇ ಶೈಕ್ಷಣಿಕ ವರ್ಷದ ಬಲವರ್ದನೆಗೆ ರೂಪುರೇಷೆಗಳನ್ನು ಪೋಷಕರಿಗೆ ತಿಳಿಯಪಡಿಸಿದರು. ಶಾಲಾ ಶಿಕ್ಷಕ ದೇವುದಾಸ್ ನಾಯಕ್ ಶಾಲಾ […]
‘ದೇವರ ಪೂಜೆ ಯಾವತ್ತೂ ಭಕ್ತರಿಗೋಸ್ಕರ’

ಬೆಳ್ತಂಗಡಿ: ಪೂಜೆ ದೇವರನ್ನು ಒಲಿಸಿಕೊಳ್ಳುವ ಸುಲಭ ಮಾರ್ಗ. ಪೂಜೆಯಿಂದ ನಮ್ಮ ಇಷ್ಟಾರ್ಥ ಸಿದ್ಧಿಯಾಗುವುದು. ತುಪ್ಪದಿಂದ ಹೋಮ ಹವನಾದಿಗಳನ್ನು ಮಾಡುತ್ತೇವೆ. ಹೋಮ ಹವನಾದಿಗಳು ನಮ್ಮ ಸ್ವಾರ್ಥಕ್ಕಾಗಿಯಲ್ಲ; ಧರ್ಮ ಕರ್ಮಗಳು ನಮಗಾಗಿಯಲ್ಲ; ಅದು ಸಮಸ್ತರ ಏಳಿಗೆಗಾಗಿ. ಭಕ್ತಿಯಿಂದ ಧರ್ಮ ಕರ್ಮಗಳನ್ನು ಮಾಡಿದರೆ ಇಡೀ ರಾಷ್ಟ್ರಕ್ಕೆ ಒಳಿತಾಗುವುದು. ನಾವು ದೇವರ ಪೂಜೆ ಮಾಡುವುದು ಯಾವತ್ತೂ ಭಕ್ತರಿಗೋಸ್ಕರ ಎಂದು ಉಡುಪಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಗಳವರು ನುಡಿದರು. ಅವರು ಮೇ 31ರಂದು ಬೆಳ್ತಂಗಡಿ ಯ ಲಾಯ್ಲ ಶ್ರೀ ರಾಘವೇಂದ್ರ ಮಠದಲ್ಲಿ […]
ಆತ್ಮೀಯ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆರ್. ಪ್ರಸನ್ನರನ್ನು ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭವು ಮೇ 31ರಂದು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಪಂಚಾಯತ್‌ರಾಜ್ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್‌ಗಳಾದ ಸುಜಿತ್ ಹಾಗೂ ಹರ್ಷಿತ್, ಇಂಜಿನಿಯರ್ […]
ನವೀಕೃತ ಶಾಲೆ ಹಸ್ತಾಂತರ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ನವೀಕರಣಗೊಂಡ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮೇ 31ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ ಮಾತನಾಡಿ; ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ […]
ಹೃದಯಸ್ಪರ್ಶಿ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವಯೋ ನಿವೃತ್ತರಾದ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕರ ಬೀಳ್ಕೊಡುಗೆ ಸಮಾರಂಭವು ಮೇ 31ರ ಅಪರಾಹ್ನ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣರ ಅಧ್ಯಕ್ಷತೆಯಲ್ಲಿ ಜರಗಿತು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿವರ್ಗದವರು ಹಾಗೂ ತಾಲೂಕು ಪಂಚಾಯತ್‌ನ ಸಿಬ್ಬಂದಿಗಳು ಈ ಸರಳ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ […]
ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಉದ್ಘಾಟನೆ

ಬೆಳ್ತಂಗಡಿ: ಮಹಿಳೆಯರು ಬುದ್ಧಿವಂತರಾಗಿದ್ದು ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೇ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಮೇ 30ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ. […]
ವರದಿಯ ಫಲಶ್ರುತಿ – ಅನಧಿಕೃತ ಫ್ಲಕ್ಸ್ ತೆರವುಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪರವಾನಿಗೆ ಇಲ್ಲದೇ ಕಾನೂನುಬಾಹಿರವಾಗಿ ವಿದ್ಯುತ್ ಕಂಬಗಳನ್ನು ಬಳಸಿ ಅಪಾಯಕಾರಿಯಾಗಿ ಸಾಕಷ್ಟು ಫ್ಲೆಕ್ಸ್‌ಗಳನ್ನು ಅಳವಡಿಸಿರುವ ಬಗ್ಗೆ ಜೈಕನ್ನಡಮ್ಮ ನಿನ್ನೆಯಷ್ಟೇ (ಮೇ30) ವರದಿ ಮಾಡಿತ್ತು. ಸಾಮಾಜಿಕ ಕಾಳಜಿಯ ಈ ಜನಪರ ವರದಿಯಿಂದ ಎಚ್ಚೆತ್ತ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ, ಮುಖ್ಯಾಧಿಕಾರಿ ಮತ್ತು ಸಿಬ್ಬಂದಿವರ್ಗದವರು ಇಂದು (ಮೇ 31)ರಂದು ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿ, ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಎಲ್ಲ ಅನಧಿಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ, ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಮ್ಮ ವರದಿಯಿಂದ […]
ಡಾ| ಎಲ್.ಎಚ್ ಮಂಜುನಾಥರಿಗೆ ಸಮ್ಮಾನ.

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವೃತ್ತಿಯಿಂದ ವಯೋ ನಿವೃತ್ತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥರವರನ್ನು ಅಭಿನಂದಿಸಿ, ಸಮ್ಮಾನಿಸಲಾಯಿತು. ಸಮ್ಮಾನವನ್ನು ನೆರವೇರಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ; ಡಾ| ಎಲ್.ಎಚ್. ಮಂಜುನಾಥರವರು […]