ಬಿಗ್ ಬ್ರೇಕಿಂಗ್ ನ್ಯೂಸ್! ಮಾನಸಿಕ ಅಸ್ವಸ್ಥತೆಯ ಮೇಲೆ ಗ್ಯಾಂಗ್ ರೇಪ್?

ಬೆಳ್ತಂಗಡಿ: ಹೆತ್ತಬ್ಬೆಯನ್ನು ಕಳೆದುಕೊಂಡು ತಬ್ಬಲಿಯಾದ ಮಾನಸಿಕ ಅಸ್ವಸ್ಥತೆಯ ಮೇಲೆ ಕಿರಾತಕರ ಗುಂಪೊಂದು ಗ್ಯಾಂಗ್ ರೇಪ್ ನಡೆಸಿದ ಹೃದಯವಿದ್ರಾವಕ ಘಟನೆಯೊಂದು ಗುರುವಾಯನಕೆರೆಯ ಪಿಲಿಚಂಡಿಕಲ್ಲು ಪರಿಸರದಿಂದ ವರದಿಯಾಗಿದೆ.ನಿರಂತರ ಅತ್ಯಾಚಾರಕ್ಕೊಳಗಾಗುತ್ತಿದ್ದ ಈ ಮಾನಸಿಕ ಅಸ್ವಸ್ಥೆ ಇದೀಗ ಆರು ತಿಂಗಳ ಗರ್ಭಿಣಿ ಎನ್ನಲಾಗುತ್ತಿದ್ದು; ಈಕೆಯ ಮಾನಸಿಕ ದೌರ್ಬಲ್ಯವನ್ನು ದುರ್ಬಳಕೆ ಮಾಡಿಕೊಂಡ ಮೂಡುಬಿದಿರೆ ಪರಿಸರದ ನಾಲ್ಕಾರು ಮಂದಿ ಕಿರಾತಕರು ಈಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದರು ಎನ್ನಲಾಗಿದೆ. ತಾಯಿಯನ್ನು ಕಳೆದುಕೊಂಡ ಈ ಮಾನಸಿಕ ಅಸ್ವಸ್ಥ ಯುವತಿ ತನ್ನ ಮಾನಸಿಕ ಅಸ್ವಸ್ಥ ಸಹೋದರನೊಂದಿಗೆ ಮನೆಯಲ್ಲಿ ವಾಸ್ತವ್ಯವಿದ್ದು; […]
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೇ 24ರಂದು 2023-24ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರಗಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಐಟಿ ಮತ್ತು ಹಾಸ್ಟೆಲ್ ವಿಭಾಗದ ಕಾರ್ಯ ನಿರ್ವಾಹಣಾ ಅಧಿಕಾರಿ ಪೂರಣ್ ವರ್ಮಾ ಮಾತನಾಡಿ; ಸಹೋದ್ಯೋಗಿಗಳು ಮತ್ತು ಸ್ನೇಹಿತರೊಂದಿಗೆ ಉತ್ತಮ ಸಂಪರ್ಕ -ಸಂವಹನ ಬೆಳೆಸಿಕೊಳ್ಳುವುದರಿಂದ ಸತತವಾಗಿ ಬದಲಾಗುತ್ತಿರುವ ತಾಂತ್ರಿಕ ವಿಷಯವನ್ನು ಹಾಗೂ ಅವಕಾಶಗಳನ್ನು ತಿಳಿದುಕೊಳ್ಳಲು ನೆರವಾಗುತ್ತದೆ ಎಂದು ಹೇಳಿದರು.ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. […]
ಓಡೀಲು ದೇಗುಲದಲ್ಲಿ ದೃಢಕಲಶಾಭಿಷೇಕ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 30ರಂದು ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗವು ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ತಂತ್ರಿಗಳಾದ ಉದಯ ಪಾಂಗಾಣ್ಣಯರ ನೇತೃತ್ವದಲ್ಲಿ ವಿವಿಧ ವೈಧಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಮೇ 29ರಂದು ಸಂಜೆ ಗಂಟೆ 5 ರಿಂದ ರಾಕ್ಷೋಘ್ನ ಹೋಮ ಹಾಗೂ ವಾಸ್ತು ಹೋಮ ನಡೆಯಿತು. ಮೇ 30ರಂದು ಕಲಶಾಧಿವಾಸ, ಅಧಿವಾಸ ಹೋಮ, ಚಂಡಿಕಾಯಾಗ, ಮಹಾ ಪೂಜೆ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಪಧಾದಿಕಾರಿಗಳು; ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು […]
ವಿದ್ಯುತ್ ಕಂಬಕ್ಕೆ ಬಿಗಿಯಲಾದ ಅನಧಿಕೃತ ಫ್ಲೆಕ್ಸ್

ಬೆಳ್ತಂಗಡಿ: ಕೆಲ ದಿನಗಳ ಹಿಂದೆಯಷ್ಟೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಕಾರಣಕ್ಕಾಗಿ ಬೆಳ್ತಂಗಡಿ ಪೇಟೆಯ ಹೆದ್ದಾರಿ ಬದಿಯಲ್ಲಿ ಅಳವಡಿಸಲಾಗಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರರನ್ನು ಸ್ವಾಗತಿಸುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ ಗಂಡಸುತನ ಮೆರೆದಿದ್ದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಮತ್ತು ಅಧಿಕಾರಿಗಳು ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಹೆದ್ದಾರಿ ಬದಿಯಲ್ಲೇ ಇಂದು ಪರವಾನಿಗೆ ಪಡೆಯದೇ ಕಾನೂನುಬಾಹಿರವಾಗಿ ಅಳವಡಿಸಲಾದ ಹತ್ತಾರು ವ್ಯಾವಹಾರಿಕ ಪ್ರಚಾರದ ಫ್ಲೆಕ್ಸ್‌ಗಳನ್ನು ಕಂಡೂ ಕಾಣದಂತೆ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕ ಮನದಲ್ಲಿ ಸಾಕಷ್ಟು ಅನುಮಾನ […]
ಸರಕಾರಿ ಅಥವಾ ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ.

ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಗ್ರೇಟೆಡ್ ಪದವಿ ಪೂರ್ವ ಕಾಲೇಜಾಗಿ ಎಕ್ಸೆಲ್ ವಿದ್ಯಾಸಂಸ್ಥೆ ಹೊರಹೊಮ್ಮಿದೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ರಾರಾಜಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗಳ ಫಲಿತಾಂಶದೊಂದಿಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಪ್ರಸ್ತುತ 2024- 25ನೇ ಸಾಲಿನಲ್ಲಿ ಸಂಸ್ಥೆಯು ವಾಣಿಜ್ಯ ವಿಭಾಗದಲ್ಲಿ ಕಾರ್ಯಾರಂಭ ಮಾಡುತ್ತಿದೆ. ಇಂಟಗ್ರೇಟೆಡ್ ಕಲಿಕಾ ವ್ಯವಸ್ಥೆಯ ವಾಣಿಜ್ಯ ವಿಭಾಗವನ್ನು ಹೊಂದುತ್ತಿರುವ ರಾಜ್ಯದ ಪ್ರಥಮ ಕಾಲೇಜು ಎಂಬ ಹೆಗ್ಗಳಿಕೆಯನ್ನು ಪಡೆದುಕೊಳ್ಳುತ್ತಿದೆ. ಜಿಲ್ಲೆಯ ನಾನಾ ಭಾಗಗಳಲ್ಲಿ ಯಾವುದೇ ಸರಕಾರಿ […]
ಎಸ್‌ಎಸ್‌ಎಲ್‌ಸಿ ಸಾಧಕಿ ತನುಶ್ರೀಗೆ ಅಭಿನಂದನೆ

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ತನುಶ್ರೀ ಅವರನ್ನು ಶಾಸಕ ಹರೀಶ್ ಪೂಂಜ ವಿದ್ಯಾರ್ಥಿನಿಯ ಮನೆಗೆ ತೆರಳಿ ಅಭಿನಂದಿಸಿ ಸಮ್ಮಾನಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಮತ್ತು ಜಯಾನಂದ ಗೌಡ, ಕಲ್ಮಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮ, ಗ್ರಾಮದ ಪ್ರಮುಖರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಕೊರಗಪ್ಪ, […]
ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್‌ಗೆ ಅಭಿನಂದನೆ.

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಅವರನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ವಿದ್ಯಾರ್ಥಿಯ ನಿವಾಸಕ್ಕೆ ತೆರಳಿ ಅಭಿನಂದಿಸಿ, ಸಮ್ಮಾನಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಮತ್ತು ಜಯಾನಂದ ಗೌಡ ಹಾಗೂ […]
ನಂದಗೋಕುಲ ಗೋಶಾಲೆ ನಿರ್ವಹಣೆಗೆ ನೆರವು.

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕ ನಂದಗೋಕುಲ ಗೋಶಾಲೆಯ ದೀಪೋತ್ಸವ ಮತ್ತು ಗೋಶಾಲೆ ನಿರ್ವಹಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರೂಪಾಯಿ 5ಲಕ್ಷದ ಆರ್ಥಿಕ ನೆರವನ್ನು ನೀಡಿರುತ್ತಾರೆ. ಶ್ರೀ ಕ್ಷೇತ್ರದ ಪರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ರವರು ನಂದಗೋಕುಲ ಗೋಶಾಲೆ ನಿರ್ವಹಣೆಯ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪದಾಧಿಕಾರಿಗಳಿಗೆ ನೆರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ […]
ರಾಷ್ಟ್ರೀಯ ಪರೀಕ್ಷೆಯಲ್ಲಿ 191ನೇ ರಾಂಕ್

ಬೆಳ್ತಂಗಡಿ: ಭಾರತೀಯ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಮಟ್ಟದ (INICET) ಪ್ರವೇಶ ಪರೀಕ್ಷೆಯಲ್ಲಿ ಉಜಿರೆಯ ಡಾ| ಶಿವಾನಿ ಎಂ.ಡಿ. ಅವರು ರಾಷ್ಟ್ರೀಯ ಮಟ್ಟದಲ್ಲಿ 191ನೇ ರಾಂಕ್ ಪಡೆದಿರುತ್ತಾರೆ. ಅವರು ತನ್ನ ಎಂ.ಬಿ.ಬಿ.ಎಸ್. ಪದವಿಯನ್ನು ಮಂಗಳೂರಿನ ಕೆ.ಎಂ.ಸಿ. ಕಾಲೇಜಿನಲ್ಲಿ ಪೂರೈಸಿದ್ದರು. ಅವರು ಉಜಿರೆಯ ದಂತ ವೈದ್ಯರಾದ ಡಾ|ಎಂ.ಎಂ. ದಯಾಕರ್ ಮತ್ತು ಡಾ| ಅನಿತಾ ದಯಾಕರ್ ದಂಪತಿಗಳ ಪುತ್ರಿ. ಅವರು ಪ್ರಸ್ತುತ ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಉಜಿರೆಯಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ಯಾವುದೇ ಪ್ರಚಾರದ ಬಯಕೆ ಇಲ್ಲದೆ ಮಾಡುವ ರಕ್ತದಾನವು ಇತರ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾಗಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಪೂರನ್‌ವರ್ಮ ಹೇಳಿದರು.ಅವರು ಮೇ 26ರಂದು ಉಜಿರೆಯ ಶಾರದಾ ಮಂಟಪದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಮಂಗಳೂರಿನ ಕೆ.ಎಂ.ಸಿ. ರಕ್ತ ಕೇಂದ್ರದ ಜಂಟಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ರಕ್ತದಾನ ಮಾಡಿದವರಿಗೆ ಆರೋಗ್ಯವರ್ಧನೆಯೊಂದಿಗೆ ಮಾನಸಿಕಶಾಂತಿ, ನೆಮ್ಮದಿ ಸಿಗುತ್ತದೆ. ಜೊತೆಗೆ ಧನಾತ್ಮಕ ಚಿಂತನೆಯೊಂದಿಗೆ ಧನ್ಯತಾ ಭಾವವೂ ಮೂಡಿ ಬರುತ್ತದೆ ಎಂದು […]