ಎಸ್‌ಎಸ್‌ಎಲ್‌ಸಿ ಸಾಧಕನಿಗೆ ಸಮ್ಮಾನ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624ಅಂಕಗಳನ್ನು ಗಳಿಸಿ ರಾಜ್ಯಕ್ಕೇ ದ್ವಿತೀಯ ಸ್ಥಾನಿಯಾದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿ.ಕೆ. ಚಿನ್ಮಯ್‌ರನ್ನು ಅವರ ನಿವಾಸದಲ್ಲಿ ಬೆಳ್ತಂಗಡಿಯ ಮುಳಿಯ ಜ್ಯುವೆಲರ್ಸ್ ವತಿಯಿಂದ ಅಭಿನಂದಿಸಿ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಚಿನ್ಮಯ್‌ನ ತಂದೆ ಗಣೇಶ ರಾಮಚಂದ್ರ ಭಟ್, ತಾಯಿ ಮಾಲಿನಿ ಹೆಗಡೆ, ಮುಳಿಯ ಜ್ಯುವೆಲ್ಲರ್ಸ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಒಂಟಿ ಸಲಗ ಮೇ 12ರ ರಾತ್ರಿ ಕಂಡುಬಂದಿದೆ.ಮೇ 12ರ ರಾತ್ರಿ ಗಂಟೆ 8ರ ಸುಮಾರಿಗೆ ಒಂಟಿ ಸಲಗ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು. ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಇದೇ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಒಂಟಿ ಸಲಗ ಕಂಡುಬಂದಿತ್ತು.ಘಾಟಿ ಪರಿಸರದಲ್ಲಿ ಮೇ 12ರಂದು ಉತ್ತಮ […]

ಮೇ 15ರಿಂದ ಕರುಂಬಿತ್ತಿಲ್‌ನಲ್ಲಿ ಸಂಗೀತ ಶಿಬಿರ

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ನಿಡ್ಲೆ ಕರುಂಬಿತ್ತಿಲ್ ಮನೆಯಂಗಳದಲ್ಲಿ 24ನೇ ವರ್ಷದ ‘ಸಂಗೀತ ಶಿಬಿರ’ವು ವರ್ಷಂಪ್ರತಿಯಂತೆ ಈ ವರ್ಷವೂ ಮೇ 15 ರಿಂದ 19ರವರೆಗೆ ನಾಡಿನ ಪ್ರಸಿದ್ಧ ಸಂಗೀತ ಕಲಾವಿದರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಲಿದೆ. ಸಂಗೀತದೊಳಗಿನ ಆಟ, ಲಯದೊಂದಿಗಿನ ಮೋಜು, ಅಭಿನಯ, ಉಪನ್ಯಾಸ ಮತ್ತು ವಿಶೇಷ ಸಂಗೀತ ಕಚೇರಿಗಳನ್ನೊಳಗೊಂಡ ಕರುಂಬಿತ್ತಿಲ್ ಶಿಬಿರ ಮೇ 15ರಂದು ಬೆಳಿಗ್ಗೆ ಧರ್ಮಸ್ಥಳದ ಪ್ರಕಾಶ್ ದೇವಾಡಿಗ ಅವರ ಮಂಗಳ ವಾದ್ಯದೊಂದಿಗೆ ಪ್ರಾರಂಭಗೊಳ್ಳಲಿದೆ. ಉಡುಪಿ ಶ್ರೀ ಕೃಷ್ಣ ಮಠದ ಭಾವಿ ಪರ್ಯಾಯ ಪೀಠಾಧೀಶ ಶೀರೂರು ಮಠದ ವೇದವರ್ಧನ […]

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರಿಡಲು ಮನವಿ

ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ ಸಂಘದ ವಾಣಿಜ್ಯ ಸಂಕೀರ್ಣದ ರೂವಾರಿ; ಸಂಘದ ಗೌರವಾದ್ಯಕ್ಷರಾಗಿದ್ದ ವಸಂತ ಬಂಗೇರರ ಹೆಸರಿನಲ್ಲಿ ಬೆಳ್ತಂಗಡಿ ಪೇಟೆಯ ಹೆದ್ದಾರಿಯ ಮುಖ್ಯ ವೃತ್ತದಲ್ಲಿ ಬಂಗೇರರ ಕಂಚಿನ ಪುತ್ಥಳಿ ನಿರ್ಮಿಸಲು ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರು ಇಡುವಂತೆ ಕರ್ನಾಟಕದ ಸನ್ಮಾನ್ಯ […]

ಸಮಾಜಕ್ಕಾಗಿ ದುಡಿಯುವ ತುಡಿತವಿರಬೇಕು: ಡಾ. ಹೆಗ್ಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ| ಎಲ್.ಎಚ್. ಮಂಜುನಾಥ್ ಅವರ ಬೀಳ್ಕೊಡುಗೆ ಹಾಗೂ ಸಮ್ಮಾನ ಸಮಾರಂಭವು ಮೇ 11ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾತನಾಡಿ; ಡಾ|ಎಲ್.ಎಚ್. ಮಂಜುನಾಥರವರು ಅದ್ಬುತ ಕೆಲಸಗಳ ಮೂಲಕ ಜನರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿದ್ದಾರೆ. ನಮ್ಮಲ್ಲಿ ಸಮಾಜಕ್ಕಾಗಿ ದುಡಿಯುವ ತುಡಿತವಿರಬೇಕು. ಏನು ಮಾಡಬೇಕು ಎಂಬುದರ ಬಗ್ಗೆ ಜ್ಞಾನವೀರಬೇಕು ಎಂದರು.ಡಾ| ಎಲ್.ಎಚ್. […]

ಅಕ್ರಮ ಗೋಸಾಟ ಪತ್ತೆ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಮೇ 11ರ ಮಧ್ಯಾಹ್ನ ಕೆಎ 21 ಬಿ 8892 ನಂಬರಿನ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿ. ಭರತ್ ಕುಮಾರ್ ಮತ್ತು ಸಿಬ್ಬಂದಿಗಳು; ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ವಾಹನ ಹಾಗೂ ಜಾನುವಾರುಗಳನ್ನು ಮುಟ್ಟುಗೋಲು ಹಾಕಿದ ಉಪ್ಪಿನಂಗಡಿ ಪೊಲೀಸರು ಆರೋಪಿ ವಾಹನ ಚಾಲಕ ಬಂದಾರು ಗ್ರಾಮದ […]

‘ಮಹಿಳೆಯರಿಗೆ ಕೌಶಲ್ಯದೊಂದಿಗೆ ವ್ಯಕ್ತಿತ್ವ ವಿಕಸನವೂ ಮುಖ್ಯ’

‘ಬೆಳ್ತಂಗಡಿ: ಹೆಣ್ಣು ಮಕ್ಕಳನ್ನು ಪೋಷಕರು ಬೆಳೆಸುವಾಗ ಸಾಮಾನ್ಯವಾಗಿ ಮದುವೆಯ ಬಗ್ಗೆ ಯೋಚನೆ ಮಾಡುತ್ತಾರೆ. ವಿದ್ಯಾಭ್ಯಾಸ ನೀಡುತ್ತಾರೆ. ಆದರೆ ಉದ್ಯೋಗದ ಬಗ್ಗೆ ಯೋಚಿಸುವುದು ಕಡಿಮೆ. ಇಂದಿನ ಹೆಣ್ಣು ಮಕ್ಕಳಿಗೆ ವಿದ್ಯೆಯ ಜೊತೆಗೆ ಉದ್ಯೋಗ ಬೇಕು; ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ‍್ಯ ಬಹು ಮುಖ್ಯವಾಗುತ್ತದೆ. ನಮ್ಮ ಕೈಯಲ್ಲಿ ನಮ್ಮ ದುಡ್ಡು ಇರಬೇಕು. ನಮ್ಮ ಮತ್ತು ಮಕ್ಕಳ ಬೇಕು-ಬೇಡಗಳಿಗೆ, ಸ್ಪಂದಿಸಲು ಅನುಕೂಲವಾಗತ್ತದೆ. ಇನ್ನೂ ಮುಖ್ಯವಾಗಿ ನಮ್ಮ ಮನೋಬಲ ಏನು, ನಮ್ಮ ಒಳಗೆ ಏನು ಆಸೆ ಇದೆ. ನಮ್ಮಲ್ಲಿ ಏನು ಪ್ರತಿಭೆ ಇದೆ. ನಮ್ಮ […]

ಬಸವ ಜಯಂತಿ ಆಚರಣೆ

ಬೆಳ್ತಂಗಡಿ: 12ನೇ ಶತಮಾನದಲ್ಲಿನ ಕುರುಡು ನಂಬಿಕೆ, ಗೊಡ್ಡು ಸಂಪ್ರದಾಯಗಳನ್ನು ತೊಲಗಿಸಿ, ತಮ್ಮ ಅನುಭವ ಮಂಟಪದ ಮೂಲಕ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಪ್ರತಿಪಾದಿಸಿದವರು ಬಸವಣ್ಣ. ಬಸವ ಜಯಂತಿಯ ಆಚರಣೆಯ ಮೂಲಕ ನಾವೆಲ್ಲರೂ ಭಾರತೀಯತೆಯನ್ನು ಬೆಳೆಸಿಕೊಳ್ಳಬೇಕು. ಯಾವ ಧರ್ಮವು ಶ್ರೇಷ್ಠವಲ್ಲ, ಕನಿಷ್ಟವೂ ಅಲ್ಲ ಎಂಬುವುದನ್ನು ತಿಳಿದು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕೆಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ.ವಿ.ಎಸ್.ಎಂ. ಪ್ರೌಢಶಾಲೆ ಕಾಂಚನ ಇಲ್ಲಿನ ಮುಖ್ಯ ಶಿಕ್ಷಕ ರಮೇಶ ಮಯ್ಯ ಹೇಳಿದರು.ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಬಸವ […]

ಮನೆಮನೆಯಲ್ಲಿ ಗಮಕ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಕನ್ನಡ ಕಾವ್ಯ ಪರಂಪರೆಯ ಪರಿಚಯ ಮತ್ತು ಸಂಸ್ಕೃತಿಯನ್ನು ಉಳಿಸುವ ಹೊಸ ಆಂದೋಲನವನ್ನು ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ ಆರಂಭಿಸಿದೆ. ಮನೆ ಮನೆಗಳಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸುವ ಅಭಿಯಾನಕ್ಕೆ ಧರ್ಮಸ್ಥಳ ಗ್ರಾಮದ ನಾರ್ಯದ ಜಯರಾಮ ಕುದ್ರೆಂತಾಯರ ಮನೆಯಲ್ಲಿ ಮೇ 7 ರಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ ಪೂರ್ವಾಧ್ಯಕ್ಷ ಮತ್ತು ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಜಯರಾಮ ಕುದ್ರೆಂತಾಯರ ಮನೆಯಲ್ಲಿ ‘ಮನೆ ಮನೆ ಗಮಕ ಕಾರ್ಯಕ್ರಮ’ವನ್ನು ಕಲಾ […]

‘ವಿದ್ಯಾರ್ಥಿಗಳು ಸಾಧನೆಯ ಮೂಲಕ ನಾಡಿಗೆ ಕೀರ್ತಿ ತರಬೇಕು’

ಬೆಳ್ತಂಗಡಿ : ಭಾರತೀಯ ವಿಜ್ಞಾನಿಗಳು ಇಸ್ರೋದಲ್ಲಿ ವಿಶೇಷ ಸಾಧನೆ, ಸಂಶೋಧನೆಗಳಿಂದ ನಾಡಿಗೆ ಕೀರ್ತಿ ತಂದಿದ್ದಾರೆ. ರಾಕೆಟ್ ಹಾಗೂ ಉಪಗ್ರಹ ಉಡಾವಣೆಯಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆ ಶ್ರೇಷ್ಠ ಹಾಗೂ ಅದ್ವಿತೀಯವಾದುದು. ಚಂದ್ರಯಾನದ ಸಾಧನೆಯ ಯಶಸ್ಸಿಗೆ ಪ್ರಧಾನಿ ಸಹಿತ ಎಲ್ಲೆಡೆಗಳಿಂದ ಅಭಿನಂದನೆ ವ್ಯಕ್ತವಾಗಿದೆ. ಇಸ್ರೋ ಸಂಸ್ಥೆಯಲ್ಲಿ ಗಗನಯಾನಿ ಹಾಗೂ ವಿಜ್ಞಾನಿಗಳಿಗೆ ವಿಫುಲ ಉದ್ಯೋಗಾವಕಾಶವಿದ್ದು, ಅವರಿಗೆ ಎಲ್ಲ ಸವಲತ್ತು ದೊರೆಯಲಿದೆ. ವಿದ್ಯಾರ್ಥಿಗಳು ಬದುಕಿನಲ್ಲಿ ವಿಶೇಷ ಸಾಧನೆಯಿಂದ ನಾಡು ನುಡಿಗೆ ಕೀರ್ತಿ ತರುವಂತವರಾಗಬೇಕು ಎಂದು ಬೆಂಗಳೂರಿನ ಇಸ್ರೋ ಸೆಟ್‌ಲೈಟ್ ಕೇಂದ್ರದ ವಿಜ್ಞಾನಿ ಶ್ರೀನಿವಾಸ್ […]