ರಿಕ್ಷಾ ಪಲ್ಟಿ ಚಾಲಕ ಸಾವು

ಬೆಳ್ತಂಗಡಿ: ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ಮಗುಚಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟ ಘಟನೆ ಜೂನ್ 22ರಂದು ವರದಿಯಾಗಿದೆ.ಮೃತಪಟ್ಟ ಆಟೋ ಚಾಲಕ ಬೆಳ್ತಂಗಡಿ ತಾಲೂಕಿನ ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂದು ಗುರುತಿಸಲಾಗಿದೆ.ಗುರುವಾಯನಕೆರೆಯಿಂದ ಅಳದಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕನನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಮೃತ ಪಟ್ಟಿದ್ದ ಎನ್ನಲಾಗಿದೆ. ಆಟೋದಲ್ಲಿದ್ದ […]
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್‌ಗೆ ಆಯ್ಕೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ ಕೆ. ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಆರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ನ ನಿಕಟ ಪೂರ್ವ ಅಧ್ಯಕ್ಷರಾದ ರಾಜಶೇಖರ ಕೋಟ್ಯಾನ್ ವಹಿಸಿದ್ದರು. ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗಾಗಿ ಖರೀದಿಸಿದ ಜಾಗದಲ್ಲಿ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶ್ರೀ […]
ಆರೋಗ್ಯ ಇಲಾಖೆಗೆ ಭೇಟಿ ಹಾಗೂ ಪರಿಸರ ದಿನಾಚರಣೆ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ, ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 20ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು. ತಾಲೂಕು ಒಕ್ಕೂಟದ ಅಧ್ಯಕ್ಷರಾದ ಮಂಜುಳಾ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಡಿಕೆಆರ್‌ಡಿಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಬಿನೋಯಿ ಎ.ಜೆ. ಇಲಾಖಾ ಭೇಟಿ ಮೂಲಕ ಜಾಲಬಂಧ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಒಕ್ಕೂಟದ ಅಧ್ಯಕ್ಷರಾದ ಮಂಜುಳಾರವರು ಒಕ್ಕೂಟದ ವತಿಯಿಂದ ಮಾಡಬಹುದಾದ ಕೆಲಸಗಳ ಬಗ್ಗೆ ತಿಳಿಸಿದರು. ಬಳಿಕ ಸಮೂದಾಯ […]
ಎನ್ಎಸ್ಎಸ್ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪರಾದ ಡಾ. ಲಕ್ಷ್ಮೀನಾರಾಯಣರವರು ಎನ್‌ಎಸ್‌ಎಸ್ ನ ಧ್ಯೇಯ,ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ. ರವರು; ಎನ್ಎಸ್ಎಸ್ ವಿದ್ಯಾರ್ಥಿಗಳ […]
ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಜೂನ್ 16ರಂದು ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಡಾ. ಹೆಗ್ಗಡೆಯವರು ಶುಭ ಹಾರೈಸಿದರು.ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ, 1,00,254 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ […]
ಉಜಿರೆ ಎಸ್.ಡಿ.ಎಂ ಅಂಗಳದಲ್ಲಿ ವಿಶ್ವಪರಿಸರ ದಿನಾಚರಣೆ

ಬೆಳ್ತಂಗಡಿ: ನದಿ, ಹಳ್ಳ-ಕೊಳ್ಳ ಮತ್ತು ಹಸಿರಸಿರಿಯೊಂದಿಗಿನ ಪರಿಸರವನ್ನು ಓದಿಕೊಂಡು ಮನನ ಮಾಡಿಕೊಂಡು ಪ್ರಕೃತಿದತ್ತ ಬದುಕಿನ ಮಾದರಿಗಳನ್ನು ಅನುಸರಿಸಲೇಬೇಕಿದೆ ಎಂದು ಖ್ಯಾತ ಪರಿಸರ ಬರಹಗಾರ ಶಿವಾನಂದ ಕಳವೆ ಅಭಿಪ್ರಾಯಪಟ್ಟರು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯು ಮಂಗಳೂರಿನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಳ್ತಂಗಡಿಯ ಕಾನೂನು ಸೇವಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್ 17ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಪ್ಲಾಸ್ಟಿಕ್ ಮುಕ್ತ […]
ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿದ್ದು; ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ ಹೊಂದಿದ ಸಾಲಗಾರರ ಸಾಲಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಇವರಿಗೆ ನೀಡಲಾದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಮಂಜೂರಾತಿ ಮೇರೆಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸಿ. ಇವರ ಕುಟುಂಬದವರಿಗೆ ಸಾಲದಿಂದ ಋಣ ಮುಕ್ತಾಯಗೊಳಿಸಿದ ಖಾತ್ರಿ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ| ರಾಜಾರಾಮ […]
ಉಜಿರೆ ದುರ್ಗಾ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಪತ್ತೆ

ಬೆಳ್ತಂಗಡಿ: ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂನ್ 14ರ ರಾತ್ರಿ ಪೊಲೀಸ್ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್‌ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದು; ಲಾಡ್ಜ್‌ನ ಮ್ಯಾನೇಜರ್ […]
ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್‌ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ.ಪ್ರವಣ್ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ವಾನ್ 542,ಸಾನಿಕಾ – 542ಆರುಲ್ ಡಿಸೋಜ 540,ಸಂದೀಪ್ ದುಲಾಜ್ 533,ನಿಶ್ಚಲ್ ಆರ್ ಸೊನ್ನಾದ್ 532,ಶಾಂತವ್ವ 535,ಗೌತಮ್ ಎಸ್.ಜಿ 519,ಉಲ್ಲಾಸ್ ಎಂ.ಬಿ 502,ಪ್ರತೀಕ್ಷಾ ಎಸ್ – 506ವಿಜಯ್ ಕುಮಾರ್ 508,ಕೃಪಾ ಸಾಂಚಿ ಮೌರ್ಯ 508,ಪ್ರೇಕ್ಷಾ ಕುಂದರ್ 519,ವಿನೀತ್ ಎಸ್ ಅಣ್ಣ 511,ಏರಲ್ ಸಮಿಯಾ ಡಿಸೋಜ 518,ನಿಧಿ […]
ಎಕ್ಸೆಲ್‌ನಲ್ಲಿ ದೃಷ್ಟಿ – 2025 ಓರಿಯಂಟೇಶನ್

ಬೆಳ್ತಂಗಡಿ: ಹಣದ ಹಿಂದೆ ಹೋದವರು ಗೆದ್ದಿಲ್ಲ. ಗುರಿಯ ಹಿಂದೆ ಹೋದವರು ಗೆದ್ದಿದ್ದಾರೆ; ಹಾಗೂ ಹಣವನ್ನೂ ಗಳಿಸಿದ್ದಾರೆ. ಹೀಗಾಗಿ ಅಚಲವಾದ ಗುರಿ ನಿಮ್ಮಲ್ಲಿದ್ದರೆ ಗೆಲುವನ್ನು ಸಾಧಿಸಬಹುದು. ಆಗ ತಾನಾಗಿಯೇ ಹಣ ಸಂಪಾದನೆ ಯಾಗುತ್ತದೆ ಎಂದು ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಿ.ವಿ. ಸೂರ್ಯನಾರಾಯಣ ಅವರು ಹೇಳಿದರು. ಅವರು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ‘ದೃಷ್ಟಿ-2025’ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು […]