ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಬೆಳ್ತಂಗಡಿ ಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ‌‌.ಕೆ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೆತ್ತವರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾನೆ. ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಗಣೇಶ ರಾಮಚಂದ್ರ ಭಟ್ ಹಾಗೂ ಕಲ್ಮಂಜ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಮಾಲಿನಿ ಹೆಗಡೆಯವರ ಪುತ್ರನಾದ ಜಿ.ಕೆ. ಚಿನ್ಮಯ್; ಎಲ್‌ಕೆಜಿ ಯಿಂದ ಇದೇ ಶಾಲೆಯ ವಿದ್ಯಾರ್ಥಿಯಾಗಿದ್ದಾ‌ನೆ.ಜಿ.ಕೆ. ಚಿನ್ಮಯ್ ಕನ್ನಡದಲ್ಲಿ-125 ಇಂಗ್ಲಿಷ್-100, […]

ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ: ಸ್ವಾಮಿ ಸತ್ಯಕೊರಗಜ್ಜ ಕಟ್ಟೆ ಸೇವಾ ಸಮಿತಿ ಮಿಯೊಟ್ಟು ಪಲ್ಕೆ ಸಾವ್ಯ ಇಲ್ಲಿ ಕಲ್ಲುರ್ಟಿ ಹಾಗೂ ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ಗಗ್ಗರ ಸೇವೆ ಎಪ್ರಿಲ್ 30ರಂದು ವಿಧಿವಿಧಾನಗಳೊಂದಿಗೆ ಜರುಗಿತು.ಬೆಳಿಗ್ಗೆ ಸ್ಥಳದಲ್ಲಿ ಪುಣ್ಯಾಹಕಲಶ ನಡೆದು ವಿವಿಧ ಕಟ್ಟು ಕಟ್ಟಲೆಗಳಂತೆ ಸ್ಥಳದ ಆರಾಧ್ಯ ದೈವ ಕಲ್ಲುರ್ಟಿಗೆ ಗಗ್ಗರ ಸೇವೆಯೊಂದಿಗೆ ಭಕ್ತರಿಂದ ಹರಕೆ ಸಮರ್ಪಿಸಲಾಗಿಯಿತು. ಬಳಿಕ ಕೊರಗಜ್ಜ ದೈವದ ಗಗ್ಗರ ಸೇವೆ ಜರುಗಿ ಭಕ್ತರಿಂದ ಬಂದ ಬೆಳ್ಳಿಯ ಮುಟ್ಟಾಳೆಯನ್ನು ಒಪ್ಪಿಸಲಾಯ್ತು. ಹಾಗೂ ಭಕ್ತರಿಂದ ಬಂದ ತೆಂಗಿನೆಣ್ಣೆ, ದೀಪದ ಎಣ್ಣೆ, ದನದ […]

ಸೊಸೆಯಿಂದ ಹಲ್ಲೆ – ಜೀವಬೆದರಿಕೆ

ಬೆಳ್ತಂಗಡಿ: ತಿಂಗಳ ಹಿಂದೆ ಪತಿ ಮತ್ತು ಪತಿಯ ಮನೆಯವರೊಂದಿಗೆ ಜಗಳವಾಡಿ, ದೊಡ್ಡ ಮಗನನ್ನು ಅಲ್ಲೇ ಬಿಟ್ಟು ಚಿಕ್ಕ ಮಗನನ್ನು ಕರೆದುಕೊಂಡು ತವರು ಮನೆಗೆ ಹೋಗಿದ್ದ ಸೊಸೆ ಮತ್ತೆ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು ತನ್ನ ಸಹೋದರನೊಂದಿಗೆ ಪತಿಯ ಮನೆಗೆ ಬಂದು ಪತಿಯ ಮನೆಯಲ್ಲಿ ಗಲಾಟೆ ಮಾಡಿ, ಹಿರಿಯ ಜೀವಕ್ಕೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಮೂಡುಕೋಡಿ ಗ್ರಾಮದಲ್ಲಿ ಮೇ 7ರಂದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಿವಾಸಿ ವೆಂಕಟರಮಣ ಭಟ್ ಎಂಬವರೇ […]

ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ-2024 ಪ್ರಧಾನ.

ಬೆಳ್ತಂಗಡಿ: ಉಜಿರೆಯ ಎಸ್‌ಎಲ್‌ವಿ ಕನ್‌ಸ್ಟ್ರಕ್ಷನ್ಸ್‌ನ ಸಿವಿಲ್ ಇಂಜಿನಿಯರ್ ಸಂಪತ್‌ರತ್ನ ರಾವ್ ಅವರಿಗೆ ಮೇ 4ರಂದು ರಾಷ್ಟ್ರ ಮಟ್ಟದ ‘ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ-2024’ ಪ್ರಧಾನ ಮಾಡಲಾಯಿತು. ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡರ್ಸ್ ಡೇ ಸಮಾರಂಭದಲ್ಲಿ ಮಹಾರಾಷ್ಟ್ರದ ನಾಸಿಕ್‌ನ ರಡಿಸ್ಸನ್ ಬ್ಲೂ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. . ಸಂಪತ್‌ರತ್ನ ರಾವ್ ಅವರು ಕಳೆದ 30 ವರ್ಷಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತ್ಯುತ್ತಮ ಸೇವೆ ಮಾಡಿ ಸಮಾಜದ ಗೌರವಾದರಕ್ಕೆ ಪಾತ್ರರಾದ […]

ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿಗೆ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ: ವೇಣೂರಿನಲ್ಲಿ ಮೇ 4ರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕ ನಡೆಯಿತು.ಮೂಡಬಿದ್ರೆ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ| ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೊದಲಾದವರು ಭಾಗವಹಿಸಿದ್ದರು.ಇನ್ನು 12 ವರ್ಷಗಳ ಬಳಿಕ 2036ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: ನಮ್ಮ ಮಾತೃಭೂಮಿ ಸ್ವರ್ಗಕ್ಕಿಂತ ಮಿಗಿಲಾದುದು. ತಾಯಿ ಭಾಷೆ ಹೃದಯದ ಭಾಷೆ. ರಾಜ್ಯದಲ್ಲಿ ಮಾತೃಭಾಷೆಗೆ ಪ್ರಾಧಾನ್ಯತೆ ಇದ್ದರೂ ರಾಜಧಾನಿಯಲ್ಲೇ ಕನ್ನಡದ ಉಳಿವಿಗೆ ಸವಾಲು ಎದುರಾಗಿದೆ. ಕಾರಣ ಅನ್ಯಭಾಷಿಗರ ಆಕ್ರಮಣ! ಕನ್ನಡ. ಭಾಷೆಯನ್ನು ಮುಂದಿನ ಅನೇಕ ವರ್ಷಗಳವರೆಗೆ ಜೀವಂತವಾಗಿರಿಸಲು ಕನ್ನಡ ನಾಡು, ನುಡಿ, ಸಂಸ್ಕೃತಿ ಭಾಷೆಯ ಸಂವರ್ಧನೆಗೆ ಭಾಷೆಯ ಆಸ್ಮಿತೆಯಾದ ಕನ್ನಡ ಸಾಹಿತ್ಯ ಪರಿಷತ್ತನ್ನು ಬಲಗೊಳಿಸೋಣ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಹೇಳಿದರು.ಅವರು ಮೇ 5ರಂದು […]

ಜಪ-ತಪದಿಂದ ಮಾನಸಿಕ ಶಾಂತಿ, ನೆಮ್ಮದಿ-ಡಾ. ಹೆಗ್ಗಡೆ

ಬೆಳ್ತಂಗಡಿ: ಬಸದಿಗೆ ಹೋಗಿ ದೇವರದರ್ಶನ ಮಾಡಿ, ವೃತ-ನಿಯಮಗಳೊಂದಿಗೆ ಜಪ, ತಪ, ಧ್ಯಾನ ಮಾಡಿದಾಗ ಆರೋಗ್ಯ ಸುಧಾರಣೆಯೊಂದಿಗೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಅವರು ಮೇ 4ರಂದು ನಾರಾವಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಮಹೋತ್ಸವ ಸಂದರ್ಭ ಆಯೋಜಿಸಿದ ಧಾರ್ಮಿಕಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ದಾನ ಧರ್ಮಾದಿ ಸತ್ಕಾರ್ಯಗಳಿಗೆ ಅಂತಸ್ತು ಸಂಪತ್ತಿನ ಇತಿ-ಮಿತಿ ಇರುವುದಿಲ್ಲ. ಶ್ರಾವಕರು ಶ್ರಾವಕಿಯರು ಹಾಗೂ ಉದಾರ ದಾನಿಗಳು ಶ್ರದ್ಧಾಭಕ್ತಿಯೊಂದಿಗೆ ತನು, ಮನ, ಧನದೊಂದಿಗೆ ನೀಡಿದ […]

ಕನಸುಗಳು ಬೆಳವಣಿಗೆಗೆ ಸಹಕಾರಿ-ಮೋಹನ್‌ ಕುಮಾರ್‌

ಬೆಳ್ತಂಗಡಿ: ಉದ್ಯಮಿಗಳು ಕನಸುಗಳನ್ನು ಕಾಣಬೇಕು. ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು; ತಾಳ್ಮೆ ಇರಬೇಕು. ನೀವು ಕಂಡ ಕನಸುಗಳು ನಿಮ್ಮನ್ನು ಬೆಳೆಸಲು ಸಹಕಾರಿಯಾಗುತ್ತದೆ. ನಿಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಅದನ್ನು ಸವಾಲಾಗಿ ಸ್ವೀಕರಿಸಬೇಕು. ದುಂದು ವೆಚ್ಚಗಳಿಂದ ಮತ್ತು ದುಶ್ಚಟಗಳಿಂದ ದೂರ ಇರಬೇಕು. ನಿಮಗೆ ನೀವು ಮಾಡುವ ಸಾದನೆಗಳೇ ಮುಖ್ಯವಾಗಿರಬೇಕು. ರುಡ್‌ಸೆಟ್‌ ಸಂಸ್ಥೆಯಿಂದ ಅನೇಕ ನಿರುದ್ಯೋಗಿಗಳು ಸ್ವ ಉದ್ಯೋಗವನ್ನು ಮಾಡಿ ಉದ್ಯಮಿಗಳಾಗಿರುವುದು ತುಂಬಾ ಸಂತೋಷಕೊಟ್ಟಿದೆ ಎಂದು ಬದುಕು ಕಟ್ಟೋಣ […]

ವೇಣೂರಿನಲ್ಲಿ ನಡೆದ ಪೂರ್ವಭಾವಿ ಸಭೆ-2024ರ ಫೆ 22ರಿಂದ ಮಾರ್ಚ್ 1ರವರೆಗೆ ವೇಣೂರು ಬಾಹುಬಲಿಗೆ ಮಹಾಮಜ್ಜನ

ಬೆಳ್ತಂಗಡಿ: ಈ ಬಾರಿ 2024ರ ಫೆಬ್ರವರಿ 22ರಿಂದ ಮಾರ್ಚ್ 1ರವರೆಗೆ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ಶ್ರಾವಕರ ಮನಸ್ಸಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಸಂಭ್ರಮದಿಂದ ನೆರವೇರಿಸುವೆವು ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಅಧ್ಯಕ್ಷರು ಆದ ಡಾ. ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.ಅವರು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಜೂನ್ 24ರಂದು ನಡೆದ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಪೂರ್ವಭಾವಿ ಶ್ರಾವಕರ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.9ದಿನಗಳ […]

ದಕ್ಷಿಣ ಕನ್ನಡದ ಎಲ್ಲ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ-ಕಟೀಲ್

ಬೆಳ್ತಂಗಡಿ: ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಲೆಯಿದ್ದು, ರಾಜ್ಯದಲ್ಲಿ ಬಿಜೆಪಿ 120ಕ್ಕೂ ಮಿಕ್ಕಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಜಯಭೇರಿ ಭಾರಿಸಲಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್‌ಕುಮಾರ್ ಕಟೀಲ್ ಹೇಳಿದರು.ಅವರು ಮೇ 8ರಂದು ಸಂಜೆ ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ನಡೆದ […]