ವಿದ್ಯುತ್ ಟವರ್ ಮೇಲೆ ಉರುಳಿ ಬಿದ್ದ ಮರ

ಬೆಳ್ತಂಗಡಿ: 33 ಕೆವಿಎ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಓರ್ವ ಗಾಯಗೊಂಡ ಘಟನೆ ಮೇ 20ರ ಬೆಳಗ್ಗೆ ವರದಿಯಾಗಿದೆ.ನಡ ಗ್ರಾಮ ಪಂಚಾಯಿತ್‌ನ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಮರದ ಒಂದು ಭಾಗ ರಮೇಶ್‌ರ ತಲೆಗೆ ಬಡಿದಿದೆ. ಸುದೈವವಶಾತ್ ಅವರು […]

ಧರ್ಮಸ್ಥಳದ ಕಾರು ಸಂಗ್ರಹಾಲಯಕ್ಕೆ ಕಾರು ಕೊಡುಗೆ

ಬೆಳ್ತಂಗಡಿ: ಮೂಡಬಿದ್ರಿ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು 2003ರಲ್ಲಿ ಖರೀದಿಸಿದ ಟೊಯೋಟಾ ಕ್ವಾಲೀಸ್ ವಾಹನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರ ಕಾರು ಸಂಗ್ರಹಾಲಯಕ್ಕೆ ಅಗತ್ಯ ದಾಖಲೆಗೆ ಸಹಿ ಮಾಡಿ ವರ್ಗಾಯಿಸಿದರು. 108 ಶಾಂತಿಸಾಗರ ಆಚಾರ್ಯರ ಪಾದಾರೋಹಣ ಶತಾಬ್ದಿ ಮಹೋತ್ಸವ ಶ್ರೀ ಮಠದ ವತಿಯಿಂದ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭ ನೆರವೇರಿಸಿದ ನೆನಪಿನಲ್ಲಿ ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳನ್ನು ಸ್ವಾಮೀಜಿ ಗೌರವಿಸಿ, ಹರಸಿ ಅಭಿನಂದನಾ ಪತ್ರ ಹಾಗೂ ಶ್ರೀಫಲ […]

ಎಸ್‌‌ಡಿಎಂ ಮಹಿಳಾ ಐಟಿಐಗೆ ಅರ್ಜಿ ಅಹ್ವಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆಸಲ್ಪಡುವ ಹಾಗೂ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಮಾನ್ಯತೆ ಪಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐಗೆ 2024-25 ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಹಾಗೂ ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ಒಂದು ವರ್ಷ ಅವಧಿಯ ಎರಡು ವೃತ್ತಿ ತರಬೇತಿಗಳಿದ್ದು ವರ್ಷದ ಕೊನೆಯಲ್ಲಿ ನಡೆಯುವ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ […]

‘ಸಾಹಿತ್ಯ ಬದುಕನ್ನು ಶ್ರೀಮಂತಗೊಳಿಸುವ ಕಲೆ’

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ತುತ್ತತುದಿ ಭಾಗವಾದ ಮಲವಂತಿಗೆ ಗ್ರಾಮದ ಎಳನೀರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ‘ಸಾಹಿತ್ಯ ಮತ್ತು ಬದುಕು’ ವಿಷಯದ ಕುರಿತು ಕಾರ್ಯಕ್ರಮವು ಮೇ 18ರಂದು ಜರಗಿತು. ಎಳನೀರಿನಲ್ಲಿ ಪ್ರಪ್ರಥಮ ಬಾರಿಗೆ ಸಮುದಾಯ ಭವನದಲ್ಲಿ ನಡೆದ ಸಾಹಿತ್ಯಕ್ಕೆ ಸಂಬಂಧ ಪಟ್ಟ ಈ ಕಾರ್ಯಕ್ರಮವನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ ಉದ್ಘಾಟಿಸಿ ಮಾತನಾಡುತ್ತಾ; ಸಾಹಿತ್ಯ, ಸಂಗೀತ ಹಾಗೂ […]

ಸಂಗೀತ ಭಾರತೀಯ ಸಂಸ್ಕೃತಿಯ ಪ್ರತೀಕ-ಎಡನೀರುಶ್ರೀಗಳು

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕರಂಬಿತ್ತಿಲು ಸಂಗೀತ ಶಿಬಿರದಂತಹ ಸನಿವಾಸ ಶಿಬಿರಗಳು ವಿದ್ಯೆಯ ಜತೆಗೆ ಸಂಸ್ಕಾರ ಹೇಳಿಕೊಡುತ್ತದೆ. ಇಲ್ಲಿ ಸಂಸ್ಕಾರ ಆದರ್ಶವಾಗಿ ಮಾರ್ಪಾಡುಗೊಳ್ಳುತ್ತದೆ. ಸಾಧನೆ ಮಾಡಿದಲ್ಲಿ ಎಲ್ಲರೂ ಕಲಾವಿದರಾಗಬಹುದು. ಸಂಗೀತ ಭಾರತೀಯ ಸಂಸ್ಕೃತಿಯ ಪ್ರತೀಕ. ಶಿಬಿರಾರ್ಥಿಗಳು ಸಂಗೀತದ ರಾಯಭಾರಿಗಳಾಗಿ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಗಳವರು ನುಡಿದರು. ಅವರು ಮೇ 19 ರಂದು ಧರ್ಮಸ್ಥಳ ಸಮೀಪದ ನಿಡ್ಲೆ ಕರುಂಬಿತ್ತಿಲು ಮನೆಯಂಗಳದಲ್ಲಿ ನಡೆದ 24ನೇ ವರ್ಷದ 5 […]

ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ಭೇಟಿ.

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಪ್ರಥಮ ಬಿ.ಎ. ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಕ್ಷೇತ್ರ ಅಧ್ಯಯನದ ಭಾಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಕೃತಿ ಮತ್ತು ಸಂಶೋಧನ ಪ್ರತಿಷ್ಠಾನಕ್ಕೆ ಇತ್ತೀಚೆಗೆ ಭೇಟಿ ನೀಡಿದರು. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿಗೆ ಮಾದರಿ ಶಿಲಾನ್ಯಾಸ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಮೇ 17ರಂದು ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಸದ್ದುಗದ್ದಲವಿಲ್ಲದೇ ವಿದ್ಯುಕ್ತವಾಗಿ ನೆರವೇರಿತು.ಚುನಾವಣಾ ನೀತಿಸಂಹಿತೆ ಜ್ಯಾರಿಯಲ್ಲಿ ಇರುವುದರಿಂದ ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಚಿವ ಶಾಸಕರಾದಿಯಾಗಿ ಜನಪ್ರತಿನಿಧಿಗಳು ಭಾಗವಹಿಸಲಿಲ್ಲ. ಆದ್ದರಿಂದ ಸದ್ರಿ ಕಾಮಗಾರಿಯ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಟಾಕಿಯ ಭರಾಟೆ ಇರಲಿಲ್ಲ; ಸಚಿವರ ಹಾಗೂ ಶಾಸಕರುಗಳ ಅದ್ದೂರಿಯ ಮೆರವಣಿಗೆ ಇರಲಿಲ್ಲ; ಬ್ಯಾಂಡ್ ವಾಲಗಗಳ ಸದ್ದೇ ಇರಲಿಲ್ಲ. ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಧಾರ್ಮಿಕ ವಿಧಿವಿಧಾನಗಳುಗಷ್ಟೇ ಸೀಮಿತವಾಗಿತ್ತು. […]

ಬೀಡಿ ಕಾರ್ಮಿಕರ ಸಮಸ್ಯೆ ಸರಕಾರದ ಗಮನಕ್ಕೆ-ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮೇ 16ರಿಂದ ಬೆಳ್ತಂಗಡಿ ಭಾರತ್ ಬೀಡಿ ಕಂಪೆನಿಯ ಕಛೇರಿಯ ಎದುರು ನಡೆಯುತ್ತಿರುವ ಬೀಡಿ ಕಾರ್ಮಿಕರ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರತಿಭಟನಾನಿರರನ್ನು ಉದ್ಧೇಶಿಸಿ ಮಾತನಾಡಿ; ಸರಕಾರದ ಒಪ್ಪಿಗೆ ಇಲ್ಲದೆ ಬೀಡಿ ಕಂಪೆನಿ ಕಛೇರಿ ಮುಚ್ಚಲು ಹೋರಟಿರುವ ಭಾರತ್ ಬೀಡಿ ಮಾಲಕರ ನಿರ್ಧಾರವನ್ನು ಖಂಡಿಸಿದರಲ್ಲದೇ, ಸಮಸ್ಯೆಯನ್ನು ಸರಕಾರದ ಗಮನಕ್ಕೆ ಮತ್ತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರ ಗಮನಕ್ಕೆ ತರಲಾಗುವುದು ಎಂದು […]

ಘಟಿಕೋತ್ಸವ ಭಾಷಣ ಮತ್ತು ಪದವಿ ಪ್ರಧಾನ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಶ್ರಾಂತ ಇತಿಹಾಸ ಉಪನ್ಯಾಸಕ ಹಾಗೂ ಇತಿಹಾಸ ತಜ್ಞ ಡಾ. ವೈ. ಉಮಾನಾಥ ಶೆಣೈಯವರು ಶ್ರವಣಬೆಳಗೊಳದ ಬಾಹುಬಲಿ ಪ್ರಾಕೃತ ವಿದ್ಯಾಪೀಠದ ಘಟಕೋತ್ಸವದ ಗೌರವ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ; ಪದವಿ ಪ್ರಧಾನ ಸಮಾರಂಭದ ಘಟಕೋತ್ಸವ ಭಾಷಣವನ್ನು ನೆರವೇರಿಸಿದರು. ಅತ್ಯಪೂರ್ವ ಸಾಧನೆ ಮಾಡಿದ ಸುಮಾರು 60 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸ್ವರ್ಣ ಹಾಗೂ ರಜತ ಪದಕಗಳನ್ನು ಪ್ರಧಾನ ಮಾಡಿದರು. ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಮಲ್ಲೇಪುರಂ ವೆಂಕಟೇಶ್ , ನ್ಯಾಯಮೂರ್ತಿ ಎ.ಸಿ. […]

ಆರಂಭಿಕ ಮಳೆ ಸೃಷ್ಟಿಸಿದ ಅವಾಂತರ

ಬೆಳ್ತಂಗಡಿ: ಮುಂಡಾಜೆ, ಚಾರ್ಮಾಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೇ 15ರ ಮುಂಜಾನೆ ಉತ್ತಮ ಮಳೆ ಸುರಿಯಿತು. ಬೆಳಗಿನ ಜಾವ ಗಂಟೆ 4ರ ಸುಮಾರಿಗೆ ಆರಂಭವಾದ ಮಳೆ 6-30ರವರೆಗೆ ಮುಂದುವರಿಯಿತು.ಮುಂಡಾಜೆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದ್ದು, ರಸ್ತೆ ಅಗೆದು ಹಾಕಲಾದ ಸ್ಥಳಗಳಲ್ಲಿ ಕೆಸರು ತುಂಬಿ ಜಾರುವ ಕಾರಣ ವಾಹನ ಸವಾರರು ಪರದಾಟ ಅನುಭವಿಸಿದರು. ಕೆಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯೂ ನಡೆದಿದೆ.ಹೆದ್ದಾರಿಯ ಉಜಿರೆ ಬಳಿ ಸುಮಾರು ಒಂದು ಕಿ.ಮೀ. ಪ್ರದೇಶದಲ್ಲಿ […]