ಪ್ರಚೋದನಕಾರಿ ಬಾಷಣ ಮಾಡಿದ ಶರಣ್ ಪಂಪ್ ವೆಲ್ ವಿರುದ್ಧ ದೂರು

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಾಗ ದಕ್ಷಿಣ ಕನ್ನಡ ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಕೋಮು ಸಂಘರ್ಷವನ್ನು ಉಂಟುಮಾಡುವ ಜನಾಂಗೀಯ ಹತ್ಯೆಗೆ ಪ್ರಚೋದನೆ ನೀಡುವ ಭಾಷಣಗಳು ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣದ ಮುಖಾಂತರ ವೈರಲ್ ಆಗುತ್ತಾ ಇದೆ. ಇತ್ತೀಚೆಗೆ ಬಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಮಾಡಿದ ಭಾಷಣವೊಂದು ಇದಕ್ಕೆ ಉದಾಹರಣೆ ಆಗಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್‌ನ ಫಾಝಿಲ್ ಕೊಲೆಯನ್ನು ನಮ್ಮ ಹುಡುಗರು ಶೌರ್ಯದಿಂದ ಮಾಡಿದ್ದು ಎಂದು ಎಲ್ಲರಎದುರೇ ಸಾರ್ವಜನಿಕವಾಗಿ ಶರಣ್ […]
ಫೆ.3 ರಿಂದ 12; ಕಾಜೂರು ಮಖಾಂ ಶರೀಫ್ ಉರೂಸ್

ಬೆಳ್ತಂಗಡಿ: ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರವಾಗಿರುವ ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಫೆಬ್ರವರಿ 3ರಿಂದ ಆರಂಭಗೊಂಡು ಫೆಬ್ರವರಿ 12ರವರೆಗೆ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳ ಮೂಲಕ ನಡೆಯಲಿದೆ ಎಂದು ಉರೂಸ್ ಸಮಿತಿಯ ಅಧ್ಯಕ್ಷ ಕೆ.ಯು. ಇಬ್ರಾಹಿಂ ಕಾಜೂರು ತಿಳಿಸಿದರು. ಅವರು ಜನವರಿ 30ರಂದು ಬೆಳ್ತಂಗಡಿಯ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಸಕ್ತ ವರ್ಷದ ಕಾಜೂರು ಉರೂಸ್ ಸಮಾರಂಭದ ಬಗ್ಗೆ ಸವಿವರ ನೀಡುತ್ತಿದ್ದರು.ಉರೂಸ್ ಪ್ರಯುಕ್ತ 10 ದಿವಸಗಳಲ್ಲಿ ನಡೆಯಲಿರುವ ಪ್ರಖ್ಯಾತ ವಿದ್ವಾಂಸರಿಂದ ಧಾರ್ಮಿಕ ಪ್ರವಚನಗಳು, […]
ಮೇ 3ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023ರ ಮೇ 3ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ […]
ಬ್ರಹ್ಮಕಲಶೋತ್ಸವ ಮತ್ತು ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿ ಶ್ರೀ ನಾಗಬ್ರಹ್ಮ, ಶ್ರೀ ವನದುರ್ಗಾ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಶ್ರೀ ರಕ್ತೇಶ್ವರಿ, ಮಹಿಸಂದಾಯ, ಕಲ್ಲುರ್ಟಿ,ಪಂಜುರ್ಲಿ ಹಾಗೂ ಗುಳಿಗ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ ಕಾರ್ಯಕ್ರಮಗಳ ಅಂಗವಾಗಿ ವೈದಿಕ ಕಾರ್ಯಕ್ರಮಗಳು ಜನವರಿ 24ರಂದು ಆರಂಭಗೊಂಡವು.ಋತ್ವಿಜರ ಆಗಮನ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಋತ್ವಿಗ್ವರಣೆ, ಆದ್ಯ ಗಣಪತಿ ಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಪ್ತ ಶುದ್ಧಿ, ವಾಸ್ತುಪೂಜೆ, ವಾಸ್ತುಹೋಮ, ರಾಕ್ಷೋಘ್ನ ಹೋಮ, ದಿಕ್ಪಾಲಬಲಿ ಮೊದಲಾದ ಕಾರ್ಯಕ್ರಮಗಳು ಜರಗಿದವು.ದೈವಜ್ಞರಾದ ಸುರತ್ಕಲ್ ನಾಗೇಂದ್ರ ಭಾರಾದ್ವಾಜ್, […]
ಜ. 23ರಿಂದ 27 ಬಂಗಾಡಿ ಸಹಸ್ರ ನಾಗಬನ ಪ್ರತಿಷ್ಠಾಃ ಬ್ರಹ್ಮಕಲಶಾಭಿಷೇಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ನಂದ ಕುಮಾರ ತಂತ್ರಿ ಹಾಗೂ ವರದರಾಜ ವಾಸುಕೀವನ ಇವರ ಪೌರೋಹಿತ್ಯದಲ್ಲಿ ಸ್ಥಾಪಿತಗೊಂಡಿರುವ ಸಹಸ್ರನಾಗಬನದ ಶ್ರೀ ಸಹಸ್ರ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಶ್ರೀ ಮಹಾಗಣಪತಿ ದೇವರ ಅಷ್ಟಬಂಧ ಪವಿತ್ರ ಬ್ರಹ್ಮ ಕಲಶೋತ್ಸವ ಹಾಗೂ ನಾಗಮಂಡಲೋತ್ಸವ ಜನವರಿ 23ರಿಂದ 27ರವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರಗಲಿರುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ| ಪ್ರದೀಪ್ ಎ. ನಾವೂರು ಹೇಳಿದರು.ಕ್ಷೇತ್ರದಲ್ಲಿ ಜನವರಿ 21ರಂದು ದೇಗುಲದ ವಠಾರದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ […]
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ: ಉಜಿರೆಯಲ್ಲಿ ಫೆಬ್ರವರಿ 3ರಿಂದ 5ರತನಕ ನಡೆಯುವಬದಕ್ಷಿಣ ಕನ್ನಡ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜನವರಿ 22ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಮ್ಮೇಳನ ಸರ್ವಾಧ್ಯಕ್ಷರಾಗಿರುವ ಡಾ. ಹೇಮಾವತಿ ವೀ. ಹೆಗ್ಗಡೆಯವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. […]
ಆರೋಗ್ಯವಂತರು ರಕ್ತದಾನ ಮಾಡಿ ಇನ್ನೊಂದು ಜೀವ ಉಳಿಸಬೇಕು-ಬಂಗೇರ

ಬೆಳ್ತಂಗಡಿ: ರಕ್ತದಾನ ಜೀವ ಉಳಿಸುವ ಬದುಕಿನ ಪುಣ್ಯದ ಕಾರ್ಯ. ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವ ಶ್ರೇಷ್ಠ ಕಾರ್ಯವನ್ನು ಮಾಡಬೇಕು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು.ಅವರು ಜನವರಿ 15ರಂದು ತನ್ನ 78ನೇ ಹುಟ್ಟುಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಘ (ರಿ) ಮಂಗಳೂರು, ರೆಡ್ ಸೊಸೈಟಿ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗದಲ್ಲಿ ನಡೆಸಿದ ಬೃಹತ್ ರಕ್ತದಾನ ಶಿಬಿರವನ್ನು […]
ಶ್ರೀ ಗುರುದೇವ ಸೊಸೈಟಿಯ 18ನೇ ಶಾಖೆ ಶುಭಾರಂಭ.

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಪ್ರಧಾನ ಕಚೇರಿ ಬೆಳ್ತಂಗಡಿ ಇದರ 18ನೇ ಶಾಖೆ ಹಿರಿಯಡ್ಕದ ಶ್ರೀ ದುರ್ಗಾ ಕಾಂಪ್ಲೆಕ್ಸ್ ಇಲ್ಲಿ ಜನವರಿ 6ರಂದು ಶುಭಾರಂಭಗೊಂಡಿತು.ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಚೇರಿ ಉದ್ಘಾಟಿಸಿ ಮಾತನಾಡುತ್ತಾ; ಸಂಘದ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡುವಂತೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ ವಹಿಸಿದ್ದರು. ಭದ್ರತಾ ಕೋಶದ ಉದ್ಘಾಟನೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ […]
‘ಮಕ್ಕಳು ಕಷ್ಟಪಟ್ಟು ಅಲ್ಲ; ಇಷ್ಟಪಟ್ಟು ಕಲಿಯಬೇಕು’

ಬೆಳ್ತಂಗಡಿ: ನಮ್ಮ ವ್ಯಕ್ತಿತ್ವ ವಿಕಸನ ಮತ್ತು ಬುದ್ಧಿವಂತಿಕೆಯು ಅನುವಂಶಿಕತೆ ಮತ್ತು ನಾವು ಬೆಳೆಯುವ ಪರಿಸರವನ್ನು ಅವಲಂಬಿಸಿದೆ ಎಂದು ಬೆಂಗಳೂರಿನ ಖ್ಯಾತ ಲೇಖಕ ಡಾ. ನಾ. ಸೋಮೇಶ್ವರ ಹೇಳಿದರು.ಅವರು ಜನವರಿ 14ರಂದು ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಆಯೋಜಿಸಿದ 28ನೇ ವರ್ಷದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತರಿಗೆ ಪುರಸ್ಕಾರ ಸಮಾರಂಭದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು.ಮನೆಯೇ ಮೊದಲ ಪಾಠಶಾಲೆ; ತಾಯಿಯೇ ಮೊದಲ ಗುರು. ಯಾರೂ ದಡ್ಡರಲ್ಲ. ಪ್ರತಿಯೊಬ್ಬರೂ ಮನೆ, ಶಾಲೆ ಮತ್ತು […]
ಆವಿಷ್ಕಾರಗಳಿಂದ ಹೊಸ ವಿಷಯ ಪರಿಚಯವಾಗಬೇಕು;ನ್ಯಾಶನಲ್ ಬಯೋಫ್ಯುಯೆಲ್ ಎನರ್ಜಿ ಸೊಸೈಟಿ ಉದ್ಘಾಟಿಸಿ ಧರ್ಮಪಾಲಶ್ರೀಗಳು.

ಬೆಳ್ತಂಗಡಿ: ಯೋಜನೆ ಹಾಗೂ ಯೋಚನೆಗಳನ್ನು ಸಹಕಾರಿ ರೂಪದಲ್ಲಿ ಮನೆ ಹಾಗೂ ಮನಗಳಲ್ಲಿ ಯಾವ ಸಂಸ್ಥೆಯು ಮಾಡುತ್ತದೋ ಆದು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಂಗಳೂರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು ಅವರು ಜನವರಿ 12ರಂದು ಲಾಯ್ಲ ಗ್ರಾಮದ ಟಿ.ಬಿ. ಕ್ರಾಸ್‌ನಲ್ಲಿರುವ ಗಣೇಶ್ ಪ್ರಸಾದ್ ಕಾಂಪ್ಲೆಕ್ಸ್‌ನಲ್ಲಿ ನ್ಯಾಶನಲ್ ಬಯೋಫ್ಯುಯೆಲ್ ಎನರ್ಜಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಇದರ ಕಚೇರಿ ಉದ್ಘಾಟಿಸಿ, ಹಳೆಪೇಟೆಯ ಶ್ರೀ ಸೀತಾರಾಮ ಕಲಾಮಂದಿರದಲ್ಲಿ ನಡೆದ ಉದ್ಘಾಟನಾ ಸಭಾರಂಭದಲ್ಲಿ ಆಶೀರ್ವಚನ ನೀಡುತ್ತಿದ್ದರು.ಭಗವಂತನು ಭೂಗರ್ಭದಲ್ಲಿ […]