ಕಥೋಲಿಕ್ ಸೊಸೈಟಿ ಬೆಳ್ಳಿ ಹಬ್ಬದ ಸಮಾರೋಪ

ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಬೆಳ್ತಂಗಡಿ ಪೇಟೆಯ ಹೃದಯಭಾಗದಲ್ಲಿ ಅತ್ಯಂತ ಯಶಸ್ವಿಯಾಗಿ ಆರ್ಥಿಕ ವ್ಯವಹಾರ ನಡೆಸುತ್ತಾ; ಗ್ರಾಹಕರ ಪ್ರೀತಿ ವಿಶ್ವಾಸಗಳಿಗೆ ಪಾತ್ರವಾಗಿ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಿದ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವು ಎಪ್ರಿಲ್ 15ರ ಶನಿವಾರ ಬೆಳ್ತಂಗಡಿಯ ಸಿ.ವಿ.ಸಿ. ಹಾಲ್‌ನಲ್ಲಿ ಸಂಘದ ಅಧ್ಯಕ್ಷ ಹೆನ್ರಿ ಲೋಬೊರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಜೋಸೆಫ್ ಕಾರ್ಡೋಜಾ ಕಾರ್ಯಕ್ರಮ ಉದ್ಘಾಟಿಸಿ, ಸಂಘದ ಮುಂದಿನ ಬೆಳವಣಿಗೆಗೆ ಶುಭ ಹಾರೈಸಿದರು. ಬ್ರಹ್ಮಾವರ […]

ಸ್ವರ್ಗೀಯ ಶ್ರವಣಬೆಳಗೊಳಶ್ರೀಗಳಿಗೆ ವಿನಯಾಂಜಲಿ

ಬೆಳ್ತಂಗಡಿ: ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಮಾರ್ಚ್ 29ರಂದು ಸ್ವರ್ಗೀಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಯಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳದ ಸುರೇಂದ್ರ ಕುಮಾರ್ ಕೋಟ್ಯಾನ ಬಂಟ್ರು, ವಿಜಯಕುಮಾರ್ ಹಣೆರಾಜ ಜೈನ್, ಯಶೋಧರ ಶೆಟ್ಟಿ ರವಿರಾಜ್ ಶೆಟ್ಟಿ, ಡಾ. ಜಯ ಕೀರ್ತಿ ಜೈನ್, ಜಿನರಾಜ ಪೂವಣಿ, ಅತಿಶಯ ಜೈನ್, ಅರಹಂತ ಇಂದ್ರ, ಪದ್ಮಲತಾ, ನಾಗಕನ್ನಿಕ, ಜಯಶ್ರೀ, ಸುರಭಿ ಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಭರತನಾಟ್ಯದಲ್ಲಿ ಉನ್ನತಶ್ರೇಣಿ

ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ಇವರು 92% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿದುಷಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿಗಳ ಪುತ್ರಿ.

ಜಿನ‌ಮಂದಿರದ ವಾರ್ಷಿಕೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಚಂದ್ರಾಪುರ ಶಿಶಿಲದ ಭಗವಾನ್ ಶ್ರೀ ೧೦೦೮ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಜೈನ ಮಠದ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆಯವರ ಮಾರ್ಗದರ್ಶನದೊಂದಿಗೆ. ವಿಮಾನ ಶುದ್ದಿ, ೨೪ ಕಳಶಾಭಿಷೇಕ, ಲಕ್ಷ ಹೂವಿನ ಪೂಜೆ, ಶ್ರೀ ಉತ್ಸವ ಮುಂತಾದ ಪೂಜಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಸಮಾಜದ ಗಣ್ಯರು ಹಾಗೂ ಸಾಧಕರಾದ ಪತ್ರಕರ್ತ ನಾಭಿರಾಜ ಪೂವಣಿ ಉಜಿರೆ, ಡಾ| ಜಯಕುಮಾರ್ […]

ಬೆಳ್ತಂಗಡಿಯಲ್ಲಿ ಮಾ. 4 ಹಾಗೂ 5ರಂದು ವಿಶ್ವ ಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

ಬೆಳ್ತಂಗಡಿ : ಸ್ಥಾನಿಕ ಬ್ರಾಹ್ಮಣ ಮಹಾಮಂಡಲ (ರಿ.) ಮಂಗಳೂರು ಆಯೋಜನೆಯಲ್ಲಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿವಿಶ್ವ ಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶವು ಮಾರ್ಚ್ 4 ಹಾಗೂ 5ರಂದು ಬೆಳ್ತಂಗಡಿಯ ಲ್ಯಾಲ ಶ್ರೀ ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಲಿದೆ ಎಂದು ಸ್ಥಾನಿಕ ಬ್ರಾಹ್ಮಣ ಮಹಾ ಮಂಡಲದ ಅಧ್ಯಕ್ಷ ಎಂ. ದೇವಾನಂದ ಭಟ್ ತಿಳಿಸಿದ್ದಾರೆ. ಅವರು ಫೆಬ್ರವರಿ 28ರಂದು ಲ್ಯಾಲ ಶ್ರೀ ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆದ ಪತ್ತಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದರು.ಮಾರ್ಚ್ 4ರಂದು ಬೆಳಿಗ್ಗೆ ಸಮಾವೇಶವನ್ನು ಶ್ರೀ ಕ್ಷೇತ್ರ […]

ಭಾರತದ ಉಸಿರೇ ಧರ್ಮ-ಕಲ್ಲಡ್ಕ ಡಾ| ಭಟ್

ಬೆಳ್ತಂಗಡಿ: ಭಾರತದ ಆತ್ಮ, ಜೀವ ಮತ್ತು ಉಸಿರು ಅದು ಧರ್ಮ. ಧರ್ಮ ಬಿಟ್ಟು ದೇಶ ಇಲ್ಲ. ಧರ್ಮವನ್ನು ಜನ ಮಾನಸದಲ್ಲಿ ಮೂಡಿಸುವ ಒಂದು ಪ್ರಯತ್ನ ಸಂಸ್ಕೃತಿಯಿಂದ ನಡೆಯುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.ಅವರು ಫೆಬ್ರವರಿ 20ರ ರಾತ್ರಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸುವರ್ಣ ಆರ್ಕೇಡ್ ಆವರಣದಲ್ಲಿ ನಡೆದ 13ನೇ ವರ್ಷದ ಸುವರ್ಣ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಹಿರಿಯ ಕಲಾಸಾಧಕರಿಗೆ ಸುವರ್ಣ […]

ಪ್ರಚೋದನಕಾರಿ ಬಾಷಣ ಮಾಡಿದ ಶರಣ್ ಪಂಪ್ ವೆಲ್ ವಿರುದ್ಧ ದೂರು

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಾಗ ದಕ್ಷಿಣ ಕನ್ನಡ ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಕೋಮು ಸಂಘರ್ಷವನ್ನು ಉಂಟುಮಾಡುವ ಜನಾಂಗೀಯ ಹತ್ಯೆಗೆ ಪ್ರಚೋದನೆ ನೀಡುವ ಭಾಷಣಗಳು ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣದ ಮುಖಾಂತರ ವೈರಲ್ ಆಗುತ್ತಾ ಇದೆ. ಇತ್ತೀಚೆಗೆ ಬಜರಂಗದಳದ ಮುಖಂಡ ಶರಣ್ ಪಂಪ್‌‌ವೆಲ್ ಮಾಡಿದ ಭಾಷಣವೊಂದು ಇದಕ್ಕೆ ಉದಾಹರಣೆ ಆಗಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್‌ನ ಫಾಝಿಲ್ ಕೊಲೆಯನ್ನು ನಮ್ಮ ಹುಡುಗರು ಶೌರ್ಯದಿಂದ ಮಾಡಿದ್ದು ಎಂದು ಎಲ್ಲರಎದುರೇ ಸಾರ್ವಜನಿಕವಾಗಿ ಶರಣ್ […]

ಫೆ.3 ರಿಂದ 12; ಕಾಜೂರು ಮಖಾಂ ಶರೀಫ್ ಉರೂಸ್

ಬೆಳ್ತಂಗಡಿ: ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರವಾಗಿರುವ ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಫೆಬ್ರವರಿ 3ರಿಂದ ಆರಂಭಗೊಂಡು ಫೆಬ್ರವರಿ 12ರವರೆಗೆ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳ ಮೂಲಕ ನಡೆಯಲಿದೆ ಎಂದು ಉರೂಸ್ ಸಮಿತಿಯ ಅಧ್ಯಕ್ಷ ಕೆ.ಯು. ಇಬ್ರಾಹಿಂ ಕಾಜೂರು ತಿಳಿಸಿದರು‌. ಅವರು ಜನವರಿ 30ರಂದು ಬೆಳ್ತಂಗಡಿಯ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಸಕ್ತ ವರ್ಷದ ಕಾಜೂರು ಉರೂಸ್ ಸಮಾರಂಭದ ಬಗ್ಗೆ ಸವಿವರ ನೀಡುತ್ತಿದ್ದರು.ಉರೂಸ್ ಪ್ರಯುಕ್ತ 10 ದಿವಸಗಳಲ್ಲಿ ನಡೆಯಲಿರುವ ಪ್ರಖ್ಯಾತ ವಿದ್ವಾಂಸರಿಂದ ಧಾರ್ಮಿಕ ಪ್ರವಚನಗಳು, […]

ಮೇ 3ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023ರ ಮೇ 3ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ […]

ಬ್ರಹ್ಮಕಲಶೋತ್ಸವ ಮತ್ತು ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿ ಶ್ರೀ ನಾಗಬ್ರಹ್ಮ, ಶ್ರೀ ವನದುರ್ಗಾ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಶ್ರೀ ರಕ್ತೇಶ್ವರಿ, ಮಹಿಸಂದಾಯ, ಕಲ್ಲುರ್ಟಿ,ಪಂಜುರ್ಲಿ ಹಾಗೂ ಗುಳಿಗ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ ಕಾರ್ಯಕ್ರಮಗಳ ಅಂಗವಾಗಿ ವೈದಿಕ ಕಾರ್ಯಕ್ರಮಗಳು ಜನವರಿ 24ರಂದು ಆರಂಭಗೊಂಡವು.ಋತ್ವಿಜರ ಆಗಮನ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಋತ್ವಿಗ್ವರಣೆ, ಆದ್ಯ ಗಣಪತಿ ಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಪ್ತ ಶುದ್ಧಿ, ವಾಸ್ತುಪೂಜೆ, ವಾಸ್ತುಹೋಮ, ರಾಕ್ಷೋಘ್ನ ಹೋಮ, ದಿಕ್ಪಾಲಬಲಿ ಮೊದಲಾದ ಕಾರ್ಯಕ್ರಮಗಳು ಜರಗಿದವು.ದೈವಜ್ಞರಾದ ಸುರತ್ಕಲ್ ನಾಗೇಂದ್ರ ಭಾರಾದ್ವಾಜ್, […]