ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಉತ್ತಮ ಜೀವನ ಶೈಲಿ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಕ್ತ ವೈದ್ಯರಿಂದ ತಪಾಸಣೆ ನಡೆಸಿದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ನಿವಾರಿಸಬಹುದು ಎಂದು ಮುಂಡಾಜೆ ಸಂತ ಮೇರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಸೆಬಾಸ್ಟಿಯನ್ ಪುನ್ನತ್ತಾನತ್ ನುಡಿದರು. ಅವರು ಸೆಪ್ಟೆಂಬರ್ 26ರಂದು ಡಿಕೆಆರ್‌ಡಿಎಸ್ ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಮುಂಡಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆ, ಸಂತ ಮೇರಿಸ್ ಚರ್ಚ್ ಮುಂಡಾಜೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ, […]
ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಸೆಪ್ಟೆಂಬರ್ 25ರಂದು ಮಂಗಳೂರು ದೇರಳೆಕಟ್ಟೆ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ಯೇನಪೋಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರದ ಮೆಡಿಕಲ್ ಆಫೀಸರ್ ಡಾ|ಹನಾ ಸಂಶುದ್ದೀನ್, ದಂತವೈದ್ಯೆ ಡಾ| ಪ್ರಕೃತಿ […]
ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಲಾಯ್ಲ ಪ್ರಸನ್ನ ಪದವಿಪೂರ್ವ ಕಾಲೇಜು ಹಾಗೂ 14 ಕಾಲೇಜುಗಳನ್ನು ಹೊಂದಿರುವ ಎ.ಎ. ಅಕಾಡೆಮಿಯ ಸಹಯೋಗದಲ್ಲಿ ಶಿಕ್ಷಕ-ರಕ್ಷಕ ಸಭೆ ಹಾಗೂ ವಿದ್ಯಾರ್ಥಿಗಳ ಫ್ರೆಶರ್ಸ್ ಡೇ ಕಾರ್ಯಕ್ರಮ ಆಗಸ್ಟ್ 28ರಂದು ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಪ್ರಸನ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ಗಂಗಾಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಆಧುನಿಕ ಸ್ಪರ್ಧಾತ್ಮಕ ಶಿಕ್ಷಣದ ಕುರಿತು ಹಾಗೂ ಶಿಕ್ಷಕ-ರಕ್ಷಕ ಸಭೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಆಡಳಿತಾಧಿಕಾರಿ ಕೃಪಾ […]
ಮೂಡುಬಿದಿರೆ ಪುರಸಭೆ ಸ್ವಚ್ಛತಾ ಕಾರ್ಮಿಕರ ಅಧ್ಯಯನ ಪ್ರವಾಸ

ಮೂಡುಬಿದಿರೆ: ಮೂಡುಬಿದಿರೆ ಪುರಸಭೆಯ ಸ್ವಚ್ಛತಾ ಕಾರ್ಮಿಕರು ಮತ್ತು ಚಾಲಕರು ಹಾಗೂ ಇದಕ್ಕೆ ಪೂರಕವಾಗಿ ಇರುವ ಇತರ ಕಾರ್ಮಿಕರ ಅಧ್ಯಯನಾ ಪ್ರವಾಸವನ್ನು ಕಾರ್ಮಿಕರ ದಿನಾಚರಣೆಯಾದ ಸೆಪ್ಟೆಂಬರ್ 23ರಂದು ಹಮ್ಮಿಕೊಳ್ಳಲಾಗಿತ್ತು.ಊರಿನ ಸ್ವಚ್ಛತೆಯ ಬಗ್ಗೆ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯತ್‌ನ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ತ್ಯಾಜ್ಯ ನಿರ್ವಹಣೆಯನ್ನು ವೀಕ್ಷಿಸಿದ ಪುರಸಭೆಯ ಪೌರ ಕಾರ್ಮಿಕರು ವಿಶೇಷ ಆಸಕ್ತಿ ವಹಿಸಿದರು. ಈ ಅಧ್ಯಯನ ತಂಡದ ಮಾರ್ಗದರ್ಶಕರಾಗಿ ಪುರಸಭಾಧ್ಯಕ್ಷ […]
ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಸೆಪ್ಟೆಂಬರ್ 21ರಂದು ನಡೆಯಿತು. ಸಮಾರಂಭದಲ್ಲಿ 2021-22ನೇ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಜಿರೆಯ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಶಾಖಾಧಿಕಾರಿ ವಸಂತ್ ಟಿ. ವೃತ್ತಿ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಮತ್ತೋರ್ವ ಅತಿಥಿ ಮಂಗಳೂರು ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಎ. […]
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಎರಡನೇ ಬಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ರಂಗದ ಅಗ್ರಮಾನ್ಯ ನಾಯಕರಾಗಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 19ರಂದು ನಡೆದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ . ಮಂಗಳೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರಿ ಸಂಘದ ಪ್ರತಿನಿಧಿಯಾಗಿ ಕರ್ನಾಟಕ ರಾಜ್ಯ ಸಹಕಾರ […]
ರಾಜ್ಯ ಸರಕಾರಿ ನೌಕರರ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ಧೇಶ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 18ರಂದು ರಾಜ್ಯ ಸರಕಾರಿ ನೌಕರರ ಸಂಘದ ‘ಏಕತಾ ಸೌಧ’ ಸಭಾಭವನದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.ಮಹಾಸಭೆಯನ್ನುದ್ಧೇಶಿಸಿ ಮಾತನಾಡಿದ ಅಧ್ಯಕ್ಷ ಜಯಕೀರ್ತಿ ಜೈನ್, ಸಂಘದ ಬೆಳವಣಿಗೆಗೆ ಸಹಕರಿಸಿದ ಸರ್ವರನ್ನು ಕೃತಜ್ಞತೆಯಿಂದ ಸ್ಮರಿಸಿದರಲ್ಲದೇ; ವರದಿ ವರ್ಷದಲ್ಲಿ ಸಂಘದ ಸದಸ್ಯರಿಗೆ 20% ಡಿವಿಡೆಂಡ್ ಘೋಷಿಸಿದರು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡಿದ ಸದಸ್ಯರನ್ನು ಅಭಿನಂದಿಸಲಾಯಿತು.ಮಹಾಸಭೆಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ […]
ಎಕ್ಸೆಲ್‌ನ ವಿದ್ಯಾರ್ಥಿ ಆಗ್ನೇಯ ಐ.ಐ.ಟಿ.ಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿ ಡಿ.ಎ. ಆಗ್ನೇಯ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಐ.ಐ.ಟಿಯಲ್ಲಿ ಉನ್ನತ ವ್ಯಾಸಂಗ ನಡೆಸಲು ಆಯ್ಕೆಯಾಗಿದ್ದಾರೆ. ದೇಶದ 9.5 ಲಕ್ಷ ವಿಜ್ಞಾನ ವಿದ್ಯಾರ್ಥಿಗಳು ಜೆ.ಇ.ಇ. ಪರೀಕ್ಷೆಗೆ ಹಾಜರಾಗಿದ್ದು, ಆಯ್ಕೆಯಾದವರು ಕೇವಲ 1.5 ಲಕ್ಷ ವಿದ್ಯಾರ್ಥಿಗಳು ಮಾತ್ರ. ಅತ್ಯುತ್ತಮ ತರಬೇತಿ ಪಡೆದ ವಿದ್ಯಾರ್ಥಿಗಳು ಮಾತ್ರ ಐ.ಐ.ಟಿ.ಯಲ್ಲಿ ಸ್ಥಾನ ಪಡೆಯಲು ಸಾಧ್ಯ. ಆಗ್ನೇಯ ಅವರು ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಭ್ಯಾಸ ನಡೆಸಿ, ದ್ವಿತೀಯ ಪಿಯುಸಿ ಯಲ್ಲಿ […]
ಡಿಕೆಆರ್‌ಡಿಎಸ್ – ಮಾಸಿಕ ಬೆಂಬಲ ಸಭೆ

Dkdrds
ಮರಾಠಿ ಆರೋಗ್ಯ ನಿಧಿ ಹಸ್ತಾಂತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮರಾಟಿ ಸಮಾಜ ಸೇವಾ ಸಂಘದಿಂದ ಮರಾಟಿ ಆರೋಗ್ಯ ನಿಧಿ ಹಸ್ತಾಂತರ ನಡೆಯಿತು. ಸಂಘದ ಸದಸ್ಯ ಕಣಿಯೂರು ಗ್ರಾಮದ ಪೈರೊಟ್ಟು ಸುಂದರ ನಾಯ್ಕ ಅವರ ಪತ್ನಿ ರೇವತಿ ಅವರ ಚಿಕಿತ್ಸೆಗೆ ದಾನಿಗಳಿಂದ ಸಂಗ್ರಹಿಸಿದ ಮರಾಟಿ ಆರೋಗ್ಯ ನಿಧಿ 34 ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು.ಸಂಘದ ಅಧ್ಯಕ್ಷ ಉಮೇಶ್ ಕೆ., ಗೌರವ ಸಲಹೆಗಾರರಾದ ಸಂತೋಷ್ ಕುಮಾರ್ ಲಾಯ್ಲ, ಉಪಾಧ್ಯಕ್ಷ ಸತೀಶ್ ಎಚ್.ಎಲ್., ಕಾರ್ಯದರ್ಶಿ ಪ್ರಸಾದ್, ಕೋಶಾಧಿಕಾರಿ ಪ್ರಜ್ವಲ್, ಪತ್ರಿಕಾ ಮಾಧ್ಯಮ ಜತೆ ಕಾರ್ಯದರ್ಶಿ ಶರತ್ ಕಣಿಯೂರು, ಕಣಿಯೂರು […]