ಬಳಂಜ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಶುಭಹಾರೈಸಿದರು.ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಪ್ರಧಾನ ಕಾರ್ಯದರ್ಶಿ ಯಶೋಧರ ಶೆಟ್ಟಿ ಅಟ್ಲಾಜೆ,ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಬೊಕ್ಕಸ, ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ, ಸಮಿತಿ ಮಾಜಿ ಅಧ್ಯಕ್ಷರುಗಳಾದ ಸಂತೋಷ್ […]

ಭಾರೀ ಮಳೆಗೆ ರಸ್ತೆ ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ಆಗಸ್ಟ್ 6ರ ಸೋಮವಾರ ಸುರಿದ ಭಾರೀ ಗಾಳಿಮಳೆಗೆ ಬೆಳ್ತಂಗಡಿ ತಾಲೂಕಿನ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದರೆ; ನದಿ ನೀರು ಉಕ್ಕಿ ಹರಿದು ತಗ್ಗು ಪ್ರದೇಶಗಳಿಗೆ ರಭಸದಿಂದ ನುಗ್ಗಿದ ಪರಿಣಾಮ ನೀರು ಕೃಷಿ ತೋಟಗಳಿಗೆ ನುಗ್ಗಿ ಸಾಕಷ್ಟು ಕೃಷಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.ಆಗಸ್ಟ್ 8ರ ಸೋಮವಾರ ನಸುಕಿನಿಂದಲೇ ಸುರಿದ ಭಾರೀ‌ ಮಳೆಗೆ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿಡುಪೆಯಿಂದ ಎಳನೀರುಗೆ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡದಿಂದ ಮಳೆನೀರು ರಭಸವಾಗಿ ಹರಿದ ಪರಿಣಾಮ ರಸ್ತೆ ಸಂಚಾರವೇ ಕಡಿತಗೊಂಡು ಪರಿಸರದ ನಿವಾಸಿಗರಲ್ಲಿ […]

ಮೂಡುಬಿದಿರೆ ಪುರಸಭೆಆಗಸ್ಟ್ 13ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ

ಮೂಡುಬಿದಿರೆ: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಆಗಸ್ಟ್ 13ರಿಂದ 15ರವರೆಗೆ ಆಚರಿಸುವಂತೆ ರಾಜ್ಯದ ಕನ್ನಡ ಸಂಸ್ಕೃತಿ ಇಲಾಖೆ ಉಲ್ಲೇಖಿಸಿರುವಂತೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲರೂ ತಮ್ಮ ಮನೆಮನೆಯಲ್ಲೂ ತಮ್ಮ ಸ್ವಂತ ಖರ್ಚಿನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶ ಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಲು ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್ ಪುರಸಭೆಯ ವಿಶೇಷ ಸಭೆಯಲ್ಲಿ ತಿಳಿಸಿದರು.ಈ ಅಭಿಯಾನದ ಅಂಗವಾಗಿ ಆಗಸ್ಟ್ […]

ತಣ್ಣೀರುಪಂತ ಸೊಸೈಟಿಗೆ ಡಿ.ಸಿ.ಸಿ. ಬ್ಯಾಂಕ್ ಪ್ರಶಸ್ತಿ

ಬೆಳ್ತಂಗಡಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2021-22ನೇ ಸಾಲಿನಲ್ಲಿ 100% ಸಾಲ ವಸೂಲಾತಿ ಮಾಡಿದ ಸಾಧನೆಯನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಂಘಕ್ಕೆ ಸಾಧನ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿದೆ. ಆಗಸ್ಟ್ 5ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್. ಎನ್. ರಾಜೇಂದ್ರಕುಮಾರ್ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ […]

🔥NSUI ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ

ಮೂಡುಬಿದಿರೆ: ಎನ್‌ಎಸ್‌ಯುಐ ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ 2021-22ನೇ ಸಾಲಿನಲ್ಲಿ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ 100 ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ಕಾರ್ಯಕ್ರಮವನ್ನು ಆಗಸ್ಟ್ 7ರಂದು ಪೂರ್ವಾಹ್ನ ಜೈನಕಾಶಿ-ವಿದ್ಯಾಕಾಶಿ ಮೂಡುಬಿದಿರೆಯ ಸಮಾಜಮಂದಿರ ಸಭಾಭವನದ ಸ್ವರ್ಣಮಂದಿರದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಜೈನಕಾಶಿ ಮೂಡುಬಿದಿರೆ ಇಂದು ಸರ್ವಶ್ರೇಷ್ಠ ಗುಣಮಟ್ಟದ ವಿದ್ಯಾಕೇಂದ್ರಗಳ […]

ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಇದರ ವತಿಯಿಂದ ಬಂಟ ಸಮಾಜ ಬಾಂಧವರ ಸಭೆ, ಪ್ರತಿಭಾ ಪುರಸ್ಕಾರ, ಸಮ್ಮಾನ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವು ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ಪಂಚರತ್ನ ಇಂಟರ್‌ನ್ಯಾಷನಲ್ ಸಭಾಭವನದಲ್ಲಿ ಆಗಸ್ಟ್ 6ರಂದು ಸಂಜೆ ನೆರವೇರಿತು.ಬಂಟರ ಮಾತೃಸಂಘ ಮಂಗಳೂರು ಇದರ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮತ್ತು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಜೊತೆಗೂಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಂಟ ಸಮಾಜದ ದಾಖಲೆ 400ಕ್ಕೂ ಹೆಚ್ಚು ಬಡಕುಟುಂಬದ […]

ಫೆಸ್ಟ್ರೋನಿಕ್ಸ್-2022′ ಮಾಹಿತಿ ತಂತ್ರಜ್ಞಾನ ಮತ್ತು ಸಾಂಸ್ಕ್ರತಿಕ ಸ್ಪರ್ಧಾಕೂಟ

‘ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಅಂತಿಮ ವರ್ಷದ ಗಣಕ ಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಗಣಕ ಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ಫ಼ೆಸ್ಟ್ರೋನಿಕ್ಸ್-2022’ ಮಾಹಿತಿ ತಂತ್ರಜ್ಞಾನ ಮತ್ತು ಸಾಂಸ್ಕ್ರತಿಕ ಸ್ಪರ್ಧಾಕೂಟವನ್ನು ಜುಲೈ 26 ಮತ್ತು 27ರಂದು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರು ಬಾಸಿಲ್ ವಾಸ್‌ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಸುಮಾರು 130 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.ಜುಲೈ 27ರಂದು ಸಮಾರೋಪ ಸಮಾರಂಭ […]

ಬೆಳ್ತಂಗಡಿ ಪ.ಪಂ ಅಭಿವೃದ್ಧಿ ಚರ್ಚೆಗೆ ಶಾಸಕರ ನೇತೃತ್ವದ ಸಭೆ’ಜೂನಿಯರ್ ಕಾಲೇಜು ಬಳಿಯ ಅನೈತಿಕ ಚಟುವಟಿಕೆಗೆ ಕಡಿವಾಣ ಹಾಕಿ’

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸರಕಾರಿ ಜೂನಿಯರ್ ಕಾಲೇಜು ಬಳಿ ರಾತ್ರಿ ಹೊತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ರಾತ್ರಿ ಹೊತ್ತು ಗಸ್ತು ಹೆಚ್ಚಿಸಬೇಕು ಎಂದು ಶಾಸಕ ಹರೀಶ್ ಪೂಂಜಾ ಪೋಲೀಸ್ ಇಲಾಖೆಗೆ ಸೂಚಿಸಿದರು.ಅವರು ಜುಲೈ 26ರಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಗರ ಅಭಿವೃದ್ಧಿಯ ದೃಷ್ಠಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಗರ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸುತ್ತಿದ್ದರು. ಪಟ್ಟಣದಲ್ಲಿ ಮೂಡ ಸಮಸ್ಯೆಯಿಂದ ಬಾಕಿ ವಿಲೇವಾರಿ ಅರ್ಜಿಯ […]

ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣಸಭಾದ ರಜತ ಮಹೋತ್ಸವ

ಬೆಳ್ತಂಗಡಿ: ಲಾಯ್ಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಇದರ ರಜತವರ್ಷದ ವಾರ್ಷಿಕೋತ್ಸವ, ಮಹಾಸಭೆ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಜುಲೈ 17ರಂದು ಲಾಯ್ಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುಮಾರು 150 ಸದಸ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಮಕ್ಕಳಿಂದ 60ವರ್ಷದ ವಯಸ್ಕರವರೆಗೆ ಎಲ್ಲರಿಗೂ ವಿವಿಧ ರೀತಿಯ ಒಳಾಂಗಣ ಕ್ರೀಡೆಗಳು ಕ್ರೀಡಾ ಸಂಚಾಲಕ ದಿನೇಶ್ ಕುಮಾರ್ ರವರ ಮುಂದಾಳುತ್ವದಲ್ಲಿ ನಡೆಯಿತು. ಸಭಾದ ಉಪಾಧ್ಯಕ್ಷ ವಸಂತ್ […]