ದ.ಕ. ಜಿಲ್ಲಾ ಬಿಜೆಪಿ ಶಾಸಕರುಗಳಿಂದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಜುಲೈ 11ರಂದು ಬೀಡಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉತ್ತರ ಕ್ಷೇತ್ರದ ಶಾಸಕ ಡಾ| ಭರತ್ ಶೆಟ್ಟಿ, ಮೂಡಬಿದ್ರೆ […]
ಮುದ್ರಾಧಾರಣೆಯಿಂದ ಜನ್ಮಾಂತರದ ಪಾಪಕರ್ಮ ದೂರ: ಸುಬ್ರಹ್ಮಣ್ಯಶ್ರೀಗಳು

ಬೆಳ್ತಂಗಡಿ: ಆಷಾಢ ಶುದ್ಧ ಏಕಾದಶಿ ದಿನದಂದು ಸುದರ್ಶನ ಹವನದಲ್ಲಿ ಭಗವಂತನ ಆಯುಧವಾದ ಶಂಖ-ಚಕ್ರ ಚಿಹ್ನೆಯನ್ನು ಅಭಿಮಂತ್ರಿಸಿ, ತೋಳುಗಳಲ್ಲಿ ಧರಿಸುವುದು ಪರಂಪರೆ ಯಿಂದ ನಡೆದುಕೊಂಡು ಬಂದಿದೆ. ಮುದ್ರಾಧಾರಣೆಯಿಂದ ಆರೋಗ್ಯಕರವಾಗಿಯೂ ಭಗವಂತನ ಸಾಮೀಪ್ಯ ಹೊಂದಲು ಸಹಕಾರಿಯಾಗಿ ಜನ್ಮಾಂತರದ ಪಾಪಕರ್ಮಗಳು ಪರಿಹಾರವಾಗುವುದೆಂದು ಶಾಸ್ತ್ರೀಯವಾಗಿಯೂ ನಂಬಿಕೊಂಡು ಬರಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರು ನುಡಿದರು. […]
ಬಹುಜನ ಚಳವಳಿ ನಾಯಕ ಪಿ. ಡೀಕಯ್ಯ ನಿಧನ

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ(63) ನವರು ಜುಲೈ 9ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿ ಬೆಳೆಸುವುದರಲ್ಲಿ ಡೀಕಯ್ಯ ಅವರ ಪಾತ್ರ ಅತ್ಯಂತ ಹಿರಿದು. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಸಂಚರಿಸಿ ಚಳವಳಿಯನ್ನು ಕಟ್ಟಿದವರು ಪಿ.ಡೀಕಯ್ಯನವರು. ದೇಶದ ಇತಿಹಾಸದ ಜೊತೆಗೆ ತುಳುನಾಡಿನ ಇತಿಹಾಸವನ್ನೂ ಅರೆದು ಕುಡಿದಿದ್ದರು. ತುಳುನಾಡಿನಲ್ಲಿ ತಮ್ಮದೇ ಶೈಲಿಯಲ್ಲಿ ಬಹುಜನ ಚಳವಳಿಯನ್ನು ಕಟ್ಟಿದವರು. ಅವರು ಸಾಕಷ್ಟು ಯುವ ನಾಯಕರನ್ನು […]
ಬೀದಿಬದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ವತಿಯಿಂದ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರ ಬೀದಿ ವ್ಯಾಪಾರಿಗಳ ಬೆಂಬಲ ಉಪ ಘಟಕದಡಿ ಬೀದಿ ಬದಿ ವ್ಯಾಪಾರಿಗಳಿಗೆ 2 ದಿನಗಳ ಸಾಮರ್ಥ್ಯ ಅಭಿವೃದ್ದಿ ತರಬೇತಿ ಕಾರ್ಯಾಗಾರವು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಜುಲೈ 6ರಂದು ಆರಂಭಗೊಂಡಿತು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಇವರು […]
ಹೊಸ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ’

ಬೆಳ್ತಂಗಡಿ: ಸರಕಾರ ಜ್ಯಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020, ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳನ್ನು ಕಲ್ಪಿಸುವ ಪ್ರಯತ್ನವಾಗಿದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಹೇಳಿದರು.ಅವರು ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾಲಯ ಸಸ್ಯಶಾಸ್ತ್ರ ಬೋಧಕರ ಸಂಘ ಮತ್ತು ‘ವನಶ್ರೀ’ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರಗಿದ ಒಂದು ದಿನದ ಪಠ್ಯಕ್ರಮ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನೂತನ ಶಿಕ್ಷಣ ನೀತಿ ವಿದ್ಯಾರ್ಥಿಗಳ […]
ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ’

ಬೆಳ್ತಂಗಡಿ: ಸರಕಾರ ಜ್ಯಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020, ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳನ್ನು ಕಲ್ಪಿಸುವ ಪ್ರಯತ್ನವಾಗಿದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಹೇಳಿದರು.ಅವರು ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾಲಯ ಸಸ್ಯಶಾಸ್ತ್ರ ಬೋಧಕರ ಸಂಘ ಮತ್ತು ‘ವನಶ್ರೀ’ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರಗಿದ ಒಂದು ದಿನದ ಪಠ್ಯಕ್ರಮ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನೂತನ ಶಿಕ್ಷಣ ನೀತಿ ವಿದ್ಯಾರ್ಥಿಗಳ […]
ಬೆಳಾಲು ಪ್ರೌಢಶಾಲೆಯಲ್ಲಿ ‘ಬಾರಿಸು ಕನ್ನಡ ಡಿಂಡಿಮ’

ಬೆಳ್ತಂಗಡಿ: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಬೆಳಾಲು ಗ್ರಾಮದ ಪ್ರೌಢಶಾಲೆ ಮತ್ತು ಎಲ್ಲ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗಾಗಿ ‘ಬಾರಿಸು ಕನ್ನಡ ಡಿಂಡಿಮ’ ಕನ್ನಡ ಗೀತೆಗಳ ಗಾಯನ ಮತ್ತು ಕಥೆ-ಕವನ ಕಟ್ಟುವುದರ ಕುರಿತು ತರಬೇತಿ ಕಾರ್ಯಕ್ರಮ ಜರಗಿತು. ಉದ್ಘಾಟಕರಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. […]
ಹಣ್ಣಿನ ಗಿಡನೆಟ್ಟು ವನಮಹೋತ್ಸವ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನಲ್ಲಿ ಶೌರ್ಯ ಶ್ರೀಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸಹಯೋಗದೊಂದಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕರು ಅತ್ಯಂತ ಉಪಯುಕ್ತವಾದ ಫಲ ಕೊಡುವ ಹಣ್ಣು ಹಂಪಲುಗಳ ಗಿಡಗಳನ್ನು ಕಾಲೇಜಿನ ಮೈದಾನದ ಸುತ್ತಲೂ ನೆಡುದರ ಮೂಲಕ ವನಮಹೋತ್ಸವ ಆಚರಿಸಿ, ಗಿಡ ಮರಗಳನ್ನು ನೆಟ್ಟು, ಪೋಷಿಸುವುದರ ಮಹತ್ವದ ಕುರಿತು ಇತರರಿಗೆ ಮಾದರಿಯಾದರು.ಈ ಸಂಧರ್ಭದಲ್ಲಿ ಸೇಕ್ರೆಡ್ ಹಾರ್ಟ್ ಸಂಸ್ಥೆಗಳ ಮಾನ್ಯ ಸಂಚಾಲಕರಾದ ವಂದನೀಯ ಬೇಸಿಲ್ ವಾಸ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ […]
ಜೀತಪದ್ಧತಿ ವಿರೋಧಿಸಿ ಜು. 1ರಿಂದ ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಮುಷ್ಕರ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಎಲ್ಲ 314 ನಗರ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಜೀತ ಮಾಡುತ್ತಿರುವ ತ್ಯಾಜ್ಯ ಸಹಾಯಕರು, ಯೂಜಿಡಿ ನೌಕರರು, ಕಸ ಸಾಗಾಟ ವಾಹನ ಚಾಲಕರು, ವಾಟರ್‌ಮೆನ್, ಡಾಟಾ ಎಂಟ್ರಿ ಅಪರೇಟರ್ಸ್‌ರನ್ನು ಹೊರಗುತ್ತಿಗೆ ಮತ್ತು ಗುತ್ತಿಗೆ ಪದ್ಧತಿ ಬದಲಾಗಿ ನೇರ ವೇತನಕ್ಕೆ ಒಳಪಡಿಸಿ, ಇತರ ಸರಕಾರಿ ನೌಕರರಂತೆ ಜೀತ ಮಾಡುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೂ ಸರಕಾರದ ಸಕಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಲು ಹಾಗೂ ಪೌರ ಕಾರ್ಮಿಕರ ನೇಮಕಾತಿಗೆ ಒತ್ತಾಯಿಸಿ […]
ಯುವಕರಿಗೆ ಕೆಂಪೇಗೌಡರು ಆದರ್ಶವಾಗಬೇಕು-ಪೂಂಜ

ಬೆಳ್ತಂಗಡಿ: ನಾಡಿನ ಯುವಸಮೂಹಕ್ಕೆ ಬೆಂಗಳೂರು ಶಿಲ್ಪಿ ನಾಡಪ್ರಭು ಕೆಂಪೇಗೌಡರು ಆದರ್ಶವಾಗಬೇಕು. ಉತ್ತಮ ವ್ಯಕ್ತಿತ್ವ ನಿರ್ಮಿಸಿಕೊಂಡು ಬದುಕಲ್ಲಿ ಸಾಧನೆಗೈಯಲು ಕೆಂಪೇಗೌಡರ ಬದುಕು ಪ್ರೇರಣೆಯಾಗಬೇಕು. ದೂರದೃಷ್ಟಿ ಇದ್ದ ಕೆಂಪೇಗೌಡರು ಅಂದು ಬೆಂಗಳೂರು ನಗರವನ್ನು ಪ್ರಾಕೃತಿಕ ಸಮತೋಲನದಿಂದ ಅಭಿವೃದ್ಧಿಪಡಿಸಲು ನಗರದಲ್ಲಿ ಕೆರೆಗಳ ನಿರ್ಮಾಣ, ಉದ್ಯಾನವನಗಳ ನಿರ್ಮಾಣ, ರಸ್ತೆ ಬದಿಯ ಸಾಲುಮರಗಳ ಕಲ್ಪನೆಯೊಂದಿಗೆ ನಗರವನ್ನು ಕಟ್ಟಿ ಬೆಳೆಸಿದವರು ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಜೂನ್ 27ರಂದು ಬೆಳ್ತಂಗಡಿಯ ಶ್ರೀ ಮಂಜುನಾಥಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ […]