‘ಸಾಹಿತ್ಯದಿಂದ ಮಾನವೀಯ ಸಂಬಂಧ ವೃದ್ಧಿ’

ಬೆಳ್ತಂಗಡಿ: ಇಂದು ಶಿಕ್ಷಣವೇ ಒಂದು ಸವಾಲಾಗಿದೆ. ಪರಂಪರಾಗತ ಶಿಕ್ಷಣ ಇಂದಿನ ಅಗತ್ಯವಿದೆ. ಸಾಹಿತ್ಯ ಮನುಷ್ಯನನ್ನು ಉನ್ನತ ಸ್ಥಾನಕ್ಕೆ ಒಯ್ಯುತ್ತದೆ. ಮಾನವೀಯ ಸಂಭಂದಕ್ಕೆ ಸಾಹಿತ್ಯ ಅಗತ್ಯ. ಜೀವಂತಿಕೆಯ ಒರತೆ ನಿತ್ಯ ಹರಿಯಲು ಸಾಹಿತ್ಯ ಬೇಕು ಎಂದು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ನುಡಿದರು.ಅವರು ಶಿಶಿಲದ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯರ ಮನೆಯಲ್ಲಿ ಜರಗಿದ ಅರಸಿನಮಕ್ಕಿ ವಲಯದ ತುಳು ಶಿವಳ್ಳಿ ಬಾಂಧವರ ವಲಯ ಸಭೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರ […]
ಶ್ರೀ ರಾಮಕ್ಷೇತ್ರದಲ್ಲಿ ಭಜನಾ ಸಪ್ತಾಹ ಮತ್ತು ಜಾತ್ರೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದನಗರ ಶ್ರೀ ರಾಮಕ್ಷೇತ್ರದಲ್ಲಿ 62ನೇ ವರ್ಷದ ಶ್ರೀ ರಾಮತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮಕ್ಷೇತ್ರದ ಪ್ರತಿಷ್ಠಾ ಜಾತ್ರಾ ಮಹೋತ್ಸವಕ್ಕೆ ಎಪ್ರಿಲ್ 3ರಂದು ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕರ್ನಾಟಕ ಸರಕಾರದ ಪಂಚಾಯತ್‌ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ನಂದಾ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ದಕ್ಷಿಣ […]
ಹೆಡ್ ಕಾನ್‌ಸ್ಟೇಬಲ್ ವಿಜಯ ಕುಮಾರ್‌ರಿಗೆ ಮುಖ್ಯಮಂತ್ರಿ ಪದಕ

ಮೂಲತಾ ಬೆಳ್ತಂಗಡಿಯವರಾದ, ಪ್ರಸ್ತುತ ಉಡುಪಿಯಲ್ಲಿ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿತುರ ಬಿ. ವಿಜಯ ಕುಮಾರ್‌ರವರು ಇಲಾಖೆಯಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿದ ರಾಜ್ಯ ಗೃಹ ಇಲಾಖೆ ಅವರನ್ನು ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಎಪ್ರಿಲ್ 2ರ ಪೊಲೀಸ್ ಧ್ವಜ ದಿನಾಚರಣೆಯಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಬಿ. ವಿಜಯ ಕುಮಾರ್‌ರವರಿಗೆ ಪ್ರಧಾನ ಮಾಡಿ ಗೌರವಿಸಿದರು. ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ […]
‘ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಗೆ 718 ಕೋಟಿ ರೂ. ಅನುದಾನ’

ಬೆಳ್ತಂಗಡಿ: ಸರ್ಕಾರದ ಚಿಂತನೆಯಂತೆ ಸಂಜೀವಿನಿ ಒಕ್ಕೂಟಕ್ಕೆ ಶಕ್ತಿಯನ್ನು ಕೊಟ್ಟಂತಹ ಸಂದರ್ಭದಲ್ಲಿ ಮಹಿಳೆಯರು ಸೇರಿಕೊಂಡು ಏನಾದರೊಂದು ಪರಿವರ್ತನೆ ಮಾಡಬಹುದು ಎಂಬುವುದನ್ನು ಲಾಯಿಲ ಸಮಗ್ರ ಸಂಜೀವಿನಿ ಒಕ್ಕೂಟದವರು ತೋರಿಸಿಕೊಟ್ಟಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತಿದ್ದೇನೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಮಾರ್ಚ್ 26ರಂದು ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಪಂಗಡದ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ, ಸ್ವಚ್ಛತಾ ವಾಹನದ ಲೋಕಾರ್ಪಣೆ, ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ, ಎನ್‌ಆರ್‌ಎಲ್‌ಎಮ್ ಕಟ್ಟಡ ಉದ್ಘಾಟನೆ, ಸಮಗ್ರ ಸಂಜೀವಿನಿ ಮಹಿಳಾ ಒಕ್ಕೂಟದ […]
‘ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಸಮರ್ಥ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’

ಬೆಳ್ತಂಗಡಿ: ಜಗತ್ತಿನ ಶ್ರೇಷ್ಠ ಸಂಪತ್ತು ಮಾನವ ವ್ಯಕ್ತಿತ್ವವಾಗಿದೆ. ನಾವು ಮೌಲ್ಯಾಧಾರಿತ ಶಿಕ್ಷಣದ ಮೂಲಕ ಸಮರ್ಥ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಬದುಕಿನಲ್ಲಿ ಪುರಸ್ಕಾರ ತಿರಸ್ಕಾರ ಯಾವುದೇ ಇರಲಿ ಸಮಾನವಾಗಿ ಸ್ವೀಕರಿಸುವ ಮನಸ್ಸು ನಮ್ಮಲ್ಲಿರಬೇಕು ಎಂದು ಉಪ್ಪಿನಂಗಡಿ ಗಿರಿಜಾ ಕ್ಲಿನಿಕ್‌ನ ದಂತ ವೈದ್ಯ ಡಾl ರಾಜಾರಾಮ್ ಕೆ. ಬಿ. ಹೇಳಿದರು.ಅವರು ಮಾರ್ಚ್ 26ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನಡೆದ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2021-22 ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ದ್ವಿತೀಯ […]
ಲಯನ್ಸ್ ಕ್ಲಬ್ ಸುಲ್ಕೇರಿ ಅಸ್ತಿತ್ವಕ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುಲ್ಕೇರಿಯಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ನೂತನ ಕ್ಲಬ್ ಆರಂಭಗೊಳ್ಳಲಿದೆ. ಸ್ಥಾಪಕ ಅಧ್ಯಕ್ಷರಾಗಿ ಸುಂದರ ಶೆಟ್ಟಿ, ಕಾರ್ಯದರ್ಶಿಯಾಗಿ ರವಿ ಶೆಟ್ಟಿ, ಕೋಶಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಾರಾವಿ ಶಾಖಾ ಪ್ರಬಂಧಕ ಸುಧೀರ್ ಎಸ್. ಪಿ. ಆಯ್ಕೆಗೊಂಡಿದ್ದಾರೆ. ಸ್ಥಾಪಕ ಆಡಳಿತ ಮಂಡಳಿಯಲ್ಲಿ ಉಪಾಧ್ಯಕ್ಷರುಗಳಾಗಿ ಸಂತೋಷ್ ಕುಮಾರ್ ಹೆಗ್ಡೆ, ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ, ಸುರೇಶ್ ಭಟ್, ದೀಪಕ್ ಶೆಟ್ಟಿ ಕೊಕ್ರಾಡಿ ಆಯ್ಕೆಯಾಗಿದ್ದಾರೆ. ದಯಾಕರ ರೈ ಜೊತೆ ಕಾರ್ಯದರ್ಶಿಯ ಜವಾಬ್ದಾರಿ […]
ಚಂದ್ರಮೋಹನ್ ರೈ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ತಾಲೂಕು, ಯುವ ಬಂಟರ ವಿಭಾಗ, ಬಂಟರ ಸಂಘ ಉಜಿರೆ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಗ್ರಾಮಲೆಕ್ಕಿಗ ಚಂದ್ರಮೋಹನ್ ರೈ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಜಿರೆ ಬೆಳಾಲು ರಸ್ತೆಯ ಅಜ್ಜರಕಲ್ಲು ಕ್ರೀಡಾಂಗಣದಲ್ಲಿ ಮಾರ್ಚ್ 20ರಂದು ನಡೆಯಿತು. ಬರೋಡಾ ತುಳು ಕೂಟದ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವಕರು ಒಟ್ಟಾಗಿ ಸೇರಿಕೊಂಡು ನಡೆಸುತ್ತಿರುವ ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು […]
ಬಸ್-ಬೈಕ್ ಢಿಕ್ಕಿ; ಬೈಕ್ ಸವಾರರಿಬ್ಬರ ಸಾವು

ಬೆಳ್ತಂಗಡಿ: ಗರ್ಡಾಡಿ ಸಮೀಪದ ನಂದಿಬೆಟ್ಟ ಸಮೀಪ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರಿಬ್ಬರೂ ಸಾವನ್ನಪ್ಪಿದ ಘಟನೆ ಮಾರ್ಚ್ 18ರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿಯವರು ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆ ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ವೇಣೂರಿನಿಂದ ಗುರುವಾಯನಕೆರೆ ಕಡೆ ಬರುತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದೆನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಸವಾರರಿಬ್ಬರೂ ರಸ್ತೆಗೆ ಎಸೆಯಲ್ಪಟ್ಟು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊರ್ವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು […]
ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗುರುವಾಯನಕೆರೆ ನಾಗರಿಕರು;ನಿರ್ಲಜ್ಜ ತಾಲೂಕು ಆಡಳಿತದಿಂದ ನಿರ್ಲಕ್ಷ್ಯ ಧೋರಣೆ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಐತಿಹಾಸಿಕ ಕೆರೆಗೆ ಕಿಡಿಗೇಡಿಗಳು ವಿಷ ಬೆರೆಸಿಯೋ ಅಥವಾ ಸ್ಥಾಪಿತ ಹಿತಾಸಕ್ತ ಪ್ರಭಾವಿಗಳು ಹರಿಸಿದ ಮಲಿನ ನೀರಿನಿಂದಲೋ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳ ಮಾರಣ ಹೋಮವಾಗಿರುವ ವಿಚಾರ ಮಾರ್ಚ್ 13ರಂದು ಬೆಳಕಿಗೆ ಬಂದಿದೆ. ಮೀನುಗಳ ಮಾರಣ ಹೋಮ ನಡೆದು ದಿನಗಳೆರಡು ಕಳೆದರೂ ನಿರ್ಲಜ್ಜ ತಾಲೂಕು ಆಡಳಿತ ಸತ್ತ ಮೀನುಗಳ ವಿಲೇವಾರಿಗೆ ಯಾವೊಂದು ಕ್ರಮಕ್ಕೂ ಮುಂದಾಗದೇ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಗುರುವಾಯನಕೆರೆ ಪರಿಸರದಲ್ಲಿ ಸತ್ತ ಮೀನುಗಳಿಂದ ಹರಡುವ ದುರ್ನಾತ ಬೀರುತ್ತಿದ್ದು, ನಾಗರಿಕರಲ್ಲಿ ಸಾಂಕ್ರಾಮಿಕ ರೋಗದ ಭೀತಿ […]
ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ವಿದ್ಯಾರ್ಥಿ ಬದುಕು ಸಾಧನೆಗೆ ಮೆಟ್ಟಿಲು. ಆ ಸಂದರ್ಭ ಇರುವ ಅವಕಾಶಗಳನ್ನು ವಿದ್ಯಾರ್ಥಿಗಳು ಚೆನ್ನಾಗಿ ಬಳಸಿಕೊಂಡು ಸಾಧಕರಾಗಬೇಕು. ಪಠ್ಯ ಚಟುಟಿಕೆಗಳ ಜೊತೆ ಜೊತೆಯಲ್ಲಿ ಕ್ರೀಡೆಯಲ್ಲೂ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.ಅವರು ಮಾರ್ಚ್ 5ರಂದು ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ ದೈಹಿಕ […]