ಪದ್ಮುಂಜ ಸೊಸೈಟಿಗೆ ಪ್ರಶಸ್ತಿಯ ಹಿರಿಮೆ

ಬೆಳ್ತಂಗಡಿ: 2020-21ನೇ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಯನ್ನು ಗುರುತಿಸಿ ಡಿಸೆಂಬರ್ 14ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಈ ಪ್ರತಿಷ್ಢಿತ ಪ್ರಶಸ್ತಿಯನ್ನು ಸಂಘ ಅಧ್ಯಕ್ಷ ಪಿ. ರಕ್ಷಿತ್ ಶೆಟ್ಟಿ ಹಾಗು […]
ಕಳಿಯ ಸೊಸೈಟಿಯ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ 2020-21ನೇ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗುರುತಿಸಿ; ಸಂಘದ ನಿರ್ದೇಶಕರು, ಸರ್ವಸದಸ್ಯರು ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಅಧ್ಯಕ್ಷ ವಸಂತ ಮಜಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಶಂಕರ ಭಟ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. […]
ಬಾರ್ಯ ಸೊಸೈಟಿಗೆ ಪ್ರಶಸ್ತಿಯ ಗರಿ

ಬೆಳ್ತಂಗಡಿ: 2020-21ನೇ ಆರ್ಥಿಕ ವರ್ಷದಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸದಸ್ಯರೆಲ್ಲರ ಹಾಗೂ ಸಿಬ್ಬಂದಿವರ್ಗದವರ ಸಹಕಾರದಿಂದ ಉತ್ತಮ ವ್ಯವಹಾರ ನಡೆಸಿ; ಸದಸ್ಯರ ಸಾಲ ವಸೂಲಾತಿ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಸಾಧಿಸಿದ ಉತ್ತಮ ಸಾಧನೆಯನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ; ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ಬ್ಯಾಂಕಿನ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರಸನ್ನ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. […]
ಬೆಳ್ತಂಗಡಿ ಸೊಸೈಟಿಗೆ ಪ್ರಶಸ್ತಿ ಪುರಸ್ಕಾರ

ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರ ವಿಭಾಗಗಳಲ್ಲಿ ಉತ್ತಮ ನಿರ್ವಹಣೆ ತೋರಲು ಸಹಕರಿಸಿದ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವಸದಸ್ಯರು ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಸಂಘದ ಅಧ್ಯಕ್ಷ ಮುನಿರಾಜ ಅಜ್ರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ […]
ತಣ್ಣೀರುಪಂತ ಸೊಸೈಟಿಗೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸದಸ್ಯರ ಸಾಲ ವಸೂಲಾತಿಯಲ್ಲಿ 100% ಸಾಧನೆ ಮಾಡುವುದರ ಜೊತೆಗೆ ಎಲ್ಲ ಆರ್ಥಿಕ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವಸದಸ್ಯರ ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಅಧ್ಯಕ್ಷ ನಿರಂಜನ ಬಾವಂತಬೆಟ್ಟು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್‌ರನ್ನು ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ […]
ಬಂಗಾಡಿ ಸೊಸೈಟಿಗೆ ಪ್ರಶಸ್ತಿಗಳ ಗರಿ

ಬೆಳ್ತಂಗಡಿ ತಾಲೂಕಿನ ಬಂಗಾಡಿ ವ್ಯವಸಾಯಿಕ ಸಂಘವು ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ರಾಜ್ಯ ಅಪೆಕ್ಸ್ ಬ್ಯಾಂಕ್ ವತಿಯಿಂದ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಲೆಕ್ಕ ಪರಿಶೋಧನೆಯಲ್ಲಿ ‘ಎ’ ತರಗತಿ ಗಳಿಸಿದ ಸಹಕಾರಿ ಸಂಘಗಳ ಪೈಕಿ ತೃತೀಯ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಜಿಲ್ಲಾ ಡಿಸಿಸಿ ಬ್ಯಾಂಕ್ ವತಿಯಿಂದ ಪಡೆದಿದೆ.ಈ ಪ್ರಶಸ್ತಿಗಳನ್ನು ಡಿಸೆಂಬರ್ 14 ರಂದು ಮಂಗಳೂರಿನಲ್ಲಿ ಜರಗಿದ ಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ […]
ಪೆರಾಡಿ ಸೊಸೈಟಿಗೆ ಪ್ರಶಸ್ತಿ ನೀಡಿ ಪುರಸ್ಕಾರ

ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2020-21ನೇ ಸಾಲಿನ ಮಹಾಸಭೆಯಲ್ಲಿ 2020-21ನೇ ವರದಿ ಸಾಲಿನಲ್ಲಿ ಆರ್ಥಿಕ ವ್ಯವಹಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತೀಫ್‌ರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಿ, ಅಭಿನಂದಿಸಲಾಯಿತು. ದಕ್ಷಿಣ […]
ಮಂಗಳೂರು ವಿ.ವಿ.ಯಿಂದ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ

‘ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾಲಯವಿಂದು ಕ್ರೀಡೆಯಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಲು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿವರ್ಗ, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ವಿದ್ಯಾರ್ಥಿಗಳ ಶ್ರಮವೇ ಕಾರಣ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ. ಕೆ. ಹೇಳಿದರು.ಅವರು ಡಿಸೆಂಬರ್ 8ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪರ್ತಾಯ ಫಲಕಕ್ಕಾಗಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕಬ್ಬಡ್ಡಿ ಪಂದ್ಯಾಟವನ್ನು […]
ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕಳಿಯ ಗ್ರಾಮದ ಬದಿನಡೆ ಮತ್ತು ಮಂಜಲಡ್ಕ ದೈವಗಳ ಸಾನಿಧ್ಯದಲ್ಲಿ ಡಿಸೆಂಬರ್ 21 ರಿಂದ 26 ರವರೆಗೆ ನಡೆಯಲಿರುವ ಉಳ್ಳಾಕುಲು-ಉಳ್ಳಾಲ್ತಿ, ರಕ್ತೇಶ್ವರೀ, ಮಹಿಷಂತಾಯ, ಪಂಜುರ್ಲಿ ದೈವಗಳ ಮತ್ತು ಮಂಜಲಡ್ಕ ದೈವ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ ಹಾಗೂ ಕಲ್ಕುಡ ದೈವಗಳ ಪ್ರತಿಷ್ಠಾ ಮಹೋತ್ಸವ ಕಲಶಾಭಿಷೇಕ ಮತ್ತು ನರ್ತನ ಸೇವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಡಿಸೆಂಬರ್ 7ರಂದು ಜರುಗಿತು.ಕಲಶಾಭಿಷೇಕ ಸಮಿತಿ ಗೌರವಾಧ್ಯಕ್ಷ ಹಾಗೂ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ […]
ಶ್ರೀ ಗುರುದೇವ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಸಂಘ ಉದ್ಘಾಟನೆ

ಬೆಳ್ತಂಗಡಿ: ದೇಶದಲ್ಲಿ ಅನೇಕ ಚುನಾವಣೆಗಳು ನಡೆಯುತ್ತಿವೆ. ಪ್ರತಿ ಚುನಾವಣೆಯ ಮಹತ್ವ ಮತ್ತು ಮತದಾನದ ರೀತಿಯನ್ನು ಭಾರತೀಯ ಪ್ರಜೆಗಳಾದ ನಾವೆಲ್ಲರೂ ಅರ್ಥೈಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಮಾಜಿ ಶಾಸಕ ಹಾಗೂ ಬೆಳ್ತಂಗಡಿಯ ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು.ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 4ರಂದು ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಮತದಾರರ ಸಾಕ್ಷರತಾ ಸಂಘ ಉದ್ಘಾಟಿಸಿ ಮಾತನಾಡುತ್ತಿದ್ದರು.ಸಾಕಷ್ಟು ಜನಪ್ರತಿನಿಧಿಗಳಿಗೇ ಮತವನ್ನು ಹೇಗೆ ಚಲಾಯಿಸಬೇಕು ಎಂಬ ಪರಿಜ್ಞಾನವಿರುವುದಿಲ್ಲ. ಹಾಗಾಗಿ ಪ್ರತಿ ಚುನಾವಣೆಯಲ್ಲಿ ಮತ […]