ಕಟ್ಟಡ ಕಾರ್ಮಿಕರಿಗೆ ಕೊರೋನಾ ಸುರಕ್ಷತಾ ಕಿಟ್ ವಿತರಣೆ

ಬೆಳ್ತಂಗಡಿ: ಸರಕಾರವು ಕಟ್ಟಡ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು ಪ್ರಸ್ತುತ ಕೊರೊನಾ ಮಹಾಮಾರಿ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಕಾರ ಸುರಕ್ಷತಾ ಕಿಟ್ ನೀಡುತ್ತಿದ್ದು ಇದನ್ನು ಸಮರ್ಪಕವಾಗಿ ಬಳಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಬೆಳ್ತಂಗಡಿ ಸಿವಿಲ್ ಜಡ್ಜ್ ಸೀನಿಯರ್ ಡಿವಿಜನ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾದೀಶ ನಾಗೇಶ್ ಮೂರ್ತಿ ಹೇಳಿದ್ದಾರೆ.ಅವರು ಜುಲೈ 2ರಂದು ಬೆಳ್ತಂಗಡಿಯ ಕೋರ್ಟ್ ರಸ್ತೆಯ ಇಎಂಎಸ್ ಭವನದಲ್ಲಿರುವ ಕಾರ್ಮಿಕ ಸಂಘದ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, […]
ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿದ ಬೆಳ್ತಂಗಡಿ ರೋಟರಿ ಕ್ಲಬ್: ಪ್ರಕಾಶ ಕಾರಂತ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಕೊರೊನ ಸಂಕಷ್ಟದ ಸಂದರ್ಭದಲ್ಲೂ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿ, ಉತ್ತಮ ಜನೋಪಯೋಗಿ ಕಾರ್ಯಕ್ರಮಗಳಿಂದ ಉನ್ನತ ಮಟ್ಟದ ವಿಶೇಷ ಸಾಧನೆ ಮಾಡಿ ರಾಷ್ಟ್ರದಲ್ಲೇ ಮೊದಲ ಸ್ಥಾನ ಪಡೆದು, ರೋಟರಿ ಜಿಲ್ಲೆಗೇ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ರ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ ಕಾರಂತ ಹೇಳಿದರು ಅವರು ಜುಲೈ 1ರಂದು ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ನಡೆದ ರೋಟರಿ ಕ್ಲಬ್‌ನ 51ನೇ ವರ್ಷದ ಪದಗ್ರಹಣ ಸಮಾರಂಭದಲ್ಲಿ 2021-22ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಗೈದು ಶುಭಾಶಂಸನೆಯ ಮಾತಗಳನ್ನಾಡುತ್ತಿದ್ದರು. ಕ್ಲಬ್ಸು ವರ್ಣವರ್ಷದಲ್ಲಿ 1000ಕ್ಕೂ ಹೆಚ್ಚು […]
ವೈದ್ಯರ ದಿನದ ಪ್ರಯುಕ್ತ ಮಾನವ ಸ್ಪಂದನ ತಂಡದಿಂದ ಸರಕಾರಿ ವೈದ್ಯರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವೈದ್ಯರ ದಿನಾಚರಣೆಯ ಜುಲೈ 1ರಂದು ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರದ ಕರ್ತವ್ಯನಿರತ ವೈದ್ಯರುಗಳಿಗೆ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಮಾನವ ಸ್ಪಂದನ ಕೋವಿಡ್ ಸೋಲ್ಜರ್ಸ್ ತಂಡದ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮವು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ನಡೆಯಿತು.ಮಾನವ ಸ್ಪಂದನ ತಂಡದ ಚೇರ್ಮೆನ್ ಪಿ. ಸಿ. ಸೆಬಾಸ್ಟಿಯನ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಕೋವಿಡ್ ಸೋಲ್ಜರ್ಸ್ ತಂಡದ ಕ್ಯಾಪ್ಟನ್ ಅಶ್ರಫ್ ಆಲಿಕುಂಞಿ ಮಾತನಾಡಿ, ವೈದ್ಯರುಗಳು ಕೋವಿಡ್ ನಿಯಂತ್ರಣದಲ್ಲಿ ಮಾಡುತ್ತಿರುವ ಸೇವೆಗೆ ಪೂರಕವಾಗಿ ನಮ್ಮ ಸಂಘ ಕೆಲಸಮಾಡುತ್ತಿದೆ. […]
ಎಂಡೊ ಸಂತ್ರಸ್ತರ ಬೇಡಿಕೆ ಈಡೇರಿಸಲು ಸಚಿವರಿಗೆ ಮನವಿ

ಬೆಳ್ತಂಗಡಿ: ಎಂಡೋ ಸಂತ್ರಸ್ತರಿಗೆ ಸೂಕ್ತ ಮಾಸಾಶನ ಮತ್ತು ಸರಕಾರದ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಹಾಗೂ ಕೊಕ್ಕಡದ ನೂತನ ಸಮುದಾಯ ಆಸ್ಪತ್ರೆಯಲ್ಲಿ ಎಂಡೋ ಪೀಡಿತರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಬಗ್ಗೆ ಎಂಡೋ ಸಂತ್ರಸ್ತರ ಪರವಾಗಿ ಹೋರಾಟಗಾರ ಶ್ರೀಧರ ಗೌಡ ಕೆಂಗುಡೇಲು ಅವರು ಆರೋಗ್ಯ ಸಚಿವ ಡಾl ಸುಧಾಕರ್ ಅವರಿಗೆ ಜೂನ್ 30ರಂದು ಮನವಿ ಸಲ್ಲಿಸಿದರು.ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಂಡೋಸಂತ್ರಸ್ತರೆಂದು ಸುಮಾರು 9ಸಾವಿರ ಜನರನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, 2011ರಲ್ಲಿ ನ್ಯಾಯಾಲಯದ ಆದೇಶದ […]
ಪುಂಜಾಲಕಟ್ಟೆ ಸರಕಾರಿ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ

ಬೆಳ್ತಂಗಡಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದಲ್ಲಿ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಸಿಕಾ ಅಭಿಯಾನ ಜರುಗಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ, ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಶಿಸಿದರು. ತಾಲೂಕು ವೈದ್ಯಾಧಿಕಾರಿ ಡಾl ಕಲಾಮಧು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾl ವಿದ್ಯಾವತಿ, ಇಲಾಖೆಯ […]
ಸಿದ್ಧ ರವೀಂದ್ರ ಪೈ ಅವರಿಗೆ ಜವುಳಿ ವರ್ತಕರ ಸಂಘದಿಂದ ಶ್ರದ್ಧಾಂಜಲಿ

ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ವಸ್ತ್ರ ಮಳಿಗೆ ” ಸಿದ್ಧ ” ಇದರ ಮಾಲಕ ರವೀಂದ್ರ ಪೈ ಅವರು ಅನಿರೀಕ್ಷಿತ ನಿಧನರಾಗಿದ್ದು ಆ ಪ್ರಯುಕ್ತ ಅವರ ಗೌರವಾರ್ಥ ಮೂಡಬಿದರೆಯ ಸಮಸ್ತ ಜವುಳಿ ವರ್ತಕ ಬಾಂಧವರು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಎರಡು ಗಂಟೆಗಳವರೆಗೆ ತಮ್ಮ ಜವುಳಿ ವ್ಯಾಪಾರ ವಹಿವಾಟನ್ನು ಬಂದ್ ಮಾಡಿ ಶೋಕಾಚರಣೆ ಆಚರಿಸಿದರು.ಅಂದು ಮಧ್ಯಾಹ್ನ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಜವುಳಿ ವರ್ತಕರ ಸಂಘದ ವತಿಯಿಂದ ಶೃದ್ಧಾಂಜಲಿ ಸಭೆಯನ್ನು ನಡೆಸಲಾಯಿತು. ಮೂಡುಬಿದಿರೆಯ ಬಹುತೇಕ ಎಲ್ಲಾ ಜವುಳಿ ವ್ಯವಹಾರಸ್ಥರು ಈ ಸಭೆಯಲ್ಲಿ […]
ಕೂಕ್ರಬೆಟ್ಟು ಶಾಲೆಗೆ ಸುಸಜ್ಜಿತ ಕಟ್ಟಡ: ಜಯಂತ ಕೋಟ್ಯಾನ್

ಬೆಳ್ತಂಗಡಿ: ಮರೋಡಿ ಗ್ರಾಮದ ಕೂಕ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಿಸಲು ಶಾಸಕ ಹರೀಶ್ ಪೂಂಜ ರೂಪಾಯಿ 45 ಲಕ್ಷ ಮಂಜೂರು ಮಾಡಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್ ಹೇಳಿದರು.ಶಾಲಾ ಆರಂಭೋತ್ಸವ, ಆನ್‌ಲೈನ್ ತರಗತಿ ಹಾಗೂ ನೂತನ ಕಟ್ಟಡ ನಿರ್ಮಾಣದ ಕುರಿತು ಜೂನ್ 28ರಂದು ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಎರಡು ವರ್ಷಗಳ ಹಿಂದೆ 16 ಮಕ್ಕಳಿದ್ದ ಈ […]
ಸವಾಲುಗಳ ಮಧ್ಯೆಯೂ ಜನಪರ ಕಾರ್ಯಕ್ರಮ ಸಂಘಟಿಸಿದ ತೃಪ್ತಿ – ನಿರ್ಗಮಿತ ರೋಟರಿ ಅಧ್ಯಕ್ಷ ಬಿ. ಕೆ. ಧನಂಜಯ ರಾವ್

ಬೆಳ್ತಂಗಡಿ: ಸುವರ್ಣ ಮಹೋತ್ಸವ ವರ್ಷದಲ್ಲಿರುವ ಬೆಳ್ತಂಗಡಿ ರೋಟರಿ ಕ್ಲಬ್ ಕೋವಿಡ್ ಎರಡನೇ ಅಲೆಯ ಹೊಡೆತ ಸಹಿತ ಅನೇಕ ಸಮಸ್ಯೆ-ಸವಾಲುಗಳ ಮಧ್ಯೆಯೂ ಜನಪರವಾದ 1 ಸಾವಿರದಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದಲ್ಲಿ ರೋಟರಿ ಇತಿಹಾಸದಲ್ಲೇ ಒಂದು ವರ್ಷದಲ್ಲಿ ಅತೀ ಹೆಚ್ಚು ಕಾರ್ಯಕ್ರಮ ಸಂಘಟಿಸಿದ ಕ್ಲಬ್ ಎಂದು ಗುರುತಿಸಿಕೊಂಡಿದೆ. ಜೊತೆಗೆ ರೋಟರಿ ನ್ಯೂಸ್ ರಾಷ್ಟ್ರೀಯ ಪತ್ರಿಕೆಯಲ್ಲಿ ಬೆಳ್ತಂಗಡಿ ಕ್ಲಬ್ಬಿನ ಕಾರ್ಯಕ್ರಮಗಳ 6 ಪುಟದ ವರದಿ ಬಂದಿರುವುದು ಸಂಘಟಿತ ಪ್ರಯತ್ನಕ್ಕೆ ಹಿಡಿದ ಕೈಗನ್ನಡಿ ಎಂದು ರೋಟರಿ ಕ್ಲಬ್ ಬೆಳ್ತಂಗಡಿಯ ನಿರ್ಗಮಿತ ಅಧ್ಯಕ್ಷ, ನ್ಯಾಯವಾದಿ […]
ಗೃಹರಕ್ಷಕ ದಳದಿಂದ ವನಮಹೋತ್ಸವ

ಬೆಳ್ತಂಗಡಿ: ಗೃಹರಕ್ಷಕ ದಳ ಬೆಳ್ತಂಗಡಿ ಘಟಕದ ವತಿಯಿಂದ ಜೂನ್ 29ರಂದು 2ನೇ ಹಂತದ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ಬೆಳ್ತಂಗಡಿ ಗೃಹರಕ್ಷಕದಳ ಘಟಕದ ಘಟಕಾಧಿಕಾರಿ ಜಯಾನಂದ ಹಾಗೂ ಎಲ್ಲಾ ಗ್ರಹರಕ್ಷಕರು ಉಪಸ್ಥಿತರಿದ್ದರು.ಈ ಸಂದರ್ಭ ‘ಅರಣ್ಯ ಸಂರಕ್ಷಣೆ- ಪರಿಸರ ಜಾಗೃತಿ ಮತ್ತು ವನ್ಯ ಪ್ರಾಣಿಗಳ ಸಂರಕ್ಷಣೆ’ ಬಗ್ಗೆ ಸಂಕಲ್ಪ ಕೈಗೊಳ್ಳಲಾಯಿತು
ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದಿನಬಳಕೆ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಕೊರೋನ ಪೀಡಿತರಾಗಿ ಕಾರಂಟೈನ್‌ನಲ್ಲಿರುವ ಹಾಗೂ ಮನೆಯಿಂದ ಹೊರಗೆ ಬರಲು ಅನಾನುಕೂಲವಾಗಿದ್ದವರನ್ನು ಗುರುತಿಸಿ, ಅಂತವರ ಕಷ್ಟಗಳಿಗೆ ಸ್ಪಂದಿಸಿ ಆಹಾರ ಪರಿಕರಗಳ ಕಿಟ್‌ಗಳನ್ನು ಅವರವರ ಮನೆಗೆ ಹೋಗಿ ನೇರವಾಗಿ ಕೊಡುವ ಯೋಜನೆಯನ್ನು ಹಮ್ಮಿಕೊಂಡಿರುವ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರರ ಮಕ್ಕಳು ಹಾಗೂ ಕುಟುಂಬಿಕರು ಜೂನ್ 29ರಂದು ವೇಣೂರು ಹೋಬಳಿಯ ವೇಣೂರು, ಕರಿಮಣೇಲು, ಬಡಕೊಡಿ, ಬಜ್ರೆ ಮತ್ತು ಹೊಸಂಗಡಿ ಗ್ರಾಮಗಳಲ್ಲಿ ಅಗತ್ಯ ದಿನಬಳಕೆ ವಸ್ತುಗಳ ಕಿಟ್ ವಿತರಣೆ ಮಾಡಿದರು.ಬಡವರ ಕಷ್ಟಗಳಿಗೆ ಸದಾ ಸ್ಪಂದಿಸುವ ಬಡವರಬಂಧು ಎಂದೇ […]