ಧರ್ಮಸ್ಥಳ ಕ್ಷೇತ್ರದಲ್ಲಿ ಲಾಕ್‌ಡೌನ್ ನಿಯಮ ಕಟ್ಟುನಿಟ್ಟಾಗಿ ಅನುಷ್ಠಾನಿಸಲು ತಾಲೂಕು ಆಡಳಿತ ಸಂಕಲ್ಪ

ಧರ್ಮಸ್ಥಳ :- ತಾಲೂಕು ಆಡಳಿತ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮ ಕಾರ್ಯಪಡೆ ಸಮಿತಿ ಸಭೆಯು ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಪಿ. ಶ್ರೀನಿವಾಸ್ ರಾವ್‌ರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜೂನ್ 19ರಂದು ನಡೆಯಿತು. ಬೇರೆ ಬೇರೆ ಜಿಲ್ಲೆಯಿಂದ ಆಗಮಿಸುವ ಯಾತ್ರಾರ್ಥಿಗಳು ಹಾಗೂ ಜನರನ್ನು ತಡೆಯುವ ನಿಟ್ಟಿನಲ್ಲಿ ಚಾರ್ಮಾಡಿ, ಕೊಕ್ಕಡ, ಬೆಳ್ತಂಗಡಿ, ಚೆಕ್ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಮಹೇಶ್ ಇವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಲಾಕ್‌ಡೌನ್ ಮುಗಿಯುವ ತನಕ ಹರಿಕೆ ಮಂಡೆಯನ್ನು […]
ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆಯ ನಿರಾಸಕ್ತಿ

ಪಡುಮಾರ್ನಾಡು: ಕಳೆದೊಂದು ವಾರದಲ್ಲಿ ಪಡುಮಾರ್ನಾಡು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಮೂರ್ನಾಲ್ಕು ಬಹುಮುಖ್ಯ ಕಾರ್ಯಕ್ರಮಗಳು ನಡೆದರೂ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿಯವರು ಯಾವೊಂದು ಕಾರ್ಯಕ್ರಮದಲ್ಲೂ ಭಾಗವಹಿಸದೆ ಬೇಜವಾಬ್ದಾರಿತನ ತೋರಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊರೋನಾ ಸಂಕಷ್ಟ ಕಾಲದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ನಡೆದ ಈ ಅತಿ ಮುಖ್ಯ ಕಾರ್ಯಕ್ರಮಗಳಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿಯವರು ಭಾಗವಹಿಸದೆ ನಿರಾಸಕ್ತಿ ವಹಿಸಿರುವುದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದೆ. ಜೂನ್ 14ರಂದು ಇಲ್ಲಿ ಎರಡು ಕಾರ್ಯಕ್ರಮಗಳು ನಡೆದಿತ್ತು.ಮಂಗಳೂರಿನ ಖ್ಯಾತ ಹೃದಯ ತಜ್ಝ ಡಾ.ಪದ್ಮನಾಭ […]
ಸಿಯೋನ್ ಆಶ್ರಮದಲ್ಲಿ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕೋವಿಡ್ ಮಹಾಸ್ಫೋಟದ ಪರಿಣಾಮವಾಗಿ ಸಿಯೋನ್ ಆಶ್ರಮದ ನಿವಾಸಿಗರನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆ ಹಾಗೂ ಧರ್ಮಸ್ಥಳ ರಜತಾದ್ರಿ ಸರಕಾರಿ ಕ್ವಾರೆಂಟೈನ್ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದ್ದು, ಪ್ರಸ್ತುತ ಕೋರೆಂಟೈನ್ ಮುಗಿಸಿ, ಜೂನ್ 20ರಂದು ಮರಳಿ ಆಶ್ರಮ ಸೇರಲಿದ್ದಾರೆ. ಈ ಮಧ್ಯೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಕೋವಿಡ್ ಟಾಸ್ಕ್‌ಫೋರ್ಸ್ ಹಾಗೂ ಯುವಜನ ಒಕ್ಕೂಟ ಹಾಗೂ ಗಂಡಿಬಾಗಿಲು ಚರ್ಚ್ ಆಡಳಿತ ಮಂಡಳಿಯ ನೇತೃತ್ವದಲ್ಲಿ ಸಿಯೋನ್ಆಶ್ರಮದಲ್ಲಿಬೃಹತ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಮಾನೇಜಿಂಗ್ ಟ್ರಸ್ಟಿ ಯು. ಸಿ. […]
ಉಜಿರೆಯಲ್ಲಿ ವರ್ತಕರಿಗೆ ಹಾಗೂ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ

ಬೆಳ್ತಂಗಡಿ: ಸೀಲ್‌ಡೌನ್ ಆಗಿರುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಹಾಗೂ ವರ್ತಕರಿಗೆ ಗ್ರಾಮ ಪಂಚಾಯತಿ ಮತ್ತು ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಪರೀಕ್ಷೆ ಜೂನ್ 18ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆಯಿತು. ಉಜಿರೆಯ ಹಿರಿಯರಾದ ವಸಂತಿ ಗೌಡ ಮತ್ತು ಜಯರಾಮ ಪಡ್ಡಿಲ್ಲಾಯ ಅವರಿಗೆ ಕೋವಿಡ್ ಪರೀಕ್ಷೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ತಾಲೂಕು ವೈದ್ಯಾಧಿಕಾರಿ ಡಾl […]
ಬೆಳ್ತಂಗಡಿಯ ಎಸ್.ಡಿ.ಎಂ. ಶಾಲೆಯ ಬುಲ್‌ಬುಲ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಂಗಳೂರು ರಾಜ್ಯ ಸಂಸ್ಥೆ ಇವರು ಹೀರೆಕ್ ಗರಿ ರಾಜ್ಯ ಪುರಸ್ಕಾರ ಪರೀಕ್ಷೆ ಯನ್ನು ಆಯೋಜಿಸಿದ್ದು, ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿ, ಉತ್ತೀರ್ಣರಾಗಿರುತ್ತಾರೆ.ಪರೀಕ್ಷೆ ಬರೆದ 11ಮಂದಿ ಬುಲ್‌ಬುಲ್ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರವನ್ನು ಪಡೆದಿದ್ದು, ಇವರಿಗೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಆಂಗ್ಲಮಾಧ್ಯಮ ಶಾಲೆಯ ಕ್ಯಾಪ್ಟನ್ ಪ್ರಮೀಳಾ ಇವರು ತರಬೇತಿ ನೀಡಿರುತ್ತಾರೆ. ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ […]
ಗ್ರಾ.ಪಂ. ಗಳಿಗೆ ವೈದ್ಯಕೀಯ ಸಲಕರಣೆ ಕಿಟ್ ಮತ್ತು ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

ಮೂಡುಬಿದಿರೆ : ಬ್ಯಾಂಕ್ ಆಫ್ ಬರೋಡ ಮೂಡುಬಿದಿರೆ ಶಾಖೆ ವತಿಯಿಂದ ಮೂಡುಬಿದಿರೆ ತಾಲೂಕಿನ ಎಲ್ಲಾ 12 ಗ್ರಾಮ ಪಂಚಾಯತ್ ಗಳಿಗೆ ಉಚಿತವಾಗಿ ನೀಡಿರುವ ವೈದ್ಯಕೀಯ ಸಲಕರಣೆ ಕಿಟ್ ಗಳನ್ನು ಮತ್ತು ಮೂಡುಬಿದಿರೆ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ನೀಡಿರುವ ದಿನಸಿ ಕಿಟ್ ಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ವಿತರಿಸಿದರು.ಮೂಡುಬಿದಿರೆ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದ ಸಭಾಂಗಣದಲ್ಲಿ ಈ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಮೂಡುಬಿದಿರೆಯ ಶಾಸಕ ಉಮಾನಾಥ ಎ. ಕೋಟ್ಯಾನ್ […]
ಕ್ಯಾನ್ಸರ್ ಪೀಡಿತೆಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಯುವ ಬಿಲ್ಲವ ವೇದಿಕೆಯು ಸಂಕಷ್ಟದಲ್ಲಿರುವ ಸಮಾಜಭಾಂದವರಿಗೆ ಆಸರೆಯಾಗುವ ಉದ್ದೇಶದಿಂದ ‘ಶ್ರೀ ಗುರು ಸೇವೆ’ ಎಂಬ ಸೇವಾಯೋಜನೆಯನ್ನು ಪ್ರಾರಂಭಿಸಿದ್ದು, ಐದನೇ ಸೇವಾಯೋಜನೆಯಾಗಿ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಕಾಯರಾಡ್ಕ ಮನೆಯ ರೇವತಿ ಹಾಗೂ ಜನಾರ್ದನ ಪೂಜಾರಿ ಯವರ ಪ್ರಥಮ ಪುತ್ರಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಬಾಲಕಿಯ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚ ಭರಿಸಬೇಕಾಗಿರುವುದರಿಂದ ಬಡ ಕುಟುಂಬಕ್ಕೆ ಕೈಲಾದಷ್ಟು ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಜೂನ್ 16 ರಂದು ಅವರ ಮನೆಗೆ ಬೇಟಿ ನೀಡಿ ಸಮಾಜದ ದಾನಿಗಳಿಂದ ಸಂಗ್ರಹಿಸಿದ್ದ ರೂಪಾಯಿ 15,000/- ಆರ್ಥಿಕ […]
ಪರಿಹಾರ ಪ್ಯಾಕೇಜ್‌ಗೆ ಮನವಿ

ಬೆಳ್ತಂಗಡಿ: ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪರಿಗೆ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದರು.ಜೊತೆಗೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ ವಾರಿಯರ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಲಾಕ್‌ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟ […]
ಆಪತ್ತು ತಪ್ಪಿಸಿದ ಶಿಶಿಲದ ವಿಪತ್ತು ತಂಡ

ಬೆಳ್ತಂಗಡಿ: ಧರ್ಮಸ್ಥಳ ಯೋಜನೆಯ ಕೊಕ್ಕಡ ವಲಯದ ವಿಪತ್ತು ನಿರ್ವಹಣಾ ತಂಡದವರು ಜೂನ್ 17ರಂದು ಈ ದಿನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿರುವ ಕಪಿಲಾ ನದಿಯ ಕಿಂಡಿ ಅಣೆಕಟ್ಟು ಸ್ವಚ್ಚ ಗೊಳಿಸುವಕಾರ್ಯ ಮಾಡಿದರು. ಪ್ರತೀ ವರ್ಷ ಇಲ್ಲಿ ಮಳೆಗಾಲದಿಂದ ಕೃತಕ ನೆರೆ ಬರುತ್ತಿತ್ತು. ಇದನ್ನು ಮನಗಂಡ ವಿಪತ್ತು ಸದಸ್ಯರು ಮೊದಲೆ ಕಿಂಡಿ ಅಣೆಕಟ್ಟು ಸ್ವಚ್ಚಗೊಳಿಸಿ ಮುಂದಾಗಬಹುದಾದ ಅನಾಹುತ ತಪ್ಪಿಸಿದರು. ಕೊಕ್ಕಡ ವಲಯದ ವಿಪತ್ತು ನಿರ್ವಹಣಾ ಸಮಿತಿಯ ಶೀನಪ್ಪ ಶಿಶಿಲ, ಮಾಧವ ದೇನೋಡಿ, ಗಿರಿಜಾ ಕೆದಿಲಾಯ, […]
ಗುಡ್ಡ ಕುಸಿತ-ತಪ್ಪಿದ ಅನಾಹುತ

ಬೆಳ್ತಂಗಡಿ: ಜೂನ್ 16ರ ಸಂಜೆ ಸುರಿದ ಭಾರೀ ಮಳೆಗೆ ಮನೆಯ ಪಕ್ಕದ ಬಂಡೆಕಲ್ಲು ಸಹಿತ ಗುಡ್ಡವೊಂದು ಕುಸಿದು ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸವಣಾಲು ರಸ್ತೆಯಲ್ಲಿ ನಡೆದಿದೆ.ಲಾಯಿಲ ಗ್ರಾಮದ ಹೆರಾಜೆ ಸಮೀಪದ ಹಸನಬ್ಬ ಎಂಬವರ ಮನೆಯ ಪಕ್ಕದ ಗುಡ್ಡ ಕುಸಿದಿದ್ದು ದೊಡ್ಡ ದೊಡ್ಡ ಕಲ್ಲುಗಳು ಮನೆಯ ಗೋಡೆಯ ಪಕ್ಕದಲ್ಲೇ ಉರುಳಿ ಬಿದ್ದಿದೆ. ಅದರೆ ಮನೆಯ ಗೋಡೆಗೆ ಸಣ್ಣಪುಟ್ಟ ಹಾನಿಯಾಗಿದ್ದು, ಸುದೈವವಶಾತ್ ದೊಡ್ಡ ಅನಾಹುತ ತಪ್ಪಿದೆ.